ಮಾಜಿ ಶಾಸಕ ಗೋಪಾಲ ಪೂಜಾರಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದು ನನ್ನ ಬಗ್ಗೆಯೂ ಕೋಟ ಸುಳ್ಳು ಹೇಳಿದ್ದಾರೆ ಎಂದಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಗೋಪಾಲ ಪೂಜಾರಿಯವರನ್ನು ಸಜ್ಜನ ಮತ್ತು ಪ್ರಾಮಾಣಿಕ ಎಂದು ನಾನು ಹೇಳಿದ್ದೆ. ಈ ಮಾತು ಸುಳ್ಳಾದರೆ ಕ್ಷಮಿಸಿ ಎಂದು ಉಡುಪಿ-ಚಿಕ್ಕಮಗಳೂರು
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಸಿದರು. ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಬಳಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡ ಸಿ.ಟಿ.ರವಿ, ಶಾಸಕರಾದ ಯಶ್ಪಾಲ್ ಸುವರ್ಣ,
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಏ.3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕೇಂದ್ರ ಮಾಜಿ ಸಚಿವ, ಹಿಂದೂ ಫೈರ್ ಬ್ರಾಂಡ್ ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ, ಸುನೀಲ್ ಕುಮಾರ್ ಈ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಚಿಕ್ಕಮಗಳೂರಿನ ನಾಲ್ವರು ಮಾಜಿ ಶಾಸಕರು ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಾಮಪತ್ರ
ಲೋಕಸಭಾ ಚುನಾವಣೆಯಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯದಂತೆ ಬಿಲ್ಲವ ಸಮಾಜಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದ.ಕ., ಉಡುಪಿ- ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಬಿಲ್ಲವ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಎಸ್‌ಎನ್‌ಜಿವಿ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ, ಟೀಂ ಸತ್ಯಜಿತ್ ಸುರತ್ಕಲ್‌ನಲ್ಲಿ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದರು.ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಭೇಟಿ ಬಗ್ಗೆ ಟ್ವೀಟ್ ಮಾಡಿರುವ ಕೋಟ ಅವರು, ‘ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಅತ್ಯಂತ ಸರಳ ವ್ಯಕ್ತಿತ್ವದ ಮೇರು ನಾಯಕರಾದ ಗೌರವಾನ್ವಿತ ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದೆ. ಈ
ಮಂಗಳೂರು: ಮಂಗಳೂರು ಸೆಂಟ್ರಲ್- ತಿರುವನಂತಪುರ ವಿಸ್ತರಿತ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುಜರಾತ್ ನ ಅಹಮ್ಮದಾಬಾದ್ ನಿಂದ ವಿಡಿಯೋ ಕಾನ್ಫೆರೆನ್ಸ್ ಮೂಲಕ ಚಾಲನೆ ನೀಡಿದರು. ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ವಂದೇ ಭಾರತ್ ರೈಲು ಇನ್ನು ಮುಂದೆ ಮಂಗಳೂರು ತಿರುವನಂತಪುರ ನಡುವೆ ಸಂಚರಿಸಲಿದೆ. ಮಂಗಳೂರಿನಿಂದ ಬೆಳಿಗ್ಗೆ 6.15ಕ್ಕೆ ಹೊರಟು ಅಪರಾಹ್ನ 3.5ಕ್ಕೆ ತಿರುವನಂತಪುರ
ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದು ಕೇಂದ್ರ ಸರ್ಕಾರ ಪರಿಹಾರ ನೀಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸುತ್ತಿದ್ದಾರೆ 10 ವರ್ಷಗಳ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಎನ್‌ಡಿಆರ್‌ಎಫ್ ಎಸ್‌ಡಿಆರ್‌ಎಫ್ ನಿಧಿ ಬಂದಿದೆ ಎಂದು ವಿಧಾನ ಪರಿಷತ್ತು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ. ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೋಟ ಸಿಎಂ ಸಿದ್ಧರಾಮಯ್ಯ ಮಾತುಗಳು ಜನರ ದಾರಿ ತಪ್ಪಿಸುತ್ತವೆ. ಹತ್ತು ವರ್ಷದಲ್ಲಿ ಯುಪಿಎ ರಾಜ್ಯಕ್ಕೆ
ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳುತ್ತಾರೆ ಎಂಬ ನಿರೀಕ್ಷೆ ಇತ್ತು. ನಮ್ಮ ಸಿದ್ದಾಂತದ ಜೊತೆ ಸುದೀರ್ಘಕಾಲ ಗುರುತಿಸಿಕೊಂಡಿದ್ದವರು. ಶೆಟ್ಟರ್ ಅವರಂತಹ ಸೈದ್ಧಾಂತಿಕ ಹಿನ್ನೆಲೆಯವರಿಗೆ ಬೇರೆ ಪಕ್ಷ ಒಗ್ಗಿಕೊಳ್ಳಲು ಕಷ್ಟ. ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ ಎಂಬ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜಗದೀಶ್ ಶೆಟ್ಟರ್ ಮರು ಸೇರ್ಪಡೆಯಿಂದ
ವಿಧಾನ ಪರಿಷತ್ತಿನಲ್ಲಿ ಪ್ರತಿ ಪಕ್ಷದ ನಾಯಕರಾಗಿ ಮಾಜೀ ಮಂತ್ರಿ ಕೋಟ ಶ್ರೀನಿವಾಸ ಪೂಜಾರಿ ನೇಮಕಗೊಂಡಿದ್ದಾರೆ. ಏಳು ತಿಂಗಳ ಬಳಿಕ ಬಿಜೆಪಿ ಈ ತೀರ್ಮಾನ ತೆಗೆದುಕೊಂಡಿದೆ. ವಿಧಾನ ಪರಿಷತ್ತಿನಲ್ಲಿ ಉಪ ನಾಯಕರಾಗಿ ಸುನಿಲ್ ವಲ್ಯಾಪುರೆ ಅವರನ್ನು ನೇಮಿಸಲಾಗಿದೆ. ಅದೇ ವೇಳೆ ಎನ್. ರವಿಕುಮಾರ್ ಅವರನ್ನು ವಿಧಾನ ಪರಿಷತ್ತಿನಲ್ಲಿ ಮುಖ್ಯ ಸಚೇತಕರಾಗಿ ಬಿಜೆಪಿ ನೇಮಕ ಮಾಡಿದೆ. ಹುಬ್ಬಳ್ಳಿ ಧಾರವಾಡ ಶಾಸಕ ಅರವಿಂದ ಬೆಲ್ಲದ ಅವರನ್ನು ವಿಧಾನ ಸಭೆಯಲ್ಲಿ ಉಪ ನಾಯಕರಾಗಿ ಮತ್ತು
ಉಡುಪಿ : ರಾಜ್ಯ ಸರ್ಕಾರದಿಂದ ಪಠ್ಯ ಬದಲಾವಣೆ ವಿಚಾರವಾಗಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಧ್ಯಮದೊಂದಿಗೆ ಮಾತನಾಡಿ, ಸರ್ಕಾರ ಯಾವಾಗಲೂ ವ್ಯಕ್ತಿಗಳ ಆಧಾರದಲ್ಲಿ ನಡೆಯುವುದಿಲ್ಲ. ಬದಲಾಗಿ ಸರ್ಕಾರ ನಡೆಯುವುದು ಶಾಸನದ ಆಧಾರದಲ್ಲಿ. ಒಂದು ಸರ್ಕಾರ ಮಾಡಿದ ನಿರ್ಧಾರವನ್ನು ಮತ್ತೊಂದು ಸರಕಾರ ಪರಿಶೀಲನೆ ಮಾಡದೆ ಬದಲು ಮಾಡುವುದು ಸರಿಯಲ್ಲ. ಸಾರ್ವಜನಿಕವಾಗಿ ಇಂತಹ ಬೆಳವಣಿಗೆಗಳು ಗೌರವ ತರುವುದಿಲ್ಲ. ಬನ್ನಂಜೆ ಗೋವಿಂದಾಚಾರ್ಯರ ಪಾಠವನ್ನು ವಾಪಸ್ಸು