ರಾಸ್ತಿಗಳ ಮೇಲಿನ ವ್ಯವಹಾರಗಳ ದಸ್ತಾವೇಜುಗಳ ನೋಂದಣಿ ಶುಲ್ಕವನ್ನು ಶೇ 1ರಿಂದ ಶೇ 2ಕ್ಕೆ ಏರಿಸಿ ರಾಜ್ಯ ಸರ್ಕಾರವು ಆದೇಶಿಸಿದೆ. ಭಾನುವಾರದಿಂದಲೇ (ಆಗಸ್ಟ್ 31) ಇದು ಜಾರಿಯಾಗಲಿದ್ದು, ಸಾರ್ವಜನಿಕರು ಆಸ್ತಿ ನೋಂದಣಿಗೆ ಹೆಚ್ಚು ಶುಲ್ಕ ತೆರಬೇಕಾಗುತ್ತದೆ. ಈ ಮೊದಲು ಸ್ಥಿರಾಸ್ತಿ ನೋಂದಣಿ ವೇಳೆ ಆಸ್ತಿಯ ಮಾರ್ಗಸೂಚಿ ಮೌಲ್ಯದ ಶೇ 5ರಷ್ಟು ಮುದ್ರಾಂಕ ಶುಲ್ಕ, ಶೇ
ಧರ್ಮ, ಪೂಜೆ, ಭಕ್ತಿ ಪ್ರದರ್ಶನದ ವಸ್ತುವಲ್ಲ. ಆಚಾರ, ವಿಚಾರವನ್ನು ಎಲ್ಲರೂ ಒಟ್ಟಾಗಿ ಕೊಂಡೊಯ್ಯಬೇಕು.ಮರಕ್ಕೆ ಬೇರು ಎಷ್ಟು ಮುಖ್ಯವೋ ಹಾಗೆಯೇ ಮನುಷ್ಯನಿಗೆ ನಂಬಿಕೆ ಮುಖ್ಯ. ಹೀಗಾಗಿ ಧರ್ಮವನ್ನು ಉಳಿಸಿಕೊಂಡು ನಾವೆಲ್ಲರೂ ಮುಂದೆ ಸಾಗೋಣ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠದ ವತಿಯಿಂದ ಪರ್ಯಾಯ ಪುತ್ತಿಗೆ ಮಠಾ ಧೀಶ ರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ 64ನೇ ಜನ್ಮ ನಕ್ಷತ್ರೋತ್ಸವ ಸಂಭ್ರಮ
ಮಂಜೇಶ್ವರ ಸಮೀಪ ವರ್ಕಾಡಿ ಕೆಳಗಿನ ಪಾಡ ರಾಮಯ್ಯ ನಾಯ್ಕ್ (80)ರವರು ಅಲ್ಪ ಕಾಲೀನ ಅನಾರೋಗ್ಯ ದಿಂದ ಮೃತ ಪಟ್ಟಿರುತ್ತಾರೆ. ಅವರು ಜನಸಂಘ ಕಾಲದಿಂದ ಬಿಜೆಪಿ ಸದಸ್ಯರು ಹಾಗೂ ಆರ್ ಎಸ್ ಎಸ್ ಕಾರ್ಯಕರ್ತರು ಮತ್ತು ವರ್ಕಾಡಿ ದುರ್ಗಾಪರಮೇಶ್ವರಿ ಭಜನಾ ಮಂದಿರ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಹಾಗೂ ಗುಡ್ಡೋಡಿ ದೈವಸ್ಥಾನ ದ ಗೌರವಾಧ್ಯಕ್ಷರಾಗಿದ್ದು ಅವರು ಉತ್ತಮ ಸಮಾಜಸೇವಕರಾಗಿದ್ದರು. ಅವರು ಹೆಂಡತಿ, ಮಗಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿರುತ್ತಾರೆ.
ಸುಳ್ಯ: ದೂರವಾಣಿ ಸಂಪರ್ಕವಿಲ್ಲದ ಗ್ರಾಮೀಣ ಭಾಗದಿಂದ ಸುಮಾರು 10 ಕಿಲೋಮೀಟರ್ ದೂರದ ಹಳ್ಳಿಯ ಪ್ರತಿಭೆ ಇಂದು ತಾಲೂಕಿನ ಹೆಮ್ಮೆಯಾಗಿ ಹೊರಹೊಮ್ಮಿದ್ದಾಳೆ. ಹೌದು ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಬೆದ್ರುಪಣೆ ದಿ.ನಾಗಪ್ಪ ಎಂ ಎ ಹಾಗೂ ಜಾನಕಿ ದಂಪತಿಗಳ ಹಿರಿಯ ಪುತ್ರಿ ಶುಶ್ಮಿತ ಇದೀಗ ಎಸ್ ಎಸ್ ಸಿ ಜಿ ಡಿ ಪರಿಕ್ಷೆಯಲ್ಲಿ ತೇರ್ಗಡೆಯಾಗಿ ತಾಲೂಕಿಗೆ ಹೆಮ್ಮೆಯಾಗಿದ್ದಾಳೆ. ಈಕೆ ಪ್ರಾಥಮಿಕ ಶಿಕ್ಷಣದ ಸಂದರ್ಭದಲ್ಲಿ ದೇಶ ಕಾಯುವ ಸೈನಿಕ ವೃತ್ತಿಯ ಕಡೆಗೆ ಆಕರ್ಷಿತಲಾಗಿ
ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿದೇರ್ಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ “ನೆತ್ತೆರೆಕೆರೆ ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿತು. ನಗರದ ಭಾರತ್ ಸಿನಿಮಾಸ್‌ನಲ್ಲಿ ನಟ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನೆತ್ತೆರೆಕೆರೆ ಸಿನಿಮಾ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಲಿ ಎಂದರು. ಪತ್ರಕರ್ತರು ಮತ್ತು ಸಿನಿಮಾ ನಿರ್ಮಾಪಕರಾದ ಪ್ರಕಾಶ್ ಪಾಂಡೇಶ್ವರ್ ಅವರು
ಉಡುಪಿ: ಉಡುಪಿ ಸಿ.ಎಸ್.ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯ ಸ್ತನ ಕ್ಯಾನ್ಸರ್ ಪರೀಕ್ಷಾ ಘಟಕದ (ಮ್ಯಾಮೋಗ್ರಫಿ ಯುನಿಟ್) ಉದ್ಘಾಟನೆ ಇದೇ ಆಗಸ್ಟ್ 30 ರಂದು ಬೆಳಿಗ್ಗೆ 10 ಗಂಟೆಗೆ ಆಸ್ಪತ್ರೆಯ ಚಾಪೆಲ್ ನಲ್ಲಿ ನಡೆಯಲಿದೆ ಎಂದು ಮಿಷನ್ ಆಸ್ಪತ್ರೆಯ ನಿರ್ದೇಶಕ ಡಾ. ಸುಶೀಲ್ ಜತ್ತನ್ನ ತಿಳಿಸಿದರು.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಅವರು ನೂತನ ಘಟಕವನ್ನು ಉದ್ಘಾಟಿಸಲಿದ್ದಾರೆ. ಸಿಎಸ್‌ಐ, ಕೆಎಸ್ ಡಿ
ಪುತ್ತೂರು: ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ನಟ ಸ್ವರಾಜ್ ಶೆಟ್ಟಿ ನಿರ್ದೇಶನ ಹಾಗೂ ಉದ್ಯಮಿ ಲಂಚುಲಾಲ್ ಕೆ.ಎಸ್ ನಿರ್ಮಿಸಿರುವ ತುಳುವಿನ “ನೆತ್ತೆರೆಕೆರೆ ಸಿನೆಮಾ ಆ.29ರಿಂದ ಕರಾವಳಿಯಾದ್ಯಂತ ತೆರೆಕಾಣಲಿದೆ. ಪತ್ರಿಕಾಗೋಷ್ಠಿಯಲ್ಲಿ ನಟ, ನಿರ್ದೇಶಕ ಸ್ವರಾಜ್ ಶೆಟ್ಟಿ ಅವರು ಮಾತನಾಡಿ, ಈ ಸಿನೆಮಾ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದೆ. ಪ್ರಸಕ್ತ ಇರುವ ತುಳು ಸಿನೆಮಾದ ಚೌಕಟ್ಟನ್ನು ಮೀರಿ ಹೊಸ ಬಗೆಯ ದೃಷ್ಟಿಯಿಂದ ಈ ಸಿನೆಮಾ ರೂಪಿಸಿದ್ದು,
ಮಂಜೇಶ್ವರ : ತಲಪಾಡಿಯಲ್ಲಿ ಭೀಕರ ವಾಹನ ಅಪಘಾತ ಕಾಸರಗೋಡು ಭಾಗದಿಂದ ಮಂಗಳೂರು ಕಡೆ ಪ್ರಯಾಣಿಕರನ್ನು ಹೇರಿ ಕೊಂಡು ಹೋಗುತಿದ್ದ ಕರ್ನಾಟಕ ಸಾರಿಗೆ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮತ್ತೊಂದು ಭಾಗದಲ್ಲಿ ನಿಲುಗಡೆಗೊಂಡಿದ್ದ ಆಟೋ ರಿಕ್ಷಾ ಹಾಗೂ ಬಸ್ಸಿಗಾಗಿ ಕಾಯತಿದ್ದ ಪ್ರಯಾಣಿಕರಿಗೆ ಡಿಕ್ಕಿ ಹೊಡಿದಿದೆ. ಹೊಡೆತದ ರಭಸಕ್ಕೆ ಆಟೋ ರಿಕ್ಷಾ ಪೂರ್ಣವಾಗಿ ಜಖಂ ಗೊಂಡಿದೆ. ಆಟೋ ರಿಕ್ಷಾದಲ್ಲಿದ್ದ ಕೆ ಸಿ ರೋಡ್ ನಿವಾಸಿಗಳಾದ ಆಯಿಷಾ, ನಸೀಮ, ಕದೀಜ, ಸೇರಿದಂತೆ 7 ಮಂದಿಯನ್ನು
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಳ್ಳೂರ್ 11 25ನೇ ವರ್ಷದ ರಜತ ಮಹೋತ್ಸವದ ಸಂಭ್ರಮ ನಡೆಯಿತು. ಗಣೇಶೋತ್ಸವ ಸಂಭ್ರಮದಲ್ಲಿ ಗಣೇಶನ ವಿಗ್ರಹವನ್ನು ಭವ್ಯ ಮೆರವಣಿಗೆ ಮೂಲಕ ಕರೆತರಲಾಯಿತು ನಂತರ ಪೂಜಾ ಸ್ಥಳವನ್ನು ಸ್ವಚ್ಛಗೊಳಿಸಿ, ಕಲಶ ಸ್ಥಾಪಿಸಿ, ಅರಿಶಿನ, ಕುಂಕುಮ, ಗಂಧ, ಗರಿಕೆ, ಹೂವು, ಅಗರಬತ್ತಿ, ವೀಳ್ಯದೆಲೆ, ಅಡಿಕೆ, ಬೆಲ್ಲ, ಫಲಪುಷ್ಪ, ಹಾಗೂ 21 ಮೋದಕಗಳನ್ನು ನೈವೇದ್ಯ ಮಾಡಿ ಪೂಜೆಯನ್ನು ನೆರವೇರಿಸಲಾಯಿತು. ಪೂಜೆಯು ಕಾಯಾ, ವಾಚಾ, ಮನಸಾ, ಶೋಡಶೋಪಚಾರ
ಕಳೆದ ಮೂರು ವರ್ಷಗಳಿಂದ ಪಟ್ಲ ಶ್ರೀ ಸತೀಶ್ ಶೆಟ್ಟಿ ನೇತೃತ್ವದ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ, ರಂಗಭೂಮಿ, ದೈವಾರಾಧನೆ ಮತ್ತು ಕಂಬಳ ಕ್ಷೇತ್ರದ ಸಾವಿರಾರು ಕಲಾವಿದರಿಗೆ ಮಂಗಳೂರು ಅಂಚೆ ವಿಭಾಗದ ಸಹಯೋಗದಲ್ಲಿ ಉಚಿತವಾಗಿ ಅಪಘಾತ ವಿಮಾ ಸುರಕ್ಷೆಯನ್ನು ಪ್ರಾಯೋಜಿಸುತ್ತಿದ್ದು ಇತ್ತೀಚೆಗೆ ಅಪಘಾತಕ್ಕೊಳಗಾಗಿ ನಿಧನರಾದ ಯಕ್ಷಗಾನ ಕಲಾವಿದರಾದ ಆನಂದ ಮತ್ತು ಪ್ರವೀತ್ ಅವರ ಕುಟುಂಬಗಳಿಗೆ ತಲಾ ರೂ.ಹತ್ತು ಲಕ್ಷದ ವಿಮಾ ಪರಿಹಾರವನ್ನು ವಿತರಣೆ ಮಾಡಲಾಯಿತು. ಹಿರಿಯ



























