ಖಾಸಗಿ ಬಸ್ ಪ್ರಯಾಣ ದರವನ್ನು ವಿಪರೀತವಾಗಿ ಏರಿಸುವ ಮೂಲಕ ದ.ಕ.ಜಿಲ್ಲಾಡಳಿತ ಸಂಪೂರ್ಣವಾಗಿ ಬಸ್ ಮಾಲಕರ ಲಾಬಿಗೆ ಶರಣಾಗಿದೆ. ಬೆರಳೆಣಿಕೆಯಷ್ಟು ಇರುವ ಬಸ್ ಮಾಲಕರ ಸಂಕಷ್ಟದ ಬಗ್ಗೆ ಭಾರೀ ಕಾಳಜಿ ವ್ಯಕ್ತಪಡಿಸುವ ಜಿಲ್ಲಾಧಿಕಾರಿಗಳು,ಜಿಲ್ಲೆಯ ಲಕ್ಷಾಂತರ ಜನತೆಯ ಸಂಕಷ್ಟವನ್ನು ಅರಿಯಲು ವಿಫಲರಾಗಿದ್ದಾರೆ ಎಂದು CPIM ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ
ದ. ಕ , ಉಡುಪಿ ಜಿಲ್ಲೆಗಳಲ್ಲಿ ಸತತವಾಗಿ ವಾರಾಂತ್ಯ ಲಾಕ್ಡೌನ್ ಮುಂದುವರಿಸುತ್ತಿರುವುದರಿಂದ ಜನ ಸಾಮಾನ್ಯ ರಿಗೂ ಕೆಲ ವರ್ಗದ ವ್ಯಾಪಾರಿಗಳಿಗೂ ತೀವ್ರ ತೊಂದರೆ ಯಾಗಿದ್ದು ಅವೈಜ್ಞಾನಿಕ ಮತ್ತು ತಾರ ತಮ್ಯ ಗಳಿಂದ ಕೂಡಿದ ಈ ನಿರ್ಧಾರವನ್ನು ಪ್ರತಿಭಟಿಸಿ ಅಂಗಡಿ ತೆರೆದು ವ್ಯವಹಾರ ನಡೆಸಲು ಕರಾವಳಿ ಜಿಲ್ಲೆಗಳ ಜವಳಿ, ಪಾದರಕ್ಷೆ, ಫ್ಯಾನ್ಸಿ ಮುಂತಾದ ಅಂಗಡಿಗಳ ಮಾಲೀಕರು ನಿನ್ನೆ ನಡೆದ ಸಂಘದ ವಿಶೇಷ ಮಹಾ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಂಡರು. ಪ್ರತೀ ಅಂಗಡಿಯವರು
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಲೈಂಗಿಕ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಬಂಧಿಸಿದ್ದು ಉಳಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಅವರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಹಾಗೂ ಮಹಿಳೆಯರಿಗೆ ರಕ್ಷಣೆಯನ್ನು ನೀಡಬೇಕೆಂದು ಸರಕಾರವನ್ನು ಒತ್ತಾಯಿಸಿ ದುರ್ಗಾವಾಹಿನಿ ವತಿಯಿಂದ ಪ್ರತಿಭಟನೆ ನಡೆಸಿದರು. ಕದ್ರಿ ಮಲ್ಲಿಕಟ್ಟೆ ವೃತ್ತದ ಬಳಿ ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದರು. ಎಲ್ಲಾ
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಆಚರಿಸಲಾಯ್ತು.ಇನ್ನು ಕಾರ್ಯಕ್ರಮ ವನ್ನ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ತದ ಬಳಿಕ ಮಾತನಾಡಿದ ಅವರು, ಈ ಬಾರಿ ಕೋವಿಡ್ ಸೋಂಕು ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಯಲಿ, ದೇವರ ಅನುಗ್ರಹದಿಂದ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆಯಿತು. ನಗರದ ಕೆಪಿಟಿಯಿಂದ ಮೇರಿಹಿಲ್ ತನಕ ಮನಪಾ ಅಧಿಕಾರಿಗಳು ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆಗೆ ಇಳಿದಿದ್ದಾರೆ.ರಸ್ತೆಯ ಬದಿಯಲ್ಲಿದ್ದಂತಹ ಅನಧಿಕೃತ ಗೂಡಂಗಡಿಗಳನ್ನು ತೆರವು ಮಾಡಲಾಯಿತು.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಆತ್ಯಚಾರವೆಸಗಿದವರನ್ನು ಶೀಘ್ರದಲ್ಲಿ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ ಅವರು, ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ತೀವ್ರ ಖಂಡನೀಯ. ಕೂಡಲೇ
ಮಂಗಳೂರು: ಬಾಲನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ಶೀಘ್ರದಲ್ಲೇ ಇತ್ಯರ್ಥಪಡಿಸುವಂತೆ ಮಕ್ಕಳ ರಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೂಚಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸಭೆ ಹಾಗೂ ಚೈಲ್ಡ್‍ಲೈನ್ ಸಲಹಾ ಮಂಡಳಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ 2 ಬಾಲನ್ಯಾಯಮಂಡಳಿಯಲ್ಲಿ ಬಾಕಿ ಇರುವ ಒಟ್ಟು 165
ಸುರತ್ಕಲ್: ರೈತರಿಗೆ ಮಾಹಿತಿ ನೀಡುವ ಸಲುವಾಗಿ, ಬೆಳೆ ಸಮೀಕ್ಷೆ, ಹಾನಿಯಾದಲ್ಲಿ ಪರಿಹಾರ ಪಡೆಯಲು ಅನುಕೂಲವಾಗುವಂತೆ ದಾಖಲೀಕರಣಕ್ಕೆ ಸರಕಾರ ಹೊಸ ತಂತ್ರಜ್ಞಾನ ಬಳಸಿ ಕೃಷಿ ಆಪ್ ಹೊರ ತಂದಿದ್ದು ಕೃಷಿ ಇಲಾಖೆಯ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡುವ ಮೂಲಕ ಇದರ ಸದುಪಯೋಗ ಆಗಬೇಕಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಕಾವೂರಿನಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಆಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರೈತ ತಾನು ಬೆಳೆಯುವ ಬೆಳೆಯ
ವ್ಯಕ್ತಿಯೊಬ್ಬ ನಗರದ ವಿವಿಧ ಹೊಟೇಲ್ ಗಳಲ್ಲಿ ಉಳಿದುಕೊಂಡು ಮೋಸ ಎಸಗಿರುವ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಬಂಧಿತ ಆರೋಪಿಯಾಗಿದ್ದಾನೆ. ಈತ ದೆಹಲಿ ಏಮ್ಸ್ ಆಸ್ಪತ್ರೆಯ ಡಾಕ್ಟರ್ ಅಂತ ಹೇಳಿಕೊಂಡು , ಪ್ರೊಫೆಸರ್ ಮತ್ತು ಸರ್ಜನ್ ಆಗಿರುವ ಐಡಿ ತೋರಿಸಿದ್ದ. ನಗರದ ಸ್ಟೇಟ್ ಬ್ಯಾಂಕ್ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಹೊಟೇಲ್ ಸಿಟಿ ವಾಕ್ ರೆಸಿಡೆನ್ಸಿಯಲ್ಲಿ ರೂಮ್ ಪಡೆದು ಕೊನೆಗೆ ಚೆಕ್ ಔಟ್ ವೇಳೆ, ಹಣ ಕೊಡದೆ ಪರಾರಿಯಾಗಿದ್ದ. ಹೊಟೇಲ್
ಕರಾವಳಿಯಲ್ಲಿ ಕೆಲವು ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಎನ್‍ಐಎ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಜೊತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು. ಅಪ್ಘಾನಿಸ್ತಾನದಲ್ಲಿ


















