Home Posts tagged #kerala (Page 4)

ಕೇರಳದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಆವಾಂತರ : ಮೃತಪಟ್ಟವರ ಸಂಖ್ಯೆ 24ಕ್ಕೇರಿಕೆ

ಕೇರಳದಲ್ಲಿ ಶನಿವಾರದಿಂದೀಚೆಗೆ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಮತ್ತು ಭೂಕುಸಿತ ಮುಂದುವರಿದಿದೆ. ರವಿವಾರ ಮಧ್ಯಾಹ್ನದ ವೇಳೆಗೆ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಸಂಭಾವ್ಯ ಭೂಕುಸಿತದ ಬಗ್ಗೆ ಅಧಿಕಾರಿಗಳು ತೀವ್ರ ನಿಗಾ ಇರಿಸಿದ್ದಾರೆ. ಏತನ್ಮಧ್ಯೆ ಮಳೆ ಸಂಬಂಧಿ ಅನಾಹುತಗಳಿಂದ ಮೃತಪಟ್ಟವರ ಸಂಖ್ಯೆ 24ಕ್ಕೇರಿದ್ದು, 11 ಜಿಲ್ಲೆಗಳಲ್ಲಿ ಸೋಮವಾರ

ಕೇರಳದಲ್ಲಿ ಭಾರೀ ಮಳೆ: ಪ್ರವಾಹದ ಭೀತಿ

ಇಂದು ಕೂಡ ಕೇರಳದಾದ್ಯಂತ ಭಾರೀ ಮಳೆ ಮುಂದುವರೆದಿದ್ದು, ಪ್ರವಾಹದ ಭೀತಿ ಎದುರಾಗಿದೆ. ಹೀಗಾಗಿ, ವಿಪರೀತ ಮಳೆಯಾಗುತ್ತಿರುವ ಪಥನಾಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಇನ್ನೂ 2-3 ದಿನ ಕೇರಳದಲ್ಲಿ ಮಳೆಯಾಗುವ ಹಿನ್ನೆಲೆಯಲ್ಲಿ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೇರಳದ ರಸ್ತೆಗಳು ಸಂಪೂರ್ಣ ನೀರಿನಿಂದ ಆವೃತವಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಈ

ಕೇರಳ ಗಡಿ ನಿರ್ಬಂಧ ತೆರವಿಗೆ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ: ಸಿಎಂ ಬಸವರಾಜ ಬೊಮ್ಮಾಯಿ

ಕೋವಿಡ್ 19 ಹಿನ್ನೆಲೆಯಲ್ಲಿ ಕೇರಳ ಗಡಿ ನಿರ್ಬಂಧ ತೆರವಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ದ.ಕ. ಮತ್ತು ಉಡುಪಿ ಜಿಲ್ಲೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು ಜಿಲ್ಲೆಯಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ವಿಚಾರದ ಬಗ್ಗೆ ಪ್ರತಿಕ್ರಿಯೆ

ಸಿಐಎಸ್‌ಎಫ್ ಏಕತಾ ಸೈಕಲ್ ರ್‍ಯಾಲಿ: ಪಣಂಬೂರಿನಲ್ಲಿ ಸೈಕಲ್ ರ್‍ಯಾಲಿಗೆ ಸ್ವಾಗತ

75 ನೇ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದು, ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ ದೇಶದ ಕೇಂದ್ರೀಯ ಕೈಗಾರಿಕಾ ಭದ್ರತಾ ದಳದ ಯೋಧರು ಕೇರಳದ ತಿರುವನಂತಪುರದಿಂದ ಗುಜರಾತ್‌ನ ಕೇವಾಡಿಯವರೆಗೆ ಸೈಕಲ್ ರ್‍ಯಾಲಿ ಹಮ್ಮಿಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸಿತು. ನಿರತ ಯೋಧರನ್ನು ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಾರ್ಖಾನೆಯ ಮತ್ತು ಎನ್‌ಎಂಪಿಟಿ, ಎಂಆರ್‌ಪಿಎಲ್ ಇದರ ಸಿಐಎಸ್‌ಎಫ್ ಘಟಕಗಳು ಸ್ವಾಗತ ಕೋರಿ ಸಮ್ಮಾನಿಸಿ, ಶ್ಲಾಘನೆ

ಕೇರಳ ಕೋ-ಆಪರೇಟಿವ್ ಎಂಪ್ಲೋಯಿಸ್ ಕೌನ್ಸಿಲ್ ಮಂಜೇಶ್ವರ : ಬಸ್ಸು ತಂಗುದಾಣ ಕೊಡುಗೆ

ಮಂಜೇಶ್ವರ : ಕೇರಳ ಕೋ- ಆಪರೇಟಿವ್ ಎಂಪ್ಲೋಯೀಸ್ ಕೌನ್ಸಿಲ್ ಮಂಜೆಶ್ವರ ಯೂನಿಟ್ ಇವರ ವತಿಯಿಂದ ಕೊಡುಗೆಯಾಗಿ ಸುಮಾರು ಎರಡೂವರೆ ಲಕ್ಷ ರೂ. ವೆಚ್ಚದಲ್ಲಿ ಮಂಜೇಶ್ವರ ಒಳಪೇಟೆಯಲ್ಲಿ ನಿರ್ಮಿಸಲಾದ ಸುಸಜ್ಜಿತ ಹೈಟೆಕ್ ಸೂಪರ್ ಸ್ಪೆಷಾಲಿಟಿ ಬಸ್ಸು ತಂಗುದಾಣ ಸೋಮವಾರದಂದು ಸಂಜೆ ಲೋಕಾರ್ಪಣೆಗೊಂಡಿತು.   ಜನನಿಬಿಡ ಪ್ರದೇಶವಾದ ಮಂಜೇಶ್ವರ ಒಳಪೇಟೆಯಲ್ಲಿ ಮೂಲಭೂತ ಸೌಕರ್ಯಗಳಲ್ಲೊಂದಾದ ಹೈಟೆಕ್ ಮಾದರಿಯ ಶೌಚಾಲಯಗಳನ್ನೊಳಗೊಂಡ ಬಸ್ಸು ತಂಗುದಾಣ ಲೋಕಾರ್ಪಣೆಗೊಂಡಿರುವುದು

ಕೇರಳದಲ್ಲಿ ನಿಫಾ ವೈರಸ್ ಹಾವಳಿ – ರಾಜ್ಯದಲ್ಲೂ ಬಿಗಿ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

ಕೇರಳದಲ್ಲಿ ಮತ್ತೆ ನಿಫಾ ವೈರಸ್ ಸೋಂಕು ಕಾಣಿಸಿಕೊಂಡಿರುವುದರಿಂದ ರಾಜ್ಯದಲ್ಲೂ ಬಿಗಿ ಕ್ರಮ ಕೈಗೊಳ್ಳಲಾಗವುದು. ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕೇರಳ ಗಡಿ ಜಿಲ್ಲೆಗಳಲ್ಲಿ ಈಗಾಗಲೇ ಕೆಲವು ನಿರ್ಬಂಧಗಳನ್ನು ಹೇರಲಾಗಿದ್ದು, ಅದನ್ನು ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದ ಹೇಳಿದರು. ನಿಫಾ

ತಲಪಾಡಿ ಗಡಿ ಬಂದ್ ವಿರೋಧಿಸಿ ಕೇರಳಿಗರಿಂದ ಗಡಿಭಾಗದಲ್ಲಿ ಪ್ರತಿಭಟನೆ

ತಲಪಾಡಿ ಗಡಿ ಬಂದ್ ವಿರೋಧಿಸಿ ಕೇರಳಿಗರು ಗಡಿಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಕೇರಳ ಭಾಗದ ರಸ್ತೆ ಬಂದ್ ಮಾಡಿ ಕೇರಳಿಗರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಕೇರಳಕ್ಕೆ ತೆರಳುವ ರಸ್ತೆಗೆ ಅಡ್ಡಲಾಗಿ ನಿಂತು ಪ್ರತಿಭಟನೆ ನಡೆಸಿದ್ರು. ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ವೇಳೆ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ, ನೆಗೆಟಿವ್ ರಿಪೋರ್ಟ್ ಕಡ್ಡಾಯ ಆದೇಶ ಹಿಂಪಡೆಯಲು ಆಗ್ರಹಿಸಿದರು.ಸದ್ಯ ತಲಪಾಡಿ ಗಡಿಯಲ್ಲಿ ಕೇರಳಕ್ಕೆ ತೆರಳಲು ವಾಹನಗಳು ಸಾಲಾಗಿ

ಮಂಗಳೂರಲ್ಲಿ ಎಡಿಜಿಪಿ ಪ್ರತಾಪ್ ರೆಡ್ಡಿ: ಕೇರಳ ಗಡಿ ಪ್ರದೇಶ ತಲಪಾಡಿಗೆ ಭೇಟಿ

ರಾಜ್ಯ ಕಾನೂನು ಸುವ್ಯವಸ್ಥಾ ವಿಭಾಗದ ಎಡಿಜಿಪಿ ಪ್ರತಾಪ್ ರೆಡ್ಡಿ ಸೋಮವಾರ ಸಂಜೆ ಮಂಗಳೂರಿಗೆ ಆಗಮಿಸಿದ್ದಾರೆ.ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳ ಗಡಿಭಾಗದ ಬಂದೋಬಸ್ತ್ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಅವರು ಆಗಮಿಸಿದ್ದು, ಖಾಸಗಿ ಹೋಟೆಲ್ ನಲ್ಲಿ ತಂಗಿದ್ದು, ಇಂದು ಮುಂಜಾನೆ ಕೇರಳ ಗಡಿ ಪ್ರದೇಶವಾದ ತಲಪಾಡಿಗೆ ತೆರಳಿ ಪರಿಶೀಲನೆ ನಡೆಸಿದ್ರು. ಈ ವೇಳೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಕಮೀಷನರ್

ಕೋವಿಡ್ ಹಿನ್ನೆಲೆ ತಲಪಾಡಿ ಗಡಿಭಾಗದಲ್ಲಿ ತೀವ್ರಗೊಂಡ ತಪಾಸಣೆ

ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಿನ್ನಲೆಯಲ್ಲಿ ಕೊಣಾಜೆ ಮತ್ತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಭಾಗದಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕಾಸರಗೋಡಿನಿಂದ ಮಂಗಳೂರು ಪ್ರವೇಶಿಸುವ ಎಲ್ಲರ ನೆಗೆಟಿವ್ ವರದಿ ಕಡ್ಡಾಯ ಮಾಡುತ್ತಿದ್ದು, ಸ್ಥಳದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದು ತಲಪಾಡಿ ಗಡಿಭಾಗದಲ್ಲೂ ಕಟ್ಟು ನಿಟ್ಟಿನ ಕ್ರಮ ಕೊಂಡಿದ್ದಾರೆ. ಮಂಗಳೂರು ಕಮಿಷನರೇಟ್ ಒಳಪಡುವ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ

ನಿಷೇಧಿತ ಮಾದಕ ವಸ್ತು ಸಾಗಾಟ ಪ್ರಕರಣ- ಮೂವರ ಬಂಧನ

ಕೇರಳ ರಾಜ್ಯಕ್ಕೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.  ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು. ನಿಷೇಧಿತ ಮಾದಕ ವಸ್ತು ಅಕ್ರಮ ಸಾಗಾಟದ ಖಚಿತ ಮಾಹಿತಿಯ ಮೇರೆಗೆ ಕೊಣಾಜೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಬಂಧಿತರಿಂದ 170 ಗ್ರಾಂ ತೂಕದ ಸುಮಾರು 10,20,000 ರೂಪಾಯಿ ಮೌಲ್ಯದ