ಬಂಟರ ಸಂಘ ( ರಿ) ಸುರತ್ಕಲ್ 2023-25 ರ ಸಾಲಿನ ಅಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ ಆಯ್ಕೆಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮುಂಚೂರು ಲೋಕಯ್ಯ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡರು.ಉಪಾಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪ್ರಧಾನ
ಬಜಪೆ :ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಕಂಬ್ಲ,ಮತ್ತು ಪೊರ್ಕೋಡಿ ದ್ವಾರದ ಬಳಿ ಗಾಂಜಾ ಸೇವನೆ ಮಾಡುತಿದ್ದ ಇಬ್ಬರು ವ್ಯಕ್ತಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಅಂಬೇಡ್ಕರ್ ನಗರ ಪೊರ್ಕೋಡಿ ಕೆಂಜಾರು ಗ್ರಾಮದ ನಿವಾಸಿಗಳಾದ ಆತೀಕ್ ರೆಹಮಾನ್ (24 ) ಹಾಗೂ ಫಾಜೀಲ್( 25 ) ಎಂದು ಗುರುತಿಸಲಾಗಿದೆ.ಅವರನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಯಲ್ಲಿ ಗಾಂಜಾಸೇವನೆ ಮಾಡಿದ ಬಗ್ಗೆ ದೃಡಪಟ್ಟ ಮೇರೆಗೆ ಪ್ರಕರಣ ದಾಖಲಾಗಿದೆ. ಬಜಪೆ ಪೊಲೀಸ್ ಠಾಣಾ
ಕಡಬ: ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬಳು ಹಠಾತ್ ಅನಾರೋಗ್ಯದಿಂದ ನಿಧನ ಹೊಂದಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ಎಂಬಲ್ಲಿ ನಡೆದಿದೆ. ರೆಂಜಿಲಾಡಿಯ ನಿಡ್ಮೇರು ನಿವಾಸಿ ರವೀಂದ್ರ ಅವರ ಪುತ್ರಿ ಕು.ರಶ್ಮಿತಾ (18) ಮೃತ ವಿದ್ಯಾರ್ಥಿನಿ. ಮೃತ ರಶ್ಮಿತಾ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆ ವೇಳೆ
ವಿಶ್ವ ರೆಡ್‍ಕ್ರಾಸ್ ದಿನ-2023 ಪ್ರಶಸ್ತಿ ಪ್ರದಾನ ಹಾಗೂ ಪ್ರಮಾಣಪತ್ರ ವಿತರಣಾ ಸಮಾರಂಭ ಹಾಗೂ ಅಭಿನಂದನಾ ಕಾರ್ಯಕ್ರಮವು ಹಂಪಕಟ್ಟೆಯ ಮಂಗಳೂರು ವಿವಿಯ ರವೀಂದ್ರ ಕಲಾಭವನದಲ್ಲಿ ನಡೆಯಿತು. ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಘಟಕ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ ಮಂಗಳೂರು, ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಯವ ರೆಡ್ ಕ್ರಾಸ್ ಯೆನೆಪೋಯ ವಿಶ್ವ ವಿದ್ಯಾನಿಲಯ ಇವುಗಳ
ಮುಂಬಯಿ :ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಗಳ ಅಭಿವೃದ್ದಿಗಾಗಿ ವಿವಿಧ ರೀತಿಯಲ್ಲಿ ಶ್ರಮಿಸುತ್ತಿರುವ ಮುಂಬಯಿಯಲ್ಲಿ ನೆಲೆಸಿದ ಕರ್ನಾಟಕದ ಕರಾವಳಿಯ ಎಲ್ಲಾ ಜಾತೀಯ ಹಾಗೂ ವಿವಿಧ ಭಾಷೀಯ ಸಂಘಟನೆಗಳನ್ನೊಳಗೊಂಡ ಏಕೈಕ ಸರಕಾರೇತರ ಸಂಘಟನೆ ಜಯಶ್ರಿಕೃಷ್ಣ ಪರಿಸರ ಪ್ರೇಮಿ ಸಮಿತಿ. ಇದರ ಮಾರ್ಗದರ್ಶಕರಾಗಿದ್ದ ಮಾಜಿ ಕೇಂದ್ರ ಸಚಿವ ದಿ. ಜಾರ್ಜ್ ಫೆರ್ನಾಂಡಿಸ್ ಅವರ 94ನೇ ಜನ್ಮದಿನಾಚರಣೆ ಅಂಗವಾಗಿ ಜೂನ್ 3 ರಂದು ಅವರ ಸ್ಮರಣಾರ್ಥ ರಾಷ್ಟೀಯ ಪ್ರಶಸ್ತಿ ಪ್ರದಾನ ಸಮಾರಂಭ ರಂಜನಿ
ಮುಂಗಾರು ಮಳೆ ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಜ್ಜಾಗಿದೆ. ಪ್ರಕೃತಿ ವಿಕೋಪ ಸಮರ್ಥವಾಗಿ ನಿರ್ವಹಿಸಲು ಬೇಕಾದ ಎಲ್ಲಾ ರೀತಿ ಸಿದ್ಧತೆಯನ್ನು ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಹೇಳಿದರು. ವಿ4ನ್ಯೂಸ್‍ನೊಂದಿಗೆ ಮಾತನಾಡಿದ ಅವರು, ಈಗಾಗಲೇ ಸ್ಪೀಕರ್ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಗಿದ್ದು, ಇದರಲ್ಲಿ ಸ್ಪೀಕರ್ ಅವರು ಕೆಲವೊಂದು
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮಂದಿಗೆ ಗ್ಯಾರಂಟಿ ಯೋಜನೆ ಕೊಡಬಾರದು ಎಂದು ಕಾಂಗ್ರೆಸ್ಸಿಗರು ಜಾಲತಾಣಗಳಲ್ಲಿ ಬರೆಯುತ್ತಿದ್ದಾರೆ. ಇದು ನಾಚಿಕೆಗೇಡಿನ ವಿಚಾರ. ಕೇವಲ ಗೆಲ್ಲಿಸಿದ ಕ್ಷೇತ್ರಗಳಿಗೆ ಮಾತ್ರ ಗ್ಯಾರಂಟಿ ಕೊಡುವ ಕಾಂಗ್ರೆಸ್ ಮನಸ್ಥಿತಿ ಸರಿಯಲ್ಲ. ದ.ಕ.ಮತ್ತು ಉಡುಪಿ ಜಿಲ್ಲೆಯ ಜನತೆಯನ್ನು ಗ್ಯಾರಂಟಿ ಯೋಜನೆಯಿಂದ ವಂಚಿಸಬೇಡಿ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ
ಮಂಗಳೂರು : ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಢಿಕ್ಕಿ ಹೊಡೆದಿರುವ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಇಂಡಿಗೋ ವಿಮಾನವು ಮಂಗಳೂರಿನಿಂದ ದುಬೈಗೆ ಹೊರಟಿತ್ತು. ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ವೇಳೆ ರನ್ ವೇನಲ್ಲಿ ವಿಮಾನದ ರೆಕ್ಕೆಗೆ ಹಕ್ಕಿ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ತಕ್ಷಣ ಅಪಾಯದ ಸೂಚನೆ ಅರಿತು ಎಟಿಸಿಗೆ ಮಾಹಿತಿ ನೀಡಿದ ಪೈಲಟ್, ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದಲೇ
ಮಂಗಳೂರಿನ ಬೋಂದೆಲ್‍ನಲ್ಲಿರುವ ಕರ್ನಾಟಕ ಸರ್ಕಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ 2023-24ನೇ ಪ್ರವೇಶಾತಿ ಆರಂಭಗೊಂಡಿದೆ.ಕಾಲೇಜಿನಲ್ಲಿ ಇಂಜಿನಿಯರಿಂಗ್ ಕೋರ್ಸ್‍ಗಳು, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ನಾನ್ ಇಂಜಿನಿಯರಿಂಗ್, ಕಮರ್ಶಿಯಲ್ ಪ್ರಾಕ್ಟೀಸ್, ಆಂಗ್ಲ ಮತ್ತು ಕನ್ನಡ ಭಾಷೆಗಳಲ್ಲಿ ಬೋಧನೆಯನ್ನು ಮಾಡುತ್ತಿದ್ದಾರೆ.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಡ್ ಬಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕಿಡಿಕಾರಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸಚಿವ ಸಂಪುಟದಲ್ಲಿ ಅನುಮೋದನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆದು, ಫಲಾನುಭವಿಗಳಿಗೆ ಯೋಜನೆಗಳು ಸಿಗಲಿದೆ ಎಂದರು. ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಜನರು ಯಾವುದೇ ಗೊಂದಲ ಪಡುವ




























