Home Posts tagged #mangalore (Page 314)

ಹಿರಿಯ ಯಕ್ಷಗಾನ ಕಲಾವಿದ ಕಟ್ಟಣಿಗೆ ಸಂಜೀವ ಪ್ರಭು ನಿಧನ

ಮೂಡುಬಿದಿರೆ: ಹಿರಿಯ ಯಕ್ಷಗಾನ ಕಲಾವಿದ ಪ್ರಸಂಗಕರ್ತ ಇರುವೈಲು ಕಟ್ಟಣಿಗೆ ಸಂಜೀವ ಪ್ರಭು(83) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ. ಇರುವೈಲು ಮೇಳವನ್ನು ಯಶಸ್ವಿಯಾಗಿ ಮುನ್ನಡೆಸಿ, ಸೇವಾ ರೂಪದಲ್ಲಿ ಕಟೀಲು ಮತ್ತು ಸುರತ್ಕಲ್ ಮೇಳಗಳಲ್ಲಿ ಸೇವೆ ಸಲ್ಲಿಸಿದ್ದರು. ಇರುವೈಲು ಕ್ಷೇತ್ರ ಮಹಾತ್ಮೆ, ನಾಗಲಿಂಗೇಶ್ವರ ಮಹಿಮೆ, ರಕ್ತೇಶ್ವರಿ ಕಾರ್ಣಿಕ

ಜಾಂಬೂರಿಯಲ್ಲಿ ಜೀವನ್‍ರಾಂ ಸುಳ್ಯ ಅವರಿಂದ ರಂಗ ತರಬೇತಿ

ವಿದ್ಯಾಗಿರಿ ಮೂಡುಬಿದಿರೆಯಲ್ಲಿ ನಡೆಯುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ 2022 ಕಾರ್ಯಕ್ರಮದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ನಿರ್ದೇಶಕ ಜೀವನ್ ರಾಂ ಸುಳ್ಯ ಅವರ ಸಾರಥ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ 5 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ರಂಗ ತರಬೇತಿ ಶಿಬಿರ ಆಯೋಜಿಸಲಾಗುತ್ತಿದೆ. ಶ್ರೀಲಂಕಾ , ಕೊರಿಯಾ, ಸೇರಿದಂತೆ ದೇಶ ವಿದೇಶಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ರಂಗ ವ್ಯಾಯಾಮ, ಗೀತಾಭಿನಯ , ರಂಗ ಚಾಲನೆ ,

ಜಲೀಲ್ ಹತ್ಯೆ ಪ್ರಕರಣ: ಆರೋಪಿಗಳ ಪತ್ತೆಗಾಗಿ 8ಅಧಿಕಾರಿಗಳ ತಂಡ ರಚನೆ

ಕಾಟಿಪಳ್ಳ ನಿವಾಸಿ ಜಲೀಲ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಪತ್ತೆಗೆ 8 ಅಧಿಕಾರಿಗಳಿರುವ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಹೇಳಿದ್ದಾರೆ. ಜಲೀಲ್ ಹತ್ಯೆಗೆ ಸಂಬಂಧಿಸಿ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ. ಹತ್ಯೆ ಮಾಡಿರುವ ನೈಜ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ. ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಕೊಡಬಾರದು ಎಂದು ಹೇಳಿದರು. ಜಲೀಲ್

ಕರಾವಳಿಯಾದ್ಯಂತ ಕ್ರಿಸ್ಮಸ್ ಹಬ್ಬದ ಸಂಭ್ರಮ, ಸಡಗರ

ಕರಾವಳಿಯಾದ್ಯಂತ ಕ್ರಿಸ್ಮಸ್ ಹಬ್ಬದ ಸಡಗರ ಸಂಭ್ರಮ ಮನೆಮಾಡಿದೆ. ನಗರದ ಪ್ರಮುಖ ಚರ್ಚ್‌ಗಳಲ್ಲಿ ಹಬ್ಬದ ಪ್ರಯುಕ್ತ ಬಲಿಪೂಜೆ ನಡೆಯಿತು.  ದೀಪಾಲಂಕಾರಗೊಂಡ ಚರ್ಚ್‌ಗಳು ಮನೆಮನೆಯಲ್ಲಿ ನಕ್ಷತ್ರಗಳು, ಪ್ರಾರ್ಥನಾ ಮಂದಿರ, ಮನೆ ಮುಂಭಾಗ ಆಕರ್ಷಣೀಯ ಗೋದಲಿಗಳು, ಕ್ರಿಸ್ಮಸ್ ಟ್ರಿ, ಅದರಲ್ಲೂ ಕತ್ತಲಾಗುತ್ತಿದ್ದಂತೆ ಝಗಮಗಿಸುವ ಬೆಳಕಿನ ಮಧ್ಯೆ ಕ್ರಿಸ್ಮಸ್ ವೈಭವವನ್ನು ಕಣ್ತುಂಬಿಕೊಳ್ಳುವುದೇ ಎಲ್ಲಿಲ್ಲದ ಸಂಭ್ರಮ. ಶನಿವಾರ ಸಂಜೆ 7ರಿಂದ ನಗರದ ಮಿಲಾಗ್ರಿಸ್,

ಗ್ರಾಮೀಣ ಭಾಗದಲ್ಲಿ ಚರ್ಚ್ ಫಾದರ್ ನೇತೃತ್ವದಲ್ಲಿ ಗ್ರಾಮದ ಮನೆಗಳಿಗೆ ಭೇಟಿ

ಕ್ರಿಸ್ ಮಸ್ ಏಸುಕ್ರಿಸ್ತನ ಜನ್ಮದಿನ. ಪ್ರಪಂಚದಾದ್ಯಂತ ಕ್ರೈಸ್ತರು ಈ ಹಬ್ಬವನ್ನ ಸಂಭ್ರಮ ಸಡಗರದಿಂದ ಆಚರಿಸ್ತಾರೆ. ಅದ್ರಲ್ಲೂ ಕರಾವಳಿಯಲ್ಲಿ ಕ್ರಿಸ್ ಮಸ್ ಹಬ್ಬ ಅಂದ್ರೆ ಮತ್ತಷ್ಟು ವಿಭಿನ್ನ. ಮಂಗಳೂರಿನ ಗ್ರಾಮೀಣ ಭಾಗಗಳಲ್ಲಿ ಕ್ರಿಸ್ ಮಸ್ ಹಬ್ಬದ ತಯಾರಿ ಸಂದೇಶ ಹೇಗಿರುತ್ತೆ ಅಂತಾ ತಿಳ್ಕೋಬೇಕಾ. ಹಾಗಾದ್ರೆ ಈ ಸ್ಟೋರಿ ನೋಡಿ. ನಕ್ಷತ್ರಗಳಿಂದ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಶೃಂಗಾರಗೊಂಡ ಮನೆಗಳು. ಎಲ್ಲರ ಮುಖದಲ್ಲೂ ಹಬ್ಬದ ಸಂಭ್ರಮದ ಕಳೆ. ಗ್ರಾಮದ ಚರ್ಚ್

ಉಡುಪಿಯ ಮಲಬಾರ್‍ಗೋಲ್ಡ್ & ಡೈಮಂಡ್ಸ್ ಮಳಿಗೆ ವಿಶಿಷ್ಟವಾಗಿ ರಾಷ್ಟ್ರೀಯ ರೈತ ದಿನ ಆಚರಣೆ

ಉಡುಪಿಯ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಮಳಿಗೆಯಲ್ಲಿ ರಾಷ್ಟ್ರೀಯ ರೈತ ದಿನ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡರು. ರಾಷ್ಟ್ರೀಯ ರೈತರ ದಿನ ಅಂಗವಾಗಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ರೈತರಾದ ರಾಮ ಕೃಷ್ಣ ಶರ್ಮ ಬಂಟಕಲ್,ರಘುಪತಿ ರಾವ್ ಮಾವಿನಕಾಡು,ಸತೀಶ್ ಹೆಗ್ಡೆ ಅಮಾಸೆಬೈಲ್, ಹಾಜಿ ಅಲಿಯಬ್ಬ ಉಚ್ಚಿಲ,ಪ್ರೇಮ ಪೂಜಾರಿ ಕುಂಭಾಷಿ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಬಂದ ಉಡುಪಿ ತಾಲೂಕು ಕೃಷಿ ಇಲಾಖೆ ಉಪ ನಿರ್ದೇಶಕರಾದ ಮೋಹನ್

ಪಿಜಿ, ಹಾಸ್ಟೆಲ್, ಹೋಮ್ ಸ್ಟೇಗಳಿಗೆ ಕಟ್ಟುನಿಟ್ಟಿನ ನಿಯಮ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪಿಜಿ, ಹಾಸ್ಟೆಲ್, ಹೋಮ್ ಸ್ಟೇ  ಇತ್ಯಾದಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ ಮಂಗಳೂರು ನಗರದ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಹಾಸ್ಟೆಲ್, ಹೋಂಸ್ಟೇ, ಪೇಯಿಂಗ್ ಗೆಸ್ಟ್, ಸರ್ವಿಸ್ ಅಪಾರ್ಟ್‌ಮೆಂಟ್, ವಾಣಿಜ್ಯ ಉದ್ದೇಶದ ಗೆಸ್ಟ್ ಹೌಸ್, ಶಿಕ್ಷಣ ಸಂಸ್ಥೆಗಳು ನಡೆಸುತ್ತಿರುವ ವಸತಿ ಗೃಹಗಳ ಮಾಲಕರು/ಪಾಲುದಾರರು, ಆಡಳಿತ ಮಂಡಳಿಯ ಮುಖ್ಯಸ್ಥರು ಸಂಬಂಧಿಸಿದ

ಮೂಡುಬಿದರೆ: ಕೋಟಿ-ಚೆನ್ನಯ” ಜೋಡುಕರೆ ಕಂಬಳಕ್ಕೆ ಚಾಲನೆ, ಶೂನ್ಯ ತ್ಯಾಜ್ಯದತ್ತ ಗಮನವಿರಿಸಿ ನಡೆಯುತ್ತಿರುವ ಕಂಬಳ

ಮೂಡುಬಿದಿರೆ: ಹಲವು ವಿಶೇಷಗಳಿಗೆ ಮುನ್ನುಡಿ ಬರೆಯಲಿರುವ, ಶೂನ್ಯತ್ಯಾಜ್ಯದತ್ತ ಗಮನವಿರಿಸಿಕೊಂಡು ಶಾಸಕ ಉಮಾನಾಥ ಕೋಟ್ಯಾನ್ ಅವರ ನೇತೃತ್ವದಲ್ಲಿ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮ, ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯಲಿರುವ 20ನೇ ವರ್ಷದ ಮೂಡುಬಿದಿರೆಯ ಪ್ರತಿಷ್ಠಿತ ಹೊನಲು ಬೆಳಕಿನ ” ಕೋಟಿ-ಚೆನ್ನಯ” ಜೋಡುಕರೆ ಕಂಬಳವು ಶನಿವಾರ ಬೆಳಿಗ್ಗೆ ಆರಂಭಗೊಂಡಿತು.ಚೌಟರ ಅರಮನೆಯ ಕುಲದೀಪ್ ಎಂ ಅವರು ಮುಹೂರ್ತವನ್ನು ನಡೆಸಿಕೊಟ್ಟು,

ತೋಡಾರು ದೈವಸ್ಥಾನಕ್ಕೆ ಅಪೂರ್ವ ಕೆತ್ತನೆಯ ಪುಷ್ಪ ದಂಡಿಗೆ ಸಮರ್ಪಣೆ

ಮೂಡುಬಿದಿರೆ : ದೈವಗಳಿಗೆ ಹಾಕಿದ ಹೂವಿನ ಹಾರಗಳನ್ನು ಸಂಗ್ರಹಿಸಿ ಇಡಲು ಅಪೂರ್ವ ಕೆತ್ತನೆಯ ” ಪುಷ್ಪ ದಂಡಿಗೆ ” ಯನ್ನು ತೋಡಾರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಮೂಡುಬಿದಿರೆ ಘಟಕದ ಸಂಚಾಲಕ ಕಾರಮೊಗರು ಗುತ್ತು ಪ್ರೇಮನಾಥ ಮಾರ್ಲರು ಶುಕ್ರವಾರ ಸೇವಾರೂಪವಾಗಿ ಸಮರ್ಪಿಸಿದರು. ಮೂಡುಬಿದಿರೆ ದೇವಕೀ ಲಕ್ಷ್ಮಿ ಮಿಲ್ ನ ಮಾಲಕರಾಗಿರುವ ಪ್ರೇಮನಾಥ ಮಾರ್ಲ ಅವರು ತಮ್ಮದೇ ಮಿಲ್ ನಲ್ಲಿ ನಿರ್ಮಿಸಿರುವ ಈ ಪುಷ್ಪ ದಂಡಿಗೆಯು

ಜಾಂಬೂರಿಯಲ್ಲಿ ಸೌತ್ ಕೊರಿಯಾವನ್ನು ಪ್ರತಿನಿಧಿಸಿದ ತಾಯಿ ಮಗ

ಕರ್ನಾಟಕದ ಮೂಡುಬಿದಿರೆಯ ಆಳ್ವಾಸ್ ಕ್ಯಾಂಪಸ್‍ನಲ್ಲಿ ನಡೆಯುತ್ತಿರುವ ಸ್ಕೌಟ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯನ್ನು ಸೌತ್ ಕೊರಿಯಾದಿಂದ ತಾಯಿ ಮಗ ಪ್ರತಿನಿಧಿಸಿದ್ದಾರೆ.ಒಟ್ಟು 7 ಜನ ಪ್ರತಿನಿಧಿಗಳು 2 ತಿಂಗಳ ಹಿಂದೆಯೇ ಕರ್ನಾಟಕಕ್ಕೆ ಬಂದಿರುವುದಾಗಿ ತಿಳಿಸಿದ ಚಾ ಸಾಂಗೋಕ್, ಇಲ್ಲಿ ನಡೆಯುತ್ತಿರುವ ಸ್ಕೌಟ್ಸ್ ಗೈಡ್ಸ್ ನ ಕಾರ್ಯಕ್ರಮ ಉತ್ತಮವಾಗಿ ನಡೆಯುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸಿಗೆ ಹಿತವನ್ನು ನೀಡಿದೆ. ಊಟೋಪಚಾರದ