Home Posts tagged #mangalore (Page 357)

ತಪ್ಪಿದರೆ ಸುನಿಲ್ ಪೇ ಪೋಸ್ಟರ್ ಬಿಡುಗಡೆ : ಕಾಂಗ್ರೆಸ್ ವಕ್ತಾರ ಶುಭದರಾವ್ ಎಚ್ಚರಿಕೆ

ವಿಪಕ್ಷ ನಾಯಕರಾದ ಸಿದ್ದರಾಮಯ್ಯರನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿರುವ ಸಚಿವ ಸುನೀಲ್ ಕುಮಾರ್ ಅವರು ಭ್ರಷ್ಟಾಚಾರ ದಾಖಲೆ ಬಹಿರಂಗಪಡಿಸಬೇಕು ಇಲ್ಲವೆ ಕ್ಷಮೆಯಾಚಿಸಬೇಕು ತಪ್ಪಿದ್ದಲ್ಲಿ PAYCM ಮಾದರಿಯಲ್ಲಿ SUNILPAY ಪೋಸ್ಟರ್ ಬಿಡುಗಡೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,

ನಾಡಹಬ್ಬ ಮೈಸೂರು ದಸರಾ ಸಂಭ್ರಮ : ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ದಸರಾ ಸಂಭ್ರಮ ಆರಂಭವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡಿದರು.ಇದೇ ಮೊದಲ ಬಾರಿಗೆ ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಆಗಮಿಸಿದ್ದು, ಬೆಳಿಗ್ಗೆ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕ, ವೈಭವಯುತವಾದ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಂತೆಯೇ ಮೊದಲು ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ತೆರಳಿದ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲ ಉಚ್ಚಿಲ ದಸರಾ : ಡಾ.ಜಿ.ಶಂಕರ್ ಅವರಿಂದ ಉದ್ಘಾಟನೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ಈ ಬಾರಿ ಅದ್ದೂರಿಯಾಗಿ ನಡೆಯಲಿರುವ ಉಚ್ಚಿಲ ದಸರಾ ಉತ್ಸವ-2022ರ ಅಂಗವಾಗಿ ದೇವಳದ ಪರಿಸರ ಮತ್ತು ಹೆಜಮಾಡಿಯಿಂದ ಕಾಪು ದೀಪಸ್ಥಂಭದವರೆಗೆ ನಿರ್ಮಿಸಲಾದ ಭವ್ಯವಾದ ವಿದುದ್ದೀಪಾಲಂಕಾರ ವ್ಯವಸ್ಥೆಯನ್ನು ಶ್ರೀ ಕ್ಷೇತ್ರದ ಸ್ವಾಗತ ಗೋಪುರ ಬಳಿ ದೇವಳದ ಗೌರವ ಅಧ್ಯಕ್ಷ ಡಾ.ಜಿ.ಶಂಕರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ರಾಜ್ಯಕ್ಕೇ ಮಾದರಿಯಾಗಿ ಅತ್ಯಂತ ವೈಭವದಿಂದ ಉಚ್ಚಿಲ ದಸರಾ ನಡೆಯಲಿದ್ದು, ನಾಡಿನೆಲ್ಲೆಡೆಯಿಂದ

ದಸರಾ ದರ್ಶಿನಿಗೆ ಶಾಸಕ ವೇದವ್ಯಾಸ ಕಾಮತ್‍ರಿಂದ ಚಾಲನೆ

ಮಂಗಳೂರು: ದಸರಾ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನದ ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಚರಣೆಗೆ ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ನಗರದ ಕೆಎಸ್‍ಆರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಚಾಲನೆ ನೀಡಿದರು. ಮಂಗಳೂರು ಬಸ್ ನಿಲ್ದಾಣದಿಂದ ಬೆಳಿಗ್ಗೆ 8-9ಗಂಟೆಗೆ ಹೊರಟು ಮಂಗಳದೇವಿ ದೇವಸ್ಥಾನ, ಪೆÇಳಲಿ ರಾಜರಾಜೇಶ್ವರಿ ದೇವಸ್ಥಾನ, ಸುಂಕದಕಟ್ಟೆ ಶ್ರೀ ಅಂಬಿಕಾ

ಬಿಗ್‍ಬಾಸ್ ಸೀಸನ್ 9 ಇಂದಿನಿಂದ ಟಿವಿ ಸೀಸನ್ ಆರಂಭ

ಒಟಿಟಿ ಸೀಸನ್ ಮುಗಿದ ಬೆನ್ನಲ್ಲೆ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್‍ನ ಟಿವಿ ಸೀಸನ್ ಇಂದು ಆರಂಭಗೊಳ್ಳುತ್ತಿದ್ದು, ಬಿಗ್‍ಬಾಸ್ ಸೀಸನ್ 9ರ ಮನೆಗೆ ಸದಸ್ಯರನ್ನು ಕಳುಹಿಸಲು ಕಲರ್ಸ್ ಕನ್ನಡ ಚಾನೆಲ್ ಸಜ್ಜಾಗಿದೆ. ಒಟಿಟಿಯಲ್ಲಿ ಸೀಸನ್‍ನಲ್ಲಿ ಟಾಪರ್ ಅಗಿರುವ ರೂಪೇಶ್ ಶೆಟ್ಟಿ ಅವರು ಟಿವಿ ಸೀಸನ್‍ಗೆ ಎಂಟ್ರಿ ಕೊಡಲಿದ್ದಾರೆ. ರೂಪೇಶ್ ಶೆಟ್ಟಿ ಕನ್ನಡ ಮತ್ತು ತುಳು ಚಿತ್ರರಂಗದ ಪ್ರತಿಭಾವಂತ ನಟ, ಇವರು

ಉಳ್ಳಾಲ: ಅಕ್ರಮ ಮರಳು ದಾಸ್ತಾನು:ತಹಸೀಲ್ದಾರ್ ನೇತೃತ್ವದಲ್ಲಿ ದಾಳಿ

ಉಳ್ಳಾಲ: ಅಕ್ರಮ ಮರಳು ದಾಸ್ತಾನಿರಿಸಿದ ಪ್ರದೇಶಕ್ಕೆ ದಾಳಿ ನಡೆಸಿದ ತಹಸೀಲ್ದಾರ್ ನೇತೃತ್ವದ ತಂಡ ಎರಡು ಲೋಡ್ ಮರಳನ್ನು ವಶಪಡಿಸಿಕೊಂಡಿದೆ.ಅಂಬ್ಲಮೊಗರು ಗ್ರಾಮದ ಕುಂಡೂರು ಮಸೀದಿ ಬಳಿ ದಾಸ್ತಾನಿರಿಸಿದ ಮರಳು ಕುರಿತು ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ತಹಸೀಲ್ದಾರ್ ಡಿ.ಎ ಪುಟ್ಟರಾಜು ನೇತೃತ್ವದಲ್ಲಿ ಕಂದಾಯ ನಿರೀಕ್ಷಕ ಮಂಜುನಾಥ್ ಕೆ.ಹೆಚ್, ಪಿಡಿಓ ರವೀಂದ್ರ ನಾಯಕ್, ಗ್ರಾಮಕರಣಿಕೆ ನಯನಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ತವರೂರಿಗೆ ದ.ಕ ಜಿಲ್ಲೆಯ ಜೇನು ಕುಟುಂಬ

ಪ್ರಧಾನಿ ನರೇಂದ್ರ ಮೋದಿಯವರ ಕನಸಾದ ಮಧು ಕಾಂತ್ರಿಯನ್ನು ನನಸು ಮಾಡಲು ದೇಶದೆಲ್ಲೆಡೆ ಜೇನು ಕೃಷಿಯ ಮೇಲೆ ಒಲವು ಹೆಚ್ಚಾಗುತ್ತಿದೆ. ಗುಜರಾತ್ ರೈತರಿಗೆ ಜೇನು ಸಾಕಾಣಿಕೆಯ ಬಗ್ಗೆ ಹೆಚ್ಚಿನ ತರಬೇತಿ ನೀಡಲು ದಕ್ಷಿಣಕನ್ನಡ ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಜೇನು ಉತ್ಪಾದಕರೊಬ್ಬರು ಗುಜರಾತ್‍ಗೆ ತೆರಳಲಿದ್ದಾರೆ. ಈಗಾಗಲೇ ದಕ್ಷಿಣಕನ್ನಡ ಜಿಲ್ಲೆಯ 100 ಜೇನು ಕುಟುಂಬಗಳನ್ನು ಗುಜರಾತ್‍ಗೆ ರವಾನಿಸಿರುವ ಇವರಿಗೆ ಒಟ್ಟು 1 ಸಾವಿರ ಜೇನು

ಕೋವಿಡ್ ಸಂದರ್ಭದಲ್ಲಿ ಪೌರಕಾರ್ಮಿಕರ ಕಾರ್ಯ ಶ್ಲಾಘನೀಯ : ಬಿ. ವೈ ರಾಘವೇಂದ್ರ

ಶಿಕಾರಿಪುರ : ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 11,133 ನೇರಪಾವತಿ ಪೌರಕಾರ್ಮಿಕರನ್ನು ಖಾಯಂ ಸರ್ಕಾರಿ ನೌಕರರಾಗಿ ಪರಿಗಣಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ. ಇದರಿಂದ ಶಿಕಾರಿಪುರ ಪುರಸಭೆಯಲ್ಲಿ ಒಟ್ಟು 23 ಜನ ನೇರಪಾವತಿ, ಪೌರಕಾರ್ಮಿಕರು ಖಾಯಂ ನೌಕರ ಸೌಲಭ್ಯವನ್ನು ಪಡೆಯಲಿದ್ದಾರೆ ಎಂದು ಸಂಸದ ಬಿ. ವೈ ರಾಘವೇಂದ್ರ ಹೇಳಿದರು. ಶಿಕಾರಿಪುರ ಪುರಸಭೆ ಕಾರ್ಯಾಲಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ 2022 ಕಾರ್ಯಕ್ರಮವನ್ನು ಸಂಸದರಾದ ಬಿ. ವೈ ರಾಘವೇಂದ್ರ

ದೇಶ ವಿಭಜನೆ ಮಾಡಿದ ಪಾಪದ ‘ಪ್ರಾಯಶ್ಚಿತ್ತ ಯಾತ್ರೆ’ ವಿನಹ ಭಾರತವನ್ನು ಜೋಡಿಸುವ ಯಾತ್ರೆಯಲ್ಲ: ಕುಯಿಲಾಡಿ ಸುರೇಶ್ ನಾಯಕ್

ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನದಿಂದ ನಮ್ಮ ಭಾರತಕ್ಕೆ ದೊರೆತ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಪಕ್ಷ ತನ್ನದೇ ಸಾಧನೆ ಎಂಬಂತೆ ಬಿಂಬಿಸುವ ಪ್ರಯತ್ನದ ಮೂಲಕ ಸ್ವಾತಂತ್ರ್ಯ ಯೋಧರನ್ನು ಅವಮಾನಿಸುವುದು ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಅಪಪ್ರಚಾರ ಮಾಡುವುದು ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯ ಪ್ರಮುಖ ಉದ್ದೇಶವಾಗಿದೆ. ಕಾಂಗ್ರೆಸ್‌ನ ಅನೇಕ ಹಿರಿಯ ಮುಖಂಡರು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ : ಕಾಂಗ್ರೆಸ್ ಮುಖಂಡ ಮನಮೋಹನ್ ಗೋಳ್ಯಾಡಿ ಪಕ್ಷದಿಂದ ಉಚ್ಛಾಟನೆ

ಕಡಬ,: ಕಾಂಗ್ರೆಸ್ ಪಕ್ಷದ ಬಿಳಿನೆಲೆ ವಲಯದ ಮಾಜಿ ಅಧ್ಯಕ್ಷ, ಐತ್ತೂರು ಗ್ರಾ.ಪಂ. ಸದಸ್ಯ ಮನಮೋಹನ್ ಗೋಳ್ಯಾಡಿ ಅವರನ್ನು ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಪಕ್ಷ ವಿರೋದಿ ಚಟುವಟಿಕೆಯ ನಡೆಸಿದ ಹಿನ್ನೆಲೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷರ ಸೂಚನೆಯ ಮೇರೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್‍ಕುಮಾರ್ ಶೆಟ್ಟಿ ಬಿಳಿನೆಲೆ ಅವರು ತಿಳಿಸಿದ್ದಾರೆ. ಅವರು ಕಡಬ ಬ್ಲಾಕ್ ಕಾಂಗ್ರೆಸ್