Home Posts tagged #mangalore (Page 275)

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಆರೋಪಿ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ  ಅರೋಪಿಯನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.  ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಎನ್‌ಐಎ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.2022 ರ ಜುಲೈ 26 ರಂದು ರಾತ್ರಿ

ಕಡಂದಲೆಯಲ್ಲಿ ವಿದ್ಯುತ್ ಕೇಂದ್ರ ಸ್ಥಾಪನೆ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಮೂಡುಬಿದಿರೆ : ಕಡಂದಲೆ ಗ್ರಾಮದ ಸರ್ವೆ ನಂಬ್ರ 308/ಪಿ1ರ 27 ಎಕ್ರೆ ಸರ್ಕಾರಿ ಭೂಮಿಯಲ್ಲಿ 400/220 ಕೆಪಿ ವಿದ್ಯುತ್ ಕೇಂದ್ರವನ್ನು ಸ್ಥಾಪಿಸಲುದ್ದೇಶಿಸಿದ್ದು ಈ ಸ್ಥಳದಲ್ಲಿರುವ 2229 ಮರಗಳನ್ನು ಕಡಿಯುವ ಹಿನ್ನಲೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯು ಮೂಡುಬಿದಿರೆ ಅರಣ್ಯ ಇಲಾಖೆಯ ಸಭಾಭವನದಲ್ಲಿ ಶನಿವಾರ ನಡೆಯಿತು.. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್ ಅಧ್ಯಕ್ಷತೆ ವಹಿಸಿ ಮಾತನಾಡಿ ಉದ್ದೇಶಿತ ಯೋಜನೆಗಾಗಿ ಮರಗಳ ನ್ನು ತೆರವುಗೊಳಿಸಲಿದ್ದು

ಉಡುಪಿ – ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗದ ವಿರುದ್ಧ ಮಾ.8 ರಂದು ಬಿ.ಸಿ.ರೋಡಿನಲ್ಲಿ ಬೃಹತ್ ಪ್ರತಿಭಟನೆ

ಬಂಟ್ವಾಳ: ರೈತರ ವಿರೋಧದ ನಡುವೆಯೂ  ಕೃಷಿ ಭೂಮಿಯನ್ನು ನಾಶಪಡಿಸಿ,  ರೈತರ ಹಿತಾಸಕ್ತಿ ಕಾಪಾಡದೆ  ಉಡುಪಿ – ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗ ಹಾದುಹೋಗಲು ಶತಾಯ ಗತಯ ಪ್ರಯತ್ನ ಪಡುತ್ತಿರುವ ಕಂಪೆನಿ ಹಾಗೂ ಜಿಲ್ಲಾಡಳಿತದ ವಿರುದ್ಧ ಮಾ. 8ರಂದು ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ನೇತೃತ್ವದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರ

ಮಾರ್ಚ್ 5 : ಪಿಲಾರ್ ಪಂಜಂದಾಯ ದೈವದ ನೇಮ

ಉಳ್ಳಾಲ ತಾಲೂಕಿನ ಪಿಲಾರ್ ದಾರಂದಬಾಗಿಲಿನಲ್ಲಿ ಮಾರ್ಚ್ 5 ರ ಭಾನುವಾರದಂದು ಪಂಜಂದಾಯ ದೈವದ ನೇಮ ನಡೆಲಿದೆ.ಕುತ್ತಾರ್ ಪಂಜಂದಾಯ ಮೂಲಸಾನದಿಂದ ಶನಿವಾರ ರಾತ್ರಿ ಭಂಡಾರ ಬಂದು ಭಾನುವಾರ ಬೆಳಗ್ಗಿನಿಂದ ಮಧ್ಯಾಹ್ನ ತನಕ ಪಿಲಾರ್ ದಾರಂದಬಾಗಿಲಿನಲ್ಲಿ ನೇಮ ನಡೆಯಲಿದೆ. ಪಿಲಾರ್ ನೇಮದ ಅಂಗವಾಗಿ ಶನಿವಾರ ರಾತ್ರಿ ಪಿಲಾರ್ ಯುವಕ ಮಂಡಲವು “ಶಿವದೂತೆ ಗುಳಿಗೆ” ನಾಟಕ ಪ್ರದರ್ಶನ ಆಯೋಜಿಸಿದೆ. ಕೊರಗ ತನಿಯನಿಗೆ ನೆಲೆ ನೀಡಿದ ದೈವವಾಗಿ ಪಂಜಂದಾಯ ದೈವದ ಕಾರ್ಣಿಕವು

ತಾಂಟ್ರೆ ಬಾ ತಾಂಟ್ರೆ ಖ್ಯಾತಿಯ ರಿಯಾಝ್ ಫರಂಗಿಪೇಟೆಗೆ ಉಳ್ಳಾಲದಲ್ಲಿ ಅದ್ಧೂರಿ ಸ್ವಾಗತ

ಉಳ್ಳಾಲ: ಎಸ್‍ಡಿಪಿಐ ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ರಿಯಾಝ್ ಫರಂಗಿಪೇಟೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಉಳ್ಳಾಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಸ್ವಾಗತ ಕಾರ್ಯಕ್ರಮ ಹಮ್ಮಿಕೊಂಡರು. ಉಳ್ಳಾಲ ನಗರಸಭೆ ಎದುರುಗಡೆಯಿರುವ ಪಕ್ಷದ ಕಚೇರಿ ಮುಂಭಾಗದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ರಿಯಾಝ್ ಫರಂಗಿಪೇಟೆ ಅವರು ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಅವಕಾಶ ಕಲ್ಪಿಸಿದ ಪಕ್ಷದ ಎಲ್ಲಾ

ಸೋಮೇಶ್ವರ : ದೋಣಿ ಮತ್ತು ಮೀನಿನ ಬಲೆ ಬೆಂಕಿಗಾಹುತಿ

ಉಳ್ಳಾಲ: ಸೋಮೇಶ್ವರ ಕಡಲ ಕಿನಾರೆಯಲ್ಲಿಟ್ಟಿದ್ದ ಎರಡು ದೋಣಿಗಳಿಗೆ ಬೆಂಕಿ ತಗುಲಿದ್ದು ದೋಣಿ ಮತ್ತು ಮೀನಿನ ಬಲೆ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಕಿಡಿಗೇಡಿಗಳ ಕೃತ್ಯವೆಂದು ಶಂಕಿಸಲಾಗಿದೆ. ಸೋಮೇಶ್ವರದ ಮೀನುಗಾರರಾದ ಅನಿಲ್ ಮತ್ತು ಶೇಖರ್ ಎಂಬವರಿಗೆ ಸೇರಿದ ನಾಡ ದೋಣಿಗೆ ಗುರುವಾರ ಮದ್ಯಾಹ್ನ ಬೆಂಕಿ ತಗುಲಿದೆ. ಸೋಮೇಶ್ವರ ಬಾಸಿತ್ತಾಯರ ಬೈಲಿನ ಸಮುದ್ರ ಕಿನಾರೆಯಲ್ಲಿ ಮೀನುಗಾರರು ನಾಡ ದೋಣಿಯನ್ನ ನಿಲ್ಲಿಸಿದ್ದರು.ಗುರುವಾರ ಮದ್ಯಾಹ್ನ

ಮಂಗಳೂರು ಜ್ಯುವೆಲ್ಲರಿ ಸಿಬ್ಬಂದಿ ಕೊಲೆ ಪ್ರಕರಣ ಆರೋಪಿ ಬಂಧನ

ಮಂಗಳೂರು ಜ್ಯುವೆಲ್ಲರಿ ಸಿಬ್ಬಂದಿಯ ಕೊಲೆ ಪ್ರಕರಣದ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ. ಕೋಝಿಕ್ಕೋಡ್ ಕೊಯಿಲಾಂಡಿ ನಿವಾಸಿ ಶಿಫಾಝ್(33) ಬಂಧಿತ ಆರೋಪಿ. ಈತನನ್ನು ಕಾಸರಗೋಡಿನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಪರಿಸರದಲ್ಲಿ ಬಂಧಿಸಲಾಗಿದೆ. ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಚಿನ್ನಾಭರಣದ ಅಂಗಡಿಯ ಸಿಬ್ಬಂದಿ, ಸ್ಥಳೀಯ ಅತ್ತಾವರ ನಿವಾಸಿಯಾಗಿದ್ದ ರಾಘವೇಂದ್ರ ಆಚಾರ್ಯ(50) ಎಂಬುವವರನ್ನು ಫೆಬ್ರವರಿ 3ರಂದು ಅಂಗಡಿಯಲ್ಲೇ ಚೂರಿಯಿಂದು ಕೊಲೆ ಮಾಡಲಾಗಿತ್ತು.

ಮೂಡುಬಿದಿರೆಯ ಉದ್ಯಮಿ ಗಣೇಶ್ ಕಾಮತ್ ನಿಧನ

ಮೂಡುಬಿದಿರೆ : ಮೂಡುಬಿದಿರೆಯ ಜನರಿಗೆ ಚಿರಪರಿಚಿತರಾಗಿದ್ದ ಜಿ.ಕೆ. ಎಂಟರ್‌ಪ್ರೈಸಸ್ ಮಾಲಕ ಜಿ.ಕೆ. ಖ್ಯಾತಿಯ ಗಣೇಶ್ ಕಾಮತ್ ಅವರು ಶುಕ್ರವಾರ ಹೃದಯಾಘಾತದಿಂದ ನಿಧನ ಹೊಂದಿದರು. ವಿದ್ಯುತ್ ಅವಘಡದಿಂದ ತನ್ನೆರಡು ಕೈಗಳನ್ನು ಕಳೆದುಕೊಂಡಿದ್ದರೂ ಛಲಬಿಡದೆ ಜಿ. ಕೆ ಉದ್ಯಮವನ್ನು ಸ್ಥಾಪಿಸಿ ಯಶಸ್ವಿ ಉದ್ಯಮಿ ಎನಿಸಿಕೊಂಡು ಹಲವಾರು ಜನರಿಗೆ ಉದ್ಯೋಗದಾತರಾಗಿದ್ದ ಅವರು ಶುಕ್ರವಾರ ಬೆಳಗಿನ ವೇಳೆ ತನ್ನ ಉದ್ಯಮ ಮಳಿಗೆಗೆ ಬರುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತಗೊಂಡಿದ್ದು

ಕೊಯಿಲ ಫಾರ್ಮ್‍ನ ಹುಲ್ಲುಗಾವಲಿಗೆ ಆಕಸ್ಮಿಕ ಬೆಂಕಿ

ಕಡಬ ತಾಲೂಕಿನ ಕೊಯಿಲ ಪಶು ಸಂಗೋಪನ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಒಣಹುಲ್ಲುಗಳಿಂದ ಆವೃತ್ತವಾದ ಗುಡ್ಡಕ್ಕೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಸುಮಾರು 15 ಎಕರೆಯಷ್ಟು ಆವರಿಸಿದ್ದು, ಇದರಿಂದ ಸೃಷ್ಠಿಯಾದ ದಟ್ಟ ಹಿಗೆ ಮುಗಿಲೆತ್ತರಕ್ಕೆ ಚಾಚಿದ್ದು ಭಯಾನಕವಾಗಿತ್ತು. ಹುಲ್ಲುಗಾವಲಿನ ಸುಮಾರು ಹದಿನೈದು ಎಕರೆ ಪ್ರದೇಶಕ್ಕೆ ಬೆಂಕಿ ಆವರಿಸಿ ಸುಟ್ಟು ಕರಕಲಾಗಿದೆ. ಇದರಿಂದಾಗಿ ಅಪಾರ ನಷ್ಟ ಉಂಟಾಗಿದೆ. ಫಾರ್ಮನ ಆನೆಗುಂಡಿ ಭಾಗದಲ್ಲಿ ಕಾಣಿಸಿಕೊಂಡ

ಚಾಲಕನ ನಿಯಂತ್ರಣ ತಪ್ಪಿ ಮರಳು ಲಾರಿ ಅಪಘಾತ

ಮೂಡುಬಿದಿರೆ: ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಮರಳು ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ರಸ್ತೆಯಲ್ಲಿ ಪಲ್ಟಿ ಹೊಡೆದು ಮರಕ್ಕೆ ಢಿಕ್ಕಿಯಾದ ಘಟನೆ ಮೂಡುಬಿದಿರೆ ತಾಲೂಕಿನ ಗಾಂಧಿನಗರದ ಬಳಿ ನಡೆದಿದೆ. ಮರಳು ತುಂಬಿಸಿಕೊಂಡು ವೇಗದಿಂದ ಬರುತ್ತಿದ್ದ ಲಾರಿ ಗಾಂಧಿನಗರದ ಬಳಿ ಚಾಲಕ ನಿಯಂತ್ರಣ ತಪ್ಪಿ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭ ಮರಳು ಲಾರಿಯಿಂದ ರಸ್ತೆಗೆ ಚೆಲ್ಲಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಯದಿಂದ ಪಾರಾಗಿದ್ದಾರೆ.