Home Posts tagged #mangalore (Page 111)

ಮೂಡುಬಿದಿರೆ: ಲಾಡಿ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿದ ಬ್ಯಾನರ್ ಗೆ ಹಾನಿ – ಇಬ್ಬರ ಬಂಧನ

ಮೂಡುಬಿದಿರೆ: ಲಾಡಿ ಶ್ರೀ ಚತುರ್ಮುಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಅಳವಡಿಸಿರುವ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿದಂತೆ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಪುರಸಭಾ ಸದಸ್ಯ ಇಕ್ಬಾಲ್ ಕರೀಂ ಅವರು ಲಾಡಿ ಶ್ರೀ ಚತುಮು೯ಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಹಾಕಿರುವ

ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ ಹೊಡೆದು ಬಳಿಕ ಎಡ ಭಾಗದಿಂದ ಸಾಗುತ್ತಿದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಆಡಂಕುದ್ರು ಎಂಬಲ್ಲಿ ಘಟನೆ ನಡೆದಿದೆ. ಸ್ಕೂಟರ್ ಸವಾರರಿಬ್ಬರೂ ಗಾಯಗೊಂಡಿದ್ದಾರೆ. ಮಂಗಳೂರು ಕಡೆಯಿಂದ ಕಾಸರಗೋಡು ಕಡೆಗೆ ಚಲಿಸುತ್ತಿದ್ದ ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆ ನಡೆಸಿದ ಜೀಪ್ ಚಾಲಕ ನಿಯಂತ್ರಣ ತಪ್ಪಿ ಢಿಕ್ಕಿ

ಪಾವಂಜೆ: ತುಳುನಾಡಿನ ಸಾಂಪ್ರದಾಯಿಕ ಕೆಡ್ಡಸ ಆಚರಣೆ: ನಂದಿನಿ ಕ್ರಿಕೆಟರ್ಸ್ ಅರಂದ್‌ದ ವಾರ್ಷಿಕೋತ್ಸವ

ನಂದಿನಿ ಕ್ರಿಕೆಟರ್ಸ್ ಅರಂದ್ ವತಿಯಿಂದ ತುಳುನಾಡಿನ ಸಾಂಪ್ರದಾಯಿಕ ಆಚರಣೆ, ಕೆಡ್ಡಸ ಹಾಗೂ ಸಂಘಟನೆಯ ವಾರ್ಷಿಕೋತ್ಸವವನ್ನು ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಮೇಶ್ ಪೂಜಾರಿ ಚೇಳಾಯರುರವರು ವಹಿಸಿ ಹಿರಿಯರು ನಡೆಸುತ್ತಾ ಬಂದ ಸಂಸ್ಕೃತಿ ಸಂಸ್ಕಾರಗಳನ್ನು ಉಳಿಸಿಕೊಳ್ಳುವ ಯುವ ಸಂಘಟನೆಯ ಪಾತ್ರ ನಿಜಕ್ಕೂ ಶ್ಲಾಘನೀಯ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ದೇವಿ ದಯಾಳ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಮಾಲೀಕರಾದ ಶ್ರೀ ದೇವಿ ದಯಾಳ್ ಶೆಟ್ಟಿಯವರು

ಬಿಜೆಪಿಯಿಂದ “ಸಮಪ೯ಣಾ ದಿನ” ಆಚರಣೆ

ಮೂಡುಬಿದಿರೆ: ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ತಮ್ಮ ಜೀವನವನ್ನು ರಾಷ್ಟ್ರ ನಿರ್ಮಾಣಕ್ಕೆ ಸಮರ್ಪಿಸಿ ದೇಶದ ಯುವಜನತೆಗೆ ಮಾರ್ಗದರ್ಶಿಯಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯತಿಥಿಯ “ಸಮರ್ಪಣಾ ದಿನವನ್ನು” ಭಾರತೀಯ ಜನತಾ ಪಾರ್ಟಿ ಮುಲ್ಕಿ-ಮೂಡುಬಿದಿರೆ ಮಂಡಲ ಹಾಗೂ ಮೂಡುಬಿದಿರೆ ಮಹಾಶಕ್ತಿಕೇಂದ್ರದ ವತಿಯಿಂದ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಮೂಡುಬಿದಿರೆ ಮಹಾಶಕ್ತಿಕೇಂದ್ರ ಅಧ್ಯಕ್ಷ ಲಕ್ಷ್ಮಣ್ ಪೂಜಾರಿ, ಮಂಡಲ ಪ್ರಧಾನ

ಮೂಡುಬಿದಿರೆ:ಪುರಸಭೆಯ ಪೌರಕಾಮಿ೯ಕೆ ಆತ್ಮಹತ್ಯೆ

ಮೂಡುಬಿದಿರೆ : ಇಲ್ಲಿನ ಪುರಸಭೆಯ ಪೌರ ಕಾಮಿ೯ಕೆಯೋವ೯ರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುರಸಭಾ ವ್ಯಾಪ್ತಿಯ ಬಿರಾವಿನಲ್ಲಿ ಮಂಗಳವಾರ ನಡೆದಿದೆ.ಬಿರಾವು ಅರಂತ ಕಂಪೌಂಡ್ ನ ನಿವಾಸಿ ದಿ. ಚಂದ್ರಹಾಸ್ ಅವರ ಪತ್ನಿ ಯಶೋಧ (43ವ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಕಳೆದ ಕೆಲವು ವರುಷಗಳಿಂದ ಪೌರಕಾಮಿ೯ಕೆಯಾಗಿ ಪುರಸಭೆಯಲ್ಲಿ ದುಡಿಯುತ್ತಿದ್ದು ಎರಡು ವಷ೯ಗಳ ಹಿಂದೆ ಹುದ್ದೆ ಖಾಯಂ ಆಗಿತ್ತು.ಇವರಿಗೆ ಇಬ್ಬರು ಗಂಡು ಮಕ್ಕಳಿದ್ದು ಓವ೯ ಕಾಲೇಜು

ಮೂಡುಬಿದಿರೆ: ಗುತ್ತಿಗೆದಾರ ಜಯ ಮೇಸ್ತ್ರಿ ನಿಧನ

ಮೂಡುಬಿದಿರೆ: ಇಲ್ಲಿನ ಪ್ರಸಿದ್ಧ ಕಟ್ಟಡಗಳ ಹಾಗೂ ಹಲವಾರು ಖ್ಯಾತನಾಮರ ಮನೆಗಳ ಕೆಲಸಗಳನ್ನು ಎಂಜಿನಿಯರ್ ನಂತೆ ಅಚ್ಚುಕಟ್ಟಾಗಿ ನಿಮಿ೯ಸಿ ಕೊಟ್ಟು ಜಯ ಮೇಸ್ತ್ರಿ ಎಂದೇ ಮೂಡುಬಿದಿರೆ ಪರಿಸರದಲ್ಲಿ ಖ್ಯಾತರಾಗಿದ್ದ ಸಂಪಿಗೆ ಕೋಂಟಡ್ಕ ನಿವಾಸಿ ಜಯ ಗೌಡ (68) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಮೂಡುಬಿದಿರೆ ಕನ್ನಡಭವನದಲ್ಲಿ ನಡೆದಿದ್ದ ‘ತುಳುವೆರ್ ಬೆದ್ರ’ ಸಂಘಟನೆಯ ನಾಟಕ ಪ್ರದರ್ಶನ ವೇಳೆ ಜಯ ಮೇಸ್ತ್ರಿ ಅವರನ್ನು

ಮಂಜೇಶ್ವರ: ವ್ಯಕ್ತಿಯೋರ್ವನನ್ನು ಇರಿದು ಕೊಲೆ

ಮಂಜೇಶ್ವರ : ವ್ಯಕ್ತಿಯೋರ್ವನನ್ನು ಕಡಿದು ಕೊಲೆ ಮಾಡಿದ ಘಟನೆ ಮಂಜೇಶ್ವರದ ಉಪ್ಪಳದಲ್ಲಿ ನಡೆದಿದೆ. ಕಣ್ಣೂರು ಪಯ್ಯನ್ನೂರು ನಿವಾಸಿ ಹಾಗೂ ಉಪ್ಪಳ ಮೀನು ಮಾರುಕಟ್ಟೆ ಸಮೀಪದ ಫ್ಲಾಟಿನ ನೌಕರನಾಗಿರುವ ಸುರೇಶ್ ಕುಮಾರ್ (48) ಸಾವನ್ನಪ್ಪಿದ ದುರ್ದೈವಿ. ಮಂಗಳವಾರ ರಾತ್ರಿ ಉಪ್ಪಳ ಮೀನು ಮಾರುಕಟ್ಟೆ ಪರಿಸರದಲ್ಲಿ ಈ ದುಷ್ಕೃತ್ಯ ನಡೆದಿದೆ. ಘಟನೆಗೆ ಸಂಬಂಧಿಸಿ ಉಪ್ಪಳ ಫತ್ವಾಡಿ ಕಾರ್ಗಿಲ್ ನಿವಾಸಿ ಸವಾದ್( 23) ಎಂಬಾತನನ್ನು ಮಂಜೇಶ್ವರ ಪೊಲೀಸರು  ವಶಕ್ಕೆ ತೆಗೆದಿದ್ದಾರೆ.

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ : ಅಧ್ಯಕ್ಷರಾಗಿ ಕೆ.ಸಿ.ಸದಾನಂದ,ಉಪಾಧ್ಯಕ್ಷರಾಗಿ ದಿನೇಶ್ ಮಡಪ್ಪಾಡಿ ಆಯ್ಕೆ

ಸುಳ್ಯ: ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ನೂತನ ಅಧ್ಯಕ್ಷರಾಗಿ ಕೆ.ಸಿ.ಸದಾನಂದ ಹಾಗೂ ಉಪಾಧ್ಯಕ್ಷರಾಗಿ ದಿನೇಶ್ ಮಡಪ್ಪಾಡಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಇಂದು ನಡೆದ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಒಂದೊಂದೇ ನಾಮಪತ್ರ ಸಲ್ಲಿಕೆಯಾದ ಕಾರಣ ಅವಿರೋಧ ಆಯ್ಕೆ ನಡೆಯಿತು. ಸಹಕಾರ ಇಲಾಖೆಯ ಶೋಭಾ ಎನ್.ಎಸ್. ಚುನಾವಣಾಧಿಕಾರಿಯಾಗಿದ್ದರು.ನಿರ್ದೇಶಕರಾದ ಪಿ.ಸಿ.ಜಯರಾಮ, ಎ.ವಿ.ತೀರ್ಥರಾಮ, ಜಾಕೆ ಸದಾನಂದ ಗೌಡ, ಚಂದ್ರಾ ಕೋಲ್ಚಾರ್,

ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಬಾಲಾಲಯ ಪ್ರತಿಷ್ಠೆ

ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದ ರಜತಮಹೋತ್ಸವದ ಪ್ರಯುಕ್ತ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ಪುನಃಪ್ರತಿಷ್ಠೆ ಕಾರ್ಯಕ್ರಮಗಳಿಗೆ ಪೂರ್ವಭಾವಿಯಾಗಿ ಬಾಲಾಲಯ ಪ್ರತಿಷ್ಠೆಯು ಸೋಮವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಪ್ರಾತಃಕಾಲ ಬ್ರಹ್ಮಶ್ರೀ ಕದ್ರಿ ಕೃಷ್ಣ ಅಡಿಗರ ನೇತೃತ್ವದಲ್ಲಿ ಗಣಪತಿ ಹೋಮ, ಮೃತ್ಯುಂಜಯ ಹೋಮ ನಡೆದು, ಸಾನಿಧ್ಯದಲ್ಲಿ ಸಂಕೋಚದ ವಿಧಿ ವಿಧಾನಗಳನ್ನು ನಡೆಸಿ ಶ್ರೀ ಕೃಷ್ಣದೇವರನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ

ಅಪ್ಪಣ್ಣ ಕಟ್ಟೆಯ ಶೆಟ್ಟಿ ಆಟೋ ಪಾರ್ಕ್ ಮೇಲ್ಛಾವಣಿ ಅಭಿವೃದ್ಧಿ – ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ

ನಗರದ ಅಪ್ಪಣ್ಣ ಕಟ್ಟೆಯ ಶೆಟ್ಟಿ ಆಟೋ ಪಾರ್ಕ್ ನ ಮೇಲ್ಛಾವಣಿಯನ್ನು ಶಾಸಕರ ನಿಧಿಯಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಮಂಗಳೂರು ಮಹಾನಗರ ಪಾಲಿಕೆಯ 41ನೇ ಸೆಂಟ್ರಲ್ ವಾರ್ಡಿನ ವ್ಯಾಪ್ತಿಯ ಈ ಆಟೋ ಪಾರ್ಕ್ ಜಿಲ್ಲೆಯ ಅತೀ ಹಳೆಯ ನಿಲ್ದಾಣಗಳಲ್ಲಿ ಒಂದಾಗಿದ್ದು ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ಒದಗಿಸುತ್ತಾ ಬಂದಿದೆ. ದಿನನಿತ್ಯ ದುಡಿಯುವ ಆಟೋ ಚಾಲಕರದ್ದು ಶ್ರಮಿಕ ವರ್ಗವಾಗಿದ್ದು ಅವರುಗಳು