Home Posts tagged #mangaluru (Page 39)

ಡ್ರಗ್ಸ್ ಪೆಡ್ಲರ್‍ಗಳನ್ನು ಗೂಂಡಾಕಾಯ್ದೆಯಡಿ ಬಂಧಿಸಿ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ

ಮಂಗಳೂರಿನಲ್ಲಿ ಮಾದಕ ವಸ್ತು ಹಾವಳಿ ವಿಪರೀತ ಹೆಚ್ಚಾಗುತ್ತಿದ್ದು, ಈ ಬಗ್ಗೆ ಡ್ರಗ್ಸ್ ಪೆಡ್ಲರ್‍ಗಳನ್ನು ಗೂಂಡಾಕಾಯ್ದೆ ಅಡಿಯಲ್ಲಿ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೆÇಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಪ್ರಗತಿ ಪರಿಶೀಲನಾ

ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ : ಸಿಎಂ

ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಸುಮಾರು 2.5 ಲಕ್ಷ ಹುದ್ದೆಗಳು ಭರ್ತಿಯಾಗಬೇಕಾಗಿದೆ. ಅವುಗಳಲ್ಲಿ ಮುಖ್ಯವಾಗಿ ಶಿಕ್ಷಕರ ಹುದ್ದೆ ಗಳು ಖಾಲಿ ಇವೆ. ಬಹುತೇಕವಾಗಿ ಹೊರಗುತ್ತಿಗೆ, ಗುತ್ತಿಗೆ ಆಧಾರದಲ್ಲಿ ಇಲಾಖೆಗಳಲ್ಲಿ ನೇಮಕಾತಿ ನಡೆಯುವುದರಿಂದ ಮೀಸಲಾತಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದ.ಕ. ಜಿಲ್ಲಾ

ಕ್ರಿಮಿನಲ್‍ಗಳಿಗೆ ಬಿಜೆಪಿ ಸಪೋರ್ಟ್ ಮಾಡುತ್ತಿದೆ : ಸಚಿವ ದಿನೇಶ್ ಗುಂಡೂರಾವ್

ಜಿಲ್ಲೆಗೆ ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡೋದಿಲ್ಲ, ಇದನ್ನು ಅನೈತಿಕ ಪೊಲೀಸ್ ಗಿರಿ ಅಂತಾ ಕರೆಯಬೇಕಾಗುತ್ತದೆ ಎಂದು

ಬೆಂಗಳೂರಿನಲ್ಲಿ ಶಂಕಿತ ಭಯೋತ್ಪಾದಕರ ಬಂಧನ ವಿಚಾರ : ಕರಾವಳಿ ಭಾಗದಲ್ಲಿ ಕಟ್ಟೆಚ್ಚರ

ಬೆಂಗಳೂರಲ್ಲಿ ಶಂಕಿತ ಭಯೋತ್ಪಾದಕರನ್ನು ಬಂಧಿಸಿದ ಬಳಿಕ ಕರಾವಳಿಯಲ್ಲಿ ವಿದ್ವಂಸಕ ಚಟುವಟಿಕೆ ಮೇಲೆ ಹದ್ದಿನ ಕಣ್ಣಿರಿಸಿರುವ ಪೊಲೀಸರು ಜನ ನಿಬಿಡ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ದೇವಸ್ಥಾನ, ಪ್ರವಾಸಿ ಕೇಂದ್ರ ಸೇರಿದಂತೆ ಆಯಾಕಟ್ಟಿನ ಸ್ಥಳಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಶ್ವಾನ ದಳ, ಮಸೂರ ದರ್ಶಕದಿಂದ ತಪಾಸಣೆ ನಡೆಸಲರಾಂಭಿಸಿದ್ದಾರೆ. ಈಗಾಗಲೇ ಉಡುಪಿ ಕೃಷ್ಣ ಮಠ, ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರ, ಆಟಿ ಮಾರಿಪೂಜೆ ಸಂಭ್ರಮದಲ್ಲಿರುವ ಕಾಪುವಿನ

ವಾಮಂಜೂರಿನ ಕೆಲರೈಕೋಡಿಯಲ್ಲಿ ಗುಡ್ಡ ಕುಸಿತದ ಆತಂಕದಲ್ಲಿ ಸ್ಥಳೀಯ ನಿವಾಸಿಗಳು

ಕಳೆದ ಹಲವು ದಿನಗಳಿಂದ ಸುರಿದ ಮಳೆಗೆ ವಾಮಂಜೂರು ತಿರುವೈಲ್ ಕೆಲರಾಯಿ ಎರಡನೇ ಅಡ್ಡ ರಸ್ತೆಯಲ್ಲಿ ಗುಡ್ಡ ಕುಸಿತಗೊಂಡಿದ್ದು, ಸ್ಥಳೀಯ ನಿವಾಸಿಗಳಿಗೆ ಮನೆಗಳು ಕುಸಿಯುವ ಆತಂಕ ಎದುರಾಗಿದೆ. ವಾಮಂಜೂರು ತಿರುವೈಲ್ ಕೆಲರಾಯಿ ಈ ಹಿಂದೆ ಮಳೆಗಾಲದಲ್ಲಿ ಗುಡ್ಡ ಕುಸಿತವುಂಟಾಗಿತ್ತು. ಇದೀಗ ಮತ್ತೆ ಕುಸಿತಗೊಂಡು ಸ್ಥಳೀಯರಿಗೆ ಮನೆಗಳೇ ನಾಶವಾಗಬಹುದಾದ ಆತಂಕ ಶುರುವಾಗಿದೆ. ಗುಡ್ಡದ ಮೇಲಿರುವ ಎರಡು ಮನೆಗಳು ಅಪಾಯದ ಅಂಚಿನಲ್ಲಿ ಜೀವನ ಸಾಗಿಸುವ ದುಸ್ಥಿತಿ ಎದುರಾಗಿವೆ. ಈ ಬಗ್ಗೆ

MDMA ಹಾಗೂ ಪಿಸ್ತೂಲ್ ಹೊಂದಿದ ಕುಖ್ಯಾತ ಡ್ರಗ್ ಪೆಡ್ಲರ್‍ಗಳ ಸೆರೆ

ಮಂಗಳೂರು ನಗರದಾದ್ಯಂತ ಮಾದಕ ವಸ್ತುವಾದ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಮೂವರು ಕುಖ್ಯಾತ ಡ್ರಗ್ ಪೆಡ್ಲರ್‍ಗಳನ್ನು ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ಮೂಲಕ ಬಂಧಿಸಲಾಗಿದೆ. ಸುಮಾರು 9ಲಕ್ಷದ ಮೌಲ್ಯದ ಎಂಡಿಎಂಎ ಡ್ರಗ್ಸ್ ಹಾಗೂ ಪಿಸ್ತೂಲ್ , ಡ್ರಾಗನ್ ಚೂರಿ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿದ್ದಾರೆ. ಅವರು ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಉಳ್ಳಾಲ ತಾಲೂಕು ತಲಪಾಡಿ

“ನಿಮ್ಮೆಲ್ಲರ ಆಶೀರ್ವಾದ” ಚಿತ್ರ ಇದೇ ಶುಕ್ರವಾರ ತೆರೆಗೆ!

ವರುಣ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಮೂಡಿಬಂದಿರುವ “ನಿಮ್ಮೆಲ್ಲರ ಆಶೀರ್ವಾದ” ಸಿನಿಮಾ ಇದೇ ಶುಕ್ರವಾರ ತೆರೆ ಕಾಣಲಿದೆ ಎಂದು ನಾಯಕ ನಟ ಪ್ರತೀಕ್ ಶೆಟ್ಟಿ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇದು ಹೊಸಬರ ವಿಭಿನ್ನ ಪ್ರಯತ್ನವಾಗಿದ್ದು ಒಳ್ಳೆಯ ಕತೆ ಸಿನಿಮಾದ ಜೀವಾಳವಾಗಿದೆ. ಚಿತ್ರತಂಡದಲ್ಲಿ ಬಹುತೇಕ ಹೊಸ ಕಲಾವಿದರು, ತಂತ್ರಜ್ಞರು ಕೆಲಸ ಮಾಡಿದ್ದಾರೆ. ನೀವೆಲ್ಲರೂ ಆಶೀರ್ವಾದ ಮಾಡಿದರೆ ನಾವು ಇನ್ನಷ್ಟು ಹೊಸ

ಬೈಕ್ ಸ್ಕಿಡ್ ಆಗಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಮಂಗಳೂರಿನ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ, ಕೇರಳ ಮೂಲದ ಮಹಮ್ಮದ್ ನಶತ್ (21) ಮೃತ ವಿದ್ಯಾರ್ಥಿ.ಯುವಕ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಸ್ಕಿಡ್ ಆಗಿದ್ದು ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀವ್ರ ಗಾಯಗೊಂಡು

ಕುಂಪಲ : ನವ ವಧು ವರರ ರಂಗ ರುಕ್ಮಿಣಿ ಸಮಾಗಮ ಕಾರ್ಯಕ್ರಮ

ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ವತಿಯಿಂದ ನವ ವಧು ವರರ ರಂಗ ರುಕ್ಮಿಣಿ ಸಮಾಗಮ ಕಾರ್ಯಕ್ರಮ ನಡೆಯಿತು. ಉದ್ಯಮಿ ಕಂಪಾರ್ಟ್ ಇನ್ ಮಾಲಕ ಚಂದ್ರಹಾಸ ಶೆಟ್ಟಿ ಕಾರ್ಯಕ್ರಮಕ್ಕೆ ದೀಪಬೆಳಗಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಜೀವನವನ್ನು ರೂಪಿಸಲು ನಮಗೆ ಸಂಸ್ಕಾರ ಬಹಳ ಮುಖ್ಯ, ಇದನ್ನು ಅರಿತಾಗ ಮಾತ್ರ ನಮ್ಮ ಜೀವನ ಸುಂದರವಾಗುತ್ತದೆ, ಈ ನಿಟ್ಟಿನಲ್ಲಿ ರಂಗ ರುಕ್ಮಿಣಿ ಕಾರ್ಯಕ್ರಮ ಶ್ಲಾಘನೀಯ. ಹೊಸ ಬಾಳಿನಲ್ಲಿ ಸದಾ ಕಾಲ ನಗುವಿನೊಂದಿಗೆ ಬದುಕಿ ಎಂದು ಹಾರೈಸಿದರು.

ತೋಕೂರು ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಯಕ್ಷಾರ್ಚನೆ

ಹಳೆಯಂಗಡಿ: ಯಕ್ಷನಾಟ್ಯದಿಂದಲೂ ದೇವರ ಸೇವೆ ಮಾಡಿದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಯಕ್ಷಗಾನ ಸಹಿತ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ರೂಡಿಸಿಕೊಂಡರೆ ಜೀವನದಲ್ಲಿ ಸಂಸ್ಕಾರ ಸಂಸ್ಕೃತಿ ಸಾಧ್ಯ ಎಂದು ಕಟೀಲು ಕ್ಷೇತ್ರದ ಅರ್ಚಕ ಶ್ರೀ ಹರಿ ನಾರಾಯಣ ಆಸ್ರಣ್ಣ ಹೇಳಿದರು. ಅವರು ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಕ್ಷಾರ್ಚನೆ ಕಾರ್ಯಕ್ರಮದ ದೀಪ ಪ್ರಜ್ವಲನಗೊಳಿಸಿ ಆಶೀರ್ವಚನ ನೀಡಿದರು. ಯಕ್ಷಾರ್ಚನೆಯ ಬಾಲ ಪ್ರತಿಭೆಗಳಾದ ದಿಯಾ, ದಿಶಾ