Home Posts tagged #moodabidire

ಮೂಡುಬಿದಿರೆ : ಸ್ತನ್ಯಪಾನದ ಮಹತ್ವದ ಬಗ್ಗೆ ಜಾಗೃತಿ

ಮೂಡುಬಿದಿರೆ: ವಿಶ್ವ ಸ್ತನ್ಯಪಾನ ಸಪ್ತಾಹದಂಗವಾಗಿ ದ.ಕ.ಜಿ.ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಇನ್ನರ್‍ವೀಲ್ ಕ್ಲಬ್ ಮೂಡುಜದಿರೆ ಮತ್ತು ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಆರೋಗ್ಯವಂತ ಶಿಶುಗಳ ಪ್ರದರ್ಶನ ಮತ್ತು ಸ್ತನ್ಯಪಾನದ ಮಹತ್ವದ ಬಗ್ಗೆ ಜಾಗೃತಿ ಕಾರ್ಯಕ್ರಮವು ಸಮಾಜ ಮಂದಿರದಲ್ಲಿ ನಡೆಯಿತು.

ಮೂಡುಬಿದಿರೆಯಲ್ಲಿ : ಜಾನುವಾರು ಅಕ್ರಮ ಸಾಗಾಟ

ಮೂಡುಬಿದಿರೆ: ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ದನಗಳನ್ನು ಮತ್ತು ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ವಿದ್ಯಾಗಿರಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮ ದನ ಸಾಗಾಟ ವನ್ನು ತಡೆದಿದ್ದಾರೆ. ತೋಡಾರಿನ ಅದ್ದಕ್ಕ ಎಂಬವರಿಗೆ ದನಗಳನ್ನು ನೀಡಲು ಕೊಂಡೋಯ್ಯಲಾಗುತ್ತಿತ್ತೆಂದು ಹೇಳಲಾಗಿದೆ.

ಮುಗಿಯದ ಟ್ರಾಫಿಕ್ ಸಮಸ್ಯೆ, ಕಣ್ಣೀರಿಟ್ಟ ಸದಸ್ಯೆ

ಮೂಡುಬಿದಿರೆ : ಇಲ್ಲಿನ ಪೇಟೆಯಲ್ಲಿ ವಾಹನಗಳ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಏಕಮುಖ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿವೆ, ಮಸೀದಿ ರಸ್ತೆ, ಇರುವೈಲ್ ರಸ್ತೆ, ನಾಗರಕಟ್ಟೆ ರಸ್ತೆ, ಆಳ್ವಾಸ್ ರಸ್ತೆ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ಇಟ್ಟು ಹೋಗುವುದರಿಂದ ಇತರ ವಾಹನಗಳ ಸಂಚಾರ ಮತ್ತು ಪಾದಾಚಾರಿಗಳ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಪೆÇಲೀಸ್ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂದು

ರಾಜ್ಯಮಟ್ಟದ ಅಂತರ್, ವಿವಿ ಕಿರು ನಾಟಕ ಸ್ಪರ್ಧೆ

ಮೂಡುಬಿದಿರೆ: ಮಂಗಳೂರು ವಿವಿ ಮತ್ತು ಆಳ್ವಾಸ್ ಕಾಲೇಜು ಸಹಯೋಗದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ಕೌಟ್ ಗೈಡ್ಸ್ ಕನ್ನಡ ಭವನದಲ್ಲಿ ಎರಡು ದಿನಗಳ ಕಾಲ ನಡೆದ ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟ ವಿಷಯಾಧಾರಿತ ರಾಜ್ಯಮಟ್ಟದ ಅಂತರ್ ವಿವಿ ಕಿರು ನಾಟಕ ಸ್ಪರ್ಧೆಯಲ್ಲಿ ಮಂಗಳೂರು: ವಿವಿಯನ್ನು ಪ್ರತಿನಿಧಿಸಿದ್ದ ಆಳ್ವಾಸ್ ಕಾಲೇಜಿನ “ಅಮರಕ್ರಾಂತಿ ಹೋರಾಟ: 1837″ನಾಟಕ ಪ್ರಥಮ ಹಾಗೂ ಮೈಸೂರು ವಿ.ವಿಯನ್ನು ಪ್ರತಿನಿಧಿಸಿದ್ಧ

ಮೂಡುಬಿದರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮೂಡುಬಿದಿರೆ: ಮಹಾವೀರ ಕಾಲೇಜು ಬಳಿಯ ಕೀರ್ತಿನಗರದ ನಿವಾಸಿ ಅಲ್ಫೋನ್ಸ್ ( 68) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಅಲ್ಫೋನ್ಸ್ ಅವರು ಕಳೆದ ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಮನೆಯವರು ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಬಾವಿಗೆ ಹಾರಿದ್ದು ಬೆಳಿಗ್ಗೆ ಹುಡುಕಾಡಿದಾಗ ಮೃತ ದೇಹ ಬಾವಿಯಲ್ಲಿ ಪತ್ತೆಯಾಗಿದೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ

ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರು : ರಂಜಿತ್ ಪೂಜಾರಿ

ಮೂಡುಬಿದಿರೆ : ಭೂ ಅಭಿವೃದ್ಧಿಗೆ ಸಂಬಂಧಿಸಿದ ಉದ್ಯಮಗಳನ್ನು ನಡೆಸುತ್ತಿರುವ ಅರ್ಥ್ ಮೂವರ್ಸ್ ಮಾಲೀಕರು ಡೀಸೆಲ್ ಬೆಲೆ ಹೆಚ್ಚಳ, ನಿರ್ವಹಣಾ ವೆಚ್ಚ, ಚಾಲಕರ ವೇತನ ಏರಿಕೆಯಿಂದ ಸಂಕಷ್ಟ ಎದುರಿಸುತ್ತಿದ್ದು ಉದ್ಯಮದ ಉಳಿವಿಗಾಗಿ ಹತ್ತು ವರ್ಷಗಳ ಬಳಿಕ ಜೆಸಿಬಿ, ಟಿಪ್ಪರ್, ಹಿಟಾಚಿ ಬಾಡಿಗೆ ದರ ಪರಿಷ್ಕರಿಸಿರುವುದಾಗಿ ಅರ್ಥ್ ಮೂವರ್ಸ್ ಓನರ್ಸ್ ಅಸೋಸಿಯೇಶನ್ ಅಧ್ಯಕ್ಷ ರಂಜಿತ್ ಪೂಜಾರಿ ಹೇಳಿದರು. ಮೂಡಬಿದರೆಯಲ್ಲಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಪ್ರತೀ

ಮೂಡುಬಿದಿರೆಯಲ್ಲಿ ಶ್ರೀ ಕೃಷ್ಣ ಗಾರ್ಮೆಂಟ್ಸ್ ಕಾರ್ಯಾರಂಭ

ಮೂಡುಬಿದಿರೆ: ಯಾವುದೇ ಉದ್ಯಮದಲ್ಲಿ ಏಳುಬೀಳುಗಳು ಸಹಜ. ಸಂಯಮ, ತಾಳ್ಮೆಯಿಂದ ಇದನ್ನು ಎದುರಿಸಿ ಮುನ್ನಡೆಯಬೇಕು. ಉದ್ಯಮದ ಯಶಸ್ಸಿಗೆ ವ್ಯವಹಾರದಲ್ಲಿ ಚಾಕಚಕ್ಯತೆ ಮುಖ್ಯ. ಸ್ಪರ್ಧೆ ಇದ್ದಾಗ ಗುಣಮಟ್ಟವು ಹೆಚ್ಚುತ್ತದೆ. ಈ ಸಂಸ್ಥೆಯು ಗ್ರಾಹಕರ ಆಶೋತ್ತರಗಳನ್ನು ಈಡೇರಿಸಿ ಮುನ್ನಡೆಯಲಿ ಎಂದು ಮೂಡುಬಿದಿರೆ ಶ್ರೀಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಶುಭ ಹಾರೈಸಿದರು. ಪೇಟೆಯ ವಿಜಯನಗರದಲ್ಲಿ ಆರಂಭಗೊಂಡ ಶ್ರೀಕೃಷ್ಣ

ಪುತ್ತಿಗೆ ಜಿ.ಪಂ.ಕ್ಷೇತ್ರ ಕಾಂಗ್ರೆಸ್ ಕಾರ್ಯಕರ್ತರ ಸಭೆ : ಮತ ಪರಿರ್ವತನೆಗೆ ಜನ ಸ್ಪಂದನೆ ಅಗತ್ಯ

ಮೂಡುಬಿದಿರೆ : ಇಟ್ಟಿಗೆ, ಮರಳು ಮತ್ತು ಸಿಮೆಂಟಿನಿಂದ ಪಕ್ಷವನ್ನು ಕಟ್ಟಲು ಸಾಧ್ಯವಿಲ್ಲ. ಉನ್ನತ ಮಟ್ಟದಲ್ಲಿ ಪಕ್ಷವನ್ನು ಕಟ್ಟಲು ಮತ್ತು ಮತ ಬ್ಯಾಂಕ್ ಪರಿವರ್ತನೆಯಾಗಬೇಕಾದರೆ ಜನ ಸ್ಪಂದನೆ ಅಗತ್ಯ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು. ಅವರು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಮಾಜ ಮಂದಿರದಲ್ಲಿ ನಡೆದ ಪುತ್ತಿಗೆ ಜಿ.ಪಂ.ಕ್ಷೇತ್ರದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸರಕಾರಗಳು ಗ್ರಾ.ಪಂಗಳ ಮೂಲಕ 42 ವಿವಿಧ

ಶ್ರೀಯಕ್ಷದೇವ ಮಿತ್ರಕಲಾ ಮಂಡಳಿಯ 24ರ ಸಂಭಮ

ಮೂಡುಬಿದಿರೆ: ಬೆಳುವಾಯಿಯ ಶ್ರೀಯಕ್ಷದೇವ ಮಿತ್ರ ಕಲಾಮಂಡಳಿಯ 24ನೇ ವರ್ಷದ ಸಂಭಮ ಈ ಬಾರಿ ‘ಯಕ್ಷ ಕಲ್ಯಾಣೋತ್ಸವ’ ಶೀರ್ಷಿಕೆಯಡಿ ಸಮಾಜಮಂದಿರದಲ್ಲಿ ಕಲಾವಿದ ಮಿಜಾರು ದಿ. ಕೆ. ಸುಬ್ರಾಯ ಭಟ್ ಕಲಾವೇದಿಕೆಯಲ್ಲಿ ನ.13ರಂದು ದಿನಪೂರ್ತಿ ನಡೆಯಲಿದೆ ಎಂದು ಸಂಸ್ಥೆಯ ಸ್ಥಾಪಕ, ಕಾರ್ಯಾಧ್ಯಕ್ಷ ಎಂ.ದೇವಾನಂದ ಭಟ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಅವರು ಮೂಡುಬಿದರೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಸಭಾ ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ