ಮಂಗಳೂರು: ಕೇರಳ ರಾಜ್ಯದಲ್ಲಿ ಖೋಟಾನೋಟು ಮುದ್ರಿಸಿ ಮಂಗಳೂರು ನಗರದಲ್ಲಿ ಚಲಾವಣೆ ಮಾಡುತ್ತಿದ್ದ ನಾಲ್ವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 500 ರೂ. ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದರು. ಕಾಸರಗೋಡು ಜಿಲ್ಲೆಯ ಕರಿಚೇರಿ ಪೆರ್ಲಂ ವೀಡು, ಕೊಳತ್ತೂರು ನಿವಾಸಿ ವಿ.ಪ್ರಿಯೇಶ್(38), ಮುಳಿಯಾರು
ಪವರ್ ಫ್ರೆಂಡ್ಸ್ ಬೆದ್ರ ಮಹಿಳಾ ಘಟಕ ಮತ್ತು ಇನ್ನರ್ ವ್ಹೀಲ್ ಕ್ಲಬ್ ಆಫ್ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಮಂಗಳೂರಿನ ಎ.ಜೆ.ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಕನ್ನಡ ಭವನದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಇನ್ನರ್ ವ್ಹೀಲ್ ಕ್ಲಬ್ ಅದ್ಯಕ್ಷ ಬಿಂದಿಯಾ ಎಸ್.ಶೆಟ್ಟಿ ಅಧ್ಯಕ್ಷತೆ ವಹಿಸಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ನಮಗೆ ಆರೋಗ್ಯ ಮುಖ್ಯವಾಗಿ ಬೇಕು. ಒಂದೊಂದು ಅಂಗವೂ
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಚಾಲಕ ಹಾಗು ನಿರ್ವಾಹಕ ಬಸ್ಸನ್ನು ಆಂಬುಲೆನ್ಸ್ ಮಾದರಿಯಲ್ಲಿ ಚಲಾಯಿಸಿ ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. 13ಈ ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ಸು ಎಂದಿನಂತೆ ಕುಳೂರು ಮಾರ್ಗವಾಗಿ ಚಲಿಸುತಿತ್ತು. ಅದರಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರೊಬ್ಬರಲ್ಲಿ ಕಾಲೇಜು ವಿದ್ಯಾರ್ಥಿ ತಟ್ಟನೆ