ಮಂಗಳೂರು ನಗರದ ಬಿಜೈಯಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ವೊಂದು ಆತಂಕ ಸೃಷ್ಟಿಸಿದ ಪ್ರಸಂಗ ಇಂದು ನಡೆದಿದೆ. ಬಸ್ ನಿಲ್ದಾಣದ ಅನುಮಾನಾಸ್ಪದ ಬ್ಯಾಗ್ ವಿಚಾರ ತಿಳಿಯುತ್ತಲೇ ಸ್ಥಳಕ್ಕಾಗಮಿಸಿದ ಬಾಂಬ್ ಸ್ಕ್ಯಾಡ್ , ಶ್ವಾನದಳ ಅದನ್ನು ಪರಿಶೀಲನೆ ನಡೆಸಿತು. ಈ ನಡುವೆ ಬ್ಯಾಗ್ ವಾರಸುದಾರ ಪತ್ತೆಯಾಗಿದ್ದು, ಅದು ಬಸ್
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಣಿಪಾಲ ಮತ್ತು ಮಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್ ಸಂಚಾರ ಅ. 31ರಂದು ಆರಂಭಗೊಳ್ಳಲಿದ್ದು, ತಾತ್ಕಾಲಿಕ ವೇಳಾಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ. ಈ ಹಿಂದೆ ನಿಗದಿ ಪಡಿಸಿದಂತೆ ಅಕ್ಟೋಬರ್ 27ರಂದು ಬಸ್ ಸಂಚಾರ ಆರಂಭಗೊಳ್ಳಬೇಕಿತ್ತು. ಕೆಲವು ತಾಂತ್ರಿಕ ಕಾರಣದಿಂದ ವಿಳಂಬವಾಗಿದೆ ಎಂದು ಕೆಎಸ್ಸಾರ್ಟಿಸಿ ಮೂಲಗಳು ತಿಳಿಸಿವೆ. ಮಂಗಳೂರು ರೈಲು ನಿಲ್ದಾಣ ದಿಂದ ವಿಮಾನ ನಿಲ್ದಾಣಕ್ಕೆ ಬಸ್ಸು ಬೆಳಗ್ಗೆ 6.30, 8.45,
ಪುತ್ತೂರು: ಮಾಸಿಕ ವೇತನ ಪಾವತಿ ವಿಳಂಬ ಮತ್ತು ನಿವೃತ್ತ ನೌಕರರ ನಿವೃತ್ತಿ ಸೌಲಭ್ಯ ಬಿಡುಗಡೆ ವಿಳಂಬವನ್ನು ನಡೆಸುತ್ತಿರುವ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಪುತ್ತೂರು ವಿಭಾಗ ಕೆಎಸ್‌ಆರ್‌ಟಿಸಿ ಮಜ್ದೂರ್ ಸಂಘದ ಸದಸ್ಯರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಶುಕ್ರವಾರ ಎರಡನೇ ದಿನ ತಲುಪಿತು. ಸಂಘದ ಪುತ್ತೂರು ಘಟಕದ ಅಧ್ಯಕ್ಷ ಮಾಡಾವು ವಿಶ್ವನಾಥ್ ರೈ, ಹುತಾತ್ಮ ಸೈನಿಕರ ಸ್ಮಾರಕಕ್ಕೆ ಹೂಮಾಲೆ ಅರ್ಪಿಸಿ ಧರಣಿಯನ್ನು
ಉಪ್ಪಿನಂಗಡಿ: ಅತೀ ವೇಗದಿಂದ ಬಸ್ ನಿಲ್ದಾಣದೊಳಗೆ ಬಂದ ಕೆಎಸ್ಸಾರ್ಟಿಸಿ ಬಸ್‌ನಡಿಗೆ ಸಿಲುಕಿ ತಾಯಿ ಹಾಗೂ ಆಕೆಯ ಒಂದು ವರ್ಷದ ಪುತ್ರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ.ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಸಿದ್ದೀಕ್ ಎಂಬವರ ಪತ್ನಿ ಶಾಹಿದಾ (25) ಹಾಗೂ ಆಕೆಯ ಒಂದು ವರ್ಷದ ಪುತ್ರ ಶಾಹೀಲ್ ಮೃತಪಟ್ಟ ದುರ್ದೈವಿಗಳು. ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ ಮಂಗಳವಾರ ಬೆಳಗ್ಗೆ ಪುತ್ತೂರಿಗೆ ವೈದ್ಯರ ಬಳಿ ತನ್ನ
ಪುತ್ತೂರು:ಕೆ ಎಸ್ ಆರ್ ಟಿ ಸಿ ಮಜ್ದೂರ್ ಸಂಘದ ಪುತ್ತೂರು ವಿಭಾಗವು 2004ರಿಂದ ಸಾರಿಗೆ ಸಂಸ್ಥೆಯ ಉಳಿಯುವಿಗಾಗಿ ಹಲವಾರು ಕಾನೂನಾತ್ಮಕ ಹೋರಾಟಗಳನ್ನು ಮಾಡಿಕೊಂಡು ಬಂದಿದೆ. ಸಂಸ್ಥೆಯ ವಿರುದ್ದ ಯಾವುದೇ ಮುಷ್ಕರವನ್ನು ಸಂಘವು ಮಾಡಿಲ್ಲ. ಕಾನೂನು ಸಮ್ಮತ ವಿಚಾರದಲ್ಲಿ ಕಾರ್ಮಿಕರಿಗೆ ಈಗ ಆಗಿರುವ ಅನ್ಯಾಯವನ್ನು ವಿರೋಧಿಸಿ ಅ. 21ರಿಂದ ಕೆಎಸ್‍ಆರ್‍ಟಿಸಿ ಪುತ್ತೂರು ವಿಭಾಗ ಕಚೇರಿಯ ಮುಂದೆ ಸಂಘದ ಸದಸ್ಯರು ಕಪ್ಪುಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು
ಮಂಗಳೂರಿನ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಪ್ರದೇಶದ ಜನರ ಬಹುದಿನಗಳ ಬೇಡಿಕೆಯಾದ ಸರ್ಕಾರಿ ಬಸ್ ಓಡಾಟದ ಕನಸು ನನಸಾಗಿದೆ. ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ನರ್ಮ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದರು. ಇದೇ ವೇಳೆ ಮಾತನಾಡಿದ ಶಾಸಕರು ಈ ಭಾಗದಲ್ಲಿ ಶಾಲಾ ವಿದ್ಯಾರ್ಥಿಗಳು, ನೌಕರಿಗೆ ಹೋಗುವ ಜನರಿಗೆ ಅನುಕೂಲವಾದ ಸಮಯದಲ್ಲಿ ನರ್ಮ್ ಬಸ್ ಸಂಚಾರ ಅವಕಾಶ ನೀಡಲಾಗಿದೆ. ಪ್ರತೀ 45 ನಿಮಿಷಕ್ಕೆ ನರ್ಮ್ ಬಸ್ ಓಡಾಟ ನಡೆಸಲಿದೆ. ಇದೀಗ ಪ್ರಾಯೋಗಿಕವಾಗಿ ಸಮಯದಲ್ಲಿ
ಪುತ್ತೂರು: ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ದಶಮಾನೋತ್ಸವ ಕಾರ್ಯಕ್ರಮವು ಮುಕ್ರಂಪಾಡಿಯ ವಿಭಾಗೀಯ ಕಚೇರಿಯ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ನಿವೃತ್ತ ನೌಕರರನ್ನು ಸನ್ಮಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ಈ ಭಾಗದಲ್ಲಿ ಉತ್ತರ ಕರ್ನಾಟಕ ಭಾಗದವರೇ ನಿಗಮದಲ್ಲಿ ನೌಕರರಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ತವರು ಜಿಲ್ಲೆಗೆ ವರ್ಗಾಯಿಸಿದರೆ ಇಲ್ಲಿ ಸಿಬ್ಬಂದಿ