ಮೂಡುಬಿದಿರೆ: ಮೂಲ್ಕಿ ತಾಲೂಕು ಹಾಗೂ ಮೂಡುಬಿದಿರೆ ತಾಲೂಕುಗಳನ್ನು ಒಳಗೊಂಡ ಬಳಕೆದಾರರ ಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಮೂಡುಬಿದಿರೆಯ ಅರುಣ್ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಡಾ.ಶಿವರಾಜ್ ಅರಸು ಆಯ್ಕೆಯಾಗಿದ್ದಾರೆ.ಪದಾಧಿಕಾರಿಗಳು: ಯು ಪದ್ಮನಾಭ ಶೆಟ್ಟಿ( ಗೌರವಾಧ್ಯಕ್ಷರು), ಕೆ.ವೇದವ್ಯಾಸ ಉಡುಪ, ಜೈಸನ್ ತಾಕೋಡೆ(ಉಪಾಧ್ಯಕ್ಷರು), ಡಾ.ರವೀಶ್ ಕುಮಾರ್ ಎಂ.(
ಮೂಡುಬಿದಿರೆ: ಸ್ವರಾಜ್ಯ ಮೈದಾನದ ಮಾರ್ಕೆಟ್ ನಲ್ಲಿ ಗುಜರಿ ಅಂಗಡಿಯಿದ್ದು ಸುತ್ತಮುತ್ತಲಿನ ಪ್ರದೇಶದಲ್ಲಿ ಗುಜರಿ ವಸ್ತುಗಳನ್ನು ರಾಶಿ ಹಾಕಿರುವುದರಿಂದ ಪರಿಸರ ಮಾಲಿನ್ಯವಾಗಿದೆ. ರಾಶಿ ಹಾಕಿರುವ ಗುಜರಿ ವಸ್ತುಗಳನ್ನು ತೆರವುಗೊಳಿಸುವಂತೆ ಸದಸ್ಯ ರಾಜೇಶ್ ನಾಯ್ಕ್ ಪುರಸಭಾ ಸಾಮಾನ್ಯ ಸಭೆಯಲ್ಲಿ ತಿಳಿಸಿದರು. ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ ಪುರಸಭಾ ಕಾರ್ಯಾಲಯದ ಸಭಾಭವನದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಗಮನ ಸೆಳೆದರು.
ವಿರಾಜಪೇಟೆ ಸಮೀಪದ ಮಗ್ಗುಲದ ಅಗ್ನೋನಿಮಾ ರೆಸಾರ್ಟ್ ನಲ್ಲಿನ ಜಿಲ್ಲಾ ಬಂಟರ ಸಂಘದ ಮಹಾಸಭೆಯಲ್ಲಿ ವಿರಾಜಪೇಟೆಯ ಹಿರಿಯ ವಕೀಲರು, ಹಲವಾರು ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಬಿ ಆರ್ ರತ್ನಾಕರ ಶೆಟ್ಟಿ ಅವರನ್ನು ಜಿಲ್ಲಾ ಬಂಟರ ಸಂಘದ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಂಘದ ನಿಕಟಪೂರ್ವ ಅಧ್ಯಕ್ಷ ನಾರಾಯಣ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಗೌರವಾಧ್ಯಕ್ಷರಾಗಿ ಬಾಲಕೃಷ್ಣ ರೈ, ಹಾಗೂ ನಾರಾಯಣ್ ರೈ ಯವರನ್ನು
ಪುತ್ತೂರು :ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ, ಪ್ರಸ್ತುತ ವಿವಾಹಿತರಾಗಿ ಬೆಂಗಳೂರಿನಲ್ಲಿ ವಾಸವಾಗಿರುವ ಪುಷ್ಪರೇಖಾ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್‍ಡಿ ಪದವಿ ಪ್ರದಾನ ಮಾಡಿ ಗೌರವಿಸಿದೆ. ಪುಷ್ಪರೇಖಾ ಅವರು ರಸಾಯನ ಶಾಸ್ತ್ರ ವಿಭಾಗಕ್ಕೆ ಸಂಬಂಧಿಸಿದಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕೈಗಾರಿಕಾ ರಸಾಯನ ಶಾಸ್ತ್ರ ವಿಭಾಗದ ಪ್ರಾದ್ಯಾಪಕಿ ಪ್ರೊ. ಬಿ.ಕೆ. ಸರೋಜಿನಿ ಅವರ ಮಾರ್ಗದರ್ಶನದಲ್ಲಿ ರಸಾಯನ ಶಾಸ್ತ್ರ ವಿಷಯದಲ್ಲಿ ಸಂಶೋಧನೆ ನಡೆಸಿ
ಉಳ್ಳಾಲ: ಬೈಕಿನಲ್ಲಿ ಗೋಣಿಚೀಲದಲ್ಲಿ ರೂ.40,000 ಮೌಲ್ಯದ ಗಾಂಜಾ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿರುವ ಘಟನೆ ತಲಪಾಡಿ ತಚ್ಚಣಿ ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದ ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಮಂಜೇಶ್ವರ ಸುಂಕದಕಟ್ಟೆಯ ಮೊಹಮ್ಮದ್ ರಾಝಿಕ್ ಎಂಬಾತನನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ಅಸ್ಗರ್ ತಲೆಮರೆಸಿಕೊಂಡಿದ್ದಾನೆ. ಇಬ್ಬರು ತಲಪಾಡಿ ಗ್ರಾಮದ ತಚ್ಚಣಿ ಎಂಬಲ್ಲಿ ಗಾಂಜಾ ಮಾರಾಟ ಮಾಡಲು ಬಂದಿದ್ದರು.
ಗಾಂಧಿ ವಿಚಾರ ವೇದಿಕೆ ವತಿಯಿಂದ ಮಿನುಗು ನೋಟ ಎಮ್.ಜಿ. ಹೆಗ್ಡೆಯವರು ಬರೆದಿರುವ ಗಾಂಧೀಜಿಯವರ ಕುರಿತ ಪ್ರಶ್ನೆಗಳಿಗೆ ಉತ್ತರದ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಜನವರಿ 15ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕದ್ರಿಯಲ್ಲಿರುವ ಲಯನ್ಸ್ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಾಂಧಿ ವಿಚಾರ ವೇದಿಕೆಯ ಅಧ್ಯಕ್ಷರಾದ ಶ್ರೀಧರ್ ಜಿ. ಭಿಡೆ ವಹಿಸಲಿದ್ದಾರೆ. ಪುಸ್ತಕವನ್ನು ಪ್ರಸಿದ್ಧ ಅಂಕಣಕಾರರಾದ ಸುಧೀಂದ್ರ ಕುಲಕರ್ಣಿ ಅವರು ಅನಾವರಣ ಮಾಡಲಿದ್ದಾರೆ.
ನೂತನವಾಗಿ ಲೋಕಾರ್ಪಣೆಯಾದ ಬಿರುವೆರ್ ಕುಡ್ಲ( ರಿ) ಪೈವಳಿಕೆ ಘಟಕ ಕಾಸರಗೋಡು ಜಿಲ್ಲೆ ಇದರ ಪದಗ್ರಹಣ ಹಾಗೂ ಉದ್ಘಾಟನಾ ಸಮಾರಂಭವು ಶ್ರೀ ಅಯ್ಯಪ್ಪ ಭಜನಾ ಮಂದಿರ ಬಾಯಿಕಟ್ಟೆಯಲ್ಲಿ ಅದ್ದೂರಿಯಾಗಿ ನಡೆಯಿತು. ಇದರ ಸಲುವಾಗಿ ಶ್ರೀ ಮಹಾಗಣಪತಿ ದೇವರಿಗೆ ಗಣಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ (ರಿ ) ಇದರ ಸ್ಥಾಪಕಾಧ್ಯಕ್ಷರಾದ ಉದಯ ಪೂಜಾರಿ ಬಳ್ಳಾಲ್ ಬಾಗ್
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದುಡಿಯುತ್ತಿರುವ ಆಂಟನಿ ವೇಸ್ಟ್ ಮ್ಯಾನೆಜ್‍ಮೆಂಟ್ ನ ಕಾರ್ಮಿಕರಿಗೆ ಸಿಗಬೇಕಾದ ಸವಲತ್ತುಗಳನ್ನು ಪೂರೈಸುವಂತೆ ಆಗ್ರಹಿಸಿ ಸಫಾಯಿ ಕರ್ಮಾಚಾರಿ ಕಾರ್ಮಿಕರು ಇಂದು ಕುಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಆಂಟನೀ ವೇಸ್ಟ್ ಮ್ಯಾನೇಜ್ಮೆಂಟ್ ಅಡಿಯಲ್ಲಿ ದುಡಿಯುತ್ತಿರುವ ಕೆಲಸಗಾರರಿಗೆ ಸಿಗಬೇಕಾದ ಬೋನಸ್ಸು, ಭತ್ಯೆ, ವಿಶೇಷ ರಜಾ ವೇತನ ಕನಿಷ್ಟ ವೇತನ ಮತ್ತು ವಿಡಿಎ, ಬೆಳಗಿನ ಉಪಹಾರ ಭತ್ತೆ, ಇತ್ಯಾದಿ ಬೇಡಿಕೆ
ಉಳ್ಳಾಲ: ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಅಂಗಾಂಗ ದಾನ ನಡೆಸಲು ಮುಂದಾಗಿದ್ದಾರೆ. ಅಪಘಾತ ನಂತರ ಅವರನ್ನು ದೇರಳಕಟ್ಟೆ ಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ಗಾಯಾಳು ಮಿದುಳು
ಉಳ್ಳಾಲ: ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಘಟನೆ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಸಮೀಪ ಸಂಭವಿಸಿದೆ. ಚೆಂಬುಗುಡ್ಡೆ ಕೆರೆಬೈಲು ನಿವಾಸಿ ಭೂಷಣ್ ರೈ (20) ಗಾಯಾಳು. ಕಲ್ಲಾಪು ಬುರ್ದುಗೋಳಿ ಕೋಲದಲ್ಲಿ ಭಾಗವಹಿಸಿದ್ದ ಇವರು ಬೈಕಿನಲ್ಲಿ ಕುತ್ತಾರಿನತ್ತ ಬರುವ ಸಂದರ್ಭ ಬೈಕ್ ಡಿವೈಡರಿಗೆ ಬಡಿದಿದ್ದು, ಪರಿಣಾಮ ಭೂಷಣ್ ಇನ್ನೊಂದು ರಸ್ತೆಗೆ ಎಸೆಯಲ್ಪಟ್ಟಿದ್ದರು. ತಲೆಗೆ




























