Home Posts tagged #mangaluru (Page 47)

ಉಳ್ಳಾಲ ಎಸ್‍ಡಿಪಿಐ ಅಭ್ಯರ್ಥಿ ರಿಯಾಜ್ ಫರಂಗಿಪೇಟೆ ನಾಮಪತ್ರ ಸಲ್ಲಿಕೆ

ಮಂಗಳೂರು ವಿಧಾನಸಭಾ ಕ್ಷೇತ್ರದ ಎಸ್‍ಡಿಪಿಐ ಅಭ್ಯರ್ಥಿ ರಿಯಾಜ್ ಫರಂಗಿಪೇಟೆ ಅವರು ನಾಮಪತ್ರ ಸಲ್ಲಿಸಿದರು. ಅವರು ತೊಕ್ಕೊಟ್ಟುವಿನ ಮೈದಾನದಲ್ಲಿ ಜರಗಿದ ಎಸ್‍ಡಿಪಿಐ ಮಂಗಳೂರು ವಿಧಾಸನಭಾ ಕ್ಷೇತ್ರದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಪ್ರಯುಕ್ತ ಹಮ್ಮಿಕೊಳ್ಳಲಾದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಸರಳ ವ್ಯಕ್ತಿತ್ವ, ಸ್ಟೀಲ್ ಲೋಟದಲ್ಲಿ

ಬೆಲೆ ಏರಿಕೆಯ ವಿರುದ್ಧ ಕಾಂಗ್ರೆಸ್‍ನಿಂದ ಪ್ರತಿಭಟನೆ : ಗ್ಯಾಸ್ ಸಿಲಿಂಡರ್ ಮತ್ತು ಕಟ್ಟಿಗೆಯ ಅಣುಕು ಶವ ಯಾತ್ರೆ

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ ಏರಿಕೆ ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರದ ವೈಫಲ್ಯ ವನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮಂಗಳೂರು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಿತಲ್ಲದೆ, ಗ್ಯಾಸ್ ಸಿಲಿಂಡರ್ ಮತ್ತು ಕಟ್ಟಿಗೆಯ ಅಣಕು ಶವ ಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ `ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾದರೂ ಕೂಡ ಬಿಜೆಪಿಗರು ತಲೆ

ಜಿಪಂ ಸಿಇಒ ಡಾ. ಕುಮಾರ್‌ ಗೆ ರಾಜ್ಯ ಮಟ್ಟದ ಪ್ರಶಸ್ತಿ

ಮಂಗಳೂರು: ರಾಷ್ಟ್ರೀಯ ಮತದಾರರ ದಿನಾಚರಣೆಯ (2023) ಅಂಗವಾಗಿ ವಿವಿಧ ವಿಭಾಗಗಳಲ್ಲಿ ತೋರಿದ ಅತ್ಯುತ್ತಮ ನಿರ್ವಹಣೆಗಾಗಿ ದ.ಕ. ಜಿಪಂ ಸಿಇಒ ಡಾ. ಕುಮಾರ್‌ ಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ. ಜ.25ರ ಬೆಳಗ್ಗೆ 11:30ಕ್ಕೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ

ಮಂಗಳೂರು : ಜಾಗೃತಿ ತಿಳುವಳಿಕೆ ಸಪ್ತಾಹದ ಸಮಾರೋಪ ಸಮಾರಂಭ

ರಾಜ್ಯದ ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಆಡಳಿತದಿಂದ ವಿದೇಶಿ ಹೂಡಿಕೆದಾರರು ಪ್ರಭಾವಿತರಾಗಿದ್ದು, ಅದರ ಫಲವಾಗಿ ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಕೋಟಿ ಹೂಡಿಕೆಯ ಒಪ್ಪಂದಗಳಾಗಿರುವುದು ಹೆಮ್ಮೆಯ ವಿಷಯ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಹರ್ಷ ಪಿ.ಎಸ್. ಅವರು ಹರ್ಷ ವ್ಯಕ್ತ ಪಡಿಸಿದರು. ನವ ಮಂಗಳೂರು ಬಂದರು ಪ್ರಾಧಿಕಾರದಿಂದ ಎನ್.ಎಂ.ಪಿ.ಎಯ ಬಿ.ಡಿ.ಸಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ

ಮಂಗಳೂರು : ರಾಜ್ಯ ಸರ್ಕಾರದ ಜನಸಂಕಲ್ಪ ಯಾತ್ರೆ ಅಲ್ಲ, ಇದು ಜನ ಸಂಕಟ ಯಾತ್ರೆ-ಮಂಗಳೂರಿನಲ್ಲಿ ಶಾಸಕ ಯು.ಟಿ. ಖಾದರ್ ವಾಗ್ದಾಳಿ

ರಾಜ್ಯದ ಬಿಜೆಪಿ ಸರ್ಕಾರ ಜನಸಂಕಲ್ಪ ಯಾತ್ರೆಯನ್ನು ಆರಂಭಿಸಿದ್ದು, ಇದು ಜನ ಸಂಕಲ್ಪ ಯಾತ್ರೆ ಅಲ್ಲ ಇದು ಜನ ಸಂಕಟ ಯಾತ್ರೆ. ಜನ್ರ ಮುಂಗಡ ಪತ್ರದಲ್ಲಾಗಲಿ ಹೇಳಿದ ಯಾವುದೇ ಆಶ್ವಾಸನೆ ಈಡೇರಿಸಿಲ್ಲ. ಸರ್ಕಾರದ ವೈಫಲ್ಯ ಮರೆಮಾಚಲು ಈ ಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಶಾಸಕ ಯು.ಟಿ. ಖಾದರ್ ವಾಗ್ದಾಳಿ ನಡೆಸಿದ್ದಾರೆ. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದೆ. ಡಬಲ್ ಇಂಜಿನ್

ಮಂಗಳೂರು :ಮೂಡುಶೆಡ್ಡೆ- ಬೋಂದೆಲ್ ಸಂಪರ್ಕ ರಸ್ತೆ ಮಧ್ಯೆ ಸುರಿದ ತ್ಯಾಜ್ಯ ರಾಶಿ

ಮಂಗಳೂರು ಪಾಲಿಕೆ ವ್ಯಾಪ್ತಿಯ ಮೂಡುಶೆಡ್ಡೆ-ಬೋಂದೆಲ್ ಸಂಪರ್ಕ ರಸ್ತೆ ಮಧ್ಯೆ ಕಿಡಿಗೇಡಿಕಗಳು ತ್ಯಾಜ್ಯ ತಂದು ಸುರಿದಿದ್ದು, ತ್ಯಾಜ್ಯ ರಸ್ತೆ ಮಧ್ಯೆ ಚೆಲ್ಲಾಪಿಲ್ಲಿಯಾಗಿದ್ದು, ಇದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಕಿಡಿಗೇಡಿಗಳ ಕೃತ್ಯದ ವಿರುದ್ಧ ಇಲಾಖೆಗೆ ದೂರು ನೀಡಿದ್ದು, ಕೃತ್ಯ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ತಾಲೂಕು ಪಂಚಾಯತ್‌ನ ಮಾಜಿ ಅಧ್ಯಕ್ಷ ಹರೀಶ್ ಮೂಡುಶೆಡ್ಡೆ ಆಗ್ರಹಿಸಿದ್ದಾರೆ.

ಮಂಗಳೂರು : ಐಕ್ಯಮ್ ವಿಶೇಷ ಮಕ್ಕಳ ಶಾಲೆ ಯಲ್ಲಿ ದೀಪಾವಳಿ ಆಚರಣೆ

ಐಕ್ಯಮ್ ವಿಶೇಷ ಮಕ್ಕಳ ಶಾಲೆ ಯಲ್ಲಿ ದೀಪಾವಳಿ ಆಚರಣೆಯು ಅತ್ಯಂತ ವಿಜೃಂಭಣೆಯಿಂದ ಜರಗಿತು. ಈ ಒಂದು ಕಾರ್ಯಕ್ರಮವು ಪೃಥ್ವಿ ಟ್ರಸ್ಟ್ ಸಹಭಾಗಿತ್ವದಲ್ಲಿ ಜರಗಿತ್ತು. ಮುಖ್ಯ ಅತಿಥಿಯಾಗಿ ಮಾಜಿ ಶಾಸಕರು ದಕ್ಷಿಣ ಕ್ಷೇತ್ರ ಮಂಗಳೂರು ಶ್ರೀ ಜೆ ಆರ್ ಲೋಬೊ ಉಪಸ್ಥಿತರಿದ್ದರು.ಇವರು ಐಕ್ಯಮ್ ಶಾಲೆಯ ಮಕ್ಕಳೊಂದಿಗೆ ದೀಪವನ್ನು ಬೆಳಗಿಸಿದರ ಮೂಲಕ ಈ ಕಾರ್ಯಕ್ರಮವನ್ನು ಆರಂಭಿಸಿದರು.ಆ ನಂತರ ಸಭಾ ಕಾರ್ಯಕ್ರಮದಲ್ಲಿ ಮಕ್ಕಳ ಕುರಿತು ಮಾತನಾಡಿದರು.ಇದೇ ವೇಳೆ ಐಕ್ಯಂ ಸಂಸ್ಥೆಯ

ಮಂಗಳೂರು : ಕರ್ತವ್ಯಗಳ ಪಾಲನೆ ಮನೆಯಿಂದಲೇ ಆರಂಭವಾಗಲಿ: ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ. ನಾಗರತ್ನ

ಕರ್ತವ್ಯಗಳ ಪಾಲನೆ ಮನೆಯಿಂದಲೇ ಆರಂಭ ಆಗಬೇಕು. ಸಮಾಜದಲ್ಲಿ ಆಗುವ ತಪ್ಪುಗಳ ಬಗ್ಗೆ ಧ್ವನಿ ಎತ್ತುವ ಮನೋಭಾವವನ್ನು ಯುವಜನರು ಹೊಂದಿರಬೇಕು. ಪ್ರಾಥಮಿಕ ಹಂತದಿಂದಲೇ ಇಂತಹ ವಿಚಾರಗಳನ್ನು ಕಲಿಸುವ ಮತ್ತು ಅರಿಯುವ ಪ್ರಕ್ರಿಯೆ ಆದಾಗ ಎಲ್ಲರೂ ಸಮಾನರೆಂಬ ಮನೋಭಾವ ಹುಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ. ಅಭಿಪ್ರಾಯಪಟ್ಟರು.ಅವರು ಶನಿವಾರ ನಗರದ ರೋಶನಿ ನಿಲಯ ಸಭಾಂಗಣದಲ್ಲಿ ಯುವಜನ

ಮಂಗಳೂರು : ಸೌಹಾರ್ದ ದೀಪಾವಳಿ ಮತ್ತು ಕತ್ತಲ ಹಾಡು ಕಾರ್ಯಕ್ರಮ

ಡಿವೈಎಫ್‌ಐ ಬಜಾಲ್ ಪಕ್ಕಲಡ್ಕ ಘಟಕ ಹಾಗೂ ಪಕ್ಕಲಡ್ಕ ಯುವಕ ಮಂಡಲ (ರಿ) ಇದರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸೌಹಾರ್ದ ದೀಪಾವಳಿ ಮತ್ತು ಕತ್ತಲ ಹಾಡು ಕಾರ್ಯಕ್ರಮವನ್ನು ಪಕ್ಕಲಡ್ಕ ಪ್ರದೇಶದಲ್ಲಿ ಆಚರಿಸಲಾಯಿತು. ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮುಹಿಯ್ಯುದ್ದಿನ್ ಜುಮ್ಮಾ ಮಸೀದಿ ಪಕ್ಕಲಡ್ಕ ಇದರ ಜಮಾಅತ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಬೀಬುಲ್ಲ

ರಿವೋಲ್ಟ್ ಕಂಪನಿಯ ಎಲೆಕ್ಟ್ರಿಕ್ ಬೈಕ್ ಮಾರುಕಟ್ಟೆಗೆ ಲಗ್ಗೆ

ದ್ವಿಚಕ್ರ ವಾಹನಗಳ ಮಾರಾಟ ಕ್ಷೇತ್ರದಲ್ಲಿ ಗ್ರಾಹಕರ ಮನ ಗೆದ್ದಿರುವ ಮಂಗಳೂರಿನ ವೆಸ್ಟ್ ಕೋಸ್ಟ್ ಶೋ ರೂಮ್ ನ ಸಹಬಾಗಿತ್ವದಲ್ಲಿ ಮಂಗಳೂರಿನಲ್ಲಿ ರಿವೋಲ್ಟ್ ಕಂಪನಿಯ ಎಲೆಕ್ಟಿಕಲ್ ಬೈಕ್ ಶೋರೂಮ್ ಶುಭರಂಭಗೊಳ್ಳಲಿದೆ.ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರವಾಹನಗಳ ಮಾರುಕಟ್ಟೆ ವೇಗವಾಗಿ ಬೆಳೆಯುತ್ತಿದೆ. ಪ್ರತಿದಿನ ಹೊಸ ಹೊಸ ಎಲೆಕ್ಟ್ರಿಕ್ ವಾಹನಗಳು ಲಗ್ಗೆ ಇಡುತ್ತಿದೆ. ಅಂತೆಯೇ ದ್ವಿಚಕ್ರವಾಹನಗಳ ಮಾರಾಟ ಕ್ಷೇತ್ರದಲ್ಲಿಯೇ ಹೆಸ್ರು ಪಡೆದುಕೊಂಡಿರುವ ರಿವೋಲ್ಟ್ ಕಂಪನಿಯು