ಮಂಗಳೂರು ಮಹಾನಗರ ಪಾಲಿಕೆ ಆಡಳಿತ ಕೇವಲ ಚರಂಡಿ ಕಾಂಪೌಂಡ್ ಹಾಲ್ ನಿರ್ಮಾಣಕ್ಕೆ ಕೋಟ್ಯಾಂತರ ರೂಪಾಯಿ ಸಾಲ ಪಡೆದಿದ್ದು, ಮಂಗಳೂರು ಪಾಲಿಕೆಯ ಆಡಳಿತದಲ್ಲಿ ಶಾಸಕರ ಹಸ್ತಕ್ಷೇಪವಿದೆ ಎಂಬ ಕಾಂಗ್ರೆಸ್ ಆರೋಪ ಮಂಗಳೂರು ಪಾಲಿಕೆಯಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆ ಕೋಲಾಹಲ ಸೃಷ್ಟಿಸಿತು. ಮೇಯರ್ ಜಯಾನಂದ ಅಂಚನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಾಲದ ವಿಚಾರದ ಚರ್ಚೆಯು
ಬೆಳ್ತಂಗಡಿ : ಉಪ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರಿಗೆ ಸಂಘಪರಿವಾರಗಳ ಬೆದರಿಕೆ ಇರುವ ಕಾರಣ ಅವರಿಗೆ ರಕ್ಷಣೆಗೆ ಆಗ್ರಹಿಸಿ ಹಾಗೂ ಸಂಘಪರಿವಾರದ ಹಿಂದುತ್ವವಾದಿಗಳು ಜಾತ್ಯಾತೀತವಾದ ಹಿಂದು ಧರ್ಮದ ಮಾನ ತೆಗೆಯವುದರ ವಿರುದ್ದ, ಹಿಂದುಗಳ ದೇವರ ಸ್ಮರಣೆಯ ಭಾಗವಾದ ಭಜನೆಯನ್ನು ಗೇಲಿ ಮಾಡುವಂತೆ ಪೋಲೀಸ್ಟೇಶನ್ ಎದುರು ಭಜನೆ ನಡೆಸಿ ಹಿಂದುಗಳಿಗೆ ಅವಮಾನಿಸಿದ ಸಂಘಪರಿವಾರದ ವಿರುದ್ದ ಹಾಗೂ ಹಿಂದುಳಿದ , ದಲಿತ ವರ್ಗದವರ ಧ್ವನಿ ಅಡಗಿಸುವ ಕುತಂತ್ರ ನಡೆಸುವ
ಮಂಗಳೂರು. ಸ್ವಾತಂತ್ರ್ಯಾಪೂರ್ವದ 1920 ರಲ್ಲಿ ಸಂಘಟಿತಗೊಂಡ ದೇಶದ ಪ್ರಪ್ರಥಮ ಕಾರ್ಮಿಕ ಸಂಘಟನೆಯಾದ ಅಖಿಲಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ)ನ ರಾಷ್ಟ್ರೀಯ ಮಂಡಳಿಗೆ ಎಐಟಿಯುಸಿ ಕರ್ನಾಟಕ ರಾಜ್ಯ ಉಪಾಧ್ಯಕ್ಷರೂ, ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿರುವ ಮಂಗಳೂರಿನ ವಿ.ಎಸ್. ಬೇರಿಂಜ ಆಯ್ಕೆಯಾಗಿದ್ದಾರೆ. 2022 ಡಿಸೆಂಬರ್ 16 ರಿಂದ 20 ರವರೆಗೆ ಕೇರಳದ ಅಳಪುಝದಲ್ಲಿ ಜರಗಿದ ಎಐಟಿಯುಸಿಯ 42ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ವಿ.ಎಸ್. ಬೇರಿಂಜರನ್ನು
ಮಂಗಳೂರು : ನಗರದ ಪಡಿಲ್ ನಲ್ಲಿ ನೂತನವಾಗಿ ನಿರ್ಮಾಣಗೊಂಡ ‘ಪಡಿಲ್ ಗೇಟ್’ ಕಮರ್ಷಿಯಲ್ ಸೆಂಟರ್ ನ ಉದ್ಘಾಟನೆ ಹಾಗೂ ಇಲ್ಲಿ ಆಯೋಜಿಸಲಾಗಿರುವ ಡಿಸ್ಕೌಂಟ್ ಮೇಳದ ಉದ್ಘಾಟನೆ ಶುಕ್ರವಾರ ನೆರವೇರಿತು. ಪಡಿಲ್ ಗೇಟ್ ಕಮರ್ಷಿಯಲ್ ಸೆಂಟರನ್ನು ಮಂಗಳೂರು ಮೇಯರ್ ಜಯಾನಂದ ಅಂಚನ್ ಉದ್ಘಾಟಿಸಿದರು. ಈ ಸೆಂಟರ್ ನಲ್ಲಿ ಆಯೋಜಿಸಲಾಗಿರುವ ‘ಮಂಗಳೂರು ಕಾರ್ನಿವಲ್’ ವಸ್ತು ಪ್ರದರ್ಶನ ಮೇಳವನ್ನು ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ ಕಾಮತ್ ಅವರು
ಮೂಡುಬಿದಿರೆ: ಸಮಾಜದಲ್ಲಿ ಶಾಂತಿ ನೆಲೆಸಬೇಕಾದರೆ ಅಲ್ಲಿ ವ್ಯಾಜ್ಯಗಳು ಇರಬಾರದು, ವ್ಯಾಜ್ಯಗಳು ಕಡಿಮೆಯಾಗಬೇಕಾದರೆ ವಕೀಲರು ಬಡಜನರಿಗೆ ತ್ವರಿತಗತಿಯಲ್ಲಿ ಕಡಿಮೆ ಖರ್ಚಿನಲ್ಲಿ ನ್ಯಾಯ ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ಹೇಳಿದರು. ದ.ಕ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಮೂಡುಬಿದಿರೆ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆ ನ್ಯಾಯಾಲಯದ ಆವರಣದಲ್ಲಿ ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ
ಮೂಡುಬಿದಿರೆ : ತುಳುನಾಡಿನ ಜಾನಪದ ಕ್ರೀಡೆ ಕಂಬಳವನ್ನು ಮುಂದಿಟ್ಟುಕೊಂಡು ತಯಾರಾಗುತ್ತಿರುವ ಚಲನಚಿತ್ರ ತುಳುವಿನ ಬಿರ್ದ್‍ದ ಕಂಬುಲದ ಚಿತ್ರೀಕರಣವು ಮುಕ್ತಾಯದ ಹಂತದಲ್ಲಿದೆ ಎಂದು ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಹೇಳಿದರು.ಅವರು ಮಂಗಳೂರಿನ ಉರ್ವ ಮೈದಾನದಲ್ಲಿ ಬಿರ್ದ್‍ದ ಕಂಬುಲ ಚಿತ್ರೀಕರಣದ ಸಂದರ್ಭದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಸಿನೆಮಾವು ತುಳುನಾಡಿನ ಭಾಷೆ, ಸಂಸ್ಕೃತಿ ಮಾತ್ರವಲ್ಲದೆ ಇಡೀ ವಿಶ್ವದಲ್ಲಿ
ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಹೊಸ್ಮಠ ಬಲ್ಯದಲ್ಲಿರುವ ಕಾಡಿಗೆ ಮನ್ನಾ ಜಾಗಕ್ಕೆ ಬೇಲಿ ನಿರ್ಮಿಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಅಗಳು ನಿರ್ಮಾಣಕ್ಕೆ ಮುಂದಾದಾಗ ಇಲ್ಲಿನ ಇನ್ನೊಂದು ಗುಂಪು ಅದಕ್ಕೆ ತೀವೃ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು. ಶುಕ್ರವಾರ ಮಧ್ಯಾಹ್ನದ ಹೊತ್ತಿಗೆ ಪಂಚಾಯಿತಿಯವರು ಪಂಚಾಯಿತಿ ಅಧ್ಯಕ್ಷ ಮೋನಪ್ಪ ಗೌಡ(ಮೋಹನ ಗೌಡ) ಕೆರೆಕೋಡಿ ಅವರ ನೇತೃತ್ವದಲ್ಲಿ
ಸುಮಾರು ಮೂರು ಎಕ್ರೆ ಜಾಗ ಹೊಂದಿರುವ ನನ್ನ ವರ್ಗ ಜಾಗದಲ್ಲಿ ಕಾಮಗಾರಿ ಮಾಡಲು ನ್ಯಾಯಾಲಯದಿಂದ ಸ್ಟೇ ತಂದರೂ ಕೆಲವೊಂದು ವ್ಯಕ್ತಿಗಳು ಈ ಜಾಗದಲ್ಲಿ ಜೆಸಿಬಿಯಿಂದ ಅಗೆದು ತನ್ನ ಕೃಷಿ ಭೂಮಿಯನ್ನು ಹಾಳು ಮಾಡುತ್ತಿದ್ದಾರೆ. ಈ ಕುರಿತು ಮಹಿಳಾ ಆಯೋಗ, ಹಿಂದುಳಿದ ವರ್ಗಗಳ ಆಯೋಗ ಸಹಾಯವಾಣಿಯ ಮೂಲಕ ಹೋರಾಟ ಮುಂದುವರಿಸಲಾಗುವುದು ಎಂದು ಮುಂಡೂರು ಗ್ರಾಮದ ರವೀಂದ್ರ ಎಂ. ಮುಳಾರು ಮನೆ ಎಂಬವರು ತಿಳಿಸಿದ್ದಾರೆ. ಅವರು ಪುತ್ತೂರಿನ ಪ್ರೆಸ್‍ಕ್ಲಬ್‍ನಲ್ಲಿ
ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು,ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಎರಡು ದಿನಗಳಿಂದ ಜ್ವರ ,ತಲೆನೋವು ಎನ್ನುತ್ತಿದ್ದ ಅಶ್ವಿತ್ ನಾಳೆ ನಡೆಯಲಿರುವ ಶಾಲಾ ವಾರ್ಷಿಕೋತ್ಸವದ ಸ್ಕಿಟ್ ನಲ್ಲೂ ಭಾಗವಹಿಸಲು ತಯಾರಿ ನಡೆಸಿದ್ದನಂತೆ. ವಿದ್ಯಾರ್ಥಿಯ ಅಕಾಲಿಕ ಮರಣದಿಂದ ಶಾಲಾ ಆಡಳಿತ ಮಂಡಳಿ ,ಕುಟುಂಬ
ಕಡಬ: ಭಜನೆ ಮತ್ತು ಭಜಕರ ಹಾಗು ಹಿಂದೂ ಧರ್ಮದ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಿರಂತರ ಪೋಸ್ಟ್ಗಳನ್ನು ಹಾಕುತ್ತಿರುವ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ದ ಜಾಮೀನು ರಹಿತ ಪ್ರಕರಣ ದಾಖಲಾದರೂ ಆವರನ್ನು ಇನ್ನೂ ಪೊಲೀಸರು ಬಂಧಿಸಿಲ್ಲ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷದ್ ಭಜರಂಗದಳ ಕಡಬ ಪ್ರಖಂಡ ನೇತೃತ್ವದಲ್ಲಿ ಕಡಬ ಠಾಣಾ ಮುಂಭಾಗದ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಬಿಜೆಪಿ




























