ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಅಮೆರಿಕಾದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಪ್ರಥಮ ಬಾರಿಗೆ ಆಯ್ಕೆಯಾಗಿರುವ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಅವಕಾಶ ಪಡೆದಿದ್ದಾರೆ. ಕರ್ನಾಟಕದ ವಿಧಾನಸಭೆಯ 224
ಮೂಡುಬಿದಿರೆ: ಇಲ್ಲಿನ ಪುತ್ತಿಗೆ ಗ್ರಾಮದ ಸಂಪಿಗೆಯಲ್ಲಿ ಶನಿವಾರ ಮಧ್ಯಾಹ್ನ ಸುರಿದ ಗಾಳಿ ಮಳೆಗೆ ವಿದ್ಯುತ್ ಕಂಬ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದು ಸವಾರ ಗಾಯಗೊಂಡಿದ್ದಾರೆ.ನಿಡ್ಡೋಡಿ ನಿವಾಸಿ ವಿನೋದ್ ನಿಡ್ಡೋಡಿಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದಾಗ, ಸಂಪಿಗೆ ಎಚ್.ಪಿ ಪೆಟ್ರೋಲ್‌ಬಂಕ್ ಬಳಿ ವಿದ್ಯುತ್ ಕಂಬ ಧರೆಗುರುಳಿದು ಬೈಕ್ ಮೇಲೆ ಬಿದ್ದಿದೆ. ಬೈಕ್‌ನ ಮಧ್ಯಭಾಗ ಜಖಂಗೊಂಡಿದ್ದು, ಸವಾರ ವಿನೋದ್ ಅವರ ಕಾಲಿಗೆ ಗಾಯವಾಗಿದೆ.
ಬೆಂಗಳೂರು, 26 ಜುಲೈ 2025 – “ಬಸ್ತರ್ 1862 ಕೃತಿಯು ವಸಾಹತುಶಾಹಿ ಮತ್ತು ಪ್ರಾದೇಶಿಕ ಕಣ್ಣುಗಳ ಮೂಲಕ ಇತಿಹಾಸವನ್ನು ನೋಡುವ ಮಹತ್ವದ ಕೃತಿಯಾಗಿದೆ. ಈ ಕೃತಿಯು ಕ್ಯಾಪ್ಟನ್ ಗ್ಲಾಸ್‌ಫರ್ಡ್‌ರ ವರದಿ ಮತ್ತು ಮಹಾರಾಜ ಪ್ರವೀರ್ ಚಂದ್ರ ಭಂಜದೇವ್‌ರ ಕಥನದ ಕುರಿತು ಚರ್ಚೆ ಉಂಟುಮಾಡಬಲ್ಲ ಕೃತಿಯಾಗಿದೆ. ಡಾ. ಉಮಾ ರಾಮ್ ಮತ್ತು ಕೆ.ಎಸ್. ರಾಮ್ ಈ ಈ ಕೃತಿಯ ಮೂಲಕ ಸಮಾಜಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ” ಎಂದು ಯುನೆಸ್ಕೋದ ಮಾಜಿ ರಾಯಭಾರಿ ಡಾ. ಚಿರಂಜೀವ್ ಸಿಂಗ್
ಬ್ಯಾಂಕಿಂಗ್’ನಲ್ಲಿ ಹೊಸ ದಿಗಂತಗಳನ್ನು ಅನ್ವೇಷಿಸಲು ಮತ್ತು ಮುಂದಿನ ಹಂತದ ಬೆಳವಣಿಗೆಗೆ ವಿಚಾರ, ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲು, ಎಂಸಿಸಿ ಬ್ಯಾಂಕ್ ಜುಲೈ 24, 2025 ರಂದು ಮಂಗಳೂರಿನ ಅತ್ತಾವರದಲ್ಲಿರುವ ಹೋಟೆಲ್ ಅವತಾರ್‌ನಲ್ಲಿ ‘ಐಡಿಯಾ ಸಮ್ಮಿತ್ 2025’ (Idea Summit 2025) ಅನ್ನು ಆಯೋಜಿಸಲಾಗಿತ್ತು.ಈ ಸಮ್ಮಿತ್’ನ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರು ವಹಿಸಿದ್ದರು. ಗಣ್ಯ
ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಸಾಧಿಸಿರುವ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್. ವಿಶ್ವದ ಮೊದಲ AI ಕಾರ್ಡ್ ಅನ್ನು ಅಭಿವೃದ್ಧಿಪಡಿಸುವ ಮೂಲಕ ಗಮನ ಸೆಳೆದಿದೆ. ಇದೀಗ, ಈ ಕಾರ್ಡ್ ಅನ್ನು ಒಳಗೊಂಡ AI ಸಾಕ್ಷರತೆಯನ್ನು ಬೆಳೆಸುವ ಮಹತ್ವಾಕಾಂಕ್ಷೆಯ ಯೋಜನೆಯೊಂದಿಗೆ ಸಂಸ್ಥೆಯು ಮುನ್ನಡೆಯುತ್ತಿದೆ. ಇದರ ಭಾಗವಾಗಿ, ಪ್ರತಿ ತಾಲೂಕಿನಲ್ಲಿ ಆಯ್ದ 40 ಫಲಾನುಭವಿಗಳಿಗೆ ತಲಾ ರೂ. 20,000 ಮೌಲ್ಯದ AI ಶಿಕ್ಷಣ ಕಿಟ್ಗಳನ್ನು ವಿತರಿಸುವ ವಿಶೇಷ
ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ ಕನಕದಾಸರ ಕುರಿತು ಕನಕ ಕಾವ್ಯ ವೈಭವ ಎಂಬ ಸಂಗೀತ- ನೃತ್ಯ ರೂಪಕ, ಕನಕದಾಸರ ಕುರಿತು ಉಪನ್ಯಾಸ, ಗಮಕ ವಾಚನ – ವ್ಯಾಖ್ಯಾನ ಒಳಗೊಂಡಂತೆ ಒಂದು ದಿನದ “ಕನಕ ಉತ್ಸವ” ಕಾರ್ಯಕ್ರಮವು ಗೋವಾದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಕನಕದಾಸರ ಕುರಿತು ಉಪನ್ಯಾಸ ನೀಡಲು ಕರ್ನಾಟಕದಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಡಾ.
ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಇದೀಗ ಸಂಭವಿಸಿದ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಮೂಡುಬಿದಿರೆ :ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಮೂಡುಬಿದಿರೆ ವಲಯದ 15ನೇ ವಾರ್ಷಿಕ ಸಭೆಯು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ 2025/27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.ನೂತನ ಅಧ್ಯಕ್ಷರಾಗಿ ನಿತಿನ್ ಬೆಳುವಾಯಿ , ಪ್ರಧಾನ ಕಾರ್ಯದರ್ಶಿಯಾಗಿ ನಮಿತ್ ಬಂಗೇರಾ, ಉಪಾಧ್ಯಕ್ಷರಾಗಿ ರಂಜಿತ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಪದ್ಮನಾಭ ಮಿಜಾರು,
ವಿಶ್ವ ತುಳುವೆರ್ ಸಂಘಟನೆ ಮಂಗಳೂರು ವತಿಯಿಂದ ಮೂಡುಬಿದರೆಯ ಕಲ್ಲಬೆಟ್ಟುವಿನ ಮೊರಾರ್ಜಿ ದೇಸಾಯಿ ವಸತಿ ಶಾಲಾ ಮಕ್ಕಳಿಗೆ ಮತ್ತು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಸಾರ್ವಜನಿಕರಿಗೆ ಆಟಿದ ಅಮಾವಾಸ್ಯೆ ದಿನದ ಪ್ರಯುಕ್ತ ಕಷಾಯ ಮತ್ತು ಮೆಂತ್ಯೆ ಗಂಜಿ ವಿತರಣಾ ಕಾರ್ಯಕ್ರಮ ನಡೆಯಿತು. ಸಾಮಾಜಿಕ ಕಳಕಳಿಯನ್ನು ಹೊಂದಿರುವ ವಿಶ್ವ ತುಳುವೆರ್ ಸಂಘಟನೆ ಮಂಗಳೂರು ತುಳುನಾಡಿನ ಸಾಂಪ್ರದಾಯಿಕ ಆಚರಣೆಯಾದ ಆಟಿ ಅಮಾವಾಸ್ಯೆಯ ದಿನದಂದು ಆಟಿ ಕಷಾಯ ಮತ್ತು ಮೆಂತ್ಯೆ ಗಂಜಿಯನ್ನು
ಬೈಂದೂರು: ಬಂಟರ ಯಾನೆ ನಾಡವರ ಸಂಘ (ರಿ.) ಬೈಂದೂರು ಇವರ 30ರ ಸಂಭ್ರಮ 2025ರ ರಾಷ್ಟ್ರೀಯ ಸಾಂಸ್ಕೃತಿಕ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಪತ್ರಿಕಾ ಗೋಷ್ಟಿ ಬುಧವಾರ ಸಂಜೆ ಬೈಂದೂರು ಬಂಟರ ಸಮುದಾಯ ಭವನದಲ್ಲಿ ನಡೆಯಿತು. ಬಂಟರ ಯಾನೆ ನಾಡವರ ಸಂಘ (ರಿ.) ಬೈಂದೂರು ಅಧ್ಯಕ್ಷ ಶಶಿಧರ ಶೆಟ್ಟಿ ಸಾಲ್ಗದ್ದೆ ರಾಷ್ಟ್ರೀಯ ಸಾಂಸ್ಕೃತಿಕ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ 30ನೇ ವರ್ಷದ ಸಂಭ್ರಮದ ಅವಧಿಯಲ್ಲಿ




























