Home Posts tagged #mangalore (Page 411)

ಯುವಕನನ್ನು ಕತ್ತಿಯಿಂದ ಕಡಿದು ಕೊಲೆ : ಕೈಕಂಬದ ತಲಪಾಡಿಯಲ್ಲಿ ನಡೆದ ಘಟನೆ

ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿಕೊಂಡು ಕತ್ತಿ ಯಿಂದ ಕಡಿದು ಕೊಲೆ ನಡೆಸಿದ ಘಟನೆ ಜುಲೈ 4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ. ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29) ಕೊಲೆಯಾದ ಯುವಕ. ಅತನ ಸ್ನೇಹಿತ ನೌಫಾಲ್ ಮತ್ತು ಇನ್ನೊಬ್ಬ ನ ಹೆಸರು ಸಿಕ್ಕಿಲ್ಲ ಇಬ್ಬರು ಸೇರಿ ಕತ್ತಿಯಿಂದ ಕಡಿದು

ಕುಡ್ತಮುಗೇರು ರಸ್ತೆ ಸಂಪೂರ್ಣ ಜಲಾವೃತ: ರಸ್ತೆ ಸಂಚಾರ ಸ್ಥಗಿತ

ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಜಲಾವೃತವಾದ ಘಟನೆ ರಂದು ನಡೆದಿದೆ. ನೀರಿನ ಮಟ್ಟ ಏರಿಕೆಯಾಗುತ್ತಿರು ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ ವಿಟ್ಲ-ಸಾಲೆತ್ತೂರು ರಸ್ತೆಯ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಬದಿಯಲ್ಲಿ ಹರಿಯುತ್ತಿರುವ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ರಸ್ತೆ ಜಲಾವೃತವಾಗಿದೆ. ಇದರಿಂದಾಗಿ ಈ ದಾರಿಯಾಗಿ ವಾಹನ ಸಂಚಾರಕ್ಕೆ

ಭಾರತದ ಅತಿ ಎತ್ತರದ “ಭೀಮಾ” ರೊಬೋಟ್ : ಬಹುಪಯೋಗಿ ರೋಬೋಟ್ ಬಳಕೆಗೆ ಸಿದ್ಧ

ಬೆಂಗಳೂರು, ಜು, 5; ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನಿಂದ ಭಾರತದ ಅತಿ ಎತ್ತರದ “ಭೀಮಾ” ರೋಬೋಟ್ ಅನ್ನು ಅನಾವರಣಗೊಳಿಸಲಾಗಿದೆ. ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನ ಸಂಸ್ಥಾಪಕ ಹರ್ಷ ಕಿಕ್ಕೇರಿ ಅವರು ದೇಶೀಯ ರೊಬೋಟ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. “ಭೀಮಾ” 7.7 ಅಡಿ ಎತ್ತರದ ರೋಬೋಟ್ ಆಗಿದ್ದು, ಇದರ ದೇಹಕ್ಕೆ ಎಲ್.ಇ.ಡಿ ತಂತ್ರಜ್ಞಾನದ ಸ್ಪರ್ಷ ನೀಡಲಾಗಿದೆ. ಈ ರೋಬೋಟ್ ಬಹುಪಯೋಗಿಯಾಗಿದ್ದು, ವಿಶೇಷವಾಗಿ ಸ್ವಾಗತಕಾರನ

ಬಾರಿ ಮಳೆಯ ಕಾರಣ ಕಾರ್ಕಳದಲ್ಲಿ ತೋಟಗಳಿಗೆ ನುಗ್ಗಿದ ನೀರು : ಜನರಲ್ಲಿ ಪ್ರವಾಹದ ಭೀತಿ

ಕಾರ್ಕಳ: ಕಾರ್ಕಳ ತಾಲೂಕಿನ ಲ್ಲಿ ಭಾರಿ ಮಳೆ ಸುರಿಯುತಿದ್ದು ಹಲವೆಡೆಗಳಲ್ಲಿ ತೋಟಗಳಿಗೆ ನೀರು ನುಗ್ಗಿದೆ. ಕೆಲವರಿಗೆ ಪ್ರವಾಹ ನೋವು ತಂದರೆ ಇನ್ನು ಕೆಲವರಿಗೆ ಅನುಕೂಲ ವಾದ ಉದಾಹರಣೆಗಳು ಸಾಕ್ಷಿಕರಿಸಿದೆ. ಕಾರ್ಕಳ ತಾಲೂಕಿನ ಮರ್ಣೆ ಗ್ರಾಮ ಎಣ್ಣೆಹೊಳೆ ಬಳಿ ಡ್ಯಾಂ ಬಳಿ ಸ್ವರ್ಣೆ ಉಕ್ಕಿ ಹರಿಯುತಿದ್ದು ನದಿ ಪಾತ್ರ ದ ಬಳಿಯ ಪಂಪ್ ಹೌಸ್ ಬಳಿ ನೀರಿನ ಜೊತೆ ತೆಂಗಿನಕೈ ಅಡಿಕೆ ಮರದ ದಿಮ್ಮಿಗಳು ಶೇಖರಣೆ ಗೊಳ್ಳುತಿದ್ದು ಸ್ಥಳೀಯ ಹತ್ತು ಜನರ ತಂಡ ನೀರಿನಲ್ಲಿರುವ ವಸ್ತುಗಳ

ಕಡಲ್ಕೊರೆತಕ್ಕೆ ಬಟ್ಟಪ್ಪಾಡಿ ತತ್ತರ : ತೈಲ ಸೋರಿಕೆ ಭೀತಿಯೊಂದಿಗೆ ಅಲೆಗಳ ಹೊಡೆತ

ಉಳ್ಳಾಲ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಉಚ್ಚಿಲ ಬಟ್ಟಪ್ಪಾಡಿ ಪರಿಸರದಲ್ಲಿ ಕಡಲ್ಕೊರೆತ ತೀವ್ರಗೊಂಡು ವ್ಯಾಪಕ ಹಾನಿಯುಂಟು ಮಾಡಿದೆ.  ಒಂದು ರೆಸಾರ್ಟ್‌ ಸಂಪೂರ್ಣ ಸಮುದ್ರಪಾಲಾಗುವ ಹಂತದಲ್ಲಿದೆ. ಮೂರು ಮನೆಗಳಿಗೆ ಸಮುದ್ರದ ಅಲೆಗಳು ಅಪ್ಪಳಿಸಲು ಆರಂಭಿಸಿದೆ. 1 ಕಿ.ಮೀ ಉದ್ದದ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿರುವುದರಿಂದ 20 ಮನೆಮಂದಿಗೆ ಮುಖ್ಯ ರಸ್ತೆಯ ಸಂಪರ್ಕ ಕಡಿತವಾಗಿದೆ. ಸಿರಿಯಾ ಹಡಗು ಮುಳುಗಡೆಯೂ ಇದೇ

ಪೌರ ಕಾರ್ಮಿಕರ ಮುಷ್ಕರ : ಬಿ.ಎಸ್.ಪಿ ಬೆಂಬಲ

ದ. ಕ. ಜಿಲ್ಲಾ ಪೌರ ಕಾರ್ಮಿಕರ ಸಂಘದ ವತಿಯಿಂದ ಪೌರ ಕಾರ್ಮಿಕರನ್ನು ಖಾಯಂ ಗೊಳಿಸಲು ನಡೆಯುತ್ತಿರುವ ಅನಿರ್ಧಿಷ್ಟ ಪ್ರತಿಭಟನಾ ಧರಣಿಗೆ ಬಿಎಸ್ ಪಿ ದ. ಕ. ಜಿಲ್ಲಾ ವತಿಯಿಂದ ಬೆಂಬಲ ವ್ಯಕ್ತ ಪಡಿಸಲಾಯಿತು. ಸಭೆಯನ್ನು ಉದ್ದೇಶಿಸಿ ಬಿಎಸ್ ಪಿಯ ರಾಜ್ಯ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್ ಮತ್ತು ಬಿಎಸ್ ಪಿ ಜಿಲ್ಲಾ ಅಧ್ಯಕ್ಷ ದಾಸಪ್ಪ ಎಡಪದವುಮಾತನಾಡಿದರು. ಪೌರ ಕಾರ್ಮಿಕರನ್ನು ಖಾಯಂ ಗೊಳಿಸಲು ಬಿಎಸ್ ಪಿ ವತಿಯಿಂದಮುಖ್ಯಮಂತ್ರಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ

ಬೇಡಿಕೆ ಈಡೇರಿಸುವಂತೆ ಪೌರ ಕಾರ್ಮಿಕರ ಮುಷ್ಕರ : ಪೌರ ಕಾರ್ಮಿರನ್ನು ಭೇಟಿಯಾಗಿ ಸಾಂತ್ವಾನ ಹೇಳಿದ ಎಎಪಿ

ಕಳೆದ ನಾಲ್ಕು ದಿನಗಳಿಂದ ಮಳೆ ಗಾಳಿ ಅನ್ನದೆ ಮುಷ್ಕರ ನಿರತ ಪೌರ ಕಾರ್ಮಿಕರನ್ನು ಭೇಟಿಯಾಗಿ ಸಾಂತ್ವಾನ ಹೇಳುವ ಕೆಲಸವನ್ನು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಸಂತೋಷ ಕಾಮತ್ ಅವರ ತಂಡ ಇಂದು ಮಾಡಿತು. “ನಗರವನ್ನು ಸ್ವಚ್ಚವಾಗಿ ಇಡುವಲ್ಲಿ ಪೌರ ಕಾರ್ಮಿಕರ ಪಾಲು ಅತಿ ದೊಡ್ಡದು. ಪೌರ ಕಾರ್ಮಿಕರನ್ನು ಗೌರವಯುತವಾಗಿ ಕಾಣುವುದು ನಮ್ಮೆಲ್ಲರ ಕರ್ತವ್ಯ. ಹಾಗಿರುವಾಗ ಯಾವುದೇ ಚುನಾಯಿತ ಪ್ರತಿನಿಧಿಗಳು ಮುಷ್ಕರ ನಿರತ ಪೌರ ಕಾರ್ಮಿಕರನ್ನು ಭೇಟಿಯಾಗಿ ಸಾಂತ್ವನ ಹೇಳದೆ

ಮಂಗಳೂರು ಸ್ಮಾರ್ಟ್‍ಸಿಟಿ ಕಾಮಗಾರಿ ಅವೈಜ್ಞಾನಿಕ : ಮಂಗಳೂರಿನಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿಕೆ

ಮಂಗಳೂರಿನ ಸ್ಮಾರ್ಟ್ ಸಿಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಇದೀಗ ಜನತೆಗೆ ತೊಂದರೆ ಉಂಟಾಗಿದೆ. ಅಧಿಕಾರಿಗಳು ತಪ್ಪು ಮಾಡಿದ್ದಲ್ಲಿ ಜನಪ್ರತಿನಿಧಿಗಳು ಕೇಳಬೇಕು, ಸಾಮಾನ್ಯ ಜನರಿಗೆ ನ್ಯಾಯ ಎಲ್ಲಿದೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪೂರ್ವ ಆಲೋಚನೆ, ಪೂರ್ವ ಯೋಜನೆ ಬೇಕು.ನಗರದಲ್ಲಿ ಚರಂಡಿ, ರಾಜಕಾಲುವೆಗಳ ಹೂಳೆತ್ತುವ ಕೆಲಸ ನಾಲ್ಕು ತಿಂಗಳ ಹಿಂದೆಯೇ ಆಗಬೇಕಿತ್ತು. ಮೇ ತಿಂಗಳಲ್ಲಿ ರಸ್ತೆ

ಮನಪಾ ಪೌರಕಾರ್ಮಿಕರನ್ನು ಖಾಯಂಗೊಳಿಸಿ, ಸರ್ಕಾರದಿಂದ ಸಿಗುವ ಸೌಲಭ್ಯ ಒದಗಿಸಿ ಮಾಜಿ ಶಾಸಕ ಜೆ.ಆರ್. ಲೋಬೋ ಆಗ್ರಹ

ಮಂಗಳೂರು ಪಾಲಿಕೆಯ ಪೌರಕಾರ್ಮಿಕರನ್ನು ಖಾಯಂಗೊಳಿಸಿ ಅವರಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ತೆಗೆದುಕೊಳ್ಳುವುದು ಸರಿಯಾದ ಕ್ರಮವಲ್ಲ. ಪೌರಕಾರ್ಮಿಕರು ಸರಿಯಾದ ಕೆಲಸ ಮಾಡಿದ್ದಲ್ಲಿ ಅವರನ್ನು ಖಾಯಂಗೊಳಿಸಿ. ಖಾಸಗಿ ಕಚೇರಿ ಕೆಲಸ ನಡೆಸುದಾದಲ್ಲಿ ಲೇಬರ್ ಡಿಪಾರ್ಟ್‍ಮೆಂಟ್ ಇದೆ. ಹಾಗಿರುವಾಗ

ಮಂಗಳೂರಿನಲ್ಲಿ ಅಕ್ರಮ ವಲಸಿಗರ ಪತ್ತೆ ಕಾರ್ಯಾಚರಣೆ : ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿಕೆ

ಮಂಗಳೂರು ನಗರದಲ್ಲಿ ಕಳೆದ ಒಂದು ವಾರದಿಂದ ನಡೆಸಲಾದ ಕಾರ್ಯಾಚರಣೆ ವೇಳೆ ಸೂಕ್ತ ದಾಖಲೆಗಳನ್ನು ಹೊಂದಿರದ ಸುಮಾರು ೩೦೦ ಮಂದಿ ವಲಸಿಗರನ್ನು ಪತ್ತೆ ಹಚ್ಚಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಅವರೆಲ್ಲರೂ ನಿಖರವಾಗಿ ಅಕ್ರಮ ವಲಸಿಗರು ಎಂದು ಹೇಳಲಾಗದಿದ್ದರೂ ಈವರೆಗಿನ ಪರಿಶೀಲನೆ ಸಂದರ್ಭದಲ್ಲಿ ಸೂಕ್ತ ದಾಖಲೆ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಪೈಕಿ ೨೫೦ ಮಂದಿಯನ್ನು ನಗರದ ರೋಸಾರಿಯೊ ಸಭಾಂಗಣಕ್ಕೆ ಕರೆತರಲಾಗಿದ್ದು, ಇಂದು