ಪುತ್ತೂರು: ಮಾಸಿಕ ವೇತನ ಪಾವತಿ ವಿಳಂಬ ಮತ್ತು ನಿವೃತ್ತ ನೌಕರರ ನಿವೃತ್ತಿ ಸೌಲಭ್ಯ ಬಿಡುಗಡೆ ವಿಳಂಬವನ್ನು ನಡೆಸುತ್ತಿರುವ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಪುತ್ತೂರು ವಿಭಾಗ ಕೆಎಸ್‌ಆರ್‌ಟಿಸಿ ಮಜ್ದೂರ್ ಸಂಘದ ಸದಸ್ಯರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಶುಕ್ರವಾರ ಎರಡನೇ ದಿನ ತಲುಪಿತು. ಸಂಘದ ಪುತ್ತೂರು ಘಟಕದ ಅಧ್ಯಕ್ಷ
ಕುಂದಾಪುರ: ಬಾರ್ ಮ್ಯಾನೇಜರೋರ್ವರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಜರಿಗಾಗಿ ಸ್ಥಳಕ್ಕೆ ತೆರಳಿದ್ದ ವೇಳೆ ಆರೋಪಿಗಳ ತಂಡ ಏಕಾಏಕಿಯಾಗಿ ತಲವಾರು ದಾಳಿ ನಡೆಸಿದ ಪರಿಣಾಮ ಇಬ್ಬರು ಯುವಕರು ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ.ತಲವಾರು ದಾಳಿಗೊಳಗೊಳಗಾದ ಕಾಲ್ತೋಡು ನಿವಾಸಿ ರವಿ ಶೆಟ್ಟಿ ಹಾಗೂ ಪ್ರಶಾಂತ್ ಶೆಟ್ಟಿ ಇದೀಗ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಶಿರೂರು ಗ್ರಾಮದ
ವಿಠ್ಠಲ ಮಲೆಕುಡಿಯ ಮತ್ತು ಅವರ ತಂದೆಯವರ ಮೇಲೆ ನಕ್ಸಲೀಯರೆಂದು ಹೂಡಲಾಗಿದ್ದ ಮೊಕದ್ದಮೆಯಲ್ಲಿ ಅವರು ನಿರ್ದೋಷಿಗಳೆಂದು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯವು ಇಂದು ತೀರ್ಪು ನೀಡಿದೆ. ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿರುವ ಡಿವೈಎಫ್‌ಐ ಕರ್ನಾಟಕ ರಾಜ್ಯ ಸಮಿತಿ ”ಇದು ನ್ಯಾಯಯುತ ಹೋರಾಟಕ್ಕೆ, ಸತ್ಯಕ್ಕೆ ಸಂದ ಜಯ. ಈ ತೀರ್ಪು ಆಳುವ ಸರ್ಕಾರ ಮತ್ತು ಸ್ಥಾಪಿತ ಹಿತಾಸಕ್ತಿಗಳ ಕುತಂತ್ರವನ್ನು ಬಯಲಿಗೆಳೆದಿದೆ” ಎಂದು ತಿಳಿಸಿದೆ. ಹಾಗೂ ಸಂತ್ರಸ್ತರಾಗಿ
ಮಂಗಳೂರು : ಬೃಹತ್ ಘನ ವಾಹನಗಳ ಸಂಚಾರದಿಂದಾಗಿ ಕಾನ ಕುಳಾಯಿ ರೈಲ್ವೆ ಸೇತುವೆ ಸಂಪೂರ್ಣ ಹದಗೆಟ್ಟು ಹೋಗಿದ್ದು ಕೂಡಲೇ ದುರಸ್ಥಿ ಮಾಡಲು ಒತ್ತಾಯಿಸಿ ಡಿವೈಎಫ್‌ಐ ಕಾನ ಮತ್ತು ಕುಳಾಯಿ ಘಟಕಗಳ ನೇತೃತ್ವದಲ್ಲಿ ಇಂದು ಕುಳಾಯಿ ರೈಲ್ವೆ ಸೇತುವೆ ಮೇಲೆ ರಸ್ತೆತಡೆ ಪ್ರತಿಭಟನೆ ನಡೆಯಿತು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‌ಐ ರಾಜ್ಯ ಅಧ್ಯಕ್ಷರಾದ ಮುನೀರ್ ಕಾಟಿಪಳ್ಳ ಮಾತನಾಡುತ್ತಾ ಜನಪ್ರತಿನಿದಿನಗಳ ಮತ್ತು ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯತನದಿಂದಾಗಿ
ಪರಿಸರಸ್ನೇಹಿ ಮತ್ತು ರೈತಸ್ನೇಹಿ ಸಂಸ್ಥೆ ಮೀರಾ ಕ್ಲೀನ್ ಪ್ಯೂಯಲ್ ಲಿಮಿಡೆಟ್ ( ಎಂ.ಸಿ.ಎಲ್) ಘಟಕವನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಪರಿಚಯಿಸುವ ಉದ್ದೇಶದಿಂದ ಸ್ವರ್ಣಮಂದಿರದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ, ಪ್ರಕೃತಿ ವಿರುದ್ಧವಾಗಿ ಬದುಕುದನ್ನು ನಾವು ನಿಲ್ಲಿಸಬೇಕು. ಪ್ರಕೃತಿಯನ್ನು ಆರಾಧಿಸುವ ಜೊತೆಗೆ
ಬಂಟ್ವಾಳ: ಕಾನೂನಿನ ಅರಿವಿಲ್ಲದೆ ಮಾಡಿದ ತಪ್ಪುಗಳಿಗೆ ಶಿಕ್ಷೆಯಿಂದ ವಿನಾಯಿತಿ ಇರುವುದಿಲ್ಲ. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಕಾನೂನಿನ ಬಗ್ಗೆ ಸಾಮಾನ್ಯ ತಿಳುವಳಿಕೆಯನ್ನು ಹೊಂದಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ ಜಿ ತಿಮ್ಮಾಪುರ ಹೇಳಿದರು. ಅವರು ತುಂಬೆ ಗ್ರಾಮ ಪಂಚಾಯತಿ, ತಾಲೂಕು ಕಾನೂನುಗಳ ಸೇವಾ ಸಮಿತಿ ಬಂಟ್ವಾಳ, ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ಭಾರತ ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ತುಂಬೆ ಗ್ರಾಮ
ಮಂಜೇಶ್ವರ: ಕೇಂದ್ರ ಸರಕಾರವು ರೈಲ್ವೆ ಇಲಾಖೆಯನ್ನು ಖಾಸಗಿಕರಣಗೊಳಿಸುವುದನ್ನು ನಿಲ್ಲಿಸಿ, ಪ್ಯಾಸಂಜರ್ ರೈಲುಗಳನ್ನು ಪುನಃರಾರಂಬಿಸಬೇಕು. ಹೆಚ್ಚಿಸಿದ ರೈಲ್ವೆ ಪ್ಲಾಟ್ ಫಾರ್ಮ್ ಶುಲ್ಕ ರದ್ದುಗೊಳಿಸಬೇಕು, ಸೀಸನ್ ಟಿಕೆಟ್ ಮತ್ತು ಯಾತ್ರಾ ಸೌಲಭ್ಯಗಳನ್ನು ಪುನಃ ಸ್ಥಾಪಿಸಬೇಕು ಮೊದಲಾದ ಬೇಡಿಕೆಗಳನ್ನು ಒತ್ತಾಯಿಸಿ ಎಐಟಿಯುಸಿ ಮಂಜೇಶ್ವರ ಮಂಡಲ ಸಮಿತಿ ವತಿಯಿಂದ ಮಂಜೇಶ್ವರ ರೈಲ್ವೆ ಸ್ಟೇಷನ್‌ಗೆ ಮಾರ್ಚ್ ಮತ್ತು ಧರಣಿ ನಡೆಯಿತು. ಎಐಟಿಯುಸಿ ಜಿಲ್ಲಾ ಕೋಶಾಧಿಕಾರಿ ಬಿ.ವಿ
ಉಳ್ಳಾಲ: ವಾರೆಂಟ್ ಆರೋಪಿಯನ್ನು ಹಿಡಿಯಲು ಹೋದ ಉಳ್ಳಾಲ ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ರೌಡಿಶೀಟರ್ ತಲವಾರು ತೋರಿಸಿ ಪರಾರಿಯಾದ ಘಟನೆ ಉಳ್ಳಾಲದ ಧರ್ಮನಗರದಲ್ಲಿ ನಡೆದಿದೆ. ಧರ್ಮನಗರ ನಿವಾಸಿ ಮುಕ್ತಾರ್ ಮುಕ್ತಾರ್ ಅಹ್ಮದ್ ಎಂಬಾತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಈತನ ಮೇಲೆ ಹತ್ತಕ್ಕೂ ಹೆಚ್ಚು ಕೇಸುಗಳಿದ್ದು, ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಉಳ್ಳಾಲ ಪೊಲೀಸರು ಕೋರ್ಟಿನಿಂದ ವಾರಂಟ್ ಪಡೆದು ಇಂದು ಬೆಳಗ್ಗೆ ಬಂಧಿಸಲು
ಕಾರ್ಕಳ: ಕೋವಿಡ್ ಸಂದರ್ಭ ದೇಣಿಗೆ ಸಂಗ್ರಹಕ್ಕೆ ಬಳಸಿದ ವೇದಿಕೆ ಪಿಎಂ ಕೆರ್ಸ್ ಯೋಜನೆಯು ಪಾರದರ್ಶಕತೆಯನ್ನು ಹೊಂದಿರಲಿಲ್ಲ. ಹಣ ಸಂಗ್ರಹ ಹಾಗೂ ಖರ್ಚುಗಳ ಲೆಕ್ಕ ವಿ ಡದ ಈ ನಿಧಿಯ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಪ್ರತಿಬಿಂಬಿಸುತ್ತದೆ. ಕೇಂದ್ರದ ಮಾಜಿ ಸಚಿವ ಮಾಜಿ ಮುಖ್ಯಮಂತ್ರಿ ಯಂ. ವೀರಪ್ಪ ಮೊಯ್ಲಿ ಟೀಕಿಸಿದರು ಕಾರ್ಕಳ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಆಡಳಿತದಲ್ಲಿರುವ ಸರಕಾರಗಳಿಗೆ
ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ ಅವರ ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಸರಿ ಬಣ್ಣ ಮತ್ತು ಕೇಸರಿ ಶಾಲಿನ ಬಗ್ಗೆ ಐವನ್ ಡಿಸೋಜ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಬಜರಂಗದಳ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿವಿ ಮಾಧ್ಯಮದ ಚರ್ಚೆಯ ಸಂದರ್ಭದಲ್ಲಿ ಐವಾನ್ ಡಿಸೋಜ, ಕೇಸರಿ ಶಾಲು ಹಾಕಿದವರು


















