Home Posts tagged #mangalore (Page 248)

ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತು ಅವರ ವೈಯಕ್ತಿಕ ಅಭಿಪ್ರಾಯ: ಕೃಷಿ ಸಚಿವ ಬಿ.ಸಿ.ಪಾಟೀಲ್

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಎಂಬ ವಿಚಾರಕ್ಕೆ ಸಂಬಂಧಿಸಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ರಾಜೀನಾಮೆ ಮಾತು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಅವರೇ ಉತ್ತರ ಕೊಡಲಿ, ಅವರು ರಾಜೀನಾಮೆ ಕೊಡೋದು ಏನೂ ಆಗಿಲ್ಲ. ಅವರು ಕಾಂಗ್ರೆಸ್‌ನಲ್ಲಿ ಮೋಸ ಆಯ್ತು

ಲೀಫ್ ಆರ್ಟ್‌ನಲ್ಲಿ ಮೂಡಿದ ಯೋಗಿ ಮಚ್ಚೇಂದ್ರನಾಥರು

ಕದ್ರಿ ಮಂಜುನಾಥ ಹಾಗೂ ಮಂಗಳಾದೇವಿ ದೇಗುಲದ ಸ್ಥಾಪನೆಗೆ ಮೂಲ ಕಾರಣಿಕರ್ತರು ಈ ಮಹಾನ್ ಯೋಗಿ ಗುರು ಮಚ್ಚೇಂದ್ರನಾಥರು. ಇವರ ಕಾಲ್ಪನಿಕ ಭಾವ ಚಿತ್ರವನ್ನು ಲೀಫ್ ಆರ್ಟ್ ಮುಖಾಂತರ ಯುವ ಕಲಾವಿದ ತಿಲಕ್ ಕುಲಾಲ್ ಮೂಡುಬಿದರೆ ಅವರು ಚಿತ್ರಿಸಿದ್ದಾರೆ. ಅವರಿಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ತುಳುನಾಡ ರಕ್ಷಣಾ ವೇದಿಕೆಯಿಂದ ಆಹಾರ ವಿತರಣೆ

ಮಂಗಳೂರು: ಸಮಾಜ ಸೇವೆಗೆ ವಿವಿಧ ಮುಖಗಳು. ಕಷ್ಟ ಕಾರ್ಪಣ್ಯಗಳಿಗೆ ಆಸರೆಯಾಗುವುದರೊಂದಿಗೆ ಸಂತ್ರಸ್ತರಾದವರಲ್ಲಿ ಆತ್ಮ ಸ್ಥೈರ್ಯ ಮೂಡಿಸುವುದೂ ಸಮಾಜಮುಖೀ ಕಾರ್ಯವೆನಿಸುತ್ತದೆ’ ಎಂದು ಕರ್ನಾಟಕ ಜಾನಪದ ಹಾಗೂ ಯಕ್ಷಗಾನ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಅವರ ನೇತೃತ್ವದಲ್ಲಿ ಕೋವಿಡ್ ಸಂತ್ರಸ್ತರಿಗಾಗಿ ನಗರದ ವಿವಿಧ

ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಿದ ಬ್ಯಾಂಕ್

ಸುರತ್ಕಲ್ ಸಮೀಪದ ಕುಳಾಯಿಯ (ಸದ್ಯ ಸೂರಿಂಜೆ ನಿವಾಸಿ) ಆಟೋ ಚಾಲಕ ಬಶೀರ್ ಮನೆ ಸಾಲದ ಮೇ ತಿಂಗಳ ಕಂತು ಕಟ್ಟಲು ಲಾಕ್ ಡೌನ್, ಕೊರೋನ ಬಿಕ್ಕಟ್ಟಿನಿಂದಾಗಿ ಅಸಾಧ್ಯವಾಗಿದ್ದು. ಸಾಲಕೊಟ್ಟ ಕೆನರಾ ಬ್ಯಾಂಕ್ ಬೈಕಂಪಾಡಿ ಬ್ರಾಂಚ್ ನ ಅಧಿಕಾರಿಗಳಲ್ಲಿ ಮೂರ್ನಾಲ್ಕು ತಿಂಗಳು ಕಂತು ಪಾವತಿಗೆ ವಿನಾಯತಿ ಕೇಳಿದ್ದು, ಅಲ್ಲಿ ಸಕಾರಾತ್ಮಕ ಸ್ಪಂದನೆ ಸಿಗದೆ ಅವರ ಖಾತೆಯಲ್ಲಿದ್ದ 27೦೦ ರೂಪಾಯಿಗಳನ್ನು ಹಾಗೂ ಆಟೋ ಚಾಲಕರಿಗೆ ಕೊರೋನ ಪರಿಹಾರವಾಗಿ ಸರಕಾರ ನೀಡಿದ 3೦೦೦ ರೂಪಾಯಿಗಳನ್ನು

ಮಂಗಳೂರು : ಬಿಜೆಪಿ ಸರ್ಕಾರ ಲಸಿಕೆ ಮಾರಾಟ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲಾ ಕೋವಿಡ್ ಹೆಲ್ಪ್‌ಲೈನ್‌ನ ವತಿಯಿಂದ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯ ಹತ್ತಿರ ಬಿಜೆಪಿ ಸರಕಾರದ ಎಲ್ಲರಿಗೂ ಉಚಿತ ಲಸಿಕೆ ಎಂಬ ಜಾಹೀರಾತು ಹಾಕಿದ ಹೋಲ್ಡಿಂಗ್ ನ ಮುಂಭಾಗ, ಬಿಜೆಪಿ ಸರಕಾರ ಲಸಿಕೆ ಮಾರಾಟ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಯಿತು. ನಗರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ

ಪತ್ರಕರ್ತರಿಗೆ, ಕುಟುಂಬ ಸದಸ್ಯರಿಗೆ ಲಸಿಕಾ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾಡಳಿತದ ವತಿಯಿಂದ ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬ ಸದಸ್ಯರಿಗೆ ಕೋವಿಶಿಲ್ಡ್ ಲಸಿಕೆ ನೀಡುವ ಶಿಬಿರ ಬುಧವಾರ ಉರ್ವದ ಪತ್ರಿಕಾ ಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಲಸಿಕಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಕೋವಿಡ್ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಸಲುವಾಗಿ ಎಲ್ಲರೂ ಕೋವಿಡ್ ನಿರೋಧಕ ಲಸಿಕೆಯನ್ನು ಪಡೆದುಕೊಳ್ಳಬೇಕು. ಲಸಿಕೆ

ಕಲಾವಿದರ ಉಚಿತ ಲಸಿಕಾ ಶಿಬಿರಕ್ಕೆ ಶಾಸಕ ವೇದವ್ಯಾಸ ಕಾಮತ್ ಚಾಲನೆ

ಮಂಗಳೂರು : ಜಿಲ್ಲೆಯ ಜನರು ಗಾಬರಿ ಪಡುವ ಅಗತ್ಯವಿಲ್ಲ.  18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಹಂತ ಹಂತವಾಗಿ ಎರಡು ಮೂರು ತಿಂಗಳ ಒಳಗೆ ಲಸಿಕೆ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮಾತ್ ಹೇಳಿದರು. ಅವರು ತುಳು ನಾಟಕ ಕಲಾವಿದರ ಒಕ್ಕೂಟ (ರಿ), ಮಂಗಳೂರು ಇವರ ಆಶ್ರಯದಲ್ಲಿ ಬುಧವಾರ ಕದ್ರಿ ಗೋಕುಲ್ ಸಭಾಂಗಣದಲ್ಲಿ ಜಿಲ್ಲಾಡಳಿತ ಕಲಾವಿದರಿಗೆ ನೀಡಿರುವ ಉಚಿತ ಲಸಿಕಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕೋವಿಡ್ ಲಾಕ್

ದ.ಕ. ಜಿಲ್ಲೆಯಲ್ಲಿ ವಾಣಿಜ್ಯ ಚಟುವಟಿಕೆಗಳು ಚುರುಕು

ದ.ಕ. ಜಿಲ್ಲೆಯಲ್ಲಿ ಇಂದಿನಿಂದ ಅನ್‍ಲಾಕ್ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7ರಿಂದ ಅಪರಾಹ್ನ 2ರವರೆಗೆ ಎಲ್ಲ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಜಿಲ್ಲಾಡಳಿತ ಅವಕಾಶ ನೀಡಿದ್ದು, ಅದರಂತೆ ಜಿಲ್ಲೆಯ ವಾಣಿಜ್ಯ ಚಟುವಟಿಕೆಗಳು ಸುಮಾರು ಎರಡು ತಿಂಗಳ ಬಳಿಕ ಪುನಾರಂಭಗೊಂಡಿದೆ. ಈ ನಡುವೆ ಬಸ್ ಗಳ ಓಡಾಟಕ್ಕೂ ಅವಕಾಶ ಕಲ್ಪಿಸಿದ್ದರಿಂದ ಸರಕಾರಿ ಬಸ್ ಗಳು ಬೆಳಗ್ಗೆಯಿಂದ ಸಂಚಾರ ಆರಂಭಿಸಿವೆ. ಆದರೆ ಬಸ್ಸಿನ ಒಟ್ಟು ಆಸನ ಸಾಮರ್ಥ್ಯದ ಶೇ.50ರಷ್ಟು ಪ್ರಯಾಣಿಕರನ್ನು ಮಾತ್ರ

ಕೋವಿಡ್ ಪ್ಯಾಕೇಜ್‌ಗೆ ಆಗ್ರಹಿಸಿ ಜನಾಗ್ರಹ ಆಂದೋಲನ

ಸಮಗ್ರ ಪ್ಯಾಕೇಜ್ ಮತ್ತು ತುರ್ತು ಕ್ರಮಗಳಿಗಾಗಿ ಒತ್ತಾಯಿಸಿ ಉಸ್ತುವಾರಿ ಮಂತ್ರಿ ಮತ್ತು ಶಾಸಕರುಗಳ ಕಛೇರಿ ಎದುರು ಖಾಲಿ ಚೀಲಗಳನ್ನು ಸುಟ್ಟು ಇಂದು ಜನಾಗ್ರಹ ಆಂದೋಲನವು ಹಮ್ಮಿಕೊಂಡಿದ್ದ ರಾಜ್ಯವ್ಯಾಪಿ ಪ್ರತಿಭಟನೆಯ ಭಾಗವಾಗಿ ಮಂಗಳೂರಿನ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಮಂಗಳೂರು ಪೋಲಿಸರು ಮೊದಲಿಗೆ ಅನುಮತಿ ನಿರಾಕರಿಸಿದರೂ, ಸಂಸದರು ಮತ್ತು ಶಾಸಕರನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೇಟಿ ಮಾಡಿಸುವ ವ್ಯವಸ್ಥೆ

ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ಲು, ನೀರಿನ ಬಿಲ್ಲು ಮನ್ನಾ ಮಾಡಬೇಕು- ಮುನೀರ್ ಕಾಟಿಪಳ್ಳ

 ಮಂಗಳೂರು: ಕ್ ಡೌನ್ ಅವಧಿಯಲ್ಲಿ ಜನ ಸಾಮಾನ್ಯರಿಗೆ ಅನ್ನ ಕೊಡಲಿಲ್ಲ, ಅಕ್ಕಿ ಕೊಡಲಿಲ್ಲ, ಬೇಳೆ ಕೊಡಲಿಲ್ಲ, ನಮ್ಮ ಮಕ್ಕಳ ಶಾಲಾ ಫೀಸು ಕೊಡಲಿಲ್ಲ, ಬ್ಯಾಂಕಿಗೆ ಕಟ್ಟಬೇಕಾದ ಸಾಲದ ಕಂತನ್ನು ಬಿಡದೆ ವಸೂಲಿ ಮಾಡಿದಿರಿ, ಈಗ ಕನಿಷ್ಟ ಈ ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ , ನೀರಿನ ಬಿಲ್ಲನ್ನಾದರೂ ಮನ್ನ ಮಾಡಬೇಕೆಂದು ಡಿವೈಎಫ್ಐ ರಾಜ್ಯಾದ್ಯಕ್ಷರಾದ ಮುನೀರ್ ಕಾಟಿಪಳ್ಳ ನಿನ್ನೆ ಡಿವೈಎಫ್ಐ ರಾಜ್ಯಾದ್ಯಂತ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಹಾಗೂ ಮೂರು ತಿಂಗಳ