Home Posts tagged #mangalore (Page 34)

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಹುಟ್ಟುಹಬ್ಬದ ಪ್ರಯುಕ್ತ ಸುಳ್ಯ ಶ್ರೀ ಚನ್ನಕೇಶವ ಸ್ವಾಮಿ ದೇವರಿಗೆ ವಿಶೇಷ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಖಾವಂದರ ಹುಟ್ಟುಹಬ್ಬದ ಶುಭ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಸುಳ್ಯ ಶ್ರೀ ಚನ್ನಕೇಶವ ಸ್ವಾಮಿ ದೇವರಿಗೆ ವಿಶೇಷ ಅಲಂಕಾರ ಪೂಜೆ ಹಾಗೂ ಮಹಾಪೂಜೆ ಮತ್ತು ವಿಶೇಷ ಪ್ರಾರ್ಥನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿಗಳ ಬಳಗ ಸುಳ್ಯ ವತಿಯಿಂದ ಮಾಡಲಾಯಿತು.ವಿಶೇಷ ಸಭಾ ಕಾರ್ಯಕ್ರಮವನ್ನು ಮಾಡಿದ್ದು ಇತರ

“Nitte Nexus 2025” ಜಾಗತಿಕ ಹಳೆಯ ವಿದ್ಯಾರ್ಥಿಗಳ ಸಮಾವೇಶ

WENAMITAA (NMAMIT ಹಳೆಯ ವಿದ್ಯಾರ್ಥಿಗಳ ಸಂಘ) ಮತ್ತು Nitte Mahalinga Adyanthaya Memorial Institute of Technology (NMAMIT), ನಿಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಜಾಗತಿಕ ಹಳೆಯ ವಿದ್ಯಾರ್ಥಿ ಸಮಾವೇಶ – “Nitte Nexus 2025” ಅನ್ನು ಡಿಸೆಂಬರ್ 20, 2025, ಸಂಜೆ 4 ಗಂಟೆಯಿಂದ, ಮುಲ್ಕಿಯ ಸುಂದರ ರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್­ನಲ್ಲಿ ಆಯೋಜಿಸಲಾಗಿದೆ. 1986ರಲ್ಲಿ ಸ್ಥಾಪಿತವಾದ NMAMIT ತನ್ನ 40 ವರ್ಷಗಳ ಸೇವೆ ಮತ್ತು ಶ್ರೇಷ್ಠತೆಗೆ

ಕೆವಿಜಿ ಆಯುರ್ವೇದ ಕಾಲೇಜ್ ವಾರ್ಷಿಕೋತ್ಸವ ಸಮಾರಂಭ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ನವೆಂಬರ್ 23 ರಂದು ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ, ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಇವರು ದೀಪ ಬೆಳಗಿಸಿ ಉದ್ಘಾಟಿಸಿ, ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ, ವೈದ್ಯ ಹಾಗೂ ರೋಗಿಯ ನಡುವಿನ ಸಂಬಂಧ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನದ

ಕಡಬ ತಾಲೂಕಿನಲ್ಲಿ ಪೂಜ್ಯ ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಪ್ರಯುಕ್ತ ಸಾಮಾಜಿಕ ಸೇವಾ ಕಾರ್ಯಕ್ರಮ

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಜನ್ಮದಿನದ ಪ್ರಯುಕ್ತ ಕಡಬ ತಾಲೂಕಿನಾದ್ಯಂತ ವಿವಿಧ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭ ಕಡಬ ತಾಲೂಕಿನ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ವರ್ಗ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ವತಿಯಿಂದ ಕಡಬ ಪಟ್ಟಣದ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ವಿಶೇಷ

ಸಂವಿಧಾನ ಪೀಠಿಕೆಯ ತುಳು ಓದು

ಮಂಗಳೂರು :ಭಾರತ ಸಂವಿಧಾನದ ಪೀಠಿಕೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭಾಷೆಗೆ ಭಾಷಾಂತರಿಸಿ ಪಠ್ಯದ ಫಲಕ ಬಿಡುಗಡೆ ಮಾಡಿದೆ.ನವೆಂಬರ್ 26ರ ಸಂವಿಧಾನ ದಿನ ಕಾರ್ಯಕ್ರಮದ ಬಳಿಕ ಮಂಗಳೂರಿನ ವಿವಿಧ ಕೇಂದ್ರಗಳಲ್ಲಿ ಸಂವಿಧಾನ ಪೀಠಿಕೆಯನ್ನು ತುಳುವಿನಲ್ಲಿ ಓದುವ ಅಭಿಯಾನ ನಡೆಯಲಿದೆ.ಸಂವಿಧಾನದ ಉದಾತ್ತ ಮೌಲ್ಯವನ್ನು ಪ್ರಾದೇಶಿಕ ಭಾಷೆಯ ಮೂಲಕ ತಳಮಟ್ಟದಲ್ಲಿ ಪಸರಿಸುವ ಆಶಯ ಹಾಗೂ ಪ್ರಾದೇಶಿಕ ಭಾಷೆಗಳ ಮೂಲಕ ಸಂವಿಧಾನದ ಸಮಗ್ರತೆಯನ್ನು ಅರ್ಥೈಸಿಕೊಳ್ಳುವ

ಎಲ್ಲೆಂದರಲ್ಲಿ ಕಸ ಬೀಸಾಡುವವರೇ ಜೋಕೆ..! :ಮೂಡುಬಿದಿರೆ ಪುರಸಭೆಯಿಂದ ಬೀಳುತ್ತೆ ರೂ. 10,000 ದಂಡ

ಮೂಡುಬಿದಿರೆ : ಪುರಸಭಾ ವ್ಯಾಪ್ತಿಯ ಸಾವ೯ಜನಿಕ ಸ್ಥಳಗಳಲ್ಲಿ, ಖಾಲಿ ಸೈಟ್ಟ್ ನಲ್ಲಿ, ರಸ್ತೆ ಬದಿಗಳಲ್ಲಿ, ತೋಡಿನಲ್ಲಿ ಹೀಗೆ ಎಲ್ಲೆಂದರಲ್ಲಿ ಕಸ ಬಿಸಾಡುವವರೇ ಜೋಕೆ.. ನಿಮಗೆ ಪುರಸಭೆಯಿಂದ ಬೀಳುತ್ತೆ 10,000 ದಂಡ. ಮೂಡುಬಿದಿರೆ ಪುರಸಭೆಯು ಸಮಪ೯ಕ ತ್ಯಾಜ್ಯ ನಿವ೯ಹಣೆಯ ಬಗ್ಗೆ ಕಳೆದ ಹಲವು ವರುಷಗಳಿಂದ ಶ್ರಮ ವಹಿಸುತ್ತಾ ಬರುತ್ತಿದೆ. ಮನೆಗಳಲ್ಲಿ, ಉದ್ಯಮದಲ್ಲಿ, ವ್ಯಾಪಾರದಲ್ಲಿ, ವಸತಿ ಸಮುಚ್ಛಯಗಳಲ್ಲಿ ಉತ್ಪಾದನೆಯಾಗುವ ಘನ ತ್ಯಾಜ್ಯವನ್ನು ಕಡ್ಡಾಯವಾಗಿ

ಪುತ್ತೂರು: ಅನಾರೋಗ್ಯ ಪೀಡಿತ ಯುವತಿ ಆತ್ಮಹತ್ಯೆ

ಪುತ್ತೂರು: ತಲೆನೋವು, ನರದೋಷ ಮತ್ತಿತರ ಸಮಸ್ಯೆಯಿಂದ ಬಳಲುತ್ತಿದ್ದು ಮಾನಸಿಕವಾಗಿ ಜರ್ಝರಿತಗೊಂಡಿದ್ದ ಯುವತಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.23ರಂದು ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಪೊಯ್ಯೊಲೆ ಎಂಬಲ್ಲಿ ನಡೆದಿದೆ. ಗುಡ್ಡಪ್ಪ ರೈ ಎಂಬವರ ಪುತ್ರಿ ನೀತಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈ ಬಗ್ಗೆ ಮೃತಳ ಅಕ್ಕ ಗೀತಾ ಪಿ. ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು: ನ.26ರಂದು ಮಾಧ್ಯಮ ಪ್ರತಿನಿಧಿಗಳು ಹಾಗೂ ಅವರ ಕುಟುಂಬದವರಿಗೆ ಜೈ ತುಳು ಸಿನಿಮಾದ ಸ್ಪೆಷಲ್ ಶೋ

ಪುತ್ತೂರಿನಲ್ಲಿ ನವೆಂಬರ್ 26ರಂದು ಬುಧವಾರ ಮಧ್ಯಾಹ್ನ 1 ಗಂಟೆ 15 ನಿಮಿಷಕ್ಕೆ `ಜೈ’ ತುಳು ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ. ಈ ವಿಶೇಷ ಶೋಗೆ MG Motors Mangalore ಪ್ರಾಯೋಜಕತ್ವ ನೀಡಿದ್ದು, ಕಾರ್ಯಕ್ರಮದ ಎಲ್ಲಾ ವ್ಯವಸ್ಥೆಯನ್ನು ಜೈ ಚಿತ್ರತಂಡವೇ ನಿರ್ವಹಿಸುತ್ತಿದೆ. ಬಂಟ್ವಾಳ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ಮತ್ತು ಮಡಿಕೇರಿ ಸೇರಿದಂತೆ ಹಲವಾರು ಪ್ರದೇಶಗಳಿಂದ ಆಗಮಿಸುವ ಮಾಧ್ಯಮ ಮತ್ತು ಪತ್ರಿಕಾ ಸ್ನೇಹಿತರಿಗಾಗಿ ಮಾತ್ರ ಈ

ಬಟ್ಟೆ ತೊಳೆಯಲು ತೆರಳಿದ ದಂಪತಿ ಹೇಮಾವತಿ ನಾಲೆಯಲ್ಲಿ ಬಿದ್ದು ಸಾವಿಗೀಡಾದ ದುರ್ಘಟನೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನ. 23ರಂದು ಸಂಭವಿಸಿದ ದಾರುಣ ಘಟನೆ ಗ್ರಾಮಸ್ಥರನ್ನು ಕಣ್ಣೀರಲ್ಲಿಟ್ಟುಬಿಟ್ಟಿದೆ. ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ದಂಪತಿ ದುರಂತವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬಟ್ಟೆ ತೊಳೆಯುವ ಸಂದರ್ಭ ದೀಪು ಕಾಲು ಜಾರಿಬಿದ್ದು ನಾಲೆಗೆ ಬಿದ್ದಾಳೆ. ತಕ್ಷಣವೇ ಪತ್ನಿಯನ್ನು ರಕ್ಷಿಸಲು ಗೋಪಾಲ್ ನಾಲೆಗೆ ಇಳಿದರೂ, ನಾಲೆಯಲ್ಲಿ ಹರಿಯುತ್ತಿದ್ದ ಭಾರೀ ಪ್ರಮಾಣದ ನೀರಿನ ಹರಿವು

ಪುತ್ತೂರು :ರಾಜಸ್ಥಾನದಲ್ಲಿ ನಡೆಯುವ ಹುಡುಗರ ಮತ್ತು ಹುಡುಗಿಯರ 49ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್ಶಿಪ್

ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ .ಬಾಲಕರ ಮತ್ತು ಬಾಲಕಿಯರ 49ನೇ ಜೂನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ 2025 ರ ಡಿಸೆಂಬರ್ 16 ರಿಂದ 21 ರವರೆಗೆ ರಾಜಸ್ಥಾನದ ಜುನ್ಜುನುವಿನ ಪಿಲಾನಿಯಲ್ಲಿ ನಡೆಯಲಿದೆ . ಕರ್ನಾಟಕ ರಾಜ್ಯ ವಾಲಿಬಾಲ್ ಅಸೋಸಿಯೇಷನ್ ಗೆ .ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ ಕಳುಹಿಸಿರುವ ಸುತ್ತೋಲೆ ಪ್ರಕಾರ ದಿನಾಂಕ: 27ನೇ ಮತ್ತು 28 ನವೆಂಬರ್ 2025 ರಂದು ಬೆಳಗ್ಗೆ 9 ಗಂಟೆಗೆ ಭಾರತೀಯ ಕ್ರೀಡಾ