Home Posts tagged #mangalore (Page 118)

ಮಂಗಳೂರು: ತಣ್ಣೀರುಬಾವಿ ಬೀಚ್‌ನಲ್ಲಿ ಗಾಳಿಪಟಗಳ ಚಿತ್ತಾರ..!

ಕಡಲ ನಗರಿ ಮಂಗಳೂರಿನ ಬಾನಂಗಳಲ್ಲಿ ವಿವಿಧ ಆಕಾರಗಳ ಗಾಳಿಪಟಗಳ ಚಿತ್ತಾರ.. ಎಲ್ಲಿ ನೋಡಿದರಲ್ಲಿ ಕಲರ್‌ಪುಲ್ ಗಾಳಿಪಟಗಳು.. ಒಂದಕ್ಕೊಂದು ವಿಭಿನ್ನ ಮತ್ತು ಆಕರ್ಷಣೆಯ ಗಾಳಿಪಟಗಳು.. ಇದು ಕಂಡು ಬಂದಿರುವುದು ತಣ್ಣೀರುಬಾವಿ ಬೀಚ್‌ನಲ್ಲಿ.. ಹೌದು.. ಕರಾವಳಿ ಉತ್ಸವದ ಅಂಗವಾಗಿ ಏರ್ಪಡಿಸಿರುವ ಅಂತರರಾಷ್ಟ್ರೀಯ ಗಾಳಿಪಟ ಉತ್ಸವ ಇಲ್ಲಿನವರಿಗೂ ದೇಶವಿದೇಶಗಳ ಗಾಳಿಪಟಗಳ

ಮಂಗಳೂರಿನಲ್ಲಿ ಐದು ದಿನಗಳ ಕಾಲ ಸ್ಟ್ರೀಟ್ ಫುಡ್ ಫಿಯೆಸ್ಟ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ದ.ಕ ಜಿಲ್ಲಾಡಳಿತದ ಸಹಕಾರದೊಂದಿಗೆ ಆರಂಭಗೊಂಡ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಗೆ ನಗರದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ನಿರ್ಮಿಸಿದ್ದ ಅದ್ದೂರಿ ವೇದಿಕೆಯಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರ ಉಪಸ್ಥಿತಿಯೊಂದಿಗೆ ಅಧಿಕೃತ ಚಾಲನೆ ದೊರೆಯಿತು. ಭಾರೀ ನಿರೀಕ್ಷೆ ಮೂಡಿಸಿದ್ದ ಚಾಯ್ ವಾಲಾ ಡಾಲಿರವರು ಉದ್ಘಾಟನಾ ವೇದಿಕೆಯಲ್ಲೇ ತಮ್ಮ ಎಂದಿನ ಶೈಲಿಯಲ್ಲಿ ಚಹಾ ತಯಾರಿಸಿ

ಕಂಬದ ಕೋಣೆಯಲ್ಲಿ ಬೈಂದೂರಿನ ಎರಡನೇ ಗೋಮಾಳ ಅಭಿವೃದ್ಧಿ, ಗೋವುಗಳ ರಕ್ಷಣೆಯೇ ನಮ್ಮ ಆದ್ಯತೆ : ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು ವಿಧಾನ ಸಭಾ ಕ್ಷೇತ್ರದ ಬೈಂದೂರು ತಾಲೂಕಿನ ನಾಡ ಗ್ರಾಮದಲ್ಲಿ ಈಗಾಗಲೇ ಗ್ರಾಮ ಪಂಚಾಯತ್‌ ಮೂಲಕ ಕೇಂದ್ರ ಸರಕಾರದ ನರೇಗಾ ಯೋಜನೆ ಹಾಗೂ ಇತರೆ ಅನುದಾನದಡಿ ಗೋಮಾಳ ಅಭಿವೃದ್ಧಿ ಕಾಮಗಾರಿ ನಡೆದಿದ್ದು, ಇದೀಗ ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕ್ಷೇತ್ರದ 2 ನೇ ಗೋಮಾಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಗೋಮಾಳ ಜಾಗದ ಸುತ್ತ ಕಂದಕ ನಿರ್ಮಾಣ ಮಾಡಲಾಗುತ್ತಿದ್ದು, ಒಟ್ಟು 13 ಮಂದಿ ನರೇಗಾ ಕೂಲಿ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿಕೊಂಡಿದ್ದಾರೆ.

ಬೈಂದೂರು ತಾಲೂಕಿನ 20 ಕುಟುಂಬಕ್ಕೆ 94 ಸಿ ಯಡಿ ಹಕ್ಕು ಪತ್ರ ವಿತರಿಸಿದ ಶಾಸಕ ಗುರಾರಾಜ್ ಶೆಟ್ಟಿ ಗಂಟಿಹೊಳೆ

ಬೈಂದೂರು: ಬೈಂದೂರು ತಾಲೂಕಿನಲ್ಲಿ ಸರಕಾರಿ ಜಾಗದಲ್ಲಿ ಹಲವಾರು ವರ್ಷಗಳಿಂದ ಮನೆ ಕಟ್ಟಿ ಕೊಂಡು ವಾಸವಾಗಿರುವ 20 ಫಲಾನುಭವಿಗಳಿಗೆ ಶಾಸಕ ಗುರುರಾಜ್‌ ಶೆಟ್ಟಿ ಗಂಟಿ ಹೊಳೆಯವರು ಜನವರಿ 16ರಂದು ತಾಲೂಕು ಕಚೇರಿಯಲ್ಲಿ ಹಕ್ಕು ಪತ್ರ ವಿತರಿಸಿದರು.ನಂತರ ಮಾತನಾಡಿದ ಶಾಸಕರು, ವಾಸ್ತವ್ಯದ ಹಕ್ಕು ಎಲ್ಲರಿಗೂ ಅಗತ್ಯವಾಗಿ ದೊರಕಬೇಕು. ಹಲವು ವರ್ಷಗಳಿಂದ ಸರಕಾರಿ ಜಾಗದಲ್ಲಿ ಮನೆ ಕಟ್ಟಿ ವಾಸವಾಗಿದ್ದರೂ ಕೂಡ ಹಕ್ಕು ಪತ್ರ ಇಲ್ಲದೇ ಸರಕಾರದ ಯಾವುದೇ ಸೌಲಭ್ಯ ಪಡೆಯದೇ ಇರುವ

ನಾಪತ್ತೆಯಾದ ಮೀನುಗಾರನನ್ನು ಹುಡುಕುವಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯ ಖಂಡನೀಯ: ಶಾಸಕ ಗುರುರಾಜ್‌ ಗಂಟಿಹೊಳೆ

ಬೈಂದೂರು: ಇತ್ತೀಚಿಗೆ ಮೀನುಗಾರಿಕೆ ವೇಳೆ ನಾಪತ್ತೆಯಾಗಿರುವ ನಾರಾಯಣ ಮೋಗವೀರ ಅವರ ಕುಟುಂಬಕ್ಕೆ ಮೀನುಗಾರ ಸಂಕಷ್ಟ ಪರಿಹಾರ ನಿಧಿಯಡಿ ತಕ್ಷಣವೇ ಪರಿಹಾರ ಒದಗಿಸಬೇಕು ಹಾಗೂ ಅಧಿಕಾರಿಗಳು ಯಜಮಾನನನ್ನು ಕಳೆದುಕೊಂಡ ಆ ಕುಟುಂಬದ ನೋವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಶಾಸಕ ಗುರುರಾಜ್‌ ಗಂಟಿಹೊಳೆ ಆಕ್ರೋಶ ಹೊರ ಹಾಕಿದ್ದಾರೆ.ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಕ್ಷೇತ್ರದ ಮೀನುಗಾರಿಕೆ ಹಾಗೂ ಬಂದರು ಯೋಜನೆಗಳ ಬಗೆಗಿನ ಚರ್ಚೆ ವೇಳೆ ಶಾಸಕ ಗುರುರಾಜ್‌ ಗಂಟಿಹೊಳೆ ಆಕ್ರೋಶ

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನ ,
ಆಡಳಿತ ಮೊತ್ತೇಸರರಾಗಿ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆ

ಮಂಗಳೂರು : ಇತಿಹಾಸ ಪ್ರಸಿದ್ಧ ಇತ್ತೀಚಿಗಷ್ಟೇ ವೈಭವದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ಕಂಡ ಕುಲಶೇಖರ ಶ್ರೀ ವೀರ ನಾರಾಯಣ ದೇವಸ್ಥಾನದ ಮುಂದಿನ ಅವಧಿಗೆ ಕ್ಷೇತ್ರದ ಆಡಳಿತ ಮೊತ್ತೇಸರರಾಗಿ ಕೆ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆಗೊಂಡಿದ್ದಾರೆ,ಪ್ರಧಾನ ಕಾರ್ಯದರ್ಶಿಯಾಗಿ ಗಿರಿಧರ್ ಜೆ ಮೂಲ್ಯ, ಕೋಶಾಧಿಕಾರಿಯಾಗಿ ದಯಾನಂದ್ ಪಿ ಎಸ್ ಕುತ್ತಾರ್ ಮತ್ತು ಮೊತ್ತೇಸರರಾಗಿ ಮೋಹನ್‌ದಾಸ್ ಅಳಪೆ, ರಾಜೇಶ್ ಕುಲಾಲ್ ಶಕ್ತಿನಗರ, ಸದಾನಂದ ಬಂಗೇರ ಕೆ ಮುಡಿಪು, ಆನಂದ ಪಿ ಉರ್ವ,

ಮಂಗಳೂರು: ರಾಜೀವ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯರಿಂದ ಶಂಕುಸ್ಥಾಪನೆ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಗಳೂರಿನಲ್ಲಿ ಇಂದು ರಾಜೀವ ಗಾಂಧಿ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರಕ್ಕೆ ಶಂಕುಸ್ಥಾಪನ ನೆರವೇರಿಸಿದರು. ಸ್ಪೀಕರ್ ಯು.ಟಿ. ಖಾದರ್, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವ ಶರಣಪ್ರಕಾಶ್ ಪಾಟೀಲ್, ಶಾಸಕ ಭರತ್ ಶೆಟ್ಟಿ ಉಪಸ್ಥಿತರಿದ್ದರು.

ಕಡಬ: ಮನೆಗೆ ನುಗ್ಗಿ ಕಳವು ಪ್ರಕರಣ: ಆರೋಪಿಯ ಬಂಧನ

ಕಡಬ ಠಾಣಾ ವ್ಯಾಪ್ತಿಯ ಮರ್ದಾಳ ಸಮೀಪದ ಮನೆಯೊಂದರಿಂದ ಹಾಡಹಗಲೇ ಬಾಗಿಲು ಮುರಿದು ಒಳ‌ ನುಗ್ಗಿ ನಗದು ಮತ್ತು ಚಿನ್ನಾಭರಣ ದೋಚಿರುವ ಕಳ್ಳನನ್ನು ಪೋಲೀಸರು ಗುರುವಾರ ಕರ್ಮಾಯಿ ನಿವಾಸಿ ಸಿನು ಕುರಿಯನ್ ಎಂಬಾತನನ್ನು ಬಂಧಿಸಿದ್ದಾರೆ.ಕ್ಷಿಪ್ರ ಕಾರ್ಯಾಚನೆ ನಡೆಸಿರುವ ಕಡಬ ಪೊಲೀಸರು ಐದೇ ದಿನದಲ್ಲಿ ಕಳ್ಳನನ್ನು ಪತ್ತೆ ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಠಾಣಾ ವ್ಯಾಪ್ತಿಯ 102 ನೆಕ್ಕಿಲಾಡಿ ಗ್ರಾಮದ ಕೆರ್ಮಯಿ ಚರ್ಚ್ ಸಮೀಪದ, ಅಟೋ ಚಾಲಕ ಕುರಿಯಕೋಸ್ ಯಾನೆ ಜೇಮ್ಸ್ ಅವರು

ಕಡಬ: ನಿಯಂತ್ರಣ ತಪ್ಪಿ ಬೈಕ್ ಮೋರಿಗೆ ಢಿಕ್ಕೆ: ವಿದ್ಯಾರ್ಥಿ ಮೃತ್ಯು

ಕಡಬ: ಸವಾರನ ನಿಯಂತ್ರಣ ತಪ್ಪಿದ ಬೈಕೊಂದು ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಬೆಳಿಗ್ಗೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ನಡೆದಿದೆ. ಮೃತ ಬಾಲಕನನ್ನು ಪೇರಡ್ಕದ ಖಾಸಗಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಎಂದು ಗುರುತಿಸಲಾಗಿದೆ. ಮನೆಯಿಂದ ಶಾಲೆಗೆ ತೆರಳುತ್ತಿದ್ದ ವೇಳೆ ಈ

ಮಂಗಳೂರು: CFM ಕ್ರಿಕೆಟ್ ಕಾರ್ನಿವಲ್ 2025 : ಟ್ರೋಫಿ, ಜೆರ್ಸಿ ಅನಾವರಣ

ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ಕೋಸ್ಟಲ್ ಫ್ರೆಂಡ್ಸ್ ಮಂಗಳೂರು (ರಿ) ಸಂಸ್ಥೆ ಆಯೋಜಿಸಿರುವ 5ನೇ ವರ್ಷದ ಕ್ರಿಕೆಟ್ ಕಾರ್ನಿವಲ್ ಜನವರಿ 18 ಮತ್ತು 19ರಂದು ನಗರದ ಹೊರವಲಯದ ಅಡ್ಯಾರಿನ ಸಹ್ಯಾದ್ರಿ ಮೈದಾನದಲ್ಲಿ ನಡೆಯಲಿದೆ.ಪಂದ್ಯಾಕೂಟದ ಟ್ರೋಫಿ ಮತ್ತು ಜೆರ್ಸಿ ಅನಾವರಣ ಕಾರ್ಯಕ್ರಮ ಮಂಗಳವಾರ ಸಂಜೆ ನಗರದ ಫಿಝಾ ನೆಕ್ಸಸ್ ಮಾಲ್ ಆವರಣದಲ್ಲಿ ನೆರವೇರಿತು. ನಗರ ಟ್ರಾಫಿಕ್ ಎಸಿಪಿ ನಜ್ಮಾ ಫಾರೂಕಿ ಟ್ರೋಫಿ ಅನಾವರಣಗೊಳಿಸಿದರು. ಇದೇ ವೇಳೆ ಕ್ರಿಕೆಟ್ ಕಾರ್ನಿವಲ್