Home Posts tagged #mangalore (Page 123)

ಸುಳ್ಯ: ಡಾ. ಅನುರಾಧಾ ಕುರುಂಜಿಯವರಿಗೆ “ಚೈತನ್ಯ ಶ್ರೀ ಪ್ರಶಸ್ತಿ ಪ್ರದಾನ

     ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತ್ ನವರು ಪ್ರಥಮ  ಬಾರಿಗೆ  ಕೊಡಮಾಡಿದ ಪ್ರತಿಷ್ಠಿತ  “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಯಲಹಂಕದ ವಿ ಜೆ ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ರಾಜ್ಯ ಮಟ್ಟದ ನಾಲ್ಕನೇ ಬೃಹತ್ ವೈಜ್ಞಾನಿಕ ಸಮ್ಮೇಳನದಲ್ಲಿ ಹಮ್ಮಿಕೊಂಡಿದ್ದರು.   ಈ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ

ಆಳ್ವಾಸ್‌ಗೆ ಸತತ 17ನೇ ಬಾರಿ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿ

ಮೂಡುಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖೆ ಇದರ ವತಿಯಿಂದ ರಾಯಚೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಬಾಲಕ ಬಾಲಕಿಯರು ಭಾಗವಹಿಸಿದ ತಂಡ ಎರಡು ವಿಭಾಗದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.ಬಾಲಕರ ವಿಭಾಗದ ಫೈನಲ್ಸ್ ಪಂದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡ, ಮೈಸೂರು ಜಿಲ್ಲಾ ತಂಡವನ್ನು 35-11

ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ “ಉತ್ತುಂಗ ” ವಾರ್ಷಿಕ ಸಂಚಿಕೆ ಬಿಡುಗಡೆ

ಮೂಡುಬಿದಿರೆ: ವಾರ್ಷಿಕ ಸಂಚಿಕೆಗಳು ಶಿಕ್ಷಣ ಸಂಸ್ಥೆಯ ಸಾಹಿತ್ಯದ ಸೃಜನಾತ್ಮಕ ಚಟುವಟಿಗೆಗಳಿಗೆ ಹಿಡಿದ ಕೈಗನ್ನಡಿ ಎಂದು ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ ನುಡಿದರು.ಅವರು ಕಾಲೇಜಿನ ಕುವೆಂಪು ಸಭಾಂಗಣ ದಲ್ಲಿ ಶನಿವಾರ ನಡೆದ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ “ಉತ್ತುಂಗ” ಚೊಚ್ಚಲ ವಾರ್ಷಿಕ ಸಂಚಿಕೆ ಬಿಡುಗಡೆ ಕರ‍್ಯಕ್ರಮದಲ್ಲಿ ಮಾತನಾಡಿದರು. ಪ್ರಶಿಕ್ಷಣಾರ್ಥಿಗಳು ಮುಂದೆ ಗುರುಗಳಾಗುವವರು. ಇಂತಹ ಸ್ಮರಣ

ಬೆಳ್ತಂಗಡಿ: ಮುಖ್ಯಮಂತ್ರಿ ಪದಕ ವಿಜೇತ ವೃತ್ತ ನಿರೀಕ್ಷಕರಾದ ಸಂದೇಶ್ ಪಿ.ಜಿ ಗೆ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೇತೃತ್ವದಲ್ಲಿ ಬಿಷಪ್ ಹೌಸ್ ಬೆಳ್ತಂಗಡಿಯಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಲಾರೆನ್ಸ್ ಮುಕ್ಕುಯಿ ಇವರ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತರಾಗಿರುವ ವೃತ್ತ ನಿರೀಕ್ಷಕರಾದ ಸಂದೇಶ್ ಪಿ.ಜಿ ಇವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪ್ರಸ್ತುತ ಮೂಡಬಿದಿರೆಯಲ್ಲಿ ವೃತ್ತ ನಿರೀಕ್ಷಕರಾದ ಸಂದೇಶ್ ಪಿ.ಜಿ ಇವರ ದಿಟ್ಟತನದ ಸೇವೆಯನ್ನು ವಿಶೇಷವಾಗಿ ಸ್ಮರಿಸುತ್ತ ಪರಮಪೂಜ್ಯ

ಬಡವರ ಧ್ವನಿಯಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಕೆಲಸ ಮಾಡುತ್ತಿದೆ: ಐಕಳ ಹರೀಶ್ ಶೆಟ್ಟಿ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇರುವುದೇ ಬಡವರ ಕಣ್ಣೀರು ಒರೆಸುವುದಕ್ಕೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಒಕ್ಕೂಟ ನಿರಂತರವಾಗಿ ಬಡವರಿಗೆ, ಕಷ್ಟದಲ್ಲಿ ಇರುವವರಿಗೆ ನೆರವು ನೀಡುತ್ತಾ ಬಂದಿದೆ. ಮುಂದೆಯೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಧ್ವನಿಯಾಗಿ ಕೆಲಸ ಮಾಡುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು. ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಸಮಾಜ ಕಲ್ಯಾಣ ಸಹಾಯಹಸ್ತ ಕಾರ್ಯಕ್ರಮವನ್ನು ಉದ್ಘಾಟಿಸಿ

ಮಂಗಳೂರು : ಗೃಹರಕ್ಷಕಿ ಜಯಂತಿಗೆ ಸನ್ಮಾನ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್, ಮಂಗಳೂರು ಇಲ್ಲಿ ಮಂಗಳೂರು ಘಟಕದ ಗೃಹರಕ್ಷಕಿ ಶ್ರೀಮತಿ ಜಯಂತಿ ಇವರನ್ನು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಇವರು ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿದರು. ಶ್ರೀಮತಿ ಜಯಂತಿ ಅವರು 16-10-2018 ರಲ್ಲಿ ಗೃಹರಕ್ಷಕ ದಳಕ್ಕೆ ಸೇರ್ಪಡೆಯಾಗಿ ಸುಮಾರು 6 ವರ್ಷಗಳಿಂದ ನಿಷ್ಕಾಮ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಸಮಾಜ ಸೇವೆ ಮಾಡಬೇಕು ಎಂಬ ಉದ್ದೇಶದೊಂದಿಗೆ ಗೃಹರಕ್ಷಕ

ಉಡುಪಿ: ಆಟೋ ಚಾಲಕ ನೇಣುಬಿಗಿದು ಆತ್ಮಹತ್ಯೆ

ಉಡುಪಿ: ಜೀವನದಲ್ಲಿ ಜಿಗುಪ್ಸೆಗೊಂಡ ಆಟೋ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಪಾಡಿ ಪಳ್ಳಿಗುಡ್ಡೆಯಲ್ಲಿ ನಡೆದಿದೆ.ಪಳ್ಳಿಗುಡ್ಡೆ ನಿವಾಸಿ ದೀಪಕ್ ಆ‌ರ್ (34) ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ. ಇವರು ಜ.1ರಂದು ರಾತ್ರಿ ಮನೆಯ ಕೊಠಡಿಯ ಕಬ್ಬಿಣದ ಹುಕ್ಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಡುಪಿಯ ಕಲ್ಸಂಕ ಆಟೋ ನಿಲ್ದಾಣದಲ್ಲಿ ಚಾಲಕರಾಗಿ ದುಡಿಯುತ್ತಿದ್ದ ದೀಪಕ್

ಮಂಗಳೂರು: ನಟಿ ಚೈತ್ರಾ ಶೆಟ್ಟಿ ಅವರಿಗೆ ಮಾತೃವಿಯೋಗ

ತುಳು ಚಿತ್ರರಂಗದಲ್ಲಿ ಖ್ಯಾತಿಯನ್ನು ಪಡೆದಿರುವ ರಂಗಭೂಮಿ ಕಲಾವಿದೆ ನಟಿ ಚೈತ್ರ ಶೆಟ್ಟಿ ಅವರ ತಾಯಿ ಮಾಲತಿ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಲತಿ ಶೆಟ್ಟಿ ಅವರು ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲದ ಮುಳಿಯ ತಾಳಿಪಡ್ಪು ನಿವಾಸಿ ಲಾರಿ ಚಾಲಕ ಲಿಯೋ ಡಿಸೋಜ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅವಿವಾಹಿತರಾಗಿದ್ದ ಲಿಯೋ ಅವರು ಅಣ್ಣನ ಜೊತೆ ವಾಸವಿದ್ದರು ಊಟದ ಬಳಿಕ ಕೋಣೆಗೆ ತೆರಳಿದ್ದ ಲಿಯೋ ಅವರು ಬಾಗಿಲು ತೆರೆಯದ ಹಿನ್ನಲೆ ಒಳಗೆ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ

ಮಂಗಳೂರು : ಶ್ರೀ ಕೃಷ್ಣ ಭಜನಾ ಮಂದಿರ – ರಜತ ಮಹೋತ್ಸವ ಹಾಗೂ ಪುನಃ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದ ರಜತ ಮಹೋತ್ಸವ, ಪುನಃ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ ಹಾಗೂ ಏಕಹಾ ಭಜನಾ ಮಹೋತ್ಸವವು ಇದೇ ಬರುವ ಮಾರ್ಚ್ 1 ರಿಂದ 4, 2025 ರವರೆಗೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯ ಕಾರ್ಯಕ್ರಮವು ಇತ್ತೀಚಿಗೆ ಭಜನಾ ಮಂದಿರದ ಆವರಣದಲ್ಲಿ ನಡೆಯಿತು. ಶ್ರೀ ಕೃಷ್ಣ ಭಜನಾ ಮಂದಿರದ ರಜತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ