Home Posts tagged #mangalore (Page 105)

ಮಂಗಳೂರು : ತುಳು ರಂಗಭೂಮಿ, ತುಳು ಚಿತ್ರ ನಟ ವಿವೇಕ್ ಮಾಡೂರು ನಿಧನ

ಕಳೆದ ಕೆಲ ದಶಕಗಳಿಂದ ತುಳು ರಂಗಭೂಮಿಯಲ್ಲದೆ, ತುಳು ಚಿತ್ರರಂಗದಲ್ಲೂ ಕಲಾರಸಿಕರನ್ನ ತನ್ನ ಕುಬ್ಜ ದೇಹದಿಂದಲೇ ರಂಜಿಸುತ್ತಿದ್ದ ವಿವೇಕ್ ಮಾಡೂರು(52) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಗುರುವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಅವರನ್ನು ಇಂದು ಬೆಳಿಗ್ಗೆ ಮನೆ ಮಂದಿ ಎಬ್ಬಿಸಲು ಹೋದಾಗ ಮೃತಪಟ್ಟಿರುವುದು ತಿಳಿದು ಬಂದಿದೆ. ಮೃತ

ಸುಳ್ಯ ತಾ. ಗೌಡ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.23ರಂದು ವೆಂಕಟ್ರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಶಾರದ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸ್ವರ್ಣಕಲಾ ಎ.ಎಸ್. ಆಗಮಿಸಿ ಮಹಿಳಾ ದಿನಾಚರಣೆಯ ಕುರಿತು ಮಾತನಾಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಬಳಿಕ ಸಮಾಜದಲ್ಲಿ ವಿವಿಧ ರೀತಿಯಲ್ಲಿ ಸಾಧನೆಗೈದು ಮಾದರಿ ಎನಿಸಿರುವ ಗೌಡ ಮಹಿಳಾ ಘಟಕದ

ಉಳ್ಳಾಲ : ಮರ ಉರುಳಿ ಮನೆ ಛಾವಣಿಗೆ ಅಪಾರ ಹಾನಿ

ಉಳ್ಳಾಲ: ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಇಲ್ಲಿನ ಬಸ್ತಿಪಡ್ಪು ಎಂಬಲ್ಲಿ ಮನೆ ಆವರಣದಲ್ಲಿದ್ದ ತೆಂಗಿನ ಮರ ಉರುಳಿಬಿದ್ದು ಮನೆಗೆ ಹಾನಿಯುಂಟಾಗಿದೆ. ಬಸ್ತಿಪಡ್ಪುವಿನಲ್ಲಿರುವ ಯು.ಪಿ ಮಲ್ಯ ರಸ್ತೆಯಲ್ಲಿರುವ ವಿಶ್ವನಾಥ್‌ ತೇವುಲ ಎಂಬವರಿಗೆ ಸೇರಿದ ಮನೆಗೆ ಹಾನಿಯುಂಟಾಗಿದೆ. ಬುಧವಾರ ಸಂಜೆಯಿಂದ ಭಾರೀ ಮಳೆಯಾಗಿದ್ದು, ಜೋರಾಗಿ ಬೀಸಿದ ಗಾಳಿಯಿಂದ ಆವಾಂತರ ಉಂಟಾಗಿದೆ. ಮನೆಯೊಳಗೆ ಮನೆಮಂದಿಯಿದ್ದರೂ ಯಾವುದೇ ಜೀವಹಾನಿಯಿಲ್ಲದೇ ಪಾರಾಗಿದ್ದಾರೆ. ಮರ ನೇರವಾಗಿ ಛಾವಣಿ

ಸಿದ್ದಾಪುರ: ಪೆಟ್ರೋಲ್ ಕಳವು ಅಡ್ಡೆಗೆ ಪೊಲೀಸ್ ದಾಳಿ; ಪ್ರಮುಖ ಅರೋಪಿ ಪರಾರಿ, ಚಾಲಕನ ಬಂಧನ

ಸಿದ್ದಾಪುರ: ಸಿದ್ದಾಪುರ ಪೇಟೆ ಸಮೀಪದ ಸುಬ್ಬರಾವ್‌ ಕಾಂಪ್ಲೆಕ್ಸ್ ಪಕ್ಕದಲ್ಲಿ ಇರುವ ಸರ್ವಿಸ್ ಸ್ಟೇಷನ್ ನಲ್ಲಿ ನಿರಂತರವಾಗಿ ಟ್ಯಾಂಕರ್‌ನ ಪೆಟ್ರೋಲ್ ಕಳವು ಮಾಡುತ್ತಿರುವ ಬಗ್ಗೆ ಸಿಕ್ಕಿದ ಮಾಹಿತಿ ಮೇರೆಗೆ ಮಾ. 10ರಂದು ರಾತ್ರಿ ಕುಂದಾಪುರ ಉಪವಿಭಾಗದ ಡಿವೈಎಸ್‌ಪಿ ಎಚ್.ಡಿ. ಕುಲಕರ್ಣಿ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಇದರ ಪ್ರಮುಖ ಸೂತ್ರಧಾರ ವಿಜಯ ನಾಯ್ಕ ಪರಾರಿಯಾಗಿದ್ದು, ಟ್ಯಾಂಕ‌ರ್ ಚಾಲಕ ಜಯರಾಮ ಎಂಬಾತನನ್ನು ಬಂಧಿಸಿ ಆತನಿಗೆ ನ್ಯಾಯಾಂಗ ಬಂಧನ

ಹತ್ತು ಸಾವಿರ ಮನೆಗಳ ಪೈಕಿ ಒಂದೂ ಮತ್ಸ್ಯಾಶ್ರಯ ಮನೆ ಹಂಚಿಕೆಯಾಗಿಲ್ಲ, ಗಂಟಿಹೊಳೆ ಪ್ರಶ್ನೆಗೆ ಸರ್ಕಾರದ ಉತ್ತರ

ಬಜೆಟ್ ಅಧಿವೇಶನದಲ್ಲಿ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಮೀನುಗಾರರ ಪರವಾಗಿ ಧ್ವನಿ ಎತ್ತಿದ್ದು, ಸರ್ಕಾರದ ಉತ್ತರಕ್ಕೆ ಶಾಸಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸದನದಲ್ಲಿ, 2023-24 ಹಾಗೂ 2024-25 ನೇ ಸಾಲಿನಲ್ಲಿ ಮೀನುಗಾರಿಕೆ ಮತ್ಸ್ಯಾಶ್ರಯ ವಸತಿ ಯೋಜನೆಯಡಿ ಮಂಜೂರಾದ ಮನೆಗಳ ಪೈಕಿ ಎಷ್ಟು ಮನೆಗಳ ಕಾಮಗಾರಿ ಪ್ರಗತಿಯಲ್ಲಿವೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಶಾಸಕರ ಪ್ರಶ್ನೆಗೆ ಉತ್ತರಿಸಿರುವ ಮೀನುಗಾರಿಕ ಸಚಿವ ಮಾಂಕಾಳ್ ವೈದ್ಯ, 2023-24

ಬ್ರಹ್ಮಾವರದಲ್ಲಿ ಎಂ.ಸಿ.ಸಿ ಬ್ಯಾಂಕಿನ ಎಟಿಎಮ್ ಉದ್ಘಾಟನೆ

ಬ್ರಹ್ಮಾವರ ಶಾಖೆಯು ಆರಂಭಗೊoಡು ಒಂದು ವರ್ಷ ಪೂರ್ಣಗೊಂಡ ಸಂದರ್ಭ ವಾರ್ಷಿಕೋತ್ಸವ, 10 ಕೋಟಿ ವ್ಯವಹಾರದ ಸಾಧನೆ ಮತ್ತು ನೂತನ ಎಟಿಮ್ ಉದ್ಘಾಟಣಾ ಸಮಾರಂಭ 2025 ಬ್ರಹ್ಮಾವರ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಎಂ.ಸಿ.ಸಿ. ಬ್ಯಾಂಕಿನ 8ನೇ ಎಟಿಎಮ್ ಅನ್ನು ಬ್ರಹ್ಮಾವರ ಶಾಖೆಯಲ್ಲಿ ಬ್ರಹ್ಮಾವರ ಕ್ಯಾಥೋಲಿಕ್ ಕ್ರೇಡಿಟ್ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಜೆರಾಲ್ಡ್ ಗೊನ್ಸಾಲ್ವಿಸ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹೋಲಿ ಫ್ಯಾಮಿಲಿ ಚರ್ಚಿನ ಧರ್ಮಗುರುಗಳಾದ ವಂದನೀಯ

ಮಂಗಳೂರು: ಮಿಸ್ಟರ್, ಮಿಸ್, ಮಿಸ್ಟರ್ ತುಳುನಾಡು-2025 ಸೀಸನ್ 4

ಅಲ್ಲೊಂದು ಸುಂದರ ಫ್ಯಾಷನ್ ಜಗತ್ತು ಅನಾವರಣಗೊಂಡಿತು. ಇನ್ನು ಕಲರ್ ಕಲರ್ ಬಟ್ಟೆಗಳಿಂದ ಯುವಕ-ಯುವತಿಯರಿಂದ ರ್‍ಯಾಂಪ್ ವಾಕ್ ಕೂಡ ಎಲ್ಲರ್ ಗಮನ ಸೆಳೆಯಿತು. ಎನ್‌ಬಿ ಗ್ರೂಫ್ ಅರ್ಪಿಸುವ ಅಸ್ತ್ರ ಮಿಸ್ಟರ್, ಮಿಸ್, ಮಿಸ್ ಟೀನ್, ಮಿಸೆಸ್ ತುಳುನಾಡು ಸೀಸನ್ – 4ರ ಗ್ರ್ಯಾಂಡ್ ಫಿನಾಲೆ ಮಂಗಳೂರಿನ ಉಚ್ಚಿಲದ ಕಿಯಾಂಜಾ ಗಾರ್ಡನ್ ನ ವೇದಿಕೆಯಲ್ಲಿ ಸಂಭ್ರಮದಿಂದ ನಡೆಯಿತು. ದೇಶಿ ಮತ್ತು ವೆಸ್ಟರ್ನ್ ಕಲ್ಚರ್ ಬಟ್ಟೆಗಳನ್ನು ಧರಿಸಿ, ಯುವಕ – ಯುವತಿಯರ

ಕೊಕ್ಕಡ: ಮೂರು ತಾಲೂಕುಗಳನ್ನು ಬೆಸೆಯುವ ಕೋಡಂಗೇರಿ – ಉಪ್ಪಾರಹಳ್ಳ ಸೇತುವೆ, ಕಿಂಡಿ ಅಣೆಕಟ್ಟು ಲೋಕಾರ್ಪಣೆ

ಕೊಕ್ಕಡ: ಕೊಕ್ಕಡ ಮತ್ತು ಗೋಳಿತೊಟ್ಟು ಗ್ರಾಮದ 500ಕ್ಕೂ ಹೆಚ್ಚು ಮನೆಗಳ ನಿವಾಸಿಗಳ 40 ವರ್ಷಗಳ ಬೇಡಿಕೆಯ ರೂಪದಲ್ಲಿ ರೂ.3.35 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೋಡಂಗೇರಿ – ಉಪ್ಪಾರಹಳ್ಳ ಸೇತುವೆ ಹಾಗೂ ಕಿಂಡಿ ಅಣೆಕಟ್ಟನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಮಾ.8ರಂದು ಲೋಕಾರ್ಪಣೆ ಮಾಡಿದರು. ಈ ಸೇತುವೆ ಮತ್ತು ಅಣೆಕಟ್ಟಿನ ನಿರ್ಮಾಣದಿಂದ ರೈತರಿಗೆ ನೀರಾವರಿ ಹಾಗೂ ಜನ ಸಂಪರ್ಕ ಸುಗಮಗೊಳ್ಳಲಿದೆ.ಎಂದು ಹೇಳಿದರು. ಈ ವೇಳೆ ಶಾಸಕರನ್ನು ಸ್ಥಳೀಯರು

ಕೊಕ್ಕಡ: ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ 83 ಲಕ್ಷ ವೆಚ್ಚದ ಪುನರ್‌ವಸತಿ ಕೇಂದ್ರ: ಕೊಕ್ಕಡದಲ್ಲಿ ಭೂಮಿ ಪೂಜೆ

ಎಂಡೋಸಲ್ಫಾನ್ ಸಂತ್ರಸ್ತರ ಪುನರ್‌ವಸತಿ ಮತ್ತು ಭವಿಷ್ಯದ ಅನುಕೂಲಕ್ಕಾಗಿ ಎಂಆರ್‌ಪಿಎಲ್ (MRPL) ನಿಂದ 83 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಕಟ್ಟಡದ ಭೂಮಿ ಪೂಜೆ ಮಾ.8 ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ನೆರವೇರಿಸಿದರು. ಕೊಕ್ಕಡ ಗ್ರಾಮ ಪಂಚಾಯತಿ ಸಮೀಪ ಈ ಪುನರ್‌ವಸತಿ ಕೇಂದ್ರ ನಿರ್ಮಾಣವಾಗಲಿದ್ದು, ಎಂಡೋ ಸಂತ್ರಸ್ತರ ಆರೋಗ್ಯದ ಕಲ್ಯಾಣಕ್ಕಾಗಿ ಈ ಯೋಜನೆ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಅವರು ಮಾತನಾಡಿ,

ಸುಳ್ಯ: ಬಿ.ಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಇದರ ವತಿಯಿಂದ ಬಡ್ಡಡ್ಕದ ಕೂರ್ನಡ್ಕ ಎಂಬಲ್ಲಿ ಶ್ರೀಮತಿ ತೇಜಕುಮಾರಿಯವರಿಗೆ ವಾತ್ಸಲ್ಯ ಮನೆಯನ್ನು ಹಸ್ತಾಂತರಿಸಲಾಯಿತು. ಸುಳ್ಯ ತಾಲೂಕಿನ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಲೋಕನಾಥ್ ಅಮಚೂರು ನವರು ನಾಮಫಲಕವನ್ನು ಅನಾವರಣಗೊಳಿಸಿ ಗ್ರಾಮೀಣ ಮಟ್ಟದಲ್ಲಿ ಕೊರತೆಗಳು ಕಂಡುಬಂದಲ್ಲಿ ಮೊದಲಾಗಿ ಆ ಸಮಸ್ಯೆಯನ್ನು ಗುರುತಿಸಿ ಬಗೆಹರಿಸುವುದು ಶ್ರೀ ಕ್ಷೇತ್ರ ಧರ್ಮಸ್ಥಳ