ಕೊರೊನಾದ ಮೊದಲ ಮತ್ತು ಎರಡನೇ ಅಲೆಗಳ ಸಮಯದಲ್ಲಿ ಸ್ಥಗಿತಗೊಂಡಿದ್ದ ಪ್ರವಾಸೋದ್ಯಮಕ್ಕೆ ಇದೀಗ ಖಾಸಗಿ ವಿಮಾನಗಳ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ರವಿವಾರದಂದು ಪುಣೆಯಲ್ಲಿರುವ13 ಮಂದಿಯನ್ನು ಹೊಂದಿರುವ ಕುಟುಂಬವೊಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿ ಜಿಲ್ಲೆಯ ವಿವಿಧ ಪ್ರವಾಸೋದ್ಯಮ ತಾಣಗಳಿಗೆ ಭೇಟಿ ನೀಡಿದ್ದಾರೆ.
ಕಡಬ : ಸುಬ್ರಹ್ಮಣ್ಯ: ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಯಾದ ದ.ಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ. ಕೇವಲ ಶ್ರೀ ದೇವರ ದರುಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಇರುವುದಿಲ್ಲ. ಶನಿವಾರ ಮತ್ತು ಆದಿತ್ಯವಾರ