Home Posts tagged #mangalore (Page 49)

ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಮತ್ತು 11ನೇ ಎಟಿಎಮ್ ಉದ್ಘಾಟನೆ

ತನ್ನ ಗೌರವಾನ್ವಿತ ಗ್ರಾಹಕರ ಅನುಕೂಲಕ್ಕಾಗಿ, ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆಯನ್ನು ಆಗಸ್ಟ್ 17, 2025 ರಂದು ಮಂಗಳೂರಿನ ಕಲ್ಪನೆಯಲ್ಲಿರುವ ಸ್ಪೆಕ್ಟ್ರಮ್ ಬಿಸಿನೆಸ್ ಸೆಂಟರ್‌ನ ಕೆಳ ಮಹಡಿಯಲ್ಲಿರುವ ಹೊಸದಾಗಿ ಖರೀದಿಸಿದ ಸ್ವಂತ ನಿವೇಶನಕ್ಕೆ ಸ್ಥಳಾಂತರಿಸಲಾಯಿತು.ಹೊಸ ಕಛೇರಿಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಉದ್ಘಾಟಿಸಿದರು.

ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಡುಬಿದ್ರಿಯಲ್ಲಿ ಬೃಹತ್ ಗಾಂಧಿ ಭಾರತ ಸಮಾವೇಶ

ಪಡುಬಿದ್ರಿ:ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಭಾರತ ಬೃಹತ್ ಸಮಾವೇಶವನ್ನು ಪಡುಬಿದ್ರಿಯಲ್ಲಿ ಭವ್ಯವಾಗಿ ಹಮ್ಮಿಕೊಳ್ಳಲಾಯಿತು. ಈ ಸಮಾವೇಶಕ್ಕೆ ಮಾಜಿ ಸಚಿವರು ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರು ನೇತೃತ್ವ ವಹಿಸಿದ್ದರು. ಈ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ವಿಫ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮ್ಮದ್ ಭಾಗವಹಿಸಿ, ಕಾಂಗ್ರೆಸ್ ಪಕ್ಷದ ತತ್ವ ಮತ್ತು ಮೌಲ್ಯಗಳನ್ನು ಜನರೊಳಗೆ ತಲುಪಿಸುವ ಅಗತ್ಯವನ್ನು

ವಿಶೇಷ ಸರಕಾರಿ ಅಭಿಯೋಜಕರು ವೈ.ಟಿ ರಾಘವೇಂದ್ರರವರ ಕಾರ್ಯವೈಖರಿ ಬಗ್ಗೆ ಜಿಲ್ಲಾ ಪೊಲೀಸ್‌ ಅಧೀಕ್ಷಕರಿಂದ ಪ್ರಶಂಸೆಯ ಪತ್ರ

ಪಡುಬಿದ್ರೆ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 47/2024 ಮತ್ತು ಬೈಂದೂರು ಠಾಣಾ ಅಪರಾಧ ಕ್ರಮಾಂಕ 240/2024ರಲ್ಲಿ ದಾಖಲಾದ ಪ್ರಕರಣಗಳಲ್ಲಿ ಆಪಾದಿತರಿಗೆ ಗರಿಷ್ಠ ಪ್ರಮಾಣದ ಶಿಕ್ಷೆ ಕೊಡಿಸುವಲ್ಲಿ ವಿಶೇಷ ಮುತುವರ್ಜಿ ವಹಿಸಿದ್ದ ವೈ.ಟಿ ರಾಘವೇಂದ್ರ ವಿಶೇಷ ಸರಕಾರಿ ಅಭಿಯೋಜಕರು, ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಫಾಸ್ಟ್ ಟ್ರ್ಯಾಕ್ -(ಪೋಕ್ಸ್), ಉಡುಪಿ ಇವರಿಗೆ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಐ.ಪಿ.ಎಸ್ ಹರಿರಾಮ್ ಶಂಕರ್ ಅವರು ಜಿಲ್ಲಾ

ಕಾಪು ತಾಲೂಕು ದಸರಾ ಕ್ರೀಡಾಕೂಟ:ಹೆಜಮಾಡಿ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ಚಾಲನೆ

ಪಡುಬಿದ್ರಿ :ಕಾಪು ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯೋಜನೆಯಲ್ಲಿ ಹೆಜಮಾಡಿ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2025 – 26 ಭಾನುವಾರದಂದು ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಕಾಪು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ನವೀನ್ ಚಂದ್ರ ಎಸ್ ಸುವರ್ಣ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೆ ಅವಕಾಶವಿದೆ. ಯುವ ಸಮೂಹ ಕ್ರೀಡೆಯಲ್ಲಿ

ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ ರಾಜ್ಯ ಬಿಜೆಪಿ ನಿಯೋಗ

ಧರ್ಮಸ್ಥಳ ಕ್ಷೇತ್ರದ ಕುರಿತು ನಿರಂತರ ಅಪಪ್ರಚಾರ ಮಾಡಲಾಗುತ್ತಿದೆ ಎಂಬ ಹಿನ್ನೆಲೆ ರವಿವಾರ ಬೆಳಗ್ಗೆ ರಾಜ್ಯ ಬಿಜೆಪಿ ನಿಯೋಗ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ದೇವರ ದರ್ಶನ ಪಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರು, ಬಿಜೆಪಿಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ವಿವಿಧ ಪದಾಧಿಕಾರಿಗಳು ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ

ಜಮ್ಮು-ಕಾಶ್ಮೀರದ: ಕಥುವಾ ಜಿಲ್ಲೆಯ ಮೇಘಸ್ಫೋಟ: ನಾಲ್ವರು ಸಾವು, ಹಲವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಜೋಡ್ ಘಾಟಿ ಎಂಬ ಗ್ರಾಮದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿಯಿಡೀ ಭಾರೀ ಮಳೆಯಾಗಿದ್ದು, ಇಂದು ಬೆಳಗಿನ ಜಾವ ಮೇಘಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಪರಿಣಾಮ ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ

ಮೂಡುಬಿದಿರೆ:ಹಿರಿಯ ವೈದ್ಯ ಡಾ.ಎಂ.ರಾಮ ಭಟ್ ನಿಧನ

ಮೂಡುಬಿದಿರೆ: ಹಿರಿಯ ಆಯರ್ವೇದ , ಅಲೋಪತಿ ವೈದ್ಯ ಡಾ. ಎಂ. ರಾಮ ಭಟ್ ( 92) ಅಲ್ಪಕಾಲದ ಅಸ್ವಾಸ್ಥ್ಯದ ಬಳಿಕ ಅರಮನೆ ರಸ್ತೆಯ ತಮ್ಮ ಮಹಾಲಸಾ ನಿವಾಸದಲ್ಲಿ ಅ17 ರಂದು ನಿಧನ ಹೊಂದಿದರು. ಅವರು ಸಹೋದರ, ಸಹೋದರಿಯರು, ಪುತ್ರ ಹೋಮಿಯೋ ಪತಿ ವೈದ್ಯ ಡಾ. ಗಂಗಾಧರ ಭಟ್ , ಇಬ್ಬರು ಪುತ್ರಿಯರು, ಸೊಸೆ ಡಾ. ವಿನಯಾ ಜಿ. ಭಟ್ ಸಹಿತ ಬಂಧುವರ್ಗವನ್ನು ಅಗಲಿದ್ದಾರೆ.1956ರಲ್ಲಿ ಎಲ್.ಎ. ಎಂ. ಎಸ್ ಪದವೀಧರ ವೈದ್ಯರಾಗಿ ಬೆರಳೆಣಿಕೆಯ ವೈದ್ಯರಿದ್ದ ಕಾಲದಲ್ಲಿ 1958 ರಿಂದ […]

ಶ್ರೀ ಓಂಕಾರೇಶ್ವರೀ ಮಂದಿರ ಹಾಗೂ ಮುಂಡಾಲ ಸಮಾಜ ಸೇವಾ ಟ್ರಸ್ಟ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಹಳೆಯಂಗಡಿ:79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರೀ ಓಂಕಾರೇಶ್ವರೀ ಮಂದಿರ(ರಿ) ಹಾಗೂ ಮುಲ್ಕಿಹೋಬಳಿ 9 ಮಾಗಣೆಯ ಮುಂಡಾಲ ಸಮಾಜ ಸೇವಾ ಟ್ರಸ್ಟ್(ರಿ) ವತಿಯಿಂದ ಜಂಟಿಯಾಗಿ ನಡೆಸಲಾಯಿತು. ಅಧ್ಯಕ್ಷರಾದ ಶ್ರೀ ಟಿ .ಸದಾಶಿವ ಕುಂದರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. 9 ಮಾಗಣೆ ಮುಂಡಾಲ ಸಮಾಜದ ಸೇವಾ ಟ್ರಸ್ಟ್ ನ ಉಪಾಧ್ಯಕ್ಷರಾದ ಶ್ರೀ ಶಂಕರ ಮಾಸ್ಟರ್ ಗೋಳಿಜೋರ ಇವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ ನೂರಾರು ವರ್ಷಗಳಿಂದ ದೇಶದ

ದಾಖಲೆಗಳಿಲ್ಲದೆ ಸಾಗಾಟ ಮಾಡುತಿದ್ದ 55 ಪವನ್ ಚಿನ್ನ ಹಾಗೂ 4 ಲಕ್ಷ ರೂ. ವಶಕ್ಕೆ

ಮಂಜೇಶ್ವರ: ಮಂಗಳೂರಿನಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಕರ್ಣಾಟಕ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮಂಜೇಶ್ವರ ಅಬಕಾರಿ ಇಲಾಖೆ ನಡೆಸಿದ ತಪಾಸಣೆಯಲ್ಲಿ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ಸುಮಾರು 55 ಪವನ್ (438.77 ಗ್ರಾಂ) ಚಿನ್ನಾಭರಣ ಹಾಗೂ 4 ಲಕ್ಷ ರೂಪಾಯಿ ಹಣಗಳೊಂದಿಗೆ ಇಬ್ಬರನ್ನು ಸೆರೆ ಹಿಡಿಯಲಾಗಿದೆ. ಶನಿವಾರ ಸಂಜೆ ವಾಮಂಜೂರು ಅಬಕಾರಿ ಚೆಕ್ ಪೋಸ್ಟ್ ನಲ್ಲಿ ಕಾರ್ಯಾಚರಣೆ ನಡೆದಿದೆ. ಕೋಝಿಕ್ಕೋಡ್ ನಿವಾಸಿಗಳಾದ ನಾಸರ್ ಹಾಗೂ ಈತನ ಪುತ್ರ ಮಹಮ್ಮದ್ ಫಾಸಿಲ್

ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ : ವೃದ್ಧ ಆರೆಸ್ಟ್

ಮೂಡುಬಿದಿರೆ : ಖಾಸಗಿ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವತಿ೯ಸಿದ್ದ ವೃದ್ಧನನ್ನು ಮೂಡುಬಿದಿರೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಬೆಳುವಾಯಿಯ ನಿವಾಸಿ ವೃದ್ಧ ರೆಹ್ಮಾನ್ ಬಂಧಿತ.ಮಂಗಳೂರು-ಮೂಡುಬಿದಿರೆ–ಕಾಕ೯ಳ ಮಧ್ಯೆ ಸಂಚರಿಸುವ ಖಾಸಗಿ ಬಸ್ ನಲ್ಲಿ ಘಟನೆ ನಡೆದಿದ್ದು ಇದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದ್ದು ಈ ಬಗ್ಗೆ ಯಾರೂ ದೂರು ಕೊಡದ ಹಿನ್ನೆಲೆಯಲ್ಲಿ ಪೊಲೀಸರು ವೃದ್ಧನನ್ನು ಕರೆಸಿ ವಿಚಾರಣೆ ಮಾಡಿ ಬಿಟ್ಟಿದ್ದರು. ಆದರೆ