Home Posts tagged #mangalore (Page 51)

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮಹಿಳಾ ಶಕ್ತಿ ಪಯಣ ಹೆಚ್ಚಳ

ಮಂಗಳೂರು ಮತ್ತು ಪುತ್ತೂರು ವಿಭಾಗದ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಶಕ್ತಿ ಯೋಜನೆಯ ಅನುಕೂಲ ಪಡೆದು 7 ತಿಂಗಳಲ್ಲಿ ಪಯಣಿಸಿದ ಮಹಿಳೆಯರಿಗೆ 2.8 ಕೋಟಿ ಟಿಕೆಟ್ ನೀಡಿಕೆ ಆಗಿದೆ. ಈ ಟಿಕೆಟ್‌ಗಳ ಒಟ್ಟು ದರ 9.15 ಕೋಟಿ ರೂಪಾಯಿ. ಆರಂಭದ ಜೂನ್ ತಿಂಗಳಿನಲ್ಲಿ 20,87,658 ಇದ್ದ ಟಿಕೆಟ್ ನೀಡಿಕೆ ಹೆಚ್ಚುತ್ತ ಬಂದಿದ್ದು ಜನವರಿ ತಿಂಗಳಲ್ಲಿ ತಿಂಗಳು ಮುಗಿಯುವುದಕ್ಕೆ

ಮಂಗಳೂರು: ಕುಳಾಯಿ ಕಿರುಜೆಟ್ಟಿ ಕಾಮಗಾರಿ ಪ್ರದೇಶಕ್ಕೆ ಸಂಸದ ನಳಿನ್ ಭೇಟಿ, ಪರಿಶೀಲನೆ

ಕುಳಾಯಿಯಲ್ಲಿ ನಿರ್ಮಾಣವಾಗುತ್ತಿರುವ ಕಿರು ಜೆಟ್ಟಿಯು ನಾಡದೋಣಿ ಮೀನುಗಾರರಿಗೆ ಅನುಕೂಲವಾಗುತ್ತಿಲ್ಲ. ಈಗಿನ ಬ್ರೇಕ್ ವಾಟರ್ ನಿರ್ಮಾಣ ಅವೈಜ್ನಾನಿಕವಾಗಿದ್ದು, ನಾಡದೋಣಿಕೆ ಪೂರಕವಾಗಿ ನಿರ್ಮಿಸಲಾಗುತ್ತಿಲ್ಲ. ಮೀನುಗಾರರು ಪ್ರಾಣ ಭೀತಿಯಲ್ಲಿದ್ದಾರೆ ಎಂದು ನಾಡದೋಣಿ ಮೀನುಗಾರರು ಹಾಗೂ ಸಾಂಪ್ರದಾಯಿಕ ಮೂಲ ಮೀನುಗಾರರ ಸಂಘಟನೆಗಳು ಸಂಸದ ನಳಿನ್ ಕುಮಾರ್ ಕಟೀಲ್ ಮುಂದೆ ಅಸಮಾಧಾನ ತೋಡಿಕೊಂಡರು. ಕುಳಾಯಿಯ ಕಿರು ಜೆಟ್ಟಿ ಕಾಮಗಾರಿ ಪ್ರದೇಶಕ್ಕೆ ಸಂಸದ ನಳಿನ್ ಕುಮಾರ್

ಆಲಂಕಾರು: ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಡಾಟಾ ಸೈನ್ಸ್ ಕಾರ್ಯಾಗಾರ

ಆಲಂಕಾರು :ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ, ಪುತ್ತೂರು ಇದರ ಸಹಯೋಗದಲ್ಲಿ, ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿ ಮತ್ತೆ ಮತ್ತು ಡಾಟಾ ಸೈನ್ಸ್ ನ ಕುರಿತಾದ ಕಾರ್ಯಾಗಾರ ನಡೆಯಿತು. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ನ ತೃತೀಯ ವರ್ಷದ ವಿದ್ಯಾರ್ಥಿಗಳಾದ ಜೀವಿತ್, ಆಕಾಶ್ ಪಿ, ಧನುಷ್ ಕುಮಾರ್, ಗಗನ್ ಕೆ, ಅಶ್ವಿಜ ಯು ಪೈ ಹಾಗೂ ಅನುಶ್ರೀ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಸುಮಾರು 64

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವೈದ್ಯಕೀಯ ನೆರವು

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಕಡಬ ತಾಲೂಕು ನೆಲ್ಯಾಡಿ ವಲಯ, ಮಾದೇರಿ ಒಕ್ಕೂಟದ, ನೇತ್ರ ಶ್ರೀ ತಂಡದ ಸದಸ್ಯರಾದ ಶ್ರೀ ಲತಾರವರಿಗೆ ಅನಾರೋಗ್ಯ ನಿಮಿತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 25000/- ರೂಪಾಯಿ ಸಹಾಯಧನದ ಮಂಜೂರಾತಿ ಪತ್ರವನ್ನು, ಒಕ್ಕೂಟದ ತ್ರೈಮಾಸಿಕ ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಸೆಬಾಸ್ಟಿನ್ ಪಿ.ಜೆ ರವರು ಶ್ರೀಲತಾರವರ ಪರವಾಗಿ ಅವರ ಪತಿಗೆ ವಿತರಿಸಿದರು. ಈ ಸಂದರ್ಭದಲ್ಲಿ ವಲಯ

ಪುತ್ತೂರು: ಅನಾರೋಗ್ಯದಿಂದ ಪುತ್ತೂರಿನ ಯುವತಿ ಮೃತ್ಯು

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.ಪುತ್ತೂರು ನೆಹರೂನಗರದ ದಿ. ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಬುಧವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇವರು ಇಂಜಿನಿಯರಿಂಗ್ ಪದವೀಧರೆಯಾಗಿದ್ದರು.ಲಿವರ್ ಸಮಸ್ಯೆಯಿಂದಾಗಿ ಐಶ್ವರ್ಯ ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಲಿವರ್ ಬದಲಾವಣೆಯಿಂದ ಮಾತ್ರ ಐಶ್ವರ್ಯಳ ಜೀವ ಉಳಿಸಲು ಸಾಧ್ಯ ಎಂದು

ಹಿರೇಮಗಳೂರಿನ ಕೋದಂಡರಾಮ ಆಲಯದ ಅರ್ಚಕ ಕಣ್ಣನ್‍ರಿಗೆ ನೋಟೀಸು

ಹಿರೇಮಗಳೂರಿನ ಕೋದಂಡರಾಮ ಆಲಯದ ಅರ್ಚಕ ಕಣ್ಣನ್‍ರಿಗೆ ಹೆಚ್ಚುವರಿ ಸಂಬಳ ಹಿಂತಿರುಗಿಸುವಂತೆ ಚಿಕ್ಕಮಗಳೂರು ತಹಶಿಲ್ದಾರ್ ಸುಮಂತ್ ನೋಟೀಸು ನೀಡಿರುವುದು ಸುದ್ದಿ. ಆದರೆ ಆದಾಯ ತೀರಾ ವ್ಯತ್ಯಾಸದ ಹಲವು ಆಲಯಗಳಿಗೆ ನೋಟೀಸು ನೀಡಿರುವುದು ಕಂಡು ಬಂದಿದೆ. ಕಣ್ಣನ್ ಅರ್ಚಕರಾಗಿರುವ ಆಲಯದ ವಾರ್ಷಿಕ ಆದಾಯ ಕೊನೆ ದರ್ಜೆ ದೇವಾಲಯದ ಆದಾಯಕ್ಕಿಂತಲೂ ಕಡಿಮೆ ಇದೆ. ಆದ್ದರಿಂದ ರೂ. 7,500 ರೂಪಾಯಿ ಸಂಬಳ ಪಡೆಯುವ ಅವರು ಹೆಚ್ಚುವರಿ ತಿಂಗಳ ರೂ. 4,500 ಒಟ್ಟು 4,74,000

ಸುಳ್ಯ: ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಾಹಿತಿ ಕೈಪಿಡಿ ಬಿಡುಗಡೆ

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ಜಿಲ್ಲಾಡಳಿತ, ತಾಲೂಕು ಆಡಳಿತ, ಸ್ಥಳೀಯಾಡಳಿತಗಳ ಸಹಕಾರದಲ್ಲಿ ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಯಲಿದೆ. ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮಾಹಿತಿ ಕೈ ಪಿಡಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್

ಮಂಗಳೂರು : ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯಲ್ಲಿ “ಶ್ರೀ ರಾಮೋತ್ಸವ” ಕಾರ್ಯಕ್ರಮ

ಮಂಗಳೂರು : ಆಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಲೋಕಾರ್ಪಣೆ ಸಲುವಾಗಿ ಮಹಾವೀರ ಶಾಖೆ, ಬಜಿಲಕೇರಿ ವತಿಯಿಂದ ನಗರದ ಟಿ. ಟಿ ರಸ್ತೆಯಲ್ಲಿರುವ ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯಲ್ಲಿ (ಗೋಧೆ) “ಶ್ರೀ ರಾಮೋತ್ಸವ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಸಂಜೆ 6:30 ಗಂಟೆಗೆ ರಾಮ ದೇವರ ಭಾವಚಿತ್ರಕ್ಕೆ ಪುಷ್ಪವೃಶ್ಟಿ ಮೂಲಕ ಮೆರವಣಿಗೆ ಆಗಮಿಸಿತು. ಪುಟಾಣಿ ಮಕ್ಕಳು ಶ್ರೀ ರಾಮ, ಸೀತಾ ಮಾತೆ, ಲಕ್ಷ್ಮಣ ಹಾಗೂ ಹನುಮಂತನ ವೇಷ ಧರಿಸಿದ್ದು ಎಲ್ಲರ

ಉಳ್ಳಾಲ: ನೇತ್ರಾವತಿ ಸೇತುವೆ ಡಿವೈಡರ್ ಗೆ ಗುದ್ದಿದ ಬೈಕ್, ಸವಾರ ಸ್ಥಳದಲ್ಲೇ ಸಾವು

ಉಳ್ಳಾಲ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ. 66 ರ ನೇತ್ರಾವತಿ ಸೇತುವೆಯಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ಬಾಗಲಕೋಟೆ ನಿವಾಸಿ ಸುರೇಶ್ (30) ಮೃತರು. ಕಲ್ಲಾಪು ಸಲಫಿ ಮಸೀದಿ ಸಮೀಪ ಕುಟುಂಬ ಸಮೇತರಾಗಿ ಹಲವು ವರ್ಷಗಳಿಂದ ಬಾಡಿಗೆಯಲ್ಲಿದ್ದರು. ಮಂಗಳೂರಿನ ಬುಲೆಟ್ ಷೋರೂಮಿನಲ್ಲಿ ಕೆಲಸಕ್ಕಿದ್ದ ಸುರೇಶ್, ಬಳಿಕ ಪಂಪ್ವೆಲ್ ಸಮೀಪ ಗ್ಯಾರೇಜ್ ನಡೆಸುತ್ತಿದ್ದರು‌. ನಿನ್ನೆ ರಾತ್ರಿ ಗ್ಯಾರೇಜ್ ಕೆಲಸ ಮುಗಿಸಿ ಮನೆಯತ್ತ

ಮೂಡುಬಿದಿರೆ : ಜ.26ರಂದು ಮೂಡುಬಿದಿರೆಯಲ್ಲಿ ‘ಮಾನವ ಸರಪಳಿ’

ಎಸ್.ಕೆ.ಎಸ್.ಎಸ್.ಎಫ್ ದ.ಕ.ಜಿಲ್ಲಾ ವೆಸ್ಟ್ ಸಮಿತಿಯ ವತಿಯಿಂದ ಜ.26 ರಂದು ಮೂಡುಬಿದಿರೆಯಲ್ಲಿ ‘ಮಾನವ ಸರಪಳಿ’ ಎಂಬ ವಿಶೇಷ ಕಾರ್ಯಕ್ರಮ ನಡೆಯಲಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಿ.ಎ.ಉಸ್ಮಾನ್ ಹಾಜಿ ಏರ್ ಇಂಡಿಯಾ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಪ್ರತಿ ವರ್ಷ ಜ.26 ಗಣರಾಜ್ಯೋತ್ಸವದಂದು ಜಿಲ್ಲಾ ವ್ಯಾಪ್ತಿಯಲ್ಲಿ ‘ಮಾನವ ಸರಪಳಿ’ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿದ್ದು ಈ ವರ್ಷ ಕೂಡಾ