Home Posts tagged #mangalore news (Page 2)

ಸಾಹಿತ್ಯ ಪ್ರಶಸ್ತಿಗೆ ಲೇಖಕಿಯರಿಂದ ಕೃತಿಗಳ ಆಹ್ವಾನ

ಸಾಹಿತ್ಯ ಪ್ರಶಸ್ತಿಗೆ ಲೇಖಕಿಯರಿಂದ ಕೃತಿಗಳ ಆಹ್ವಾನ ಮಂಗಳೂರು; ಅವಿಭಜಿತ ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯ ಕರಾವಳಿ ಲೇಖಕಿಯರ ವಾಚಕಿಯರ ಸಂಘವು 2022-23ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳಿಗಾಗಿ ಲೇಖಕಿಯರ ಕೃತಿಗಳನ್ನು ಆಹ್ವಾನಿಸಿದೆ. ನವೆಂಬರ್ 10ರೊಳಗೆ ಕೃತಿಗಳನ್ನು ಕಳುಹಿಸಿಕೊಡುವಂತೆ ಪ್ರಕಟಣೆ ತಿಳಿಸಿದೆ. 1) ರಾಜ್ಯ ಮಟ್ಟದ `ಸಾರಾ’ ದತ್ತಿ

ಕರ್ಣಾಟಕ ಬ್ಯಾಂಕ್‍ನ ಡಿಜಿಟಲ್ ಬ್ಯಾಂಕ್ ಘಟಕ ಉದ್ಘಾಟನೆ

ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಅಂಗವಾಗಿ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್ ಯೂನಿಟ್ ಉದ್ಘಾಟನೆಯ ಅಂಗವಾಗಿ ನಗರದ ಯೆಯ್ಯಾಡಿ ಕೊಂಚಾಡಿಯಲ್ಲಿಂದು ಕರ್ಣಾಟಕ ಬ್ಯಾಂಕ್‍ನ ಡಿಜಿಟಲ್ ಬ್ಯಾಂಕ್ ಘಟಕ ಉದ್ಘಾಟನೆಗೊಂಡಿತು. ನೂತನ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಹೊಸದಿಲ್ಲಿಯ ಹಣಕಾಸು ಸಚಿವಾಲಯದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಜೊತೆ

ವಿಶ್ವ ತುಳು ಲಿಪಿ ದಿನದ ಅಂಗವಾಗಿ ತುಳು ದಿಬ್ಬಣ ಕಾರ್ಯಕ್ರಮ

ವಿಶ್ವ ತುಳು ಲಿಪಿ ದಿನದ ಅಂಗವಾಗಿ ನಗರದ ಸುರತ್ಕಲ್ ನ ಗೋವಿಂದದಾಸ್ ಕಾಲೇಜು ಮುಂಭಾಗದಲ್ಲಿ ‘ತುಳು ದಿಬ್ಬಣ’ ಕಾರ್ಯಕ್ರಮ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು ಮಾತನಾಡಿ, ಇಂದು ನಾವು ಮಲಯಾಳಂಗೆ ತುಳುಲಿಪಿಯನ್ನು ಮಾರುವ ಕಾಲ ಬಂದಿದೆ. ಆದರೆ, ಮಲಯಾಳಂಗೆ ಲಿಪಿಯನ್ನು ನೀಡಿರುವ ಭಾಷೆ ತುಳು ಎಂದು ಹೇಳಲು ನಮಗೆ ಹೆಮ್ಮೆಯಾಗುತ್ತದೆ ಎಂದು ಹೇಳಿದರು.

ದೀಪಾವಳಿಗೆ ಪರಿಸರ ಸ್ನೇಹಿ ಪಟಾಕಿ ಮಾರುಕಟ್ಟೆಗೆ ಲಗ್ಗೆ

ಮಂಗಳೂರು: ದೀಪಾವಳಿ ಎಂದರೆ ಬೆಳಕಿನ ಹಬ್ಬ. ಆದರೆ ದೀಪಾವಳಿ ಸಂದರ್ಭದಲ್ಲಿ ಅಬ್ಬರದ ಪಟಾಕಿಗಳದ್ದೇ ಕಾರುಬಾರು. ಆದರೆ ಈ ಬಾರಿಯ ದೀಪಾವಳಿಗೆ ಸದ್ದೇ ಮಾಡದ, ಪರಿಸರಕ್ಕೆ ಹಾನಿಯಾಗದ ಪಟಾಕಿಗಳು ಮಾರುಕಟ್ಟೆಗೆ ಬಂದಿದೆ. ಈ ಪರಿಸರಸ್ನೇಹಿ ಪಟಾಕಿ ಹೇಗಿರುತ್ತೆ ಗೊತ್ತಾ ಈ ಸ್ಟೋರಿ ನೋಡಿ ಇದು ಈ ಬಾರಿಯ ದೀಪಾವಳಿಗೆ ಮಾರುಕಟ್ಟೆಗೆ ಬಂದಿರುವ ಪರಿಸರ ಸ್ನೇಹೀ ಪಟಾಕಿಗಳು. ಇಲ್ಲಿ ಬೀಡಿ ಪಟಾಕಿ, ಲಕ್ಷ್ಮಿ ಬಾಂಬ್, ಸುಕ್ಲಿ ಬಾಂಬ್, ರಾಕೆಟ್, ದುರ್ಸು, ನೆಲಚಕ್ರ ಎಲ್ಲಾ ಪಟಾಕಿಗಳೂ

ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮ

ಪಚ್ಚನಾಡಿ, ಕಾವೂರು, ಕದ್ರಿಪದವು, ದೇರೆಬೈಲು, ತಿರುವೈಲ್, ಕುಡುಪು ಸೇರಿಸಿ 6 ವಾರ್ಡ್ ಗಳ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ ನೀಡಿದರು. 1200 ರಷ್ಟು ನಾಗರಿಕರು ಭಾಗವಹಿಸಿದ, 30 ಕ್ಕೂ ಹೆಚ್ಚು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದ ಜನಸ್ಪಂದನಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅರ್ಹ ಫಲಾನುಭವಿಗಳಿಗೆ ವಾಹನ, ಸರಕಾರದ ಹಲವು ಯೋಜನೆಗಳ ಸಹಾಯಧನದ ಚೆಕ್

ಪೊಲೀಸ್ ಬಲಪ್ರಯೋಗದಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ: ಸುನೀಲ್ ಕುಮಾರ್ ಬಜಾಲ್

ಮಂಗಳೂರು, ಅ. 17: ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ದ ಅಕ್ಟೋಬರ್ 18 ರಂದು ನಡೆಯುವ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಸಾಧ್ಯವಿಲ್ಲ. ಹೋರಾಟಗಾರರಿಗೆ ಪೊಲೀಸ್ ನೋಟೀಸ್ ಜಾರಿಗೊಳಿಸಿ ಬೆದರಿಸುವ ತಂತ್ರಗಳಿಗೆ ನಾವು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ ಎಂದು ಸಿಪಿಐಎಂ ಜಿಲ್ಲಾ ಮುಖಂಡರಾದ ಸುನೀಲ್ ಕುಮಾರ್ ಬಜಾಲ್ ಇಂದು 17-10-2022 ನಗರದ ಮಿನಿವಿಧಾನ ಸೌಧದ ಮುಂಭಾಗ ಸಮಾನ ಮನಸ್ಕ ಸಂಘಟನೆಗಳಿಂದ ಪೊಲೀಸರ ಕ್ರಮವನ್ನು ಖಂಡಿಸಿ , ನ್ಯಾಯಯುತ ಹೋರಾಟವನ್ನು

ವಿಟ್ಲ : ರೈಲಿನಡಿಗೆ ಬಿದ್ದು ಯುವಕ ಮೃತ್ಯು

ವಿಟ್ಲ: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಪ್ಯಾಸೆಂಜರ್ ರೈಲಿನಡಿಗೆ ನೇರಳಟ್ಟೆ ಸಮೀಪ ವ್ಯಕ್ತಿಯೊಬ್ಬರು ಬಿದ್ದು ತೀವ್ರ ಗಾಯಗೊಂಡ ಮತ್ತು ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲೆಂದು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆತಂದಾಗ ದಾರಿ ಮಧ್ಯೆ ಮೃತಪಟ್ಟ ಘಟನೆ ಅ.16ರಂದು ರಾತ್ರಿ ನಡೆದಿದೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ರೈಲು ನೇರಳಕಟ್ಟೆ ಸಮೀಪ ನಿಧಾನವಾಗಿ ಚಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ರೈಲ್ವೇ ಹಳಿಗೆ

ಮಜಿಲ ನಿವಾಸಿ ಮೃತದೇಹ ನೇತ್ರಾವತಿಯಲ್ಲಿ ಪತ್ತೆ

ಉಳ್ಳಾಲ: ಪಾಂಡೇಶ್ವರ ಠಾಣಾ ವ್ಯಾಪ್ತಿಯಿಂದ ನಾಪತ್ತೆಯಾಗಿದ್ದ ವೃದ್ಧರೋರ್ವರ ಮೃತದೇಹ ಉಳ್ಳಾಲ ಉಳಿಯ ನೇತ್ರಾವತಿ ನದಿತೀರದಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.ಜೆಪ್ಪು ಮಜಿಲ ನಿವಾಸಿ ಕುಮಾರ್(೭೮) ಎಂಬವರ ಮೃತದೇಹ ಇಂದು ಪತ್ತೆಯಾಗಿದೆ. ಗುರುವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದ ಇವರ ಕುರಿತು ಮನೆಮಂದಿ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಕುಮಾರ್‌ ಅವರು ಚರ್ಮರೋಗವಿದ್ದ ಹಿನ್ನೆಲೆಯಲ್ಲಿ ಖಿನ್ನತೆಗೆ ಒಳಗಾಗಿದ್ದರು. ಕೆಲ ದಿನಗಳ

ಮಂಗಳೂರು ಸ್ಮಾರ್ಟ್‍ಸಿಟಿ ಕಾಮಗಾರಿ ಅವೈಜ್ಞಾನಿಕ : ಮಂಗಳೂರಿನಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿಕೆ

ಮಂಗಳೂರಿನ ಸ್ಮಾರ್ಟ್ ಸಿಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಇದೀಗ ಜನತೆಗೆ ತೊಂದರೆ ಉಂಟಾಗಿದೆ. ಅಧಿಕಾರಿಗಳು ತಪ್ಪು ಮಾಡಿದ್ದಲ್ಲಿ ಜನಪ್ರತಿನಿಧಿಗಳು ಕೇಳಬೇಕು, ಸಾಮಾನ್ಯ ಜನರಿಗೆ ನ್ಯಾಯ ಎಲ್ಲಿದೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪೂರ್ವ ಆಲೋಚನೆ, ಪೂರ್ವ ಯೋಜನೆ ಬೇಕು.ನಗರದಲ್ಲಿ ಚರಂಡಿ, ರಾಜಕಾಲುವೆಗಳ ಹೂಳೆತ್ತುವ ಕೆಲಸ ನಾಲ್ಕು ತಿಂಗಳ ಹಿಂದೆಯೇ ಆಗಬೇಕಿತ್ತು. ಮೇ ತಿಂಗಳಲ್ಲಿ ರಸ್ತೆ

ಮನಪಾ ಪೌರಕಾರ್ಮಿಕರನ್ನು ಖಾಯಂಗೊಳಿಸಿ, ಸರ್ಕಾರದಿಂದ ಸಿಗುವ ಸೌಲಭ್ಯ ಒದಗಿಸಿ ಮಾಜಿ ಶಾಸಕ ಜೆ.ಆರ್. ಲೋಬೋ ಆಗ್ರಹ

ಮಂಗಳೂರು ಪಾಲಿಕೆಯ ಪೌರಕಾರ್ಮಿಕರನ್ನು ಖಾಯಂಗೊಳಿಸಿ ಅವರಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ತೆಗೆದುಕೊಳ್ಳುವುದು ಸರಿಯಾದ ಕ್ರಮವಲ್ಲ. ಪೌರಕಾರ್ಮಿಕರು ಸರಿಯಾದ ಕೆಲಸ ಮಾಡಿದ್ದಲ್ಲಿ ಅವರನ್ನು ಖಾಯಂಗೊಳಿಸಿ. ಖಾಸಗಿ ಕಚೇರಿ ಕೆಲಸ ನಡೆಸುದಾದಲ್ಲಿ ಲೇಬರ್ ಡಿಪಾರ್ಟ್‍ಮೆಂಟ್ ಇದೆ. ಹಾಗಿರುವಾಗ