Home Posts tagged #mangalore (Page 13)

ಮೂಡುಬಿದಿರೆ : 60 ಅಡಿ ಆಳದ ಬಾವಿಗೆ ಬಿದ್ದ ಹಸುವನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು

ಮೂಡುಬಿದಿರೆ : 60 ಅಡಿ ಆಳದ ಬಾವಿಗೆ ಬಿದ್ದ ಹಸುವೊಂದನ್ನು ಮೂಡುಬಿದಿರೆಯ ಅಗ್ನಿಶಾಮಕ ದಳದ ಸಿಬಂದಿಗಳು ಮೇಲಕ್ಕೆತ್ತಿ ರಕ್ಷಿಸಿದ ಘಟನೆ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಮಿಜಾರಿನಲ್ಲಿ ಸೋಮವಾರ ನಡೆದಿದೆ. ಬಡಗಮಿಜಾರಿನ ನಿವಾಸಿ ಜಯರಾಮ್ ಗೌಡ ಎಂಬುವವರಿಗೆ ಸೇರಿದ ಸುಮಾರು ೬೦ ಅಡಿ ಆಳ ಹಾಗೂ ೫ ಅಡಿ ಅಗಲದ ಬಾವಿಗೆ ಹಸು ಆಕಸ್ಮಿಕವಾಗಿ ಬಿದ್ದಿತ್ತು.

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ 77ನೇ ಗಣರಾಜ್ಯೋತ್ಸವ

ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 77ನೇ ವರ್ಷದ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಜನವರಿ 26ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಕುರುಂಜಿಭಾಗ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಧ್ವಜರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಶ್ರೀ. ಚಂದ್ರಶೇಖರ

ಮೂಡುಬಿದಿರೆ ಪುರಸಭೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಮೂಡುಬಿದಿರೆ : ಇಲ್ಲಿನ ಪುರಸಭೆಯಲ್ಲಿ ಮೂಡುಬಿದಿರೆ ಪುರಸಭೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.ಶಾಸಕ ಉಮಾನಾಥ ಎ. ಕೋಟ್ಯಾನ್ ಧ್ವಜಾರೋಹಣಗೈದು ಶುಭ ಹಾರೈಸಿದರು. ಮುಖ್ಯಾಧಿಕಾರಿ ಇಂದು ಎಂ., ಪುರಸಭಾ ಕಂದಾಯ ಅಧಿಕಾರಿ ಜ್ಯೋತಿ, ಸುಧೀಶ್ ಹೆಗ್ಡೆ, ಸಮುದಾಯ ಸಂಘಟಕ ಪ್ರಸನ್ನ, ಬಿಲ್ ಕಲೆಕ್ಟರ್ ವಿಜಯಪ್ರಕಾಶ್ ಹಾಗೂ ಪೌರಕಾಮಿ೯ಕರು ಭಾಗವಹಿಸಿದ್ದರು.

2 ಕೋಟಿ ರೂಪಾಯಿ ವೆಚ್ಚದ ಸಮುದ್ರ ಕೊರೆತ ದೀರ್ಘಕಾಲಿಕ ಪ್ರತಿಬಂಧಕ ಸಂರಕ್ಷಣಾ ಕಾಮಗಾರಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

ಪಡುಬಿದ್ರಿ: ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಬಿದ್ರಿ ಬೀಜ್ ಬಳಿ ಸಮುದ್ರ ಕೊರೆತ ದೀರ್ಘಕಾಲಿಕ ಪ್ರತಿಬಂಧಕ ಸಂರಕ್ಷಣಾ ಕಾಮಗಾರಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 2 ಕೋಟಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಇಂದು ದಿನಾಂಕ 26-01-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್

ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಭಾರತಿ ಎಸ್ ರೈರವರಿಗೆ ಡಾಕ್ಟರೇಟ್ ಪದವಿ

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಭಾರತಿ ಎಸ್ ರೈರವರು ಸಲ್ಲಿಸಿದ “ರಿಇನ್ವೆಂಟಿಂಗ್ ಕರ್ಣ: ಅನ್ ಎಕ್ಸಪ್ಲೋರೇಷನ್ ಆಫ್ ಸೆಲೆಕ್ಟ್ ರಿಟೆಲ್ಲಿಂಗ್ಸ್ ಆಫ್ ದ ಮಹಾಭಾರತ”(REINVENTING KARNA: AN EXPLORATION OF SELECT RETELLINGS OF THE MAHABHARATA) ಎಂಬ ಮಹಾ ಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ. ಶ್ರೀನಿವಾಸ

ಕಾಪು ಪುರಸಭೆ ವ್ಯಾಪ್ತಿಯ 15 ಲಕ್ಷ ರೂಪಾಯಿ ಅನುದಾನದ ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

ಕಾಪು ಪುರಸಭಾ ವ್ಯಾಪ್ತಿಯ ಕಲ್ಯಾ ವಾರ್ಡಿನ ಮಾತಾ ರೆಸಿಡೆನ್ಸಿ ಬಳಿಯ ಅಲ್ಪಸಂಖ್ಯಾತರ ಕಾಲೋನಿ ರಸ್ತೆ ಅಭಿವೃದ್ಧಿಗೆ 15 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 26-01-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಆಳ್ವ, ಕಾಪು ಪುರಸಭೆಯ

ಮೂಡುಬಿದಿರೆ: ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ ಸಮಾರಂಭವನ್ನು ಕಾಲೇಜಿನ ಆವರಣದಲ್ಲಿ ನಡೆಯಿತು. ಕಾಲೇಜಿನ ಟ್ರಸ್ಟಿ ಮೆಹಬೂಬ್ ಬಾಷಾ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ಪವಿತ್ರ ದಿನವು ನಮ್ಮ ದೇಶದ ಸ್ವಾತಂತ್ರ್ಯ, ಸಂವಿಧಾನ ಮತ್ತು ಏಕತೆಯ ಮಹತ್ವವನ್ನು ನೆನಪಿಸುವುದಾಗಿ ಹೇಳಿದರು. ಈ ವರ್ಷವೂ ಭಾರತವು ಅಭಿವೃದ್ಧಿಯ ಹೊಸ ಹಾದಿಯಲ್ಲಿ ಸಾಗಲಿ, ಪ್ರತಿಯೊಬ್ಬ ನಾಗರಿಕನ ಜೀವನದಲ್ಲಿ ಹೊಸ ಕನಸುಗಳು, ಹೊಸ ಆಶಯಗಳು

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಭೇಟಿ

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಅವರು ಶನಿವಾರ ಮಧ್ಯಾಹ್ನ ಭೇಟಿ ನೀಡಿದರು.ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ದೇವಸ್ಥಾನಕ್ಕೆ ಆಗಮಿಸಿದ ಬಿಗ್ ಬಾಸ್- 12 ರ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಅವರನ್ನು ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿಯ ಪ್ರಧಾನ

ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆ ಸ್ಮಾರ್ಟ್ ಬೋರ್ಡ್ ಉದ್ಘಾಟನಾ ಕಾರ್ಯಕ್ರಮ

ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆ, ಬಂಟ್ಸ್ ಹಾಸ್ಟೆಲ್ ಮಂಗಳೂರು ಇಲ್ಲಿ ಸ್ಮಾರ್ಟ್ ಬೋರ್ಡ್ ಉದ್ಘಾಟನಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಸಂಸ್ಥೆಯ ಸಂಚಾಲಕರಾದ ಡಾ. ಬಿ ಸಂಜೀವ್ ರೈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮಂಗಳೂರು ನಾರ್ತ್ ರೋಟರಿ ಕ್ಲಬ್ ಹಾಗೂ ಬೆಂಗಳೂರು ವಿಜಯನಗರ ರೋಡ್ ಮತ್ತು ಫಿಕ್ಸೆಲ್ ಸಾಫ್ಟ್ ಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗಳು ಐದು ಸ್ಮಾರ್ಟ್ ಬೋರ್ಡ್ ಗಳನ್ನು ಶಿಕ್ಷಣ ಸಂಸ್ಥೆಗಳಿಗೆ ದೇಣಿಗೆಯಾಗಿ ನೀಡಿದವು.

ಕಾಂಗ್ರೆಸ್ ಒಳಜಗಳ- ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋಮಶೇಖರ್ ಕೊಯಿಂಗಾಜೆ ರಾಜೀನಾಮೆ

ಸಂಪಾಜೆ: ಮುಂಬರುವ ಪಂಚಾಯತ್ ಚುನಾವಣೆಗಳ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂಪಾಜೆ ವಲಯದಲ್ಲಿ ದೊಡ್ಡ ಆಘಾತ ಎದುರಾಗಿದೆ. ದೀರ್ಘಕಾಲದಿಂದ ವಲಯ ಕಾಂಗ್ರೆಸ್ ಘಟಕವನ್ನು ಮುನ್ನಡೆಸುತ್ತಿದ್ದ ಹಿರಿಯ ನಾಯಕ ಸೋಮಶೇಖರ್ ಕೊಯಿಂಗಾಜೆ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಒಳಚಟುವಟಿಕೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ.ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜೀನಾಮೆಯ ಘೋಷಣೆ ಮಾಡಿದ ಅವರು, ಸುಮಾರು 28