Home Posts tagged #mangalore (Page 54)

ನೆಲ್ಯಾಡಿ: ಸಂತ ಜಾರ್ಜ್ ಪದಪೂರ್ವ ಕಾಲೇಜಿನಲ್ಲಿ ಯುವ ಸಪ್ತಾಹ ಕಾರ್ಯಕ್ರಮ

ನೆಲ್ಯಾಡಿ: ಇಲ್ಲಿನ ಸಂತ ಜಾರ್ಜ್ ಪ.ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ವಿವೇಕ ಜಯಂತಿ ರಾಷ್ಟ್ರೀಯ ಯುವ ದಿನದ ಅಂಗವಾಗಿ ಯುವ ಸಪ್ತಾಹ ಕಾರ್ಯಕ್ರಮ ಜ.12ರಂದು ಸಂಸ್ಥೆಯ ಸಂಚಾಲಕರಾದ ರೆ.ಫಾ.ನೋಮಿಸ್ ಕೊರಿಯಾಕೋಸ್ ರವರ ಮಾರ್ಗದರ್ಶನದಲ್ಲಿ ಆರಂಭಗೊಂಡಿತು. ಬೆಥನಿ ಕೈಗಾರಿಕಾ ತರಬೇತಿ ವಿದ್ಯಾಸಂಸ್ಥೆಯ ಉಪನ್ಯಾಸಕರಾದ ಜೋನ್ ಪಿ.ಎಸ್. ರವರು ದೀಪ ಬೆಳಗಿಸುವ ಮೂಲಕ

ಮಂಗಳೂರು: ಜ.15ರಂದು ಕದ್ರಿಯಲ್ಲಿ ವಿಶ್ವಪ್ರಸನ್ನ ತೀರ್ಥರಿಗೆ ಸಾರ್ವಜನಿಕ ಗುರುವಂದನೆ

ಮಂಗಳೂರು: “ವಿಶ್ವ ಹಿಂದೂ ಪರಿಷತ್ ವತಿಯಿಂದ ಜ.15ರಂದು ಸಂಜೆ 7 ಗಂಟೆಗೆ ಶ್ರೀ ಕ್ಷೇತ್ರ ಕದ್ರಿಯ ರಾಜಾಂಗಣದಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಸಾರ್ವಜನಿಕ ಗುರುವಂದನೆ ಕಾರ್ಯಕ್ರಮ ಜರುಗಲಿದೆ” ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್ ಕೆ ಪುರುಷೋತ್ತಮ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಅಂದಿನ ಕಾರ್ಯಕ್ರಮದಲ್ಲಿ ಕದಳಿ ಶ್ರೀ ಯೋಗೀಶ್ವರ ಮಠದ ಶ್ರೀ ರಾಜಯೋಗಿ ನಿರ್ಮಲನಾಥ ಮಹಾರಾಜ್ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಶ್ರೀ ಕ್ಷೇತ್ರ

ಹಾಸನ: ಕಾಡಾನೆ ಸೆರೆಗೆ ಆಪರೇಷನ್ ಆರಂಭ

ಹಾಸನ ಜಿಲ್ಲೆಯಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳ ಸೆರೆಗೆ ಆಪರೇಷನ್ ಆರಂಭವಾಗಿದೆ. 8 ಸಾಕು ಆನೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಡಿಸೆಂಬರ್ 4ರಂದು ಕಾಡಾನೆ ಕಾರ್ಯಾಚರಣೆ ವೇಳೆ ಬಲಿಯಾಗಿದ್ದ ದಸರಾ ಆನೆ ಅರ್ಜುನ ಬಲಿ ಪಡೆದ ಆನೆಯನ್ನು ಸೆರೆ ಹಿಡಿಯಲು ಜನರು ಒತ್ತಾಯಿಸಿದ್ದಾರೆ. ಇಂದಿನಿಂದ ಅಭಿಮನ್ಯ ನೇತೃತ್ವದಲ್ಲಿ ಕಾರ್ಯಾಚರಣೆಯ ನಡೆಯಲಿದೆ. ಬೇಲೂರು ತಾಲೂಕಿನ ಬಿಕ್ಕೋಡು ಸಮೀಪದ ತಾತ್ಕಾಲಿಕ ಆನೆ ಶಿಬಿರಕ್ಕೆ ಸಾಕಾನೆಗಳನ್ನು ತರಲಾಗಿದೆ.

ಉಳ್ಳಾಲ: ಹರಕೆಯ ಕೋಲ ನೀಡಿದ ‘ಕೊರಗಜ್ಜ’ ಚಿತ್ರ ತಂಡ

ಉಳ್ಳಾಲ: ಕಲ್ಲಾಪು ಬುರ್ದುಗೋಳಿ ಶ್ರೀ ಗುಳಿಗ ಕೊರಗಜ್ಜ ಉದ್ಭವಶಿಲೆ ಆದಿಸ್ಥಳಕ್ಕೆ ಕ್ಷೇತ್ರಕ್ಕೆ ‘ಕೊರಗಜ್ಜ ’ ಚಿತ್ರ ತಂಡ ಚಿತ್ರ ಯಶಸ್ಸಿಗೆ ತಾವು ನೀಡಿದ ಹರಕೆಯ ಕೋಲದಲ್ಲಿ ಭಾಗವಹಿಸಿತು. ಈ ಸಂದರ್ಭ ಹಿರಿಯ ಸ್ಯಾಂಡಲ್ ವುಡ್ ನಟಿಯರಾದ ಶೃತಿ ಮತ್ತು ಭವ್ಯ ಕೂಡಾ ಭಾಗಿಯಾಗಿ ಅಜ್ಜನ ಕೋಲ ವೀಕ್ಷಿಸಿದರು. ನಟಿ ಭವ್ಯ ಮಾತನಾಡಿ, ಕಳೆದ ಹುಟ್ಟುಹಬ್ಬದ ಸಂದರ್ಭದಲ್ಲೂ ಕ್ಷೇತ್ರಕ್ಕೆ ಭೇಟಿ ನೀಡಿರುವೆ. ಈ ಬಾರಿಯೂ ದೈವ ಇಚ್ಛೆಯಂತೆ ಅದೇ ದಿನ ಭೇಟಿ ನೀಡಿದ್ದೇನೆ. ಕೊರಗಜ್ಜನ

ಬಂಟ್ವಾಳ: ಲಯನ್ಸ್ ಪ್ರಾಂತೀಯ ಸಮ್ಮಿಲನ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಲಯನ್ಸ್ ಇಂಟರ್ ನ್ಯಾಶನಲ್ ಜಿಲ್ಲೆ 317 ಡಿ ಪ್ರಾಂತ್ಯ 5 ಇದರ ಪ್ರಾಂತೀಯ ಸಮ್ಮಿಲನ “ಸಂಧ್ಯಾ” ಫೆ. 11 ರಂದು ಇರಾ ಬಂಟರ ಭವನದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದಲ್ಲಿ ನಡೆಯಿತು. ಪ್ರಾಂತಿಯ ಸಮ್ಮಿಲನ ಸಮಿತಿ ಅಧ್ಯಕ್ಷ ದಾಮೋದರ ಬಿ.ಎಂ. ಹಾಗೂ ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿ ಮಾತನಾಡಿ ಸಮ್ಮಿಲನದ ಯಶಸ್ಸಿಗೆ ಸಹಕಾರ ಕೋರಿದರು. ಸಮ್ಮಿಲನ

ಬಂಟ್ವಾಳ: ಸಂಗಬೆಟ್ಟು ಬಾಕಿಮಾರು ಅಂಗನವಾಡಿ ಕಟ್ಟಡಕ್ಕೆ ಶಿಲಾನ್ಯಾಸ

ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಬಾಕಿಮಾರು ಅಂಗನವಾಡಿ ಕಟ್ಟದ ಶಿಲಾನ್ಯಾಸ ಕಾರ್ಯಕ್ರಮವು ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಭಾಕರ ಐಗಳ್ ರವರ ಉಪಸ್ಥಿತಿಯಲ್ಲಿ ಇತ್ತೀಚಿಗೆ ಜರಗಿತು. ಶಿಲಾನ್ಯಾಸವನ್ನು ನಿವೃತ್ತ ಶಿಕ್ಷಕರಾದ ದಾಮೋದರ್ ರಾವ್ ಸಂಗಬೆಟ್ಟು ನೆರೆವೇರಿಸಿದರು.ಕಾರ್ಯಕ್ರಮದಲ್ಲಿ ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೀವಿ ಪೂಜಾರಿ, ಉಪಾಧ್ಯಕ್ಷ ಸುರೇಶ್ ಕುಲಾಲ್, ಸಿದ್ದಕಟ್ಟೆಹಾಲು ಉತ್ಪಾದಕ ಸಹಕಾರಿ

ಮಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ದೇಶಾದ್ಯಂತ ಸಹಿಸಂಗ್ರಹ ಚಳುವಳಿ

ಮಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು,ಜನಪರ ಪರ್ಯಾಯ ನೀತಿಗಳನ್ನು ಜಾರಿಗೊಳಿಸಬೇಕು ಹಾಗೂ ದುಡಿಯುವ ವರ್ಗದ ಹಕ್ಕನ್ನು ಸಂರಕ್ಷಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ದೇಶ ಉಳಿಸಿ, ಜನತೆಯ ಬದುಕನ್ನು ರಕ್ಷಿಸಿ ಎಂಬ ಘೋಷಣೆಯೊಂದಿಗೆ ದೇಶಾದ್ಯಂತ ವ್ಯಾಪಕ ಪ್ರಚಾರಾಂದೋಲನ ನಡೆಸಬೇಕೆಂಬ CITU ಅಖಿಲ ಭಾರತ ಸಮಿತಿಯ ಕರೆಯ ಮೇರೆಗೆ ಸ್ವಾಮಿ ವಿವೇಕಾನಂದ ಜಯಂತಿ ದಿನವಾದ ಇಂದು ದೇಶಾದ್ಯಂತ ಸಹಿಸಂಗ್ರಹ ಚಳುವಳಿಗೆ ಚಾಲನೆ

ಉಳ್ಳಾಲ: ಮಾಜಿ ಪ್ರಿಯತಮೆಯ ಕೊಲೆಯತ್ನ: ಆರೋಪಿಗೆ 18 ವರ್ಷ ಸಜೆ, 2 ಲಕ್ಷ ರೂ ದಂಡ

ಉಳ್ಳಾಲ: ಮಾಜಿ ಪ್ರೇಯಸಿಯನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ 2 ನೇ ಹೆಚ್ಚುವರಿ ನ್ಯಾಯಾಲಯ ಒಟ್ಟು 18 ವರ್ಷ 1 ತಿಂಗಳ ಸಜೆ ಹಾಗೂ ಸಂತ್ರಸ್ತೆಗೆ ರೂ. 2 ಲಕ್ಷ ರೂ ನೀಡುವಂತೆ ಆದೇಶ ನೀಡಿದೆ.2019ರ ಜೂ.28 ರಂದು ದೇರಳಕಟ್ಟೆಯ ಬಗಂಬಿಲ ರಸ್ತೆಯಲ್ಲಿನ ಶಾಂತಿಧಾಮ ಬಳಿ ಆರೋಪಿ ಸುಶಾಂತ್ ಯಾನೆ ಶಾನ್ (31) ಕಾಲೇಜಿನಿಂದ ಬರುತ್ತಿದ್ದ ಸಂತ್ರಸ್ತೆಯನ್ನು ಹಿಂಬಾಲಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಬಂದಿದ್ದ. ಶಾಂತಿಧಾಮ ಬಳಿ ಅಡ್ಡಗಟ್ಟಿ

ಮೂಡುಬಿದಿರೆ: ರಾಷ್ಟ್ರಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : ಆಳ್ವಾಸ್ ನ ಉಷಾಗೆ ಬೆಳ್ಳಿ ಪದಕ

ಮೂಡುಬಿದಿರೆ: ಅರುಣಾಚಲ ಪ್ರದೇಶದ ಇಟಾ ನಗರದಲ್ಲಿ ನಡೆದ ರಾಷ್ಟ್ರ ಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಕ್ರೀಡಾಪಟು ಉಷಾ ಎಸ್.‌ ಆರ್‌ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಸ್ನಾಚ್ ವಿಭಾಗದಲ್ಲಿ 91 ಕೆ.ಜಿ, ಕ್ಲೀನ್ ಅಂಡ್ ಜೆರ್ಕ್ ವಿಭಾಗದಲ್ಲಿ118 ಕೆ.ಜಿ ಒಟ್ಟು 209 ಕೆಜಿ ಭಾರ ಎತ್ತಿದ್ದಾರೆ. ಕರ್ನಾಟಕ ರಾಜ್ಯ ದಾಖಲೆ ಆಗಿದೆ. 87 ಕೆ.ಜಿ ತೂಕದ ವಿಭಾಗದಲ್ಲಿ ಸ್ವರ್ಧಿಸಿದ್ದರು.

ಮೂಡುಬಿದಿರೆ: ಅಂಚೆ ಪಾಲಕ ಅಶೋಕ್ ವಿರುದ್ಧ ವಂಚನೆ ದೂರು ದಾಖಲು

ಮೂಡುಬಿದಿರೆ: ಮೂರು ವರ್ಷಗಳ ಹಿಂದೆ ಕಡಂದಲೆ ಗ್ರಾಮೀಣ ಅಂಚೆ ಕಚೇರಿಯಲ್ಲಿ ಗ್ರಾಹಕರ ಸುಮಾರು ರೂ 13.50 ಲಕ್ಷ ಹಣ ದುರ್ಬಳಕೆ ಮಾಡಿದ ಆರೋಪದಲ್ಲಿ ಅಂಚೆ ಪಾಲಕ ಅಶೋಕ್ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಾಗಿದೆ.2010ರಿಂದ 2021ರ ಅವಧಿಯಲ್ಲಿ ಅಶೋಕ್ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಸುಮಾರು 22 ಅಂಚೆ ಗ್ರಾಹಕರ ಉಳಿತಾಯ ಖಾತೆ ಮತ್ತು 4 ಗ್ರಾಹಕರ ವಿವಿಧ ವಿಮಾ ಪಾಲಿಸಿಗಳ ಸುಮಾರು 13.50 ಲಕ್ಷ ಹಣವನ್ನು