Home Posts tagged #mangalore (Page 413)

ಕಾರ್ಕಳ ಪುರಸಭೆಯ ಸಾಮಾನ್ಯ ಸಭೆ ಬೀದಿ ಬದಿಗಳಲ್ಲಿ ಮೀನು ವ್ಯಾಪಾರ ನಿಷೇಧಿಸಬೇಕು : ಪುರಸಭೆ ಅಧ್ಯಕ್ಷೆ ಸುಮಕೇಶವ್ ಹೇಳಿಕೆ

ಕಾರ್ಕಳ: ಬೀದಿ ಬದಿಗಳಲ್ಲಿ ಮೀನು ವ್ಯಾಪಾರವನ್ನು ನಿಷೇಧಿಸಬೇಕು, ಇಲ್ಲವೆ ಆಯ್ದ ಜಾಗದಲ್ಲಿ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲು ಅವಕಾಶ ಇದೆ ಎಂದು ಪುರಸಭೆ ಅಧ್ಯಕ್ಷೆ ಸುಮಕೇಶವ್ ಹೇಳಿದ್ದರೆ.ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿದರು. ಅಶ್ಪಕ್ ಅಹ್ಮದ್ ಮಾತನಾಡಿ, ಮೀನು ಮಾರಾಟ ವ್ಯವಸ್ಥೆ ಕಲ್ಪಿಸಲು ಅವಕಾಶವಿದೆ ಎಂದರು. ಪ್ರತಿಮಾ ರಾಣೆ ಮಾತನಾಡಿ, ಈ ಬಗ್ಗೆ ಅನೇಕ

ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಸಿವಿಲ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ರಾಷ್ಟೀಯ ಮಟ್ಟದ ತಾಂತ್ರಿಕ ಸಮ್ಮೇಳನ”

ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ “ಸಿವಿಲ್ ಇಂಜಿನಿಯರಿಂಗ್ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ಇತ್ತೀಚಿನ ಪ್ರವೃತ್ತಿಗಳು ಮತ್ತು ಪ್ರಗತಿಗಳು” ಹಾಗೂ “ಮೆಕ್ಯಾನಿಕಲ್ ಇಂಜಿನಿಯರಿಂಗ್, ರೊಬೊಟಿಕ್ಸ್ ಮತ್ತು ಆಟೊಮೇಷನ್ ತಂತ್ರಜ್ಞಾನದಲ್ಲಿ ಇತ್ತೀಚಿನ ಪ್ರಗತಿಗಳು” ವಿಷಯಗಳ ಕುರಿತು ಆಯೋಜಿಸಿದ್ದ ಎರಡು ದಿನಗಳ ರಾಷ್ಟೀಯ ಮಟ್ಟದ ತಾಂತ್ರಿಕ ಸಮ್ಮೇಳನ

ಮಾಡರ್ನ್ ಕಿಚನ್ ನ ಪಾಲುದಾರರಾಗಿರುವ ಅಣ್ಣಪ್ಪ ಪೈ(74) ನಿಧನ

ಖ್ಯಾತ ಸಂಸ್ಥೆ ಮಾಡರ್ನ್ ಕಿಚನ್ ಇದರ ಪಾಲುದಾರರಾಗಿರುವ ಹಾಗೂ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಅಣ್ಣಪ್ಪ ಪೈ(74) ಅವರು ಬೆಂಗಳೂರಿನಲ್ಲಿ ಬುಧವಾರ ನಿಧನರಾದರು ಅವರು ಪತ್ನಿ ಇಬ್ಬರು ಪುತ್ರರಾದ ಒರೇಕಲ್ ಕಂಪನಿಯ ಅರವಿಂದ ಪೈ, ಡೆಲಿವರಿ ಲಾಜಿಸ್ಟಿಕ್ ನಿರ್ದೇಶಕ ಅಜಿತ್ ಪೈ ಹಾಗೂ ಅಪಾರ ಸಂಖ್ಯೆಯ ಬಂಧುಮಿತ್ರರನ್ನು ಅಗಲಿದ್ದಾರೆ ಗುರುವಾರ ಮಧ್ಯಾಹ್ನ ಮಂಗಳೂರಿನಲ್ಲಿರುವ ಅವರ ಸ್ವಗೃಹದಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ

ಕರಾವಳಿಯಲ್ಲಿ ಭಾರೀ ಮಳೆ – ರೆಡ್ ಅಲರ್ಟ್

ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆಯಾಗಿದೆ. ಮಂಗಳೂರು ನಗರದ ಹಲವೆಡೆ ರಸ್ತೆಗಳಲ್ಲಿ ಕೃತಕ ನೆರೆ ಉಂಟಾಗಿದೆ. ಕೊಟ್ಟಾರದಲ್ಲಿ ರಾಷ್ಟ್ರೀಯ ಹೆದ್ದಾರಿಗೂ ನೀರು ಬಂದಿದೆ. ಕೊಟ್ಟಾರ ಪ್ರದೇಶದ ಮಾಲೆಮಾರ್, ಕೋಡಿಕಲ್ ಏರಿಯಾದಲ್ಲಿ ರಸ್ತೆಯಲ್ಲಿ ಭಾರೀ ಪ್ರಮಾಣದ ನೀರು ಹರಿದಿದ್ದು ಹಲವಾರು ಮನೆಗಳಿಗೆ ಮಳೆ ನೀರು ನುಗ್ಗಿದೆ. ನೀರುಮಾರ್ಗದ ಬಳಿಯ ಬದಿನಡಿ ಎಂಬಲ್ಲಿ ದೇವಸ್ಥಾನದ ಅಂಗಣ ಪೂರ್ತಿ ನೀರಿನಲ್ಲಿ ಮುಳುಗಿದೆ. ರಾತ್ರಿಯಿಡೀ ಭಾರೀ ಮಳೆಯಾಗಿದ್ದರಿಂದ

ಮಂಗಳೂರು : ವಿಚಾರಣೆಗೆ ಹಾಜರಾದ ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್

ಕೊಲೆಗೆ ಸ್ಕೆಚ್ ಹಾಕಿದ್ದಾರೆಂದು ಸುದ್ದಿಯಾಗಿದ್ದ ಬೆಂಗಳೂರಿನ ಉದ್ಯಮಿ, ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್ ಶೆಟ್ಟಿ ಅವರನ್ನು ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಕರೆಸಿ ವಿಚಾರಣೆ ನಡೆಸಲಾಗಿದೆ. ಕೊಲೆಗೆ ಸ್ಕೆಚ್ ವಿಚಾರದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಗೃಹ ಇಲಾಖೆಯಿಂದ ಹೊಣೆ ನೀಡಲಾಗಿದೆ. ಹೀಗಾಗಿ ಮಂಗಳೂರು ಕಮಿಷನರ್ ಕಚೇರಿಗೆ ಗುಣರಂಜನ್ ಶೆಟ್ಟಿ ಅವರನ್ನು ಕರೆಸಿ ಸಿಸಿಬಿ ಇನ್ಸ್ ಪೆಕ್ಟರ್

ಇಂದಿರಾಗಾಂಧಿ ಹೇರಿದ ತುರ್ತುಪರಿಸ್ಥಿತಿಯಿಂದ ದೇಶಕ್ಕೆ ಮಾರಕವಾಗಿರಲಿಲ್ಲ : ಪುತ್ತೂರಿನಲ್ಲಿ ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಹೇಳಿಕೆ

ಪುತ್ತೂರು: ದೇಶದಲ್ಲಿ ಇಂದಿರಾಗಾಂಧಿ ಹೇರಿದ ತುರ್ತುಪರಿಸ್ಥಿತಿ ಜನತೆಗೆ ಕರಾಳವಾಗಿರಲಿಲ್ಲ ಎಂದು ಕಾಂಗ್ರೇಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಹೇಳಿದರು.ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿರೋಧ ಪಕ್ಷವಾದ ಬಿಜೆಪಿ ದೇಶದ ಉಕ್ಕಿನ ಮಹಿಳೆ ಎಂದೇ ಕರೆಯಲ್ಪಡುವ ಇಂದಿರಾ ಗಾಂಧಿ ಹೇರಿದ ತುರ್ತುಪರಿಸ್ಥಿತಿಯನ್ನು ಕರಾಳದಿನ ಎಂದು ಬಿಂಬಿಸುತ್ತಿದೆ. ಆದರೆ ಅದು ಕರಾಳದಿನವಾಗಿರಲಿಲ್ಲ. ಇಂದಿರಾ ಗಾಂಧಿ ಸರಕಾರ ಉರುಳಿದ

ಮೂಡುಬಿದಿರೆ ಪುರಸಭೆ ಸಾಮಾನ್ಯ ಸಭೆ : ತಾತ್ಕಾಲಿಕ ಪೌರಕಾರ್ಮಿಕರನ್ನು ನೇಮಿಸಲು ಪರಿಸರ ಅಭಿಯಂತರೆ ಸಲಹೆ

ಮೂಡುಬಿದಿರೆ : ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಬೇಡಿಕೆಯಿರಿಸಿ ಜು 1ರಿಂದ ರಾಜ್ಯಾದಂತ ಪೌರಕಾರ್ಮಿಕರು ಅನಿರ್ಧಿಷ್ಠಾವಧಿ ಮುಷ್ಕರ ನಡೆಸುವುದರಿಂದ ಕಸ ಸಂಗ್ರಹಣೆ ಮತ್ತು ವಿಲೇವಾರಿಗೆ ನಮ್ಮಲ್ಲೂ ಸಮಸ್ಯೆಯಾಗಲಿದೆ ಆದ್ದರಿಂದ ಪ್ರತೀ ವಾರ್ಡ್ ಮಟ್ಟದಲ್ಲಿ ಪೌರಕಾರ್ಮಿಕ ವೃತ್ತಿ ಮಾಡುವವರನ್ನು ಗುರುತಿಸಿ ತಾತ್ಕಾಲಿಕವಾಗಿ ನೇಮಿಸಿದರೆ ಉತ್ತಮ ಎಂದು ಪರಿಸರ ಇಂಜಿನಿಯರ್ ಶಿಲ್ಪಾ ಸಲಹೆ ನೀಡಿದರು. ಅವರು ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ

ಜುಲೈ 3 : ಬಿಜೆಪಿ ಯುಮೋರ್ಚಾದಿಂದ ಕೆಸರ್‍ಡೊಂಜಿ ದಿನ

ಮೂಡುಬಿದಿರೆ : ಭಾರತೀಯ ಜನತಾಪಾರ್ಟಿ ಯುವಮೋರ್ಚಾ ಮೂಲ್ಕಿ ಮೂಡುಬಿದಿರೆ ಮಂಡಲದ ವತಿಯಿಂದ ದರೆಗುಡ್ಡೆಯ ಸಿರಿಸಂಪದ ಫಾರ್ಮ್ನಲ್ಲಿ ಜು.3ರಂದು ಕೆಸರ್‍ಡೊಂಜಿ ಕಮಲದಿನ ಎಂಬ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಮಂಡಲಾಧ್ಯಕ್ಷ ಸುನಿಲ್ ಆಳ್ವ ತಿಳಿಸಿದರು. ಬಿಜೆಪಿ ಕಛೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಪಕ್ಷ ಸಂಘಟನೆ, ಬಲವರ್ಧನೆ ಹಾಗೂ ಕಾರ್ಯಕರ್ತರಲ್ಲಿ ಬಾಂಧವ್ಯ ವೃದ್ಧಿಸುವ

ದ್ವಿತೀಯ ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಕುದ್ರೋಳಿಯ 6 ವಿದ್ಯಾರ್ಥಿಗಳಿಗೆ ಫಾತಿಮಾ ಇಸ್ಲಾಮಿಕ್ ಸೆಂಟರ್‍ನಲ್ಲಿ ಅಭಿನಂದನಾ ಕಾರ್ಯಕ್ರಮ

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಮತ್ತು ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಕುದ್ರೋಳಿ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ಕುದ್ರೋಳಿಯ 6 ವಿದ್ಯಾರ್ಥಿಗಳಿಗೆ ಕುದ್ರೋಳಿಯ ಫಾತಿಮಾ ಇಸ್ಲಾಮಿಕ್ ಸೆಂಟರ್‍ನಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮ ಆಯಿಷಾ ಸಫಾ ಅವರ ಪವಿತ್ರ ಕುರ್ ಆನ್ ಪಠಣದೊಂದಿಗೆ ಆರಂಭಗೊಂಡಿತು. ನಂತರ ಎಸ್ ಐ ಓ ಮಂಗಳೂರು ನಗರ ಅಧ್ಯಕ್ಷರಾದ

ರಾಜಸ್ಥಾನ ಘಟನೆ ಮತ್ತು ಗಲಭೆಯ ಹಿಂದೆ ವಿದೇಶಿ ಕೈವಾಡವಿದೆ : ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ

ರಾಜಸ್ಥಾನದ ಉದಯಪುರದಲ್ಲಿ ಹಿಂದು ಯುವಕನ ಶಿರಚ್ಛೇದ ಘಟನೆ ಮಾನವೀಯತೆಗೆ ಸವಾಲಾದ ಪ್ರಕರಣ. ಕೃತ್ಯದ ಹಿಂದೆ ವ್ಯವಸ್ಥಿತ ಸಂಚಿದೆ, ಭಯೋತ್ಪಾದಕ ಕೃತ್ಯ. ದೇಶದಲ್ಲಿ ಐಸಿಸ್, ತಾಲಿಬಾನ್ ಮಾನಸಿಕತೆ ತಲೆ ಎತ್ತುತ್ತಿರುವುದಕ್ಕೆ ಇದು ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿ ಕಾರಿದ್ದಾರೆ. ಇದೇ ಮಾದರಿಯ ಹತ್ಯೆ ಶಿವಮೊಗ್ಗದಲ್ಲೂ ನಡೆದಿತ್ತು. ಹಿಂದು ಕಾರ್ಯಕರ್ತ ಹರ್ಷನ ಕತ್ತು ಕೊಯ್ದು ಅದರ ವಿಡಿಯೋವನ್ನು ಆತನ ಸೋದರಿಗೆ ಕಳಿಸಲಾಗಿತ್ತು.