Home Posts tagged #mangalore (Page 429)

ಮರವೂರು ಸೇತುವೆ ದುರಸ್ತಿ ಕಾಮಗಾರಿ ಪೂರ್ಣ

ಮಂಗಳೂರು: ಕುಸಿದಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣಗೊಂಡು ಶುಕ್ರವಾರ ಸಾಯಂಕಾಲದಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೇರ ಸಂಪರ್ಕ ಕಲ್ಪಿಸಲು ಸಹಕಾರಿಯಾಗಿದ್ದ ಮರವೂರು ಸೇತುವೆ ಒಂದುವರೆ ತಿಂಗಳ ಹಿಂದೆ ಎರಡು ಅಡಿಯಷ್ಟು ಕುಸಿದಿತ್ತು. ಬೆಂಗಳೂರಿನಿಂದ ಬಂದ

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಶ್ರೀನಿವಾಸ ನಾಯಕ್ ಇಂದಾಜೆ ಅವಿರೋಧ ಆಯ್ಕೆ

ಮಂಗಳೂರು:ಪತ್ರಕ ರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮಂಗಳೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಯ ಪ್ರಕ್ರೀಯೆಯನ್ನು ಸಹಕಾರ ಸಂಘದ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ.ಎಂ ಚುನಾವಣಾಧಿಕಾರಿಯಾಗಿ ನಡೆಸಿಕೊಟ್ಟರು.ಸಂಘದ ನಿರ್ದೇಶಕರಾದ ಕೇಶವ ಕುಂದರ್ ,ಪುಷ್ಪರಾಜ್ ಬಿ.ಎನ್,ಇಬ್ರಾಹಿಂ

ಮಂಗಳೂರು ಬೀಚ್‍ನಲ್ಲಿ ಯುವಕರ ಗಾಂಜಾ ಸೇವನೆ : ವೀಕೆಂಡ್ ಮೋಜು-ಮಸ್ತಿ

ಮಂಗಳೂರು ನಗರ ಹೊರವಲಯದ ಪಣಂಬೂರು ಕುಳಾಯಿ ಬೀಚ್‍ನಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಿರುವ ದೃಶ್ಯ ಕ್ಯಾಮರದಲ್ಲಿ ಸೆರೆಯಾಗಿದೆ. ವೀಕೆಂಡ್ ಸಮಯದಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ. ಬೀಚ್‍ನಲ್ಲಿ ಯುವಕರ ಉಪಟಳದಿಂದ ಜನರ ಆತಂಕಕ್ಕೆ ಕಾರಣವಾಗಿದೆ. ಗಾಂಜಾ ಸೇವನೆ ಮಾಡಿದ ಬಳಿಕ ಯುವಕರು ಬೀಚ್‍ನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿಕೊಂಡಿರುವುದೇ ಕಾರಣ. ಈ ಬಗ್ಗೆ ಪೆÇಲೀಸರು

ನಾರಾಯಣ ಗುರು ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ

ಮಂಗಳೂರಿನ ನಾರಾಯಣ ಗುರು ಪದವಿ ಕಾಲೇಜಿನಲ್ಲಿ ಜುಲೈ 25ರಿಂದ 31ರ ವರೆಗೆ ಬಿಕಾಂ ತರಗತಿಗೆ ದಾಖಲಾಗುವ ಎಲ್ಲಾ ವಿದ್ಯಾರ್ಥಿನಿಯರಿಗೆ ಸಂಪೂರ್ಣ ಉಚಿತ ಶಿಕ್ಷಣವನ್ನು ನೀಡುವುದಾಗಿ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.ನಗರದ ನಾರಾಯಣ ಗುರು ಪದವಿ ಕಾಲೇಜಿನಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಿದ್ದು, ಅದರಂತೆ ಜುಲೈ 25ರಿಂದ ಜುಲೈ 31ರ ವರೆಗೆ ದಾಖಲಾತಿ ಮಾಡಿಕೊಳ್ಳುವ ವಿದ್ಯಾರ್ಥಿನಿಯರಿಗೆ ಪೂರ್ಣವಾಗಿ ಉಚಿತ ಶಿಕ್ಷಣ

ಆಸ್ಕರ್ ಫೆರ್ನಾಂಡಿಸ್ ಅವರ ಯೋಗಕ್ಷೇಮ ವಿಚಾರಿಸಿದ ಮಾಜಿ ಸಚಿವ ಅಂಜನೇಯ

ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫರ್ನಾಡೀಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಮಾಜಿ ಸಚಿವ ಅಂಜನೇಯ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ರು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆಸ್ಕರ್ ಅವರು ಬಡವರ ಹಾಗೂ ಪಕ್ಷದ ಅಪಾರ ಕಾಳಜಿಹೊಂದಿಕೊಂಡಿದ್ದಾರೆ. ಶ್ರೀಘದಲ್ಲೇ ಆರೋಗ್ಯ ಸುಧಾರಿಸಿಕೊಳ್ಳಲಿ, ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಅವರ

ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿದ ಉಡುಪಿ ಅದಮಾರು ಮಠದ ಶ್ರೀಗಳು

ಮಂಗಳೂರು: ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಉಡುಪಿ ಅದಮಾರು ಮಠದ ವಿಶ್ವಪ್ರೀಯ ತಿರ್ಥ ಸ್ವಾಮೀಜಿ ಭೇಟಿ ನೀಡಿ ಅರೋಗ್ಯ ವಿಚಾರಿಸಿದ್ರು. ಇದೇ ವೇಳೆ ಆಸ್ಕರ್ ಕುಟುಂಬಿಕರಿಗೆ ಧೈರ್ಯ ತುಂಬಿದರು. ಅದಮಾರು ಮಠ, ಗುರುಗಳು ಅಂದರೆ ಅಸ್ಕರ್ ಅವರಿಗೆ ಬಹಳ ಗೌರವ, ಇವರ ತಂದೆಯವರು ನಮ್ಮ ಗುರುಗಳಿಗೆ ಹೆಡ್ ಮಾಸ್ಟರ್ ಅಗಿದ್ದವರು. ಆಸ್ಕರ್ ಅವರು ಮಾಡಿದ ಸಮಾಜ ಸೇವೆ ಅನನ್ಯ.

ಬಸ್ ಚಲಾಯಿಸುವಾಗಲೇ ಕುಸಿದ ಚಾಲಕ : ತಪ್ಪಿದ ದುರಂತ

ಕಿಕ್ಕಿರಿದು ತುಂಬಿದ್ದ ಬಸ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಬಸ್ ಚಾಲಕನಿಗೆ ರಕ್ತ ಒತ್ತಡ ಕಡಿಮೆಯಾದ ಪರಿಣಾಮ ಸ್ಟೇರಿಂಗ್ ಮೇಲ್ಗಡೆಯೇ ಉರುಳಿ ಬಿದ್ದ ಘಟನೆ ನಗರ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದ್ದು ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕಿಗೆ ಬರುತ್ತಿದ್ದ ಸೇಫ್ ವೇ ಟ್ರಾವೆಲ್ಸ್ ಹೆಸರಿನ ಖಾಸಗಿ ಬಸ್ ಅಡ್ಯಾರ್ ಸಮೀಪಿಸುತ್ತಿದ್ದಂತೆ ಚಾಲಕನಿಗೆ ಕಣ್ಣು ಮಂಜಾಗಿದ್ದು ತಕ್ಷಣ ಬಸ್

ಮಂಗಳೂರು: ಭಜನಾ ಮಂದಿರಕ್ಕೆ ನುಗ್ಗಿ ಕಾಣಿಕೆ ಡಬ್ಬಿ ಕಳವು; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಮಂಗಳೂರು: ನಗರದ ನೀರುಮಾರ್ಗದ ಜಂಕ್ಷನ್ ಸಮೀಪದಲ್ಲಿರುವ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರಕ್ಕೆ ನುಗ್ಗಿದ ಇಬ್ಬರು ಕಳ್ಳರು ಕಾಣಿಕೆ ಡಬ್ಬಿ ಕಳವುಗೈದಿರುವ ಘಟನೆ ಬುಧವಾರ ನಸುಕಿನ ವೇಳೆ ನಡೆದಿದೆ. ಇದರ ಸಂಪೂರ್ಣ ದೃಶ್ಯ ಭಜನಾ ಮಂದಿರದ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಭಜನಾ ಮಂದಿರದ ಮುಂಭಾಗಕ್ಕೆ ನಸುಕಿನ ವೇಳೆ 1.45ರ ಸುಮಾರಿಗೆ ಆಗಮಿಸಿರುವ ಕಳ್ಳರು ಮುಂಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ್ದಾರೆ‌. ಬಳಿಕ ಉತ್ತರದ ಬಾಗಿಲು ತೆರೆದು ಪ್ರಧಾನ ಗುಡಿಯ

ಪಂಪ್‌ ವೆಲ್‌ ನೆರೆ ಮಾಧ್ಯಮ ಸೃಷ್ಟಿ : ನಳಿನ್ ಅಧ್ಯಕ್ಷತೆ ಸಭೆಯಲ್ಲಿ ಇಂಜಿನಿಯರ್ ಹೇಳಿಕೆ

 ಪಂಪ್‌ವೆಲ್‌ನಲ್ಲಿ ನೀರು ನಿಲ್ಲುವುದು ಮಾಧ್ಯಮದ ಸೃಷ್ಟಿ. ಅವರು ಕ್ಯಾಮರಾದಲ್ಲಿ ಝೂಮ್ ಮಾಡಿ ತೋರಿಸುತ್ತಿದ್ದಾರೆ ಹೀಗಂತ.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಕಾರಿ ಇಂಜಿನಿಯರ್ ಶಿಶುಮೋಹನ್ ಅವರು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಹೇಳಿಕೊಂಡಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಇಂದು ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ