Home Posts tagged #mangalore

ಸುಳ್ಯ: ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ

ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ ಮಲ್ಪೆ ಸಹಯೋಗದೊಂದಿಗೆ ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ ಸುಳ್ಯದ ಪ್ರೆಸ್ ಕ್ಲಬ್ ಆವರಣದಲ್ಲಿ ಆದಿತ್ಯವಾರ ನಡೆಯಿತು.ಸುಳ್ಯ ತಾಲೂಕು ನಿವೃತ್ತ ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮಗೆ

ಬಹ್ರೇನ್ ನ ಜಲಶುದ್ಧೀಕರಣ ಘಟಕದ ಮೇಲೆ ಇರಾನ್ ಡ್ರೋನ್ ದಾಳಿ

ದುಬೈ: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾಗಿ ಒಂಬತ್ತು ದಿನಗಳು ಕಳೆದಿದ್ದು, ಪರಿಸ್ಥಿತಿ ಕ್ಷಣಕ್ಷಣಕ್ಕೂ ಭೀಕರ ಸ್ವರೂಪ ಪಡೆಯುತ್ತಿದೆ. ಭಾನುವಾರ ಬೆಳ್ಳಂಬೆಳಗ್ಗೆ ಇರಾನ್ ಮತ್ತು ಇಸ್ರೇಲ್ ನಡುವೆ ನಡೆದ ಪರಸ್ಪರ ವಾಯುದಾಳಿಗಳಿಂದ ಗಲ್ಫ್ ರಾಷ್ಟ್ರಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಅರಬ್ ರಾಷ್ಟ್ರವೊಂದರ ಕುಡಿಯುವ ನೀರಿನ ಮೂಲದ ಮೇಲೆ ಇರಾನ್ ದಾಳಿ ನಡೆಸಿದೆ. ಬಹ್ರೇನ್‌ನ ಪ್ರಮುಖ ಜಲಶುದ್ಧೀಕರಣ (Desalination) ಘಟಕವೊಂದರ

ಮಂಗಳೂರು: ಮಹಿಳಾ ದಿನಾಚರಣೆ ಪ್ರಯುಕ್ತ ಸಾರಿ ರನ್

ಸಿಟಿ ಸೆಂಟರ್ ಮಾಲ್ ಮತ್ತು ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಹಿಳೆಯರಿಂದ ಸೀರೆ ಓಟ ಹಮ್ಮಿಕೊಂಡಿದ್ದು, ರಸ್ತೆಯಲ್ಲೇ ಸಾವಿರಾರು ನಾರಿಯರ ರನ್ನಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಈ ರನ್ನಿಂಗ್ ಸ್ಪರ್ಧೆಯನ್ನು ಮಂಗಳೂರು ಎಸಿಪಿ ಗೀತಾ ಡಿ ಕುಲಕರ್ಣಿ ಅವರು ಚಾಲನೆ ನೀಡಿದರು. ಭಾನುವಾರ ಮುಂಜಾನೆ ವೇಳೆಗೆ ಮಂಗಳೂರು ನಗರದ ಸಿಟಿ ಸೆಂಟರ್‌ನಲ್ಲಿ ಮಾತ್ರ ಬಣ್ಣಬಣ್ಣದ ಆಕರ್ಷಕ ಸೀರೆಗಳನ್ನುಟ್ಟ ಹೆಚ್ಚಿನ ಸಂಖ್ಯೆಯಲ್ಲಿ ನಾರಿಯರು ಬೀದಿಗಳಲ್ಲಿ ತುಂಬಿದ್ದರು.

ಅಖಿಲ ಭಾರತ ಅಂತರ್ ವಿ ವಿ ದೇಹದಾರ್ಢ್ಯ ಸ್ಪರ್ಧೆ: ಮಂಗಳೂರು ವಿ.ವಿ ಚಾಂಪಿಯನ್

ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿಗೆ ಚಿನ್ನದ ಪದಕ ಹಾಗೂ ಪ್ರಥಮ್ ಪೂಜಾರಿಗೆ ಬೆಳ್ಳಿಯ ಪದಕ ಆಂಧ್ರ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ದೇಹದಾರ್ಢ್ಯ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿ, 90 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ಹಾಗೂ ಪ್ರಥಮ್ 65 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಸಾಧನೆ ಮೆರೆದಿದ್ದಾರೆ. ಈ ಗಮನಾರ್ಹ ಸಾಧನೆಯಿಂದ

ಕರಾವಳಿಯ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಬಜೆಟ್ : ರಾಜೇಶ್ ಕಡಲಕೆರೆ

ಮೂಡುಬಿದಿರೆ : ಕರಾವಳಿಯ ಸಮಗ್ರ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಬಜೆಟ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ನ ವಕ್ತಾರ ರಾಜೇಶ್ ಕಡಲಕೆರೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಕರಾವಳಿಯಲ್ಲಿ ಪ್ರವಾಸೋದ್ಯಮವನ್ನು ಬಲಪಡಿಸಲು sea plane , Heli taxi , joy ride , River Cruise ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಯೋಜನೆ ರೂಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಜೆಟ್ ಮೂಲಕ

ಮೂಡುಬಿದಿರೆಯಲ್ಲಿ ಮಹಿಳೆಗೆ ಹಲ್ಲೆ, ಜಾತಿ ನಿಂದನೆ : ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲು

ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕೋಟೆಬಾಗಿಲಿನಲ್ಲಿ ಮಹಿಳೆಯೋವ೯ರ ಮೇಲೆ ಹಲ್ಲೆ ನಡೆಸಿ , ಜಾತಿ ನಿಂದನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಪಡುಕೊಣಾಜೆ ನಿವಾಸಿ ಪವಿತ್ರ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಾರ್ಚ್‌ 5ರಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಕೋಟೆಬಾಗಿಲು ಮಾರಿಗುಡಿ ಸಮೀಪ ಈ ಘಟನೆ ನಡೆದಿದೆ

ಆಳ್ವಾಸ್‌ನಲ್ಲಿ ‘ಉಮಂಗ್ 2026’ ಅಂತರ್ ಕಾಲೇಜು ಸ್ಪರ್ಧೆ

ಅಂತರ್ ಕಾಲೇಜು ಫೆಸ್ಟ್‌ಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದು ಬ್ಯಾಂಕ್ ಆಫ್ ಬರೋಡಾ ಮಂಗಳೂರು ಶಾಖೆಯ ಮುಖ್ಯ ವ್ಯವಸ್ಥಾಪಕ ಡಾ. ಪಿ. ಬಾಲಮುರಗನ್ ಹೇಳಿದರು. ಆಳ್ವಾಸ್ ಸ್ವಾಯತ್ತ ಪದವಿ ಕಾಲೇಜಿನ ಹಿಂದಿ ವಿಭಾಗದ ವತಿಯಿಂದ ಕುಎಂಪು ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾದ ‘ಉಮಂಗ್ 2026’ ಅಂತರ್ ಕಾಲೇಜು ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಪಠ್ಯಪುಸ್ತಕದ ಜ್ಞಾನಕ್ಕಷ್ಟೇ ಸೀಮಿತವಾಗದೇ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಾಸ,

ಸಬಳೂರು ಅಯೋಧ್ಯಾನಗರ ಶ್ರೀರಾಮ ಭಜನಾ ಮಂದಿರಕ್ಕೆ ಧರ್ಮಸ್ಥಳದ ಅನುದಾನ ಚೆಕ್ ವಿತರಣೆ

ನಮ್ಮ ಸಂಸ್ಕಾರ, ಸಂಸ್ಕೃತಿ ಉಳಿವಿಗೆ ಭಜನಾ ಮಂದಿರಗಳು ಮಹತ್ತರವಾದ ಕೊಡುಗೆಗಳನ್ನು ನೀಡುತ್ತಿದ್ದು, ಸಮಾಜದಲ್ಲಿ ಧರ್ಮ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಬಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಹೇಳಿದರು. ಅವರು ಶುಕ್ರವಾರ ಕಡಬ ತಾಲೂಕಿನ ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ಭಜನಾ ಮಂದಿರದ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬಿಡುಗಡೆಯಾದ ಒಂದು ಲಕ್ಷ ರೂನ ಅನುದಾನದ

ಕಾಪು ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕಾಪು ತಾಲೂಕು ಪಂಚಾಯತ್ 16 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಸಂಬಂಧಿಸಿದ ಟಾಸ್ಕ್ ಪೋರ್ಸ್ ಸಭೆ ಇಂದು ದಿನಾಂಕ 06-03-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕಾಪು ತಹಶೀಲ್ದಾರರ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಯಾವ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಅಂತಹ ಪಂಚಾಯತ್ ವ್ಯಾಪ್ತಿಯಲ್ಲಿ ಕೊಳವೆ ಬಾವಿ ಹಾಗೂ ಕುಡಿಯುವ ನೀರಿನ ಪೈಪ್‌ಲೈನ್ ನಿರ್ಮಿಸಲು ಟಾಸ್ಕ್ ಪೋರ್ಸ್ ಯೋಜನೆಯಡಿ

ನೇಪಾಳದ ಸಂಸತ್ ಚುನಾವಣೆಯ ಮತ ಎಣಿಕೆ ನಡೆದಿದ್ದು ಬಹುತೇಕ ಬಾಲೆನ್ ಶಾ ಅವರ ರಾಷ್ಟ್ರೀಯ ಸ್ವತಂತ್ರ ಪಕ್ಷವು ಗೆಲುವಿನತ್ತ ಗಟ್ಟಿ ಹೆಜ್ಜೆ

ನೇಪಾಳದಲ್ಲಿ ಅರ್ಧ ವರುಷದ ಹಿಂದೆ ಜೆನ್ ಜೆಡ್ ಯುವಜನ ಚಳವಳಿ ನಡೆದು ಆಳುವವರನ್ನು ಉರುಳಿಸಿತ್ತು. ಈಗ ಮತ್ತೆ ಸಂಸತ್ತಿಗೆ ಚುನಾವಣೆ ನಡೆದು ಮತ ಎಣಿಕೆ ನಡೆದಿದೆ. ಜೆನ್ ಜೆಡ್ ಚಳವಳಿಯ ಬಾಲೆನ್ ಶಾ ಅವರ ಬೆಂಬಲದ ಆರ್‌ಎಸ್‌ಪಿ- ರಾಷ್ಟ್ರೀಯ ಸ್ವತಂತ್ರ ಪಕ್ಷವು ಗೆಲುವಿನತ್ತ ಹೆಜ್ಜೆ ಹಾಕಿದೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಆರ್‌ಎಸ್‌ಪಿಯು 93 ಕ್ಷೇತ್ರಗಳಲ್ಲಿ ಗೆಲುವಿನ ಸಮೀಪ ಬಂದಿದೆ. ಕಾಠ್ಮಂಡು 1ರಲ್ಲಿ ಆರ್‌ಎಸ್‌ಪಿಯ ರಂಜು ನ್ಯೂಪನೆ ಗೆದ್ದಿದ್ದಾರೆ. ಮಾಜೀ