Home Posts tagged #mangalore (Page 334)

ರಾಜ್ಯಮಟ್ಟದ ವಿಶ್ವಕರ್ಮ ಕಾಷ್ಠಶಿಲ್ಪ ಸಭಾ ದಶಮಾನೋತ್ಸವ ಆಚರಣೆ

ಬೆಂಗಳೂರು; ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕೌಶಲ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದು, ಈ ಯೋಜನೆಯಡಿ ಇರುವ ಉಜ್ವಲ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಅರಿವು ಮೂಡಿಸಲು ನವೆಂಬರ್ 6 ರಂದು ಯಲಹಂಕದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ವಿಶ್ವಕರ್ಮ ಕಾಷ್ಠಶಿಲ್ಪ ಸಭಾ ದಶಮಾನೋತ್ಸವ ಸಮಾರಂಭ ಆಯೋಜಿಸಲಾಗಿದೆ ಎಂದು ವಿಶ್ವ ಕರ್ಮ ಕಾಷ್ಠಶಿಲ್ಪ

ಕಟೀಲು ಯಕ್ಷಗಾನದ ಕಾಲಮಿತಿ ಹಿಂಪಡೆಯುವಂತೆ ಆಗ್ರಹಿಸಿ ಪಾದಯಾತ್ರೆ

ಮಂಗಳೂರು: ಕಟೀಲು ಯಕ್ಷಗಾನ ಮೇಳಗಳ ಪ್ರದರ್ಶನ ವನ್ನು ಕಾಲಮಿತಿಗೊಳಪಡಿಸುವ ನಿರ್ಧಾರವನ್ನು ಹಿಂಪಡೆಯಬೇಕು, ಯಕ್ಷಗಾನ ಪರಂಪರೆಯಂತೆ ರಾತ್ರಿ ಯಿಂದ ಬೆಳಗ್ಗಿನವರೆಗೆ ಯಕ್ಷಗಾನ ಪ್ರದರ್ಶನಗೊಳ್ಳಬೇಕು ಎಂದು ಆಗ್ರಹಿಸಿ ಶ್ರೀ ಕಟೀಲು ಮೇಳದ ಯಕ್ಷಗಾನ ಸೇವಾ ಸಮಿತಿಗಳು ಮತ್ತು ಖಾಯಂ ಸೇವಾದಾರರ ಒಕ್ಕೂಟವಾದ ಶ್ರೀ ಕಟೀಲು ಯಕ್ಷಸೇವಾ ಸಮನ್ವಯ ಸಮಿತಿ ದಕ್ಷಿಣ ಕನ್ನಡ ಮತ್ತು ಉಡುಪಿ ವತಿಯಿಂದ ನ. 6ರಂದು ಬೆಳಗ್ಗೆ 8.30ರಿಂದ ಬಜಪೆ ಶ್ರೀ ಶಾರದಾ ಶಕ್ತಿ ಮಂಟಪದಿಂದ ಶ್ರೀ ಕ್ಷೇತ್ರ

ನ 5 ರಂದು ಮುಕುಂದ್ ಎಂಜಿಎಂ ರಿಯಾಲ್ಟಿಯ ‘ಕೇದಾರ’ ಐಷಾರಾಮಿ ಅಪಾರ್ಟ್‌ಮೆಂಟ್ ಗೆ ಶಂಕುಸ್ಥಾಪನೆ KEDAR APARTMENT

ಮಂಗಳೂರಿನಲ್ಲಿ ಐಶಾರಾಮಿಯಾದ ಹಾಗೂ ಕೈಗೆಟುಕುವ ರೀತಿಯಲ್ಲಿ ಮನೆಗಳನ್ನು ನಿರ್ಮಿಸುತ್ತಿರುವ ಸಂಸ್ಥೆ ಮುಕುಂದ್ ಎಂಜಿಎಂ ರಿಯಾಲ್ಟಿ ಇದೀಗ ನಗರದ ಜನತೆಗೆ ಎಲ್ಲಾ ಸೌಕರ್ಯಗಳನ್ನೊಳಗೊಂಡ ಅಪಾರ್ಟ್‍ಮೆಂಟ್ ಕೇದಾರ್-ಹೈ ಲಿವಿಂಗ್ ಲಕ್ಶುರಿ ಹೋಮ್ಸ್ ಎಂಬ ವಸತಿ ಸಮುಚ್ಚಕ್ಕೆ ನವೆಂಬರ್ 5ರಂದು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಮುಕುಂದ್ ಎಂಜಿಎಂ ರಿಯಾಲ್ಟಿ ಸಂಸ್ಥೆ ಮಂಗಳೂರಿನ ಜನತೆಯ ಅವಶ್ಯಕತೆಯನ್ನು ಮನಗೊಂಡು ಆಧುನಿಕ ಸೌಲಭ್ಯಗಳನ್ನೊಳಗೊಂಡ 2BHK ಮನೆಯನ್ನು ರೂ. 5

ಹರೇಕಳ ಹಾಜಬ್ಬ ಅವರ ದಶಕದ ಕನಸು ನನಸು

ಮಂಗಳೂರು: ಅಕ್ಷರಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ ದಶಕದ ಕನಸಾಗಿದ್ದ ಪದವಿ ಪೂರ್ವ ಕಾಲೇಜು ಮಂಜೂರಾಗಿದೆ. ಹರೇಕಳದ ನ್ಯೂಪಡ್ಪಿವಿಗೆ ಕಷ್ಟಪಟ್ಟು ಸರಕಾರಿ ಶಾಲೆ ಪಡೆಯುವಲ್ಲಿ ಯಶಸ್ವಿಯಾಗಿದ್ದ ಅವರು ಬಳಿಕ ನಿರಂತರ ಪ್ರಯತ್ನದಿಂದ ಪ್ರೌಢಶಾಲೆ ವರೆಗೆ ಗಳಿಸಿದ್ದರು. ಹಾಜಬ್ಬ ಅನಕ್ಷರಸ್ಥರಾಗಿದ್ದರೂ ತನ್ನೂರಿನ ಎಲ್ಲ ಮಕ್ಕಳೂ ಅಕ್ಷರಸ್ಥರಾಗಿರಬೇಕು ಎಂಬ ಕನಸು ಕಂಡವರು. ಮಂಗಳೂರಿನ ಹಂಪನಕಟ್ಟೆ ಬಳಿ ಬುಟ್ಟಿ ಯಲ್ಲಿ ಕಿತ್ತಳೆ ಹಣ್ಣುಗಳ ಮಾರಾಟ ಮಾಡುತ್ತಿದ್ದ

ಅರಬರ ನಾಡಿನಲ್ಲಿ ಅದ್ಧೂರಿಯ ಕರ್ನಾಟಕ ರಾಜ್ಯೋತ್ಸವ

ಅಬುಧಾಬಿ : ನಾಲ್ಕು ದಶಕಗಳಿಗಿಂತಲೂ ಹೆಚ್ಚಿನ ಶ್ರೀಮಂತ ಇತಿಹಾಸ ಇರುವ ಅಬುಧಾಬಿಯ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕರ್ನಾಟಕ ಸಂಘವು ಇದೀಗ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ರೂಪುರೇಷೆಗಳನ್ನು ಹಾಕಿಕೊಂಡಿದ್ದು ಕಾರ್ಯಕ್ರಮವು ಇದೆ ನವೆಂಬರ್ ತಿಂಗಳ 6ನೇ ತಾರೀಖಿನಂದು ಅಪರಾಹ್ನ 3:30 ಘಂಟೆಗೆ ಸರಿಯಾಗಿ ಅಬುಧಾಬಿಯ ಇಂಡಿಯನ್ ಸೋಶಿಯಲ್ ಆಂಡ್ ಕಲ್ಚರಲ್ ಸೆಂಟರ್ ನಲ್ಲಿ ಜರುಗಲಿದೆ. ಮೂರು ಬಾರಿ ಯಶಸ್ವಿಯಾಗಿ ವಿಶ್ವ ಕನ್ನಡ

ಕಿನ್ನಿಗೋಳಿ : ಮಹಿಳೆಗೆ ಕಾರು ಡಿಕ್ಕಿ,ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿದ ಕಾರು ಮಹಿಳೆಗೆ ಡಿಕ್ಕಿಯಾಗಿ, ಮಹಿಳೆ ಸಹಿತ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡ ಘಟನೆ ಕಿನ್ನಿಗೋಳಿ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಎಂಸಿಸಿ ಬ್ಯಾಂಕ್ ಬಳಿ ನಡೆದಿದೆ. ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಪಕ್ಷಿಕೆರೆ ಕೆಮ್ರಾಲ್ ನಿವಾಸಿ ಜಯಂತಿ ಶೆಟ್ಟಿ (50) ಗಾಯಗೊಂಡ ಮಹಿಳೆ. ಉಳಿದಂತೆ ಕಾರಿನಲ್ಲಿದ್ದ ಚಾಲಕ ತೋಡಾರ್ ಗಳಾದ ನಿವಾಸಿ ಚಾಲಕ ಕೆ ಹೆಚ್ ಅಬ್ದುಲ್ ಖಾದರ್ (65), ರಿದಾ (16), ರಶ್ಮಿ (18), ಕೌಸರ್ (46), ಎಂದು

ಚರ್ಚ್ ಸಭಾಂಗಣ ಉದ್ಘಾಟಿಸಿದ ಭಟ್ರು !ತೊಕ್ಕೋಟ್ಟಿನಲ್ಲೊಂದು ಸೌಹಾರ್ದ ಕಾರ್ಯಕ್ರಮ

ತೊಕ್ಕೋಟು ಪೆರ್ಮನ್ನೂರಿನ ಸಂತ ಸೆಬಾಸ್ತಿಯನ್ನರ ಇಗರ್ಜಿ ಬಳಿಯಲ್ಲಿ ಸಂತ ಸೆಬಾಸ್ತಿಯನ್ ಅಡಿಟೋರಿಯಂ ಹೆಸರಿನ ಸುಸಜ್ಜಿತವಾದ ಮದುವೆ ಸಮಾರಂಭಕ್ಕೆ ಯೋಗ್ಯವಾದ ಸಭಾಂಗಣ ವೊಂದು ಉದ್ಘಾಟನೆ ಗೊಂಡಿತು. ಸರ್ವ ಧರ್ಮ ಸಮನ್ವಯತೆಯ ಸಂದೇಶ ಸಾರುವ ರೀತಿಯಲ್ಲಿ ಈ ಸಮಾರಂಭ ಏರ್ಪಟ್ಟಿತ್ತು. ಹಿಂದೂ ಮುಸ್ಲಿಂ ಕ್ರೈಸ್ತ ಸಮುದಾಯದ ಬಾಂಧವರು ವೇದಿಕೆಯಲ್ಲಿ ಆಸನ ಅಲಂಕರಿಸಿದ್ದರು. ಈ ವೇದಿಕೆಯಲ್ಲಿದ್ದವರೆಲ್ಲರೂ ಗಣ್ಯರೇ. ಆ ಪೈಕಿ ಸಭಾಂಗಣವನ್ನು ಉದ್ಘಾಟಿಸಿದ ಡಾ|| ಯು.ಸಿ.

ಉಚಿತವಾಗಿ ಗಂಧದ ಗುಡಿ ಸಿನಿಮಾ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಮೂಲ್ಕಿ

ಕರ್ನಾಟಕ ರಾಜ್ಯೋತ್ಸವದ ಸಂಭ್ರಮದ ಪ್ರಯುಕ್ತ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅಭಿನಯದ ಗಂಧದ ಗುಡಿ ಚಿತ್ರ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಲಾಗಿತ್ತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರು ಕನ್ನಡ ರಾಜ್ಯೋತ್ಸವ ದಿನದಂದು, ಗಂಧದ ಗುಡಿ ಫಿಲ್ಮ್ ಅನ್ನು ಸಿನಿ ಪ್ರೇಕ್ಷಕರಿಗೆ ವೀಕ್ಷಣೆಗೆ ಅವಕಾಶ ಮಾಡುವ ಮೂಲಕ ಅಪ್ಪು ಅಭಿಮಾನವನ್ನು ಈ ಮೂಲಕ ತೋರ್ಪಡಿಸಿದ್ದಾರೆ. ಅಪ್ಪು ಅಭಿ, ವೀರಕನ್ನಡಿಗನಾಗಿ ಅಭಿಮಾನಿಗಳ ಹೃಯದಲ್ಲಿ ಅಜರಾಮರಾಗಿರುವ

ಬಂಡೀಪುರ : ಜಿಂಕೆ ಮಾಂಸ ಸಹಿತ ಓರ್ವ ಆರೋಪಿಯ ಬಂಧನ

ಗುಂಡ್ಲುಪೇಟೆ ತಾಲೂೀಕಿನ ಬಂಡೀಪುರ ಹುಲಿ ಪ್ರದೇಶದ ಮದ್ದೂರು ವಲಯದ ನೇರಳೆ ಮರದ ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಹೊತ್ತುಕೊಂಡು ಬರುತ್ತಿದ್ದ ವೇಳೆ ಅರಣ್ಯಾಧಿಕಾರಿಗಳಿ ದಾಳಿ ಮಾಡಿ ಓರ್ವನನ್ನು ಬಂಧಿಸಿರುವ ಘಟನೆ ನಡೆದಿದೆ. ಮದ್ದೂರು ಕಾಲೋನಿಯ ಷಣ್ಮುಖ(35) ಬಂಧಿತ ಆರೋಪಿ. ಉಳಿದ ನಾಲ್ಕು ಮಂದಿ ಪರಾರಿಯಾಗಿದ್ದಾರೆ. ಮದ್ದೂರು ವಲಯದ ನೇರಳೆ ಮರದ ಅರಣ್ಯ ಪ್ರದೇಶದ ಉಪ ವಲಯ ಅರಣ್ಯಾಧಿಕಾರಿ ರವಿಕುಮಾರ್ ಸಗೂರು , ಅರಣ್ಯ ರಕ್ಷಕ ನವೀನ ಹಾಗೂ ಸಿಬ್ಬಂದಿ

ಸುರತ್ಕಲ್ ಟೋಲ್ ಗೇಟ್ : 5ನೇ ದಿನಕ್ಕೆ ಕಾಲಿಟ್ಟ ಧರಣಿ

ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿರುದ್ಧ ಅನಿರ್ಧಿಷ್ಟಾವಧಿ ಧರಣಿಯ 5ನೇ ದಿನಕ್ಕೆ ಕಾಲಿಟ್ಟಿದ್ದು, ಟೋಲ್ ತೆರವು ಹೋರಾಟಕ್ಕೆ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗಿದೆ. ಎರಡು ಜಿಲ್ಲೆಯ ಹಲವು ತಾಲೂಕುಗಳ ವಿವಿಧ ಸಂಘಟನೆಗಳ ಪ್ರಮುಖರು ಇಂದಿನ ಧರಣಿಯಲ್ಲಿ ಬೆಳಗ್ಗಿನಿಂದ ಪಾಲ್ಗೊಂಡಿದ್ದಾರೆ. ಹೋರಾಟ ಸಮಿತಿಗೆ ಇದರಿಂದ ಮತ್ತಷ್ಟು ಹುಮ್ಮಸು ದೊರಕಿದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ಹೇಳಿದರು. ಮತ್ತೊಂದೆಡೆ ಒಂದು ವಾರದಿಂದ