Home Posts tagged #mangalore (Page 107)

ದ.ಕ.ಜಿಲ್ಲೆಗೆ ಐತಿಹಾಸಿಕ ಬಜೆಟ್: ಹರೀಶ್ ಕುಮಾರ್

“ದ.ಕ.ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ಮುನ್ನೋಟದೊಂದಿಗೆ ಮಂಡಿಸಿದ ಐತಿಹಾಸಿಕ ಬಜೆಟ್ ಆಗಿದೆ. ಜಿಲ್ಲೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ವೈದ್ಯಕೀಯ ಕಾಲೇಜ್ ಮಂಜೂರು, ಶೈಕ್ಷಣಿಕ, ಆರೋಗ್ಯ, ಕ್ರೀಡೆ, ಜಲಸಾರಿಗೆ, ಮೀನುಗಾರಿಕಾ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮಗಳಿಗೆ ಭರಪೂರ ಅನುದಾನ ನೀಡಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ ಉತ್ತಮ

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ :ಕಿಶೋರ್ ಕುಮಾರ್ ಪುತ್ತೂರು

ಕರ್ನಾಟಕ ಸರ್ಕಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ಗ್ರಾಮೀಣ ಮತ್ತು ಸ್ಥಳೀಯ ಆಡಳಿತ ವ್ಯವಸ್ಥೆಗೆ ತೀವ್ರ ನಿರಾಸೆಯನ್ನುಂಟುಮಾಡಿದೆ. ಗ್ರಾಮ ಪಂಚಾಯತ್ ಸದಸ್ಯರ ಭತ್ಯೆ, ಪ್ರಯಾಣ ಭತ್ಯೆ , ದೂರವಾಣಿ ಭತ್ಯೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಬಗ್ಗೆ ಸರ್ಕಾರ ಯಾವುದೇ ಅನುದಾನ ನೀಡಿಲ್ಲ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಲು ಹೊಸ ಯೋಜನೆಗಳೇ ಇಲ್ಲ. ನಕ್ಸಲ್ ಪ್ರಭಾವಿತ ಗ್ರಾಮಗಳಿಗೆ ಸಹಾಯ ಪ್ಯಾಕೇಜ್ ನೀಡುವ ಬದಲು ಸಂಪೂರ್ಣ ನಿರ್ಲಕ್ಷ್ಯ ತೋರಲಾಗಿದೆ. ಈ ಬಜೆಟ್

ಓಂ ಕ್ರಿಕೆಟರ್ಸ್ ಪಾವಂಜೆ -16ನೇ ವಾರ್ಷಿಕೋತ್ಸವ

ಹಳೆಯಂಗಡಿ, ಓಂ ಕ್ರಿಕೆಟರ್ಸ್ ಪಾವಂಜೆ ವತಿಯಿಂದ 16ನೇ ವಾರ್ಷಿಕೋತ್ಸವವನ್ನು ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ಶ್ರೀ ಜ್ಞಾನಶಕ್ತಿ ಸುಬ್ರಮಣ್ಯ ಸ್ವಾಮಿ ವೇದಿಕೆಯಲ್ಲಿ ನೆರವೇರಿಸಲಾಯಿತು.ಕಾರ್ಯಕ್ರಮದಲ್ಲಿ ಹಳೆಯಂಗಡಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ, ಬ್ರಹ್ಮಶ್ರೀ ನಾರಾಯಣ ಗುರು ಸಂಘ ಹಳೆಯಂಗಡಿ ಇದರ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ನಾನಿಲ್, ಜ್ಞಾನಶಕ್ತಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಪಾವಂಜೆ ಇಲ್ಲಿನ ಆಡಳಿತ ಮೊಕ್ತೇಸರರಾದ ಶ್ರೀ

ಸುಳ್ಯ: ಮಾ.15ರಿಂದ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ

ಸುಳ್ಯ:ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಮಾ.15ರಿಂದ 18ರ ತನಕ ನಡೆಯಲಿದೆ.4 ದಿನದ ದೈವಂಕಟ್ಟು ಮಹೋತ್ಸವಕ್ಕೆ ಎಲ್ಲಾ ಸಿದ್ಧತೆಗಳು ಅಂತಿಮ ಹಂತದಲ್ಲಿದೆ ಎಂದು ಮಹೋತ್ಸವ ಸಮಿತಿಯ ಮಹೋತ್ಸವ ಸಮಿತಿಯ ಅಧ್ಯಕ್ಷ ಸುಧಾಕರ ರೈ ಹಾಗೂ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪವಿತ್ರನ್ ಗುಂಡ್ಯ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ. ಅರಂಬೂರು ವಯನಾಟ್ ಕುಲವನ್ ದೈವಸ್ಥಾನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ

ಮಾಣಿ: ಪೆರಾಜೆ ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿ ಇಲ್ಲದೆ ಕಡತಗಳು ಬಾಕಿ:ಸ್ಥಳೀಯರಿಂದ ಹಿಡಿಶಾಪ

ಮಾಣಿ ಪೆರಾಜೆ ಗ್ರಾಮ ಪಂಚಾಯತ್ ದಿಕ್ಕು ದೆಸೆ ಇಲ್ಲದ ಗ್ರಾಮ ಪಂಚಾಯತ್ ಆಗಿದೆ. ವಿದ್ಯಾರ್ಥಿಗಳು, ಸ್ಥಳೀಯರು, ಜಮೀನು ಖರೀದಿಸಿದವರು, ಪಹಣಿ ಪತ್ರಿಕೆ, ತಮ್ಮ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ- ಹೀಗೆ ನೂರಾರು ಕೆಲಸಗಳಿಗೋಸ್ಕರ ಪ್ರತಿದಿನವೂ ಗ್ರಾಮ ಪಂಚಾಯತ್ ಕಚೇರಿಗೆ ಬಂದು “ಬಂದ ದಾರಿಗೆ ಸುಂಕವಿಲ್ಲ” ಎಂಬಂತೆ ಬೇಸರದಿಂದ ಹಿಂದೆ ವಾಪಾಸಾಗುತ್ತಿದ್ದಾರೆ. ಸ್ಥಳೀಯ ಶಾಸಕರು, ಸಂಸದರು, ತಹಶೀಲ್ದಾರರು ಹಾಗೂ ಜಿಲ್ಲಾಧಿಕಾರಿಗಳು ಮಾಣಿ ಪೇರಾಜೆ

“ಶಿವಾಜಿಯನ್ನು ವಿರೋಧಿಸುವವರು ನಾಟಕ ನೋಡಿ!“ – ವಿಜಯ್ ಕುಮಾರ್ ಕೊಡಿಯಾಲ್ ಬೈಲ್

ಮಂಗಳೂರು: “ಶಿವಾಜಿ ಹಿಂದೂ ಧರ್ಮದ ರಕ್ಷಕ ಆದರೆ ಅನ್ಯಧರ್ಮದ ದ್ವೇಷಿಯಲ್ಲ. ಇತಿಹಾಸವನ್ನು ತಿರುಚಿದವರು ಮಾತ್ರ ಅಪಚಾರ ಮಾಡುತ್ತಿದ್ದಾರೆ ಶಿವಾಜಿಯನ್ನು ಅರಿತವರು ಅವರಂತಹ ಒಬ್ಬ ಒಳ್ಳೆಯ ಸಾಮ್ರಾಟನನ್ನು ಕೊಂಡಾಡುತ್ತಾರೆ. ಶಿವಾಜಿಯ ಸಂಪೂರ್ಣ ಕಥೆ ತಿಳಿದುಕೊಂಡರೆ ಅವರೆಂತಹ ಅನ್ಯಧರ್ಮ ಸಹಿಷ್ಣು ಎನ್ನುವುದು ತಿಳಿಯುತ್ತದೆ. ಶಿವಾಜಿಯ ಬಗ್ಗೆ ತಿಳಿಯದವರು ನಮ್ಮ ಮುಂದಿನ ಚಾರಿತ್ರಿಕ ನಾಟಕ “ಶಿವಾಜಿ”ಯನ್ನು ನೋಡಬೇಕು. ಅವರ ಶಿವಾಜಿ ಬಗೆಗಿನ ಅಭಿಪ್ರಾಯ ಬದಲಾಗುತ್ತದೆ“

ಸುಬ್ರಹ್ಮಣ್ಯ : ಕೆ.ಎಸ್.ಎಸ್. ಕಾಲೇಜಿನಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ,ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ,ಕೆ ಎಸ್ ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿಭಾಗ ,ರೋವರ್ಸ್ ಅಂಡ್ ರೆಂಜರ್ಸ್ ಘಟಕ ,ಯೂತ್ ರೆಡ್ ಕ್ರಾಸ್ ಘಟಕ , ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಆಂತರಿಕ ಗುಣಮಟ್ಟ ಕೋಶ ಗಳ ಜಂಟಿ ಆಶಯದಲ್ಲಿ ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು. ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ನ

ಪುತ್ತೂರು: ಸಾಲಗಾರರ ಕಿರುಕುಳ : ಆಟೋ ರಿಕ್ಷಾ ಚಾಲಕ ಆತ್ಮಹತ್ಯೆ

ಪುತ್ತೂರು: ಆಟೋ ರಿಕ್ಷಾ ಚಾಲಕ ಪೆರಿಯತ್ತೋಡಿ ನಿವಾಸಿಯೊಬ್ಬರು ಮನೆಯ ಬಳಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.3ರಂದು ನಡೆದಿದೆ. ಪೆರಿಯತ್ತೋಡಿ ದಿ.ಹುಕ್ರಪ್ಪ ಗೌಡ ಅವರ ಪುತ್ರ ಕೃಷ್ಣ(40ವ.)ರವರು ಆತ್ಮಹತ್ಯೆ ಮಾಡಿಕೊಂಡವರು. ಬೆಳಿಗ್ಗೆ ಅವರು ರಿಕ್ಷಾದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ದಿದ್ದರು. ಮಧ್ಯಾಹ್ನದ ವೇಳೆ ಅವರಿಗೆ ಸಾಲ ವಸೂಲಿಗಾರರ ಕರೆ ಬಂದಿತ್ತು. ಅದಾದ ಬಳಿಕ ಅವರು ಮನೆಯ ಬಳಿಯ ಮರವೊಂದರ ಗೆಲ್ಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಮಂಗಳೂರು: ದಕ್ಷಿಣದ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಯತ್ನ :ಡಿ.ಕೆ ಶಿವಕುಮಾರ್

ದಕ್ಷಿಣದ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದ್ದು, ಇದರ ವಿರುದ್ಧ ಕಾಂಗ್ರೆಸ್ ಹೋರಾಡಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ಉಡುಪಿ ಜಿಲ್ಲೆಯ ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಆಯೋಜಿಸಿರುವ ಅಮ್ಮನ ಪ್ರತಿಷ್ಠಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದರು. ‘ಸಂಸತ್ತಿನಲ್ಲಿ

ಸುಳ್ಯ: ಸಜ್ಜನ ಪ್ರತಿಷ್ಠಾನದ ವತಿಯಿಂದ ಪತ್ರಕರ್ತರಿಗೆ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

ಸುಳ್ಯ: ಸದಾ ಒತ್ತಡದಲ್ಲಿ ಕೆಲಸ ಮಾಡುವುದರಿಂದ ಆರೋಗ್ಯದ  ಮೇಲೆ ಪರಿಣಾಮ ಬೀರುತ್ತದೆ. ಆದುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿ ದೇಹ ಮತ್ತು ಮನಸ್ಸು ಸದಾ ಉಲ್ಲಸಿತವಾಗಿರಿಸಲು ಕ್ರೀಡೆ ಸಹಕಾರಿ ಎಂದು ಬೀಜದಕಟ್ಟೆ ಸಜ್ಜನ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಉಮ್ಮರ್ ಬೀಜದಕಟ್ಟೆ ಹೇಳಿದ್ದಾರೆ. ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ವತಿಯಿಂದ ಸುಳ್ಯ ಪ್ರೆಸ್ ಕ್ಲಬ್ ಸದಸ್ಯರಿಗಾಗಿ ಹಮ್ಮಿಕೊಂಡ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಉದ್ಘಾಟಿಸಿ ಅವರು