ಮಂಜೇಶ್ವರ : ಮಂಜೇಶ್ವರ ರೇಂಜ್ ಮದ್ರಸ ಮ್ಯಾನೇಜ್ಮೆಂಟ್ ಅಸೋಸಿಯೇಶನ್‍ನ ಆಶ್ರಯದಲ್ಲಿ ಬಿ ಸ್ಮಾರ್ಟ್ ಲೀಡರ್ಸ್ ಅಕಾಡೆಮಿ ಸಮ್ಮಿಲನ ಮಚ್ಚಂಪ್ಪಾಡಿ ಮದ್ರಸದಲ್ಲಿ ನಡೆಯಿತು. ಪಿ. ಎಚ್.ಅಬ್ದುಲ್ ಹಮೀದ್ ಹಾಜಿ ಧ್ವಜಾರೋಹಣ ನೆರವೇರಿಸಿದರು. ಅಬ್ದುಲ್ ಬಾಸಿತ್ ಹುದವಿ ಪ್ರಾರ್ಥನೆಗೈದರು. ಸಮಸ್ತ ಕೇರಳ ಜಮೀಯ್ಯತುಲ್ ಉಲಮಾ ಕಾಸರಗೋಡು ಜಿಲ್ಲಾ ಮುಶಾವರ ಸದಸ್ಯ
ದೇಶದ ಐಕ್ಯತೆಯನ್ನು ಒಂದೇ ಸೂರಿನಡಿಯಲ್ಲಿ ತರುವ ಭಾರತದ ಅಭಿಮಾನದ ಆಚರಣೆಯಾದ 77 ನೇ ಸ್ವಾತಂತ್ರ್ಯೋತ್ಸವವನ್ನು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಶತಮಾನೋತ್ಸವವನ್ನು ಆಚರಿಸುತ್ತಿರುವ ಕುಳೂರು ಶಾಲೆಯಲ್ಲಿ ಈ ವರ್ಷದ ಸ್ವಾತಂತ್ರ್ಯೋತ್ಸವವು ಸ್ಮರಣೀಯವಾಯಿತು. ಆಕರ್ಷಕ ಮೆರವಣಿಗೆಯೊಂದಿಗೆ ಆರಂಭವಾದ ಕಾರ್ಯಕ್ರಮವು ಬಳಿಕ ಶಾಲಾ ಶತಮಾನೋತ್ಸವ ಸಮಿತಿಯವರು ಕೊಡುಗೆ ನೀಡಿದ ನೂತನ ಧ್ವಜಸ್ತಂಭದ ಲೋಕಾರ್ಪಣೆ
ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಮುಗಿದ ನಂತರ ನಷ್ಟವಾಗುತ್ತಿರುವ ಆಟೋರಿಕ್ಷಾ, ಟ್ಯಾಕ್ಸಿ ನಿಲ್ದಾಣ ಹಾಗೂ ಬಸ್ ನಿರೀಕ್ಷಣಾ ಕೇಂದ್ರಗಳನ್ನು ಬದಲಾಯಿಸಲು ಅಧಿಕಾರಿಗಳು ಕ್ರಮಕೈಗೊಳ್ಳುವಂತೆ ಕಾಸರಗೋಡು ಜಿಲ್ಲಾ ಮೋಟಾರು ಮತ್ತು ಇಂಜಿನಿಯರಿಂಗ್ ಕಾರ್ಮಿಕರ ಸಂಘ ಎಐಟಿಯುಸಿ ಜಿಲ್ಲಾ ಸಮಿತಿ ಅಧಿಕಾರಿಗಳನ್ನು ಒತ್ತಾಯಿಸಿದೆ. ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಕೆ.ವಿ.ಕೃಷ್ಣನ್ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಮುಸ್ತಫಾ ಕಡಂಬಾರ್ ಅಧ್ಯಕ್ಷತೆ
ಮಂಜೇಶ್ವರ: ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಲಾಗಿರುವ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದಕ್ಕೆಸಂತಸವನ್ನು ವ್ಯಕ್ತಪಡಿಸಿ ಮೀಂಜ ಮತ್ತು ವರ್ಕಾಡಿ ಮಂಡಲ ಕಾಂಗ್ರೆಸ್ ಸಮಿತಿಯ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು. ಸುಂಕದಕಟ್ಟೆಯಿಂದ ಹೊರಟ ಮೆರವಣಿಗೆ ಮಜೀರ್ ಪಳ್ಳದಲ್ಲಿ ಸಮಾಪ್ತಿಗೊಂಡಿತು. ಸಂಭ್ರಮಾಚರಣೆಯಲ್ಲಿ ಮೀಂಜ ಮಂಡಲಾಧ್ಯಕ್ಷ ಶ್ರೀ ಇಕ್ಬಾಲ್ ಕಳಿಯೂರು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ಸ್ ಅಧ್ಯಕ್ಷ ಪಿ.
ಮಂಜೇಶ್ವರ : ಮಕ್ಕಳ ಪ್ರತಿಭೆಗೆ ತಕ್ಕ ಪ್ರೋತ್ಸಾಹ ಹಾಗೂ ಪೋಷಣೆ ಸಿಕ್ಕರೆ ಮಕ್ಕಳು ನ್ನಷ್ಟು ಉನ್ನತ ಮಟ್ಟಕ್ಕೆ ಏರುತ್ತಾರೆ ಎಂಬುದಕ್ಕೆ ಉತ್ತಮ ಉದಾಹರಣೆ ಬಿ.ಎಸ್ ನಗರದ ಭಿನ್ನ ಚೇತನರಾಗಿರುವ ಕೆ.ನಾಸರ್ ಹಾಗೂ ಜುಬೈದ ದಂಪತಿಗಳ ಪುತ್ರ ಅಬೂಬಕ್ಕರ್ ಮಕ್ಸೂದ್. ಉದ್ಯಾವರ ಅಲ್ ಸಖಾಫ್ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ಈ ಬಾಲಕ ತನ್ನ ಕೈ ಚಳಕದಿಂದ ಈಗಾಗಲೇ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿತ್ರಕಲೆಯಲ್ಲಿ ಅದ್ಭುತ ಸಾಧನೆಯನ್ನು ಮಾಡಿದ್ದಾನೆ. ಇಷ್ಟು
ಮಂಜೇಶ್ವರ : ರ್‍ಯಾಗಿಂಗ್ ಎನ್ನುವುದು ಮಾನವ ಹಕ್ಕುಗಳ ದುರುಪಯೋಗದ ವ್ಯವಸ್ಥಿತ ರೂಪವಾಗಿದೆ. ವಿಪರೀತ ಕಿರುಕುಳ ನೀಡುವುದರ ಜೊತೆಗೆ ಮನಸ್ಸಿನಲ್ಲಿ ಭಯವನ್ನು ಸೃಷ್ಟಿ ಮಾಡುತ್ತಿರುವ ರ್ಯಾಗಿಂಗ್ ತಡೆಯಲು ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗುತ್ತಿರುವ ಮಧ್ಯೆಯೇ ಬೇಕೂರು ಕುಂಬಳೆ ಹೈಯರ್ ಸೆಕಂಡರಿ ಶಾಲೆಯಲ್ಲಿ ಪ್ಲಸ್ ವನ್ ತರಗತಿಯಲ್ಲಿ ಕಲಿಯುವ ವಿದ್ಯಾರ್ಥಿಯನ್ನು ಬಸ್ಸು ನಿಲ್ದಾಣದಲ್ಲಿ ಹಿಗ್ಗಾ ಮಗ್ಗಾ ಥಳಿಸಿ ಹಲ್ಲೆ ಗೈದು ಗಾಯಗೊಳಿಸಲಾಗಿದೆ. ಪೆರ್ಮುದೆ
ಮಂಜೇಶ್ವರದಲ್ಲಿ 16 ವರ್ಷ ಹಳೆಯದಾಗಿರುವ ತಿಮಿಂಗಿಲ ಮೀನಿನ ಅಸ್ತಿಪಂಜರವನ್ನು ಕಾಸರಗೋಡು ಡಿ ಎಫ್ ಒ ಪತ್ತೆ ಹಚ್ಚಿದೆ. ಕುಂಜತ್ತೂರು ಸಮೀಪದ ಕಣ್ಣತೀರ್ಥ ಕಡಪ್ಪುರದಲ್ಲಿ ಕರ್ನಾಟಕ ನಿವಾಸಿಯ ಮಾಲಕತ್ವದಲ್ಲಿರುವ ಸುಮಾರು ಹದಿನೈದು ಎಕ್ರೆಯ ಸ್ಥಳದಲ್ಲಿರುವ ಶೆಡ್ಡೊಂದರಲ್ಲಿ ತಿಮಿಂಗಿಲದ ಅಸ್ತಿಪಂಜರ ಪತ್ತೆಯಾಗಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದ ಮಾಲಿಕರನ್ನು ಸಂಪರ್ಕಿಸಿದಾಗ 2007 ರಲ್ಲಿ ಕಣ್ಣತೀರ್ಥ ಕಡಪ್ಪುರದಲ್ಲಿ ತೀರಕ್ಕೆ ಬಂದ ಸತ್ತ
ಮಂಜೇಶ್ವರ : ಟೀಮ್ ಮಂಜುಶ್ರೀ ತುಳುನಾಡ್ ಸಂಸ್ಥೆಯ ಬಡವು ಯೋಜನೆಯ 57ನೇ ಸೇವಾ ಕಾರ್ಯದ ವತಿಯಿಂದ ಉಪ್ಪಳ ಸಮೀಪದ ಪೈವಳಿಕೆ ಲಾಲ್ಬಾಗ್ ಬೋಳಂಗಳ ನಿವಾಸಿ ಕಲ್ಯಾಣಿ ಕೃಷ್ಣ ದಂಪತಿಗಳ ಕುಟುಂಬಕ್ಕೆ ದಿನಸಿ ಸಾಮಾಗ್ರಿಗಳನ್ನು ಹಸ್ತಾಂತರಿಸಲಾಯಿತು. ಕಲ್ಯಾಣಿ ಕೃಷ್ಣ ದಂಪತಿಗಳ ಮನೆಯು ಶೋಚನಿಯಾವಸ್ಥೆಯಲ್ಲಿದ್ದು, ಅಲ್ಲದೇ ಮುಪ್ಪಿನ ಕಾಲದಲ್ಲಿ ದುಡಿದು ಸಾಕಾಬೇಕಾದ ಮಕ್ಕಳ ಅನಾರೋಗ್ಯ ಇನ್ನೊಂದು ಕಡೆ. ಈ ಪರಿಸ್ಥಿತಿಯಲ್ಲಿ ಕಲ್ಯಾಣಿಯವರಿಗೆ ದಿಕ್ಕು ತೋಚದ ಪರಿಸ್ಥಿತಿ ಮೂರು
ಬಹುಭಾಷಾ ಸಂಗಮ ಭೂಮಿಯಾದ ಮಂಜೇಶ್ವರ ದ ಸರಕಾರಿ ಕ್ಷೇಮಾಭಿವೃದ್ಧಿ ಕಿರಿಯ ಪ್ರಾಥಮಿಕ ಶಾಲೆ ಮಂಜೇಶ್ವರ ದಲ್ಲಿ ಸಮಗ್ರ ಶಿಕ್ಷಾ ಕಾಸರಗೋಡು ಬಿ ಅರ್ ಸಿ ಮಂಜೇಶ್ವರದ ಸಹಭಾಗಿತ್ವದಲ್ಲಿ ಸ್ಟಾರ್ಸ್ ಯೋಜನೆಯ ಭಾಗವಾಗಿ ಕಥೋತ್ಸವ 2023 ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ ಯವರು ವಹಿಸಿದ್ದರು. ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೀನ್ ಲವೀನಾ ಮೊಂತೆರೋ ರವರು ಇಂದಿನ ಕಾಲಘಟ್ಟದಲ್ಲಿ ಕಥೆಯ ಅಗತ್ಯದ ಬಗ್ಗೆ
ಕಾಸರಗೋಡು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ಭಾರತ ಉದ್ಯೋಗ ಕೇಂದ್ರ ಆಶ್ರಯದಲ್ಲಿ ಮಂಜೇಶ್ವರ ಗೋವಿಂದ ಪೈ ಮೆಮೋರಿಯಲ್ ಕಾಲೇಜಿನ ಸಹಯೋಗದಲ್ಲಿ ಉದ್ಯೋಗ ಮೇಳ-2023 ನಡೆಯಿತು. ಕೇರಳದ ವಿದ್ಯಾವಂತ ಯುವಕ/ಯುವತಿಯರಿಗೆ ಸೌಕರ್ಯ ವಲಯದಲ್ಲಿ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ರಾಷ್ಟ್ರೀಯ ಉದ್ಯೋಗ ಸೇವಾ ಇಲಾಖೆಯ ಮೂಲಕ ಉಚಿತ ಉದ್ಯೋಗ ವಲಯಗಳನ್ನು ಜಾರಿಗೊಳಿಸುತ್ತಿದೆ. ಈ ಯೋಜನೆಯ ಅಂಗವಾಗಿ 50 ಕ್ಕೂ ಹೆಚ್ಚು ಅಧಿಕಾರಿಗಳು