ಮಂಗಳೂರು ಕೋವಿಡ್ 3ನೆ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್‍ಕ್ಲಬ್‍ನಲ್ಲಿ
ಮಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಆಗಸ್ಟ್ 12 ಮತ್ತು 13ರಂದು ಅವರು ದ.ಕ, ಉಡುಪಿ ಜಿಲ್ಲೆಗಳಲ್ಲಿ ಶಾಸಕರು, ಸಂಸದರು,ಅಧಿಕಾರಿಗಳೊಂದಿಗೆ ಕೋವಿಡ್ ನಿಯಂತ್ರಣ ಕುರಿತು ಪ್ರಗತಿ ಪರಿಶೀಲನೆ ಸಭೆಗಳನ್ನು ನಡೆಸಲಿದ್ದಾರೆ. ಸಿಎಂ ಗುರುವಾರ ಬೆಳಗ್ಗೆ 10.50ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, 11.30ಕ್ಕೆ ದ.ಕ. ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ನಗರ ಯೋಜನಾ ವಿಭಾಗಕ್ಕೆ ಸಂಗ್ರಹಿಸುತ್ತಿದ್ದ ವಿನ್ಯಾಸ ಅನುಮೋದನೆಯ ಶುಲ್ಕವನ್ನು ಪರಿಷ್ಕರಿಸಿರುವುದನ್ನು ಕ್ರೆಡಾಯ್ ಮಂಗಳೂರಿನ ಅಧ್ಯಕ್ಷ ಪುಷ್ಪರಾಜ್ ಜೈನ್ ಸ್ವಾಗತಿಸಿದ್ದಾರೆ. ಈ ಕುರಿತು ಮಾತನಾಡಿದ ಕ್ರೆಡಾಯ್ ಅಧ್ಯಕ್ಷ ಪುಷ್ಪರಾಜ್ ಜೈನ್, ಜನ ಸಾಮಾನ್ಯರಿಗೆ ಆಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ. ಭರತ್ ಶೆಟ್ಟಿ, ಮೂಡಾದ
ಇಂದಿನಿಂದ 3 ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಕೆಲವೆಡೆ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜತೆಗೆ ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ದೇಶದ ಸಂಪತ್ತನ್ನು ಕಬಳಿಸುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ,CITU ನೇತೃತ್ವದಲ್ಲಿ ನಗರದಲ್ಲಿಂದು ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಕ್ವಿಟ್ ಇಂಡಿಯಾ ಚಳುವಳಿಯ ದಿನವಾದ ಇಂದು ದೇಶಾದ್ಯಂತ ರೈತ ಕಾರ್ಮಿಕರು ಜಂಟಿಯಾಗಿ ಹಮ್ಮಿಕೊಂಡ ಕಾರ್ಪೋರೇಟ್ ಕಂಪೆನಿಗಳಿಂದ ದೇಶವನ್ನು ಉಳಿಸಿ ದಿನಾಚರಣೆಯ ಭಾಗವಾಗಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು
ಕೊರೋನ ಹೆಚ್ಚಳ ಭೀತಿಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಹಾಗೂ ಜನ ಸಂಚಾರ ವಿರಳವಾಗಿದೆ. ದಿನಸಿ, ತರಕಾರಿ, ಮಾಂಸ, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳು, ಬೀದಿ ಬದಿ ವ್ಯಾಪಾರಕ್ಕೆ ಬೆಳಗ್ಗೆ 5 ರಿಂದ ಮಧ್ಯಾಹ್ನ 2ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಆದರೆ ಗ್ರಾಹಕರ ಸಂಖ್ಯೆ ವಿರಳವಾಗಿದೆ. ಅಗತ್ಯ ವಸ್ತುಗಳ ಸಾಗಾಟದ ವಾಹನಗಳು, ದ್ವಿಚಕ್ರ ವಾಹನಗಳು ಮತ್ತು ಆಟೊ ರಿಕ್ಷಾಗಳು
ಮಳೆಗಾಲದಲ್ಲಿ ಹಾನಿಗೊಳಗಾದ ರಸ್ತೆಗಳ ಗುಂಡಿಗಳನ್ನು ಶೀಘ್ರದಲ್ಲೇ ಮುಚ್ಚುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಎಸ್. ಅಂಗಾರ ಅವರು ಸೂಚಿಸಿದರು.ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದ ಮನೆ ಕಳೆದುಕೊಂಡ ಕುಟುಂಬಗಳಿಗೆ ಸರ್ಕಾರ ಘೋಷಿಸಿರುವ 10.000 ರೂ. ಪರಿಹಾರ ಮೊತ್ತವನ್ನು ಶೀಘ್ರವಾಗಿ ಮತ್ತು ಕಡ್ಡಾಯವಾಗಿ ಆಯಾ ಕುಟುಂಬಗಳಿಗೆ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಅವರು ಮಾತನಾಡಿ, ಜಿಲ್ಲೆಯಲ್ಲಿ ನೆರೆಯಿಂದಾಗಿ ಹೆಚ್ಚಿನ
ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನ ಪಾಸಿಟಿವಿಟಿಯನ್ನು ಕಡಿಮೆ ಮಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರದ ಸಂಪುಟ ದರ್ಜೆಯ ಸಚಿವರಾದ ಎಸ್. ಅಂಗಾರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ಆ.6ರ ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೋವಿಡ್ ಹಾಗೂ ನೆರೆ ಹಾವಳಿ ಪರಿಹಾರ ಕಾರ್ಯಗಳ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕೋವಿಡ್ ಹಾಗೂ ಅದರ ಪಾಸಿಟಿವಿಟಿಯನ್ನು
ಮಂಗಳೂರು: ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ ಎಂದು ನೂತನವಾಗಿ ಸಚಿವರಾಗಿ ಆಯ್ಕೆಯಾದ ಸುನೀಲ್ ಕುಮಾರ್ ಹೇಳಿದರು.ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಬಂದ ಅವರಿಗೆ ಕಾವೂರು ಜಂಕ್ಷನ್ ನಲ್ಲಿ ಶಾಸಕರಾದ ಡಾ.ವೈ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ ನೇತೃತ್ವದಲ್ಲಿ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿ, ಕೊರೊನಾ ಮೂರನೇ ಹಂತದ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಇಂದು ಸಂಜೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಅಲ್ಲಿನ ಸ್ಥಳೀಯ
ದೇಶೆದೆಲ್ಲೆಡೆ ಚೌತಿ ಹಬ್ಬದ ವಿಗ್ರಹ ತಯಾರಿ ಈಗಾಗಲೇ ಆರಂಭಗೊಂಡಿದೆ. ಈ ನಡುವೆ ಗಣೇಶನ ಮೂರ್ತಿಗೆ ಫೈನಲ್ ಟಚ್ ಕೊಡಲಾಗುತ್ತಿದೆ. ಇನ್ನು ಮಂಗಳೂರಿನಲ್ಲೂ ಗಣೇಶ ಹಬ್ಬದ ಪ್ರಯುಕ್ತ ಪೂರ್ವತಯಾರಿ ಜೋರಾಗಿದ್ದು, ಕಳೆದ 92 ವರ್ಷದಿಂದ ಪಾರಂಪರಿಕವಾಗಿ ಗಣೇಶ ವಿಗ್ರಹ ತಯಾರಿ ಮಾಡುತ್ತಿರೋ ಸಹೋದರರ ಕೆಲಸ ಎಲ್ಲರ ಗಮನಸೆಳೆದಿದೆ. ಹಾಗಾದ್ರೆ ಇದು ಎಲ್ಲಿ ಅಂತೀರಾ ಇಲ್ಲಿದೆ. ಸ್ಪೆಷಲ್ ರಿಪೋರ್ಟ್… ಹೌದು ಮಂಗಳೂರಿನ ಮಣ್ಣಗುಡ್ಡೆಯ ರಾವ್ ಪ್ಯಾಮಿಲಿ, ಕಳೆದ 92 ವರ್ಷದಿಂದ,


















