ಮಂಗಳೂರು: ಪೇಯ್ಡ್ ನ್ಯೂಸ್ ಸಂಸ್ಕೃತಿ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ ತರುವ ಅಪಾಯ ಇದೆ. ಸತ್ಯ ಸಂಗತಿಗಳನ್ನು ಮರೆಮಾಚುವ ಮತ್ತು ಸುಳ್ಳನ್ನು ವೈಭವೀಕರಿಸುವ ಸ್ಥಿತಿ ಉಂಟಾಗಿದೆ ಎಂದು ಮೂಡಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ
ಮಂಗಳೂರಿನ ಪತ್ರಿಕಾಭವನದಲ್ಲಿ ಉದ್ಯಮಿ ಡಾ. ರೊನಾಲ್ಡ್ ಕೊಲಾಸೊ ಅವರಿಗೆ ಅವರು ಪ್ರೆಸ್ ಕ್ಲಬ್ ಗೌರವ ಅತಿಥಿ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮ ವನ್ನು ಉದ್ಘಾಟಿಸಿದ ಮಹಾರಾಷ್ಟ್ರ ಕನ್ನಡಿಗ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ ಉದ್ಘಾಟಿಸಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಸಕ ಐವನ್ ಡಿ ಸೋಜ, ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾನ್ಲಿ
ಮಂಗಳೂರು ಪ್ರೆಸ್‌ಕ್ಲಬ್ ದಿನಾಚರಣೆಯ ಸಂಭ್ರಮದ ಕಾರ್ಯಕ್ರಮವು ಮರವೂರು ದಿ ಗ್ರ್ಯಾಂಡ್ ಬೇ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿ4 ನ್ಯೂಸ್‌ನ ವರದಿಗಾರ ಶರತ್ ಸಾಲ್ಯಾನ್ ಸೇರಿದಂತೆ 9 ಮಂದಿ ಹಿರಿಯ ಪತ್ರಕರ್ತರಿಗೆ ಪ್ರೆಸ್‌ಕ್ಲಬ್ ಗೌರವ ಸನ್ಮಾನ ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮವನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಮಾಜದಲ್ಲಿ ತರೆ ಮರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರ ಸಾಧನೆಯನ್ನು
ಮಂಗಳೂರು: ಸೂಕ್ಷ್ಮ, ಸಂವೇದನಾಶೀಲ ಬೆಳೆಸಿಕೊಂಡು ಟೀಕೆ, ಟಿಪ್ಪಣಿ ಎದುರಿಸಿ ನಿರ್ಭೀತಿಯಿಂದ ಕೆಲಸ ಮಾಡಬೇಕಾದುದು ಪತ್ರಕರ್ತರ ಧರ್ಮ. ಸಮಾಜದ ಆರೋಗ್ಯ ಕಾಪಾಡುವ ಜವಾಬ್ದಾರಿ ಕೂಡ ಪತ್ರಕರ್ತರದ್ದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಕೆ.ಸದಾಶಿವ ಶೆಣೈ ಹೇಳಿದರು. ಬೋಳೂರಿನ ಪ್ಯಾರಡೈಸ್ ಐಲ್ಯಾಂಡ್‍ನಲ್ಲಿ ಭಾನುವಾರ ಮಂಗಳೂರು ಪ್ರೆಸ್ ಕ್ಲಬ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕಾ ಭವನ ಟ್ರಸ್ಟ್ ಆಶ್ರಯದಲ್ಲಿ ನಡೆದ ಪ್ರೆಸ್
ಡಾ. ವಸಂತಕುಮಾರ ಪೆರ್ಲ ಅವರ ಮೂಲ ಕನ್ನಡ ಕಥೆಗಳ ಇಂಗ್ಲಿಷ್ ಅನುವಾದ ವಿಷ್ಣುಮಂಗಲ ಇಂಗ್ಲಿಷ್ ಕಥಾ ಸಂಕಲನದ ಬಿಡುಗಡೆ ಕಾರ್ಯಕ್ರಮವು ನಗರದ ಪ್ರೆಸ್‍ಕ್ಲಬ್‍ನಲ್ಲಿ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಪಿ.ಎಸ್. ಯಡಪಡಿತ್ತಾಯ ಅವರು ಕೃತಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಈ ಒಂದು ಸಣ್ಣ ಕೃತಿ 16 ಕಥೆಗಳನ್ನೊಳಗೊಂಡಿದೆ. ಈ ಕಥೆಗಳನ್ನು 100ರ ಹರೆಯಲ್ಲಿರುವ ಪ್ರಸಿದ್ಧ ಅನುವಾದಕ ಬಿ.ಆರ್. ಭೀಮಾಚಾರ್
ಭಾರತದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಪ್ರಯುಕ್ತ ಕಲೆ ಮತ್ತು ಸಾಹಿತ್ಯಕ್ಕಾಗಿ ಸಮರ್ಪಿತವಾದ ರಾಷ್ಟ್ರೀಯ ಸಂಘಟನೆಯಾದ ಮಂಗಳೂರು ಸಂಸ್ಕಾರ ಭಾರತೀಯ ಆಶ್ರಯದಲ್ಲಿ ನವೆಂಬರ್ 28 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಪ್ರಸಿದ್ಧ ಭಾಗವತರಾದ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಕ್ರಾಂತಿಸೂರ್ಯ ಭಗತ ಸಿಂಹ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಪುರುಷೋತ್ತಮ ಕೆ. ಭಂಡಾರಿ ಅಡ್ಯಾರು ತಿಳಿಸಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ
64 ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್ ಸ್ಪರ್ಧೆಗೆ ಮಂಗಳೂರು ರೈಫಲ್ ಕ್ಲಬ್‌ನ ಎಂಟು ಮಂದಿ ಶೂಟರ್‌ಗಳು ಪ್ರತಿನಿಧಿಸಲಿದ್ದಾರೆ ಎಂದು ಮುಖ್ಯ ಕೋಚ್ ಮುಖೇಶ್ ಕುಮಾರ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. 2021 ರಲ್ಲಿ ಸ್ಮಾಲ್ ಬೋರ್ ರೈಫಲ್ ಈವೆಂಟ್‌ಗಳನ್ನು ನ್ಯಾಷನಲ್ ರೈಫಲ್ ಅಸೋಸಿಯೇಶನ್ ಆಫ್ ಇಂಡಿಯಾವು ಎಂಪಿ ಸ್ಟೇಟ್ ಶೂಟಿಂಗ್ ಅಕಾಡೆಮಿ ಶೂಟಿಂಗ್ ರೇಂಜ್‌ಗಳು, ಗೋರೆಗಾಂವ್, ಭೋಪಾಲ್‌ನಲ್ಲಿ ನವೆಂಬರ್
ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ನವೆಂಬರ್ 20 ರಂದು ಆಯೋಜಿಸಲಾಗಿದೆ ಎಂದು ಗೌರವ ಕಾರ್ಯದರ್ಶಿ ತಾರನಾಥ ಶೆಟ್ಟಿ ಹೇಳಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕ್ರೀಡಾಕೂಟವು ಬೆಳಗ್ಗೆ 9 ಗಂಟೆಗೆ ಉದ್ಘಾಟನೆಗೊಂಡು, ಸಂಜೆ 4 ಗಂಟೆಗೆ ಕ್ರೀಡಾಕೂಟದ ಸಮಾರೋಪ ನಡೆಯಲಿದೆ. ಇದರದಲ್ಲಿ ಬಾಲಕ ಬಾಲಕಿಯರ 12 ರಿಂದ 16 ರ ವಯೋಮಿತಿಯ
ಬಲ್ಲಾಳ್ ಭಾಗ್‍ನಲ್ಲಿ ಹಿಂದೂಗಳ ಮೇಲೆ ಅನ್ಯಧರ್ಮದವರಿಂದ ನಡೆದಿರುವ ದೌರ್ಜನ್ಯದ ಬಗ್ಗೆ ಕೂಲಂಕುಷವಾಗಿ ಮತ್ತು ಪಾರದರ್ಶಕವಾಗಿ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುವಂತೆ ಬಲ್ಲಾಳ್ ಭಾಗ್ ಫ್ರೆಂಡ್ಸ್‍ನ ರಕ್ಷಿತ್ ಕೊಟ್ಟಾರಿ ಅವರು ಆಗ್ರಹಿಸಿದ್ದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಲ್ಲಾಳ್ ಭಾಗ್ ಪರಿಸರದ ಸುತ್ತಮುತ್ತ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳನ್ನು ಯಾವುದೇ ಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥವಾಗಿ ಸೇವೆ
ರಾಜ್ಯದ ವಿವಿಧ ಕಡೆಗಳಲ್ಲಿ ಕ್ರೈಸ್ತ ಸಮುದಾಯದ ಧರ್ಮ ಗುರುಗಳು ಚರ್ಚ್, ಸೇವಾ ಕಾರ್ಯಕರ್ತರ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಸುಳ್ಳು ಕೇಸುಗಳನ್ನು ದಾಖಲಿಸಿ ಕ್ರೈಸ್ತ ಧಾರ್ಮಿಕ ಮುಖಂಡರುಗಳನ್ನು ಬಂಧಿಸುತ್ತಿರುವ ಕೃತ್ಯವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಖಂಡಿಸುತ್ತದೆ. ಈ ಬಗ್ಗೆ ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೊ ಫ್ರಾಂಕೊ ಅವರು ಕ್ರೈಸ್ತ ಸಂಘಟನೆಗಳ ಕಾನೂನು