Home Posts tagged #mangalore (Page 247)

ದ.ಕ. ಜಿಲ್ಲೆಯಲ್ಲಿ ಜುಲೈ 2ರಿಂದ ಮತ್ತಷ್ಟು ಅನ್‍ಲಾಕ್: ಸಂಜೆ 5ರ ವರೆಗೆ ಖರೀದಿ, ಸಂಚಾರಕ್ಕೆ ಅವಕಾಶ: ಜಿಲ್ಲಾಧಿಕಾರಿ

ದ.ಕ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿ ದರ ಇಳಿಕೆಯಾದ ಹಿನ್ನೆಲೆಯಲ್ಲಿ ಲಾಕ್‍ಡೌನ್ ಸಡಿಲಿಕೆಯನ್ನು ಜು.2ರಿಂದ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಮತ್ತು ಸಂಚಾರಕ್ಕೆ ಅನುಮತಿ ನೀಡಿ ರಾಜ್ಯ ಸರಕಾರ ಆದೇಶಿಸಿದೆ. ಸರಕಾರದ ಆದೇಶವನ್ನು ಯಥಾವತ್ತಾಗಿ ಪಾಲಿಸುವುದಾಗಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ. ದಕ್ಷಿಣ

ದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ: ಜುಲೈ2ರಿಂದ ಸಂಜೆ 7 ರ ತನಕ ಅವಕಾಶ: ಸಚಿವ ಕೋಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನೆಲೆಯಲ್ಲಿ ಜುಲೈ 2ರಿಂದ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ರ ವರಗೆ ಅವಕಾಶಗಳನ್ನು ನೀಡಲಾಗಿದೆ ಎಂದು ವಿ4 ನ್ಯೂಸ್‌ಗೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಬಸ್, ಮಾರ್ಕೆಟ್, ಸೂಚಿತ ಮಳಿಗೆಗಳಿಗೆ ಅವಕಾಶವನ್ನು ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಮುಂದುವರಿಯಲಿದೆ. ಜುಲೈ 5ರ ವರೆಗೆ ಮಾರ್ಗಸೂಚಿ ಜಾರಿಯಲ್ಲಿರಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ

ಕೇರಳದಿಂದ ಜಿಲ್ಲೆಗೆ ಆಗಮಿಸುವವರಿಗೆ ಆರ್‌ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ಜಿಲ್ಲಾಧಿಕಾರಿ

ಕೇರಳದಿಂದ ಜಿಲ್ಲೆಯ ಗಡಿ ಭಾಗಗಳ ಮೂಲಕ ಜಿಲ್ಲೆಗೆ ಸಂಚರಿಸುವವರಿಗೆ ಜೂ. 29ರಿಂದ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ತಲಪಾಡಿ ಚೆಕ್‌ಪೋಸ್ಟ್‌ನಲ್ಲಿ ಇಂದು ತಪಾಸಣೆ ನಡೆಸಿದ ಬಳಿಕ ಅವರು ಈ ಮಾಹಿತಿಯನ್ನು ನೀಡಿದ್ದಾರೆ. ಕೇರಳ ಗಡಿ ಭಾಗದಲ್ಲಿ ಕೊರೋನ ಪ್ರಕರಣಗಳು ಹೆಚ್ಚುತ್ತಿರುವಂತೆ ಡೆಲ್ಟಾ ವೇರಿಯಂಟ್ ಕೋವಿಡ್ ಪತ್ತೆಯಾಗಿರುವ ಸಂಶಯದ ಮೇರೆಗೆ ಕೇರಳ ಗಡಿಯನ್ನು

ಪುತ್ತೂರಿನಲ್ಲಿ ಅನಾರೋಗ್ಯದಿಂದ ಬಾಣಂತಿ ಮೃತ್ಯು

ಪುತ್ತೂರು: ೨ ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಅನಾರೋಗ್ಯದಿಂದಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೃಷ್ಣನಗರದಲ್ಲಿ ನಡೆದಿದೆ. ಪುತ್ತೂರು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್ ಅವರ ಪತ್ನಿ ಅಕ್ಷತಾ ನಾಯ್ಕ್ ಮೃತಪಟ್ಟವರು. ಅಕ್ಷತಾ ಅವರು ಪುತ್ತೂರು ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಂಬಂಧಿಸಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಶಿಥಿಲಾವಸ್ಥೆಯಲ್ಲಿರುವ ಕೊಂಗೂರು ಪ್ರದೇಶದ ರಸ್ತೆ ಮತ್ತು ಒಳಚರಂಡಿ ವ್ಯವಸ್ಥೆ: ರಸ್ತೆ ದುರಸ್ಥಿಗೆ ಸ್ಥಳೀಯ ನಾಗರಿಕರ ಆಗ್ರಹ

 ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪದವು 35ನೇ ಸೆಂಟ್ರಲ್ ವಾರ್ಡ್ ಕುಲಶೇಖರದ ಕೊಂಗೂರು ಮಠದ ಕ್ಷೇತ್ರದ ಮುಖ್ಯ ಸಂಪರ್ಕ ರಸ್ತೆಯ ಮುಂಭಾಗ ರೈಲ್ವೇಯಿಂದ ಸಂಪೂರ್ಣ ತಡೆಹಿಡಿಯಲಾಗಿದೆ ಮತ್ತು ರಸ್ತೆ, ಒಳಚರಂಡಿ ವ್ಯವಸ್ಥೆ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಶೀಘ್ರದಲ್ಲಿ ರಸ್ತೆ ದುರಸ್ಥಿಗೆ ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ. ಸುಮಾರು 50 ವರ್ಷ ಹಿಂದಿನಿಂದಲೂ ಕೊಂಗೂರು ಮಠ ಮುಖ್ಯ ರಸ್ತೆ ಎಂದು ಗುರುತಿಸ್ಪಟ್ಟಿದ್ದು, ಈ ಕೊಂಗೂರು ಮುಖ್ಯ ರಸ್ತೆಯ ಕೊಂಗೂರು

ಆಹಾರ ಕಿಟ್ ಹಂಚಿಕೆಯಲ್ಲಿ ಭ್ರಷ್ಟಾಚಾರ:ಲೋಕಾಯುಕ್ತಕ್ಕೆ ದೂರು ನೀಡಲು ಸಿಐಟಿಯು ತೀರ್ಮಾನ

ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ವಲಸೆ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಹಂಚಲು ಕರೆಯಲಾದ ಟೆಂಡರ್ ಪ್ರಕ್ರಿಯೆ, ಆಹಾರ ಕಿಟ್ ಗಳ ಕಳಪೆ ಗುಣಮಟ್ಟ ಮತ್ತು ಖರೀದಿಯಲ್ಲಿ ಅವ್ಯವಹಾರ, ರಾಜಕೀಯ ಮಧ್ಯಪ್ರವೇಶ ಕುರಿತು ಲೋಕಾಯುಕ್ತಕ್ಕೆ ದೂರು ಸಲ್ಲಿಸಲು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ಸಿಐಟಿಯು) ನಿರ್ಧರಿಸಿದೆ. ರಾಜ್ಯದ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಸಂಗ್ರಹವಾಗಿರುವ ಸೆಸ್ ಹಣ ಸಂಪೂರ್ಣವಾಗಿ ಕಾರ್ಮಿಕರ

ಮಂಗಳೂರಿನಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶ

ಮಂಗಳೂರು: ಮಂಗಳೂರು ಕಮಿಷನರೇಟ್ ಹಾಗೂ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ 354 ಕೆಜಿ ಮಾದಕ ದ್ರವ್ಯ ವಸ್ತುಗಳನ್ನು ಮುಲ್ಕಿ ಕೊಲನಾಡ್ ಜಂಕ್ಷನ್ ಸಮೀಪದ ಬಯೋ ಮೆಡಿಕಲ್ ವೇಸ್ಟ್ ಟ್ರೀಟ್‌ಮೆಂಟ್ ರೂಮ್‌ನಲ್ಲಿ ಶನಿವಾರ ನಾಶಪಡಿಸಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಮಾದಕ ವಸ್ತು ವಿರೋಧಿ ದಿನದ ಪ್ರಯುಕ್ತ ನಡೆಸಿದ ಕಾರ್ಯಾಚರಣೆ ಹಾಗೂ ವಿವಿಧ ಪೊಲೀಸ್

ಡ್ರಗ್ಸ್ ಮುಕ್ತ ಮಂಗಳೂರಿಗೆ ಸಹಕರಿಸಿ: ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್

ಮಂಗಳೂರು ಪೊಲೀಸ್ ಕಮೀಷನರ್ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಮಾದಕದ್ರವ್ಯಗಳಿಗೆ ಸಂಬಂಧಿಸಿ ಸಾಕಷ್ಟು ಪ್ರಕರಣಗಳನ್ನು ಪತ್ತೆಹಚ್ಚಿರುವುದಲ್ಲದೆ, ಪ್ರಮುಖ ಆರೋಪಿಗಳನ್ನೂ ಬಂಧಿಸಲಾಗಿದೆ. ಡ್ರಗ್ಸ್ ಮುಕ್ತ ಮಂಗಳೂರು ಮಾಡುವಲ್ಲಿ ಇಲಾಖೆ ತನ್ನೆಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಜನರು ಸಹಕರಿಸಬೇಕೆಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಅವರು ಮಂಗಳೂರಲ್ಲಿ ವಿಕೇಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಬಂದೋಬಸ್ತ್‌ಗಳ ವೀಕ್ಷಣೆ ಮಾಡಿ,

ದ.ಕ. ಜಿಲ್ಲೆಯಲ್ಲಿ ಹಡೀಲು ಗದ್ದೆ ಉಳುಮೆಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಮೆಚ್ಚುಗೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 8೦೦೦ ಎಕರೆ ಹಡೀಲು ಭೂಮಿಯಿದ್ದು, ಅಲ್ಲಿ ಕೃಷಿಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸುವುದು ಹಾಗೂ ಸಹಕಾರ ಸಂಸ್ಥೆಯ ಮೂಲಕ ಕೃಷಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚಿಂತನೆ ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಅವರು ಕುಂಜತ್‌ಬೈಲ್ ಪ್ರದೇಶದ ಮರಕಡ ವಾರ್ಡಿನ ದಿ. ಕಾಂತಣ್ಣ ಶೆಟ್ಟಿ ಕೊಂರ್ಗಿಬೈಲ್ ಅವರ ಹಡೀಲು ಬಿಟ್ಟ ಜಮೀನಿನಲ್ಲಿ ಯಾಂತ್ರೀಕೃತ ಭತ್ತದ ಕೃಷಿಯ ಉದ್ಘಾಟನೆಗೆ ಆಗಮಿಸಿದ

ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತು ಅವರ ವೈಯಕ್ತಿಕ ಅಭಿಪ್ರಾಯ: ಕೃಷಿ ಸಚಿವ ಬಿ.ಸಿ.ಪಾಟೀಲ್

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಎಂಬ ವಿಚಾರಕ್ಕೆ ಸಂಬಂಧಿಸಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ರಾಜೀನಾಮೆ ಮಾತು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಅವರೇ ಉತ್ತರ ಕೊಡಲಿ, ಅವರು ರಾಜೀನಾಮೆ ಕೊಡೋದು ಏನೂ ಆಗಿಲ್ಲ. ಅವರು ಕಾಂಗ್ರೆಸ್‌ನಲ್ಲಿ ಮೋಸ ಆಯ್ತು ಅಂತ ಬಿಜೆಪಿಗೆ ಬಂದವರು, ಸಿಡಿ ಜಾಲ ಸೇರಿ ಬೇರೆ ಬೇರೆ ಕಾರಣಕ್ಕೆ ಈ ವಿದ್ಯಮಾನ ನಡೀತಿದೆ ಎಂದು