Home Posts tagged #mangalore (Page 307)

ಹಾಲಾಡಿಯಲ್ಲಿ ಅಪರೂಪದ ಶಾಸನ ಶೋಧ

ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು 76 ಹಾಲಾಡಿಯ ಹುಯ್ಯಾರುವಿನಲ್ಲಿ ಅತಿ ವಿರಳ ಎನ್ನಬಹುದಾದ ಶಾಸನ ಪತ್ತೆಯಾಗಿದೆ. ಹುಯ್ಯಾರು ಪಟೇಲ್ ದಿ.ಹಿರಿಯಣ್ಣ ಶೆಟ್ಟಿ ಕುಟುಂಬಿಕರ ಜಾಗದಲ್ಲಿ ಈ ಶಾಸನವಿದೆ. ಸುಮಾರು 10 ಅಡಿ ಎತ್ತರ, ೫ ಅಡಿ ಅಗಲ ಮತ್ತು ೩.೫ ಇಂಚು ದಪ್ಪ ಗ್ರಾನೈಟ್ ಶಿಲೆಯಲ್ಲಿ ಶಾಸನವನ್ನು ರಚಿಸಲಾಗಿದೆ. ಆಯತಾಕಾರದ ರಚನೆಯನ್ನು ಹೊಂದಿರುವ ಇದರ

ಶಿರಾಡಿ ಘಾಟ್‌ ಸುರಂಗ ಮಾರ್ಗಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ

ಶಿರಾಡಿ ಘಾಟ್‌ನಲ್ಲಿ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಂಸದ ನಳೀನ್‌ ಕುಮಾರ್ ಕಟೀಲ್‌ ಟ್ವಿಟ್ ಮಾಡಿದ್ದು ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರನಹಳ್ಳಿ-ಅಡ್ಡಹೊಳೆ(ಶಿರಾಡಿ ಘಾಟ್) ಭಾಗದ ಚತುಷ್ಪತ ರಸ್ತೆ ಕಾಮಗಾರಿಗೆ 1976 ಕೋಟಿ ರೂ.ಮೊತ್ತದ ಬಿಡ್ ಆಹ್ವಾನಿಸಿದೆ. ಶಿರಾಡಿ ಘಾಟ್‌ನಲ್ಲಿ 15,000 ಕೋಟಿ ಮೊತ್ತದ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಆದೇಶಿಸಿದೆ ಅಂತ

ಯಡ್ತೆರೆ ಮಂಜಯ್ಯ ಶೆಟ್ಟರ ಕನಸಿನ ಕೂಸು ನೆಂಪು ಪಬ್ಲಿಕ್ ಸ್ಕೂಲ್ :ವಜ್ರ ಸಂಗಮದ ಉದ್ಘಾಟನಾ ಕಾರ್ಯಕ್ರಮ

ಬೈಂದೂರು: ಗ್ರಾಮೀಣ ಭಾಗಗಳ ಅಭಿವೃದ್ಧಿಯ ಬಗ್ಗೆ ಕನಸು ಕನಸು ಕಂಡು ನನಸು ಮಾಡಲು ಹೊರಟಿದ್ದ ಯಡ್ತೆರೆ ಮಂಜುಯ್ಯ ಶೆಟ್ಟಿ ಕರಾವಳಿಯ ಧೀಮಂತ ನಾಯಕ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.ವಂಡ್ಸೆ ಸಮೀಪದ ನೆಂಪುವಿನ ಮಲ್ನಾಡ್ ಸ್ಲೂಲ್, ಕರ್ನಾಟಕ ಪಬ್ಲಿಕ್ ಸ್ಕೂಲ್‍ನ ವಜ್ರ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಂಡ್ಸೆ ಪಿರ್ಕಾ ಎನ್ನುವುದು ಉಡುಪಿ ಜಿಲ್ಲೆಯಲ್ಲಿಯೇ ಅತೀ ದೊಡ್ಡ ಪಿರ್ಕಾ ಆಗಿದೆ. ನಿಜವಾಗಿ ವಂಡ್ಸೆ ಪಿರ್ಕಾ

ಜ.6 ಮತ್ತು 7ರಂದು ಕೇರಳ ಸಾಹಿತ್ಯ ಬಹುಭಾಷಾ ಸಮ್ಮೇಳನ

ಮಂಜೇಶ್ವರ: ಮಂಜೇಶ್ವರ ದ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕದಲ್ಲಿ ಜನವರಿ 6 ಮತ್ತು 7ರಂದು ನಡೆಯಲಿರುವ ಕೇರಳ ಸಾಹಿತ್ಯ ಬಹುಭಾಷಾ ಸಮ್ಮೇಳನದ ಭಾಗವಾಗಿರುವ ಚಿತ್ರಪ್ರದರ್ಶನದ ಸಿದ್ಧತೆಗಳು ಪ್ರಗತಿಯಲ್ಲಿದೆ. ಕಾಸರಗೋಡಿನ ಮಾನವ ಸ್ವಭಾವ, ಸಾಂಸ್ಕೃತಿಕ ಇತಿಹಾಸ ಮತ್ತು ಭೌಗೋಳಿಕತೆಯನ್ನು ಮರುಶೋಧಿಸುವ ಚಿತ್ರಗಳನ್ನು ರಚಿಸಲಾಗುತ್ತಿದೆ.ಕಲೆ, ಜೀವನ, ಭಾಷೆ, ಕಲ್ಪನೆ, ಪ್ರಕೃತಿ ಗಳ ಬಗ್ಗೆ ಹಾಗೂ ಗಡಿನಾಡಿನ ಗ್ರಾಮಗಳಲ್ಲಿರು ಕಟ್ಟಡಗಳ ಚಿತ್ರಗಳು ಕೂಡಾ ಪುದರ್ಶನಕ್ಕೆ

ಕೋವಿಡ್ ನಿಂದ ಆರಂಭವಾದ ಹಾಡು ನೀ ಹಾಡು ಪಯಣ

ಕೋವಿಡ್, ಜಗತ್ತನ್ನೇ ತನ್ನ ಕಪಿ ಮುಷ್ಟಿಯಲ್ಲಿ ಕಟ್ಟಿ ಹಾಕಿದ್ದ ಸಂದರ್ಭ ಅದು. ಆ ಸಂದರ್ಭದಲ್ಲಿ ಒಂದು ಹೊಸ ಚಿಂತನೆಯೊಂದಿಗೆ ನಮ್ಮ ಊರಿನ ಗಾನ ಕೋಗಿಲೆಗಳಿಗೆ ಚೈತನ್ಯವಾಗಿ ರೂಪುಗೊಂಡದ್ದೇ ಉಡುಪಿ ಶೈನಿಂಗ್ ಸ್ಟಾರ್ ವೇದಿಕೆ. ಅಂದು ಮಣಿಪಾಲ ಮಹಿಳಾ ಸಮಾಜ ಎಂಬ ಮಹಾನ್ ಶಕ್ತಿಗಳಿಂದ ನಿರ್ಮಾಣ ಗೊಂಡ ಉಡುಪಿ ಶೈನಿಂಗ್ ಸ್ಟಾರ್ ಎಂಬ ವೇದಿಕೆ ಮುಂದೊಂದು ದಿನ ಇಡೀ ಕರಾವಳಿಯೇ ಮೆಚ್ಚುವಂಥ ತುಳುನಾಡಿನಾದ್ಯಂತ ಸದ್ದನ್ನ ಮಾಡುತ್ತಿರುವ ಹಾಡು ನೀ ಹಾಡು ಕಾರ್ಯಕ್ರಮಕ್ಕೆ

ಪುತ್ತೂರು : ಬಸ್ ಇಲ್ಲದ ಮೇಲೆ ಪಾಸ್ ಯಾಕೆ? ವಿದ್ಯಾರ್ಥಿಗಳ ಆಕ್ರೋಶ

ಪುತ್ತೂರು: ರೆಂಜ ಮಾರ್ಗವಾಗಿ ಸುಳ್ಯ ಪದವಿಗೆ ಬಸ್ ಸಂಪರ್ಕ ಕಲ್ಪಿಸಬೇಕೆಂದು ಆಗ್ರಹಿಸಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಜ.3 ರಂದು ಪುತ್ತೂರು ತಾಲೂಕು ಆಡಳಿತ ಸೌಧ ಮತ್ತು ಕೆಎಸ್‍ಆರ್‍ಟಿಸಿ ವಿಭಾಗೀಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಬಸ್ ಇಲ್ಲದ ಮೇಲೆ ನಮಗೆ ಪಾಸ್ ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುತ್ತೂರು ರೆಂಜ ಮಾರ್ಗವಾಗಿ ಸುಳ್ಯಪದವಿಗೆ ಈ ಹಿಂದೆ ಬಸ್ ಸಂಪರ್ಕ ವ್ಯವಸ್ಥೆ ಇದ್ದು

ಆರ್ಸೊ ಪತ್ರಿಕೋದ್ಯಮ, ಕಿಟಾಳ್ ಯುವ ಪ್ರಶಸ್ತಿ ಪ್ರದಾನ

“ಕೊಂಕಣಿ ಸಾಹಿತ್ಯ ಇಂದು ಈ ಮಟ್ಟಕ್ಕೆ ಬೆಳೆದು ನಿಲ್ಲಲು ಕೊಂಕಣಿ ಪತ್ರಿಕೆ ಮತ್ತು ನಿಯತಕಾಲಿಕೆಗಳು ಮುಖ್ಯ ಕಾರಣ. ಕೊಂಕಣಿ ಪತ್ರಿಕೊದ್ಯಮಕ್ಕೆ ಶತಮಾನದ ಇತಿಹಾಸವಿದೆ. ಕೊಂಕಣಿ ಬರಹಗಾರರಿಗೆ ಉತ್ತೇಜನ ನೀಡಿ, ಅವರನ್ನು ಸಾಹಿತಿಗಳನ್ನಾಗಿ ಮಾಡುವುದರಲ್ಲಿ ಕೊಂಕಣಿ ಪತ್ರಿಕೆಗಳ ಪ್ರಕಾಶಕರು ಮತ್ತು ಸಂಪಾದಕರ ಶ್ರಮ ಗಣನೀಯ. ಅವರ ಸೇವೆಯನ್ನು ಗುರುತಿಸಿ ಅವರನ್ನು ಗೌರವಿಸುವುದು ಉತ್ತಮ ಕೆಲಸ. ಹಿರಿಯ ಮತ್ತು ನಿವೃತ್ತ ಪತ್ರಕರ್ತರನ್ನು ಮಾತ್ರವಲ್ಲ, ಹಾಲಿ

ದ.ಕ ಪತ್ರಕರ್ತರ ಜಿಲ್ಲಾ ಸಮ್ಮೇಳನ ಉದ್ಘಾಟನೆ

ಮಂಗಳೂರು; ಸಮಾಜದ ಅಭಿವೃದ್ಧಿಗೆ ಪತ್ರಕರ್ತರ ಕೊಡುಗೆಗಾಗಿ ಶ್ರೇಷ್ಠವಾದುದು. ಜನ ಸಾಮಾನ್ಯರ ಮತ್ತು ಸರಕಾರದ ಮಧ್ಯೆ ಸೇತುವೆಯಾಗಿ ಮಾಧ್ಯಮಗಳು ಕೆಲಸ‌ ಮಾಡುತ್ತಿದೆ ಎಂದು ಎಂಆರ್‌ಜಿ ಗ್ರೂಪ್ ಆಡಳಿತ ನಿರ್ದೇಶಕರಾದ ಪ್ರಕಾಶ್ ಶೆಟ್ಟಿ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಪತ್ರಕರ್ತರ ಜಿಲ್ಲಾ ಸಮ್ಮೇಳನ -2023 ನ್ನು ಉದ್ಘಾಟಿಸಿ ಅವರು ಮಾತನಾಡಿದರು. ನನ್ನ ಎಲ್ಲಾ ಬೆಳವಣಿಗೆಗೆ

ಖೋಟಾ ನೋಟು ಚಲಾವಣೆ ಆರೋಪ : ಇಬ್ಬರು ಆರೋಪಿಗಳ ಬಂಧನ

ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇರೆಗೆ ಕದ್ರಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳವಾರ ತನ್ನ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಂಧಿತರನ್ನು ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ನಿವಾಸಿ ನಿಜಾಮುದ್ದೀನ್ ಅಲಿಯಾಸ್ ನಿಜಾಂ ( 32 ), ಜೆಪ್ಪು ಮಂಗಳೂರು ನಿವಾಸಿ ರಜೀಮ್ ಅಲಿಯಾಸ್ ರಾಫಿ ( 31) ಎಂದು ಗುರುತಿಸಲಾಗಿದೆ. ಜ. 2ರಂದು ಮಂಗಳೂರು ನಗರದ

ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಅಸ್ತಂಗತ : ಬಿಜೆಪಿ ರಾಜ್ಯಾದ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಸಂತಾಪ

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ನಿಧನಕ್ಕೆ ಬಿಜೆಪಿ ರಾಜ್ಯಾದ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಸಂತಾಪ ಸೂಚಿಸಿದ್ದಾರೆ. ಆಧ್ಯಾತ್ಮಿಕ ಬದುಕಿನ ಮುಖಾಂತರ ಒಂದು ಸುಂದರವಾದ ಜೀವನ ವ್ಯವಸ್ಥೆಯಲ್ಲಿ ಕಲ್ಪಿಸಿದವರು. ನಡೆದಾಡುವ ದೇವರು ಲಿಂಗೈಕ್ಯರಾಗಿದ್ದಾರೆ. ಅವರ ಅಗಲಿಕೆಯಿಂದ ಅವರ ಲಕ್ಷಾಂತರ ಭಕ್ತರಲ್ಲಿ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದರು.