ಪುತ್ತೂರು ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ನಡೆಸಲಾಯಿತು. ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಯ ವಿಜ್ಞಾನ ವಿಭಾಗದ ಶಿಕ್ಷಕಿಯಾದ ಶ್ರೀಮತಿ ಸಿಂಧು .ವಿ.ಕೆ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪರಿಸರದ ಮಹತ್ವವನ್ನು ತಿಳಿಸಿದರು. ನಮ್ಮ ಪರಿಸರದಲ್ಲಿ
ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಅಂಗಿ ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ. ಅವರು ಸುಳ್ಯ ಮಂಗಳ ಡ್ರೈವಿಂಗ್ ಸ್ಕೂಲ್ ನ ಮಾಲಕ. ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್ ಅಂಗಿ ಮೊಬೈಲ್ ಮತ್ತು ಚಪ್ಪಲ್ಲಿ ಅನಾಥವಾಗಿ ಬಿದ್ದಿರುವುದನ್ನು ಗಮನಿಸಿ, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.ಈ ಬಳಿಕ
ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್ ಮೊಬೈಲ್ ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರ ಸೊತ್ತುಗಳು ಇದಾಗಿದ್ದು,ಇದನ್ನು ಅಲ್ಲಿಟ್ಟು ಕಾಣೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಮೇಶ್ ರೈ ಅವರು ಇತ್ತೀಚಿಗೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ,ಅಯ್ಕೆಯಾಗಿದ್ದರು.ಇಂದು ಬೆಳಿಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ ಸೊತ್ತುಗಳು ಇಲ್ಲಿ ಅನಾಥವಾಗಿ ಕಂಡು
ಎಳೆಯ ವಯಸ್ಸಿನಲ್ಲೇ ಹುಟ್ಟೂರನ್ನು ತೊರೆದು ಕುಟುಂಬದ ಪಾಲನೆಗೆ ದೂರದ ಮಾಯಾ ನಗರಿ ಮುಂಬಯಿಗೆ ತೆರಳಿ ತಮ್ಮ ಸ್ವ ಸಾಮರ್ಥ್ಯದಿಂದ ಸುಖ ಸಾಗರ ಗ್ರೂಪ್ ಆಪ್ ಹೋಟೆಲಿನ ಸಾಮ್ರಾಜ್ಯವನ್ನು ಕಟ್ಟಿ ತಮ್ಮ ದುಡಿಮೆಯ ಬಹುಪಾಲನ್ನು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಬದುಕನ್ನು ಸಮರ್ಪಿಸಿದ ಕೊಡುಗೈ ದಾನಿ ಸುರೇಶ್ ಎಸ್ ಪೂಜಾರಿಯವರು ಇಂದು ಸಂಜೆ 7:40 ಕ್ಕೆ ಮುಂಬೈಯಲ್ಲಿ ತಮ್ಮ 87ನೇ ವಯಸ್ಸಿನಲ್ಲಿ ವಯೋಸಹಜವಾಗಿ ನಿಧನರಾಗಿದ್ದಾರೆ.ಶ್ರೀಯುತರು ಬಿಲ್ಲವ ಸಮಾಜ ಸೇವಾ ಸಂಘ(ರಿ)
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. ಇದರ 26ನೇ ಶಾಖೆಯ ಬೆಳ್ಳಾರೆಯ ಪ್ರಸಾದ್ ಟೆಕ್ಸ್ ಟೈಲ್ ಕಟ್ಟಡದ ನೆಲ ಮಹಡಿಯಲ್ಲಿ ಜೂನ್ 8ರಂದು ಉದ್ಘಾಟನೆಗೊಳ್ಳಲಿದೆ. ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ೨೬ನೇ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಮಕೃಷ್ಣ ಕ್ರೆಡಿಟ್ ಕೊ ಓಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಕೆ. ಜೈರಾಜ್ ಬಿ ರೈ ವಹಿಸಲಿದ್ದಾರೆ. ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್.ಎನ್. ಕೊಳ್ತಿಗೆ ಕೃಷಿಪತ್ತಿನ
ಮಂಗಳೂರಿನ ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ಯುಜಿ ವಿದ್ಯಾರ್ಥಿಗಳಿಗೆ ಸಾಮಾನ್ಯ ವಿದಾಯ ಕಾರ್ಯಕ್ರಮವು ಕಲಾಂ ಸಭಾಂಗಣದಲ್ಲಿ ನಡೆಯಿತು. ಎಸ್‌ಜೆಇಸಿಯ ಪ್ರಾಂಶುಪಾಲರಾದ ಡಾ. ರಿಯೋ ಡಿಸೋಜಾ ಅವರು ಸ್ವಾಗತಿಸಿದರು. ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಸನತ್ ಸರಳಾಯ ಅವರು ಅಭಿನಂದನಾ ಭಾಷಣ ಮಾಡಿದರು.ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಎಂಜಿನಿಯರಿಂಗ್ ವಿಭಾಗದ ಸರ್ವಿಕಾ ಮತ್ತು
ಸ್ಕ್ವಾಡ್ರನ್ ಎನ್‌ಸಿಸಿ, ಮಂಗಳೂರು ವತಿಯಿಂದ 10 ದಿನಗಳ ಕಾಲ ವಾರ್ಷಿಕ ತರಬೇತಿ ಶಿಬಿರವನ್ನುಆಯೋಜಿಸಿರು. ಮೇ 24ರಂದ ಜೂನ್ 2ರ ವರೆಗೆ ವಾರ್ಷಿಕ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದಾರೆ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ 11 ವಿವಿಧ ಸಂಸ್ಥೆಗಳ 433 ಉತ್ಸಾಹಿ ಕೆಡೆಟ್‌ಗಳನ್ನು ಸಮಗ್ರ ಮತ್ತು ಸಮೃದ್ಧ ತರಬೇತಿ ಅನುಭವಕ್ಕಾಗಿ ಒಟ್ಟುಗೂಡಿಸಿದೆ. ಈ ಶಿಬಿರವು ಕೆಡೆಟ್‌ಗಳಲ್ಲಿ ದೇಶಭಕ್ತಿ, ಏಕತೆ, ಶಿಸ್ತು, ನಾಯಕತ್ವ ಮತ್ತು ಸೌಹಾರ್ದತೆಯನ್ನು ಬೆಳೆಸುವ
ಸಾಮಾಜಿಕ ಮಾಧ್ಯಮಗಳ ಮೂಲಕ ಕೋಮು ದ್ವೇಷ ಹರಡುವುದರ ವಿರುದ್ಧದ ಪ್ರಮುಖ ಕಾರ್ಯಾಚರಣೆಯಲ್ಲಿ, ಮಂಗಳೂರು ನಗರ ಪೊಲೀಸರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಮಾಜಿಕ ಸಾಮರಸ್ಯವನ್ನು ಕದಡುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ ಐವರನ್ನು ಬಂಧಿಸಿದ್ದಾರೆ. ಗುಪ್ತಚರ ಮಾಹಿತಿಯ ಮೇರೆಗೆ ತ್ವರಿತವಾಗಿ ಕಾರ್ಯನಿರ್ವಹಿಸಿದ ನಗರ ಆಯುಕ್ತರು, ಪ್ರಚೋದನಾಕಾರಿ ಪೋಸ್ಟ್‌ಗಳಿಗೆ ಕಾರಣರಾದವರನ್ನು ಗುರುತಿಸಲು ಮತ್ತು ಬಂಧಿಸಲು
ಕರ್ನಾಟಕ ಪತ್ರಕರ್ತರ ಸಂಘ (ರಿ) ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯವರಾಗಿರುವ ಶ್ರೀ ಹರಿರಾಂ ಶಂಕರ್ ಅವರನ್ನು ಜಿಲ್ಲೆಗೆ ಸ್ವಾಗತಿಸುವ ಮೂಲಕ ಗೌರವಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಯನ್ನು ಬಲಪಡಿಸಿ ಶಾಂತಿ ಕಾಪಾಡುವಂತೆ, ಅಕ್ರಮ ವ್ಯವಹಾರಗಳಿಗೆ ಕಡಿವಾಣ ಹಾಕಬೇಕೆಂದು ಕರ್ನಾಟಕ ಪತ್ರಕರ್ತರ ಸಂಘ ದ ವತಿಯಿಂದ ವಿನಂತಿಸಲಾಯಿತು.ಕರ್ನಾಟಕ ಪತ್ರಕರ್ತರ ಸಂಘ ದ ಜಿಲ್ಲಾಧ್ಯಕ್ಷರಾದ ಕಿರಣ್ ಪೂಜಾರಿ,
ಮೂಡುಬಿದಿರೆ : ಎಸ್.ಎನ್. ಮೂಡುಬಿದಿರೆ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಐದು ವಿದ್ಯಾರ್ಥಿಗಳು ಜೂನ್ 4 ರಿಂದ 7ರ ತನಕ ಮಂಗಳೂರಿನ ಯೆನಪೋಯ ವಿಶ್ವ ವಿದ್ಯಾಲಯದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಗ್ಲೋಬಲ್ ಯೂಥ್ ಸಮ್ಮಿಟ್ 2025 ಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲೆ ನೊರೊನ್ಹಾ ತರೀನಾ ರೀಟಾ ತಿಳಿಸಿದ್ದಾರೆ. ಈ ಸಮ್ಮೇಳನದಲ್ಲಿ ಭಾರತದ 20 ರಾಜ್ಯಗಳಿಂದ ಹಾಗು 10 ಇತರ ದೇಶಗಳನ್ನು ಒಳಗೊಂಡಂತೆ ಸುಮಾರು 500ಕ್ಕೂ ಹೆಚ್ಚು ಯುವ



























