Home Posts tagged kundapura (Page 2)

ಕುಂದಾಪುರ: ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ

ಕುಂದಾಪುರ:ಬೈಂದೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ 4ನೇ ವರ್ಷದ ರಾಜ್ಯ ಮಟ್ಟದ 40 ಗಜಗಳ ಟೆನಿಸ್ ಬಾಲ್ ಕ್ರಿಕೆಟ್ ಹಗಲು ರಾತ್ರಿ ಪಂದ್ಯಾಟ ಬೈಂದೂರು ಟ್ರೋಫಿ-2024 ಗಾಂಧಿ ಮೈದಾನದಲ್ಲಿ ಅದ್ದೂರಿಯಾಗಿ ಶನಿವಾರ ನಡೆಯಿತು. ಬೈಂದೂರು ಸ್ಪೋರ್ಟ್ಸ್ ಕ್ಲಬ್ ಅವರು ಆಯೋಜಿಸಿದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಪಾಂಚಜನ್ಯ ಕೋಟೇಶ್ವರ ಪ್ರಥಮ ಸ್ಥಾನವನ್ನು

ಬೈಂದೂರು: ವಿಕಸಿತ ಭಾರತ ಸಂಕಲ್ಪ ಅಭಿಯಾನ

ವಿಕಸಿತ ಭಾರತ ಸಂಕಲ್ಪ ಅಭಿಯಾನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್, ಕಿರಿಮಂಜೇಶ್ವರ ಕೆನರಾ ಬ್ಯಾಂಕ್ ನಾವುಂದ ಇವರ ಸಹಯೋಗದೊಂದಿಗೆ ವಿಕಸಿತ ಭಾರತ ಸಂಕಲ್ಪ ಅಭಿಯಾನ ಕಾರ್ಯಕ್ರಮ ನಾಗೂರಿನ ಒಡೆಯರ ಮಠ ಗೋಪಾಲಕೃಷ್ಣ ಕಲಾ ಮಂದಿರದಲ್ಲಿ ನಡೆಯಿತು. ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಮಾಹಿತಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಬೇಕು, ಪ್ರತಿಯೊಬ್ಬರ ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು

ಹೆಮ್ಮಾಡಿ: ಆರ್ಯ ಬಿಲ್ಡ್ ಕೇರ್ ಸಂಸ್ಥೆ ಉದ್ಘಾಟನೆ

ಕುಂದಾಪುರ ತಾಲೂಕಿನ ಹೆಮ್ಮಾಡಿಯಲ್ಲಿ ಆರ್ಯ ಬಿಲ್ಡ್ ಕೇರ್ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು. ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವುದರ ಜತೆಗೆ ಯುವ ಜನತೆಗೆ ಉದ್ಯೋಗವಕಾಶವನ್ನು ಮಾಡಿಕೊಡುವುದು ಸಂಸ್ಥೆಯ ಮೂಲ ಉದ್ದೇಶವಾಗಿದೆ.ಎಮಿಯೆಂಟೆಕ್ ಸಿಎಂಡಿ ಸಿಜಿತ್ ಆರ್ಯ ಬಿಲ್ಡ್ ಕೇರ್ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿ,ಸಾರ್ವಿನ್ ಪ್ಲಾಸ್ಟ್

ಕುಂದಾಪುರ: ಸೌಹಾರ್ದ ಕ್ರಿಸ್ಮಸ್ ಆಚರಣೆ

ಉಡುಪಿ: ಕ್ರಿಸ್ತ ಜಯಂತಿ ಹಬ್ಬವು ಶಾಂತಿಯನ್ನು ಸಾರುತ್ತದೆ. ಶಾಂತಿಯ ಸಾಧನವಾಗಲು, ಶಾಂತಿಯ ದೂತರಾಗಲು ನಮ್ಮನ್ನು ಪ್ರೇರೇಪಿಸುತ್ತದೆ. ಕ್ರಿಸ್ತ ಜಯಂತಿಯ ಪ್ರೀತಿಯ ಜ್ಯೋತಿ ನಮ್ಮ ತನುಮನಗಳಲ್ಲಿ ಪ್ರಜ್ವಲಿಸಬೇಕಾದರೆ ನಾವು ಕ್ರಿಸ್ತರಂತೆ ಪ್ರೀತಿ ಸ್ವರೂಪರಾಗಿ ಸೇವಾಮನೋಭಾವದಿಂದ ನಿಸ್ವಾರ್ಥಿಗಳಾಗಬೇಕು ಎಂದು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅವರು ಶನಿವಾರ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ 

ಕುಂದಾಪುರ: ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಬಾರಕೂರಿನಲ್ಲಿ ಮತಯಾಚನೆ

ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಿರಣ ಕುಮಾರ್ ಕೊಡ್ಗಿ  ಕ್ಷೇತ್ರದ ದಕ್ಷಿಣ ಭಾಗದ ತುತ್ತ ತುದಿ ಬಾರಕೂರು ಭಾಗದಲ್ಲಿ ಮತಯಾಚನೆ ಮಾಡಿದರು.   ಪ್ರಥಮವಾಗಿ ರಂಗನಕೆರೆ ಶೆಟ್ಟಿಗಾರ್ ಇಂಡಸ್ಟ್ರೀಸ್‌ನ ಮಾಲಕ ಶ್ರೀನಿವಾಸ ಶೆಟ್ಟಿಗಾರರವರನ್ನು  ಬೇಟಿ ನೀಡಿ ಇಲ್ಲಿನ ನೂರಾರು ಕಾರ್ಮಿಕರಲ್ಲಿ ಬೆಂಬಲಿಸುವಂತೆ ಮತಯಾಚನೆ ಮಾಡಿದರು.ಬಳಿಕ ನಾಯರಿಬೆಟ್ಟು,  ಬಾರಕೂರು ರಥ ಬೀದಿ ಮತ್ತು  ನಗರದ ಅಂಗಡಿ, ಮನೆಗಳಿಗೆ  ಬೇಟಿ ನೀಡಿ  ಮತಯಾಚನೆ ಮಾಡಿದರು.