Home Posts tagged #mangalore (Page 423)

ಮಂಗಳೂರಿನ ಜೈಲ್ ರೋಡ್ ಬಳಿ ಮಹಿಳೆಯರಿಗೆ ತಲ್ವಾರ್ ನಿಂದ ಹಲ್ಲೆ

ಮಂಗಳೂರಿನ ಜೈಲ್ ರೋಡ್ ಬಳಿಯ ಇರುವ ಡಯಟ್ ಸಂಸ್ಥೆಯ ಒಳಗೆ ನುಗ್ಗಿದ ದುಷ್ಕರ್ಮಿಯೋರ್ವ ಮೂವರು ಮಹಿಳೆಯರಿಗೆ ತಲ್ವಾರ್ ನಿಂದ ಹಲ್ಲೆ ನಡೆಸಿ ಘಟನೆ ನಡೆದಿದೆ. ಹಲ್ಲೆಗೊಳಗಾದವರನ್ನು ರೀನ, ಗುಣವತಿ, ನಿರ್ಮಲ ಎಂದು ಗುರುತಿಸಲಾಗಿದ್ದು, ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಹಾಗೂ ಹಿರಿಯ ಪೊಲೀಸರು ಭೇಟಿ ನೀಡಿ,

ದೇಶವನ್ನಾಳುವ ಸರಕಾರದ ನೀತಿಗಳನ್ನು ಹಿಮ್ಮೆಟ್ಟಿಸದೆ ಜನತೆಯ ಬದುಕನ್ನು ರಕ್ಷಿಸಲು ಅಸಾಧ್ಯ – ಮುನೀರ್ ಕಾಟಿಪಳ್ಳ

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ನೀತಿಗಳಿಂದ ಜ‌ನಸಾಮಾನ್ಯರು ಘನತೆಯಿಂದ ಬದುಕುವ ಹಕ್ಕನ್ನೇ ಕಳೆದುಕೊಳ್ಳುತ್ತಿದ್ದಾರೆ. ಮನಮೋಹನ್ ಸಿಂಗ್ ಸರಕಾರದ ಅವಧಿಯಲ್ಲಿ ಬಿಜೆಪಿ ಪ್ರಬಲವಾಗಿ ವಿರೋಧಿಸಿದ್ದ ಖಾಸಗೀಕರಣ, ವ್ಯಾಪಾರೀಕರಣದ ನೀತಿಗಳನ್ನು ಈಗ ರಭಸವಾಗಿ ಜಾರಿಗೆ ತರುವ ಮೂಲಕ ಶಿಕ್ಷಣ, ಆರೋಗ್ಯ, ಉದ್ಯೋಗ ಜನಸಾಮಾನ್ಯರಿಗೆ ನಿಲುಕದಂತಾಗಿದೆ. ದೇಶದ ಸಂಪತ್ತು ಬಹುರಾಷ್ಟ್ರೀಯ ಕಂಪೆನಿಗಳ ಪಾಲಾಗುತ್ತಿವೆ. ಬಿಜೆಪಿ ಸರಕಾರದ ವಿರುದ್ಧ ರೂಪುಗೊಳ್ಳುತ್ತಿರುವ

ದೋಣಿ ದುರಂತದಲ್ಲಿ‌ ಮೃತರಾದ ಮೀನುಗಾರ ಶೆರೀಫ್ ಕುಟುಂಬಕ್ಕೆ ಪರಿಹಾರ ಒದಗಿಸಲು ಆಗ್ರಹ

ವಾರದ ಹಿಂದೆ ಮೀನುಗಾರಿಕೆಯ ಸಂದರ್ಭ ದೋಣಿ ಮಗುಚಿ ಮೃತರಾದ ಕಸ್ಬಾ ಬೆಂಗ್ರೆಯ ನಿವಾಸಿ ಶೆರೀಫ್ ಕುಟುಂಬಕ್ಕೆ ಸರಕಾರದ ವತಿಯಿಂದ ಪರಿಹಾರ ಧನ ನೀಡುವಂತೆ ಕೋರಿ ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ಹರೀಶ್ ಕುಮಾರ್ ಅವರಿಗೆ “ಸಾಂಪ್ರದಾಯಿಕ ಮೀನುಗಾರರ ಸಂಘ” ದ ವತಿಯಿಂದ ಮನವಿ ಸಲ್ಲಿಸಲಾಯಿತು. ವೃದ್ದೆ ತಾಯಿ, ಸಹೋದರಿ, ಹೆಂಡತಿ, ಮೂರು ಸಣ್ಣ ಮಕ್ಕಳಿರುವ ಕುಟಂಬಕ್ಕೆ ಶೆರೀಫ್ ದುಡಿಮೆಯೇ ಆಧಾರವಾಗಿತ್ತು. ದಿಢೀರ್ ನಡೆದ ದುರಂತದಿಂದ ಮೃತ ಶೆರೀಫ್ ಕುಟುಂಬ

ಮಂಗಳೂರಿನ ಕರ್ನಾಟಕ ಆಯುರ್ವೇದ ಆಸ್ಪತ್ರೆಯಲ್ಲಿ ಲಸಿಕಾ ಶಿಬಿರ

ಮಂಗಳೂರಿನ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಸ್ಬಾ ಬೆಂಗ್ರೆ ಇದರ ಸಹಭಾಗಿತ್ವದಲ್ಲಿ ನಗರದ ಕರ್ನಾಟಕ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಲಸಿಕಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಸ್ಬಾ ಬೆಂಗ್ರೆ ಇದರ ಸಹಭಾಗಿತ್ವದಲ್ಲಿ

ದೇವಸ್ಥಾನಗಳು ಅನಧಿಕೃತ ಇದ್ರೆ ಅದನ್ನು ಅಧೀಕೃತವನ್ನಾಗಿ ಮಾಡಬೇಕು : ಡಾ|ಡಿ.ವೀರೇಂದ್ರ ಹೆಗ್ಗಡೆ

ಮೈಸೂರು ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೂ ಅನಧಿಕೃತ ದೇವಸ್ಥಾನ ಇಲ್ಲ ಇರೋದೆಲ್ಲವೂ ಅಧೀಕೃತ ದೇವಸ್ಥಾನಗಳೇ ಅನಧಿಕೃತ ಇದ್ರೆ ಅದನ್ನು ಅಧೀಕೃತ ವನ್ನಾಗಿ ಮಾಡಬೇಕು ಕಾನೂನು ಯಾರನ್ನೂ ಬಿಡೋದಿಲ್ಲ ಕಾನೂನನ್ನು ಎಲ್ಲರೂ ಪಾಲನೆ ಮಾಡಬೇಕು ಅನಧಿಕೃತ ದೇವಸ್ಥಾನಗಳಿದ್ದರು ಅದನ್ನು ಅಧೀಕೃತ ಮಾಡಬೇಕು ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದರು.

ಕೆಪಿಟಿ ಜಂಕ್ಷನ್ ಬಳಿ ನೂತನವಾಗಿ ಫ್ಲೈಓವರ್ ನಿರ್ಮಾಣಕ್ಕೆ ಅನುಮೋದನೆ

ಮಂಗಳೂರಿನ ಕೆಪಿಟಿ ಜಂಕ್ಷನ್ ಬಳಿ ನೂತನವಾಗಿ ಫ್ಲೈಓವರ್ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮೋದನೆ ನೀಡಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ. ಕೆಪಿಟಿ ಜಂಕ್ಷನ್ ಬಳಿ ನೂತನವಾಗಿ ಫ್ಲೈಓವರ್ ನಿರ್ಮಾಣಕ್ಕೆಅಂದಾಜು 34.8 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಫ್ಲೈಓವರ್ ಗೆ ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದ್ದಾರೆ. ಕೆಪಿಟಿ ಜಂಕ್ಷನ್ ನಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಇರುವ ಈ ಕಾಮಗಾರಿಗೆ

ಕಲಾವಿದರು ಕಷ್ಟದಲ್ಲಿದ್ದಾರೆ, ದುಡಿಯಲು ಅವಕಾಶ ಮಾಡಿಕೊಡಿ : ಹಿರಿಯ ಕಲಾವಿರದರ ಒಕ್ಕೊರಲಿನ ಆಗ್ರಹ

ಕೋವಿಡ್ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿ, ಶಾಲೆ ಕಾಲೇಜುಗಳು ಸಹಿತ ಎಲ್ಲವೂ ಸಹಜ ಸ್ಥಿತಿಗೆ ಬಂದಿದ್ದರೂ ಜಿಲ್ಲೆಯಲ್ಲಿ ಸಿನಿಮಾ ಮಂದಿರಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅವಕಾಶ ನೀಡದಿರುವುದು ಹಾಗೂ ನಾಟಕ ತಂಡಗಳಿಗೆ ಪ್ರದರ್ಶನಕ್ಕೆ ಅವಕಾಶ ಮಾಡಿ ಕೊಡದಿರುವುದರಿಂದ ಕಲಾವಿದರ ಪರಿಸ್ಥಿತಿ ಹದಗೆಟ್ಟಿದೆ. ನಾಟಕ, ಸಿನಿಮಾದಿಂದಲೇ ಜೀವನ ಸಾಗಿಸುವ ಕಲಾವಿದರ ಸ್ಥಿತಿ ತುಂಬಾ ಕಠಿಣವಾಗಿದೆ. ಹೀಗಾಗಿ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ರಾಜ್ಯದ ಮುಖ್ಯಮಂತ್ರಿಯವರಿಗೆ

ದೇವಸ್ಥಾನ ತೆರವು: ನಾಟಕ ನಿಲ್ಲಿಸಿ ಬಿಜೆಪಿ ಸರ್ಕಾರ ಜನರಲ್ಲಿ ಕ್ಷಮೆ ಯಾಚಿಸಬೇಕು: ಹರೀಶ್ ಕುಮಾರ್

ದೇವರು, ಜಾತಿ,ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ ಸರ್ಕಾರ ದೇವಸ್ಥಾನಗಳನ್ನು ಧ್ವಂಸ ಮಾಡುತ್ತಿದೆ. ಇದರಿಂದ ಜನರ ಮುಂದೆ ಬಿಜೆಪಿಯವರ ಬಣ್ಣ ಬಯಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಧರ್ಮದ ರಕ್ಷಕರು, ಹಿಂದೂ ರಕ್ಷಕರು, ಹಿಂದೂಗಳನ್ನು ಗುತ್ತಿಗೆಗೆ ತೆಗೆದುಕೊಂಡವರು, ಹಿಂದೂಗಳ ಮತ ಪಡೆದು ಸರ್ಕಾರ ರಚಿಸಿದವರು ದೇವಸ್ಥಾನಗಳನ್ನು ಧ್ವಂಸ

ಮಂಗಳೂರಿನಲ್ಲಿ ಹೆಂಡತಿ ಮತ್ತು ಮಗನಿಗೆ ಅಪ್ಪನಿಂದ ಚೂರಿ ಇರಿತ..!

ಮಂಗಳೂರು ನಗರದ ಕಂಕನಾಡಿಯ ಸೇರಾವೋ ರಸ್ತೆ ಕಂಪೌಂಡ್‌ನಲ್ಲಿ ಪತಿಯೇ ಪತ್ನಿ ಮತ್ತು ಪುತ್ರನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮಂಗಳೂರು ನಗರದ ಕಂಕನಾಡಿ ಸೇರಾವೋ ರಸ್ತೆ ಕಂಪೌಂಡ್ ನಿವಾಸಿ ರಮೇಶ್ ಬಂಗೇರಾ (54) ಎಂಬುವವರು ಪ್ರಕರಣದ ಆರೋಪಿ. ಬೇಬಿ ಕುಂದರ್ ಮತ್ತು ಅಶ್ವಿನ್ ಹಲ್ಲೆಗೊಳಗಾಗಿದ್ದಾರೆ. ಬೇಬಿ ಕುಂದರ್ ಅವರು ತನ್ನ ಗಂಡ ರಮೇಶ್ ಬಂಗೇರಾ ಮತ್ತು ಮಗ ಅಶ್ವಿನ್ ಜತೆಯಲ್ಲಿ ವಾಸವಾಗಿದ್ದರು. ಸೆ.11ರಂದು ರಾತ್ರಿ 10:30ಕ್ಕೆ ಗಂಡ ರಮೇಶ್ ಬಂಗೇರಾ

ಮಂಗಳೂರಲ್ಲಿ ಹಾಡುಹಗಲೇ ಮಹಿಳೆಯ ಸರಕಳ್ಳತನ: ವೀಡಿಯೋ ವೈರಲ್

 ಮಂಗಳೂರಿನ ಶಿವಭಾಗ್ ಬಳಿಯ ಆಗ್ನೆಸ್ ಕಾಲೇಜು ಮುಂಭಾಗದಲ್ಲಿ ಮಹಿಳೆಯೊಬ್ಬರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಆಗಂತುಕರು ಆಕೆಯ ಕುತ್ತಿಗೆಯಿಂದ ಸರ ಕಿತ್ತು ಪರಾರಿಯಾದ ಘಟನೆ ನಡೆದಿದೆ. ರಿಟ್ಸ್ ಕಾರಿನಲ್ಲಿ ಬಂದ ಮೂವರು ನಗರದ ಆಗ್ನೆಸ್ ಕಾಲೇಜಿನ ಎದುರುಗಡೆಯಿಂದ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಆಕೆಯ ಕುತ್ತಿಗೆಯಿಂದ ಸರ ಕಿತ್ತು ಓಡಿದ್ದಾರೆ. ರಿಟ್ಸ್ ಕಾರಿನಿಂದ ಮೊದಲು ಮೂವರು ಇಳಿದಿದ್ದು ಇಬ್ಬರು ಬಾಗಿಲು