Home Posts tagged #moodbidri

ಮೂಡುಬಿದಿರೆ: ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಮೂಡುಬಿದಿರೆ: ನಿಟ್ಟೆಯ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಲಂಗಾರಿನಲ್ಲಿ ಭಾನುವಾರ ನಡೆದಿದೆ. ಪುರಸಭಾ ವ್ಯಾಪ್ತಿಯ ಅಲಂಗಾರು ಆಶ್ರಯ ಕಾಲನಿಯ ನಿವಾಸಿ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್ (೨೧) ಆತ್ಮಹತ್ಯೆ

ಮೂಡುಬಿದಿರೆ ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಯಶೋಧರ್ , ಕಾರ್ಯದರ್ಶಿ ಪ್ರೇಮಶ್ರೀ ಕಲ್ಲಬೆಟ್ಟು ಆಯ್ಕೆ

ಮೂಡುಬಿದಿರೆ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್ ಮೂಡುಬಿದಿರೆ ಇದರ ನೂತನ ಅಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ಪ್ರತಿನಿಧಿ ಯಶೋಧರ ವಿ. ಬಂಗೇರ, ಕಾರ್ಯದರ್ಶಿಯಾಗಿ ವಿ4 ನ್ಯೂಸ್ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರ್ತಿ ಪ್ರೇಮಶ್ರೀ ಕಲ್ಲಬೆಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶನಿವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ವಿಜಯ ಕರ್ನಾಟಕ ಪ್ರತಿನಿಧಿ

ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾದ ಭೂಪ

ಮೂಡಬಿದ್ರೆ ಬೆಳುವಾಯಿ ಗ್ರಾಮದ ತರುಣಿಯೊಬ್ಬರನ್ನು ಮದುವೆಯಾಗಿದ್ದ ಬೆಂಗಳೂರಿನ ರಾಘವೇಂದ್ರ ಕುಲಕರ್ಣಿ ಎಂಬಾಂತ ಇದೀಗ ತನ್ನ ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾಗಿದ್ದು, ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರ ಬಡವಾಣೆಯ ಅಂದ್ರಳ್ಳಿ ನಿವಾಸಿ ರಾಘವೇಂದ್ರ ಕುಲಕರ್ಣಿ ಎಂಬಾತ 2017ರ ಜೂನ್ 18ರಂದು ಮೂಡಬಿದ್ರೆಯ ತರುಣಿಯನ್ನು ಬೆಂಗಳೂರಿ ಲಗ್ಗೇರಿಯಲ್ಲಿರುವ ರಾಘವೇಂದ್ರ ಮಠದಲ್ಲಿ ಹಿಂದೂ

ಗದ್ದೆಗಿಳಿದು ಉಳುಮೆ ಮಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್..!

ಮೂಡುಬಿದಿರೆ : ವಿವಿಧ ಕೆಲಸ ಕಾರ್ಯಗಳ ಮೂಲಕ ಒಂದಲ್ಲ ಒಂದು ರೀತಿಯಲ್ಲಿ ಗಮನ ಸೆಳೆಯುತ್ತಿರುವ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮತ್ತು ಯುವಕರು ಕೃಷಿಯತ್ತ ಒಲವು ತೋರಿಸಬೇಕೆಂಬ ಉದ್ದೇಶದಿಂದ ಮಂಗಳವಾರದಂದು ಮೂಡುಬಿದಿರೆಯ ಜೈನ್ ಪೇಟೆಯ ಬಳಿ ಇರುವ ಆಸಿಸ್ ಪಿಂಟೋ ಗದ್ದೆಯಲ್ಲಿ ಕೋಣ ಮತ್ತು ಟಿಲ್ಲರ್‌ನಲ್ಲಿ ಉಳುವೆ ಮಾಡುವ ಮೂಲಕ ಯುವಕರಿಗೆ ಮಾದರಿಯಾದರು. ಬ್ಲಾಕ್ ಕಾಂಗ್ರೆಸ್ ಮತ್ತು ಕಿಸಾನ್ ಘಟಕದ ವತಿಯಿಂದ ಈ

ಸಮಗ್ರ ಮೀನು ಕೃಷಿಯಿಂದ ಹೆಚ್ಚಿನ ಲಾಭ : ಡಾ.ರಮೇಶ್ ಟಿ.ಜೆ

ಮೂಡುಬಿದಿರೆ: ಮೀನು ಕೃಷಿಕರ ದಿನಾಚರಣೆ ಅಂಗವಾಗಿ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಹಾಗೂ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ಇವುಗಳ ವತಿಯಿಂದ ಪಣಪಿಲ ಶ್ರೀ ರಾಜ್ ಕೊಟ್ಟಾರಿಬೆಟ್ಟು ಪಣಪಿಲ ಇಲ್ಲಿ ಮೀನು ಕೃಷಿ ಕುರಿತು ತರಬೇತಿ ಹಾಗೂ ಕ್ಷೇತ್ರೋತ್ಸವ ಮತ್ತು ಮಾರಾಟ ಕಾರ್ಯಕ್ರಮ ಶನಿವಾರ ನಡೆಯಿತು. ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ರಮೇಶ್ ಟಿ.ಜೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮೀನು ಕೃಷಿ

ನಿಡ್ಡೋಡಿಯಲ್ಲಿ ಸೀಫುಡ್ ಪಾರ್ಕ್ ನಿರ್ಮಾಣ ಕೈಬಿಡುವಂತೆ ಐವನ್ ಡಿಸೋಜಾ ಒತ್ತಾಯ

ಮೂಡುಬಿದಿರೆ: ಕೃಷಿ ಪ್ರಧಾನವಾದ ನಿಡ್ಡೋಡಿ ಪ್ರದೇಶದಲ್ಲಿ ಸೀಫುಡ್ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರವು ರೈತರ ಹಿತದೃಷ್ಟಿಯನ್ನು ಮರೆತಿದೆ. ಪಾರ್ಕ್ ನಿರ್ಮಾಣದಿಂದಾಗಿ ಕೃಷಿ ಭೂಮಿ ಸಂಪೂರ್ಣ ಹಾನಿಯಾಗಲಿದೆ. ಪರಿಸರ ಕೆಡಿಸಿ ಅಭಿವೃದ್ಧಿ ನಡೆಸುವ ಬದಲು, ಪರಿಸರಕ್ಕೆ ಪೂರಕ ಅಭಿವೃದ್ಧಿ ನಡೆಸಬೇಕು. ನಿಡ್ಡೋಡಿಯಲ್ಲಿ ಸೀಫುಡ್ ಕಾರ್ಖಾನೆಯನ್ನು ಕೈಬಿಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಿದ್ದು, ಉಸ್ತುವಾರಿ ಸಚಿವರಿಗೆ ಈ ಬಗ್ಗೆ ಒತ್ತಾಯಿಸುತ್ತೇನೆ ಎಂದು

ಪಡುಕೊಣಾಜೆಯಲ್ಲಿ ಚಿರತೆಯಿಂದ ರಕ್ಷಿಸಿಕೊಂಡ ಶ್ವಾನ

ಮೂಡುಬಿದಿರೆ ತಾಲೂಕಿನಲ್ಲಿ ಪಡುಕೊಣಾಜೆಯಲ್ಲಿ ಚಿರತೆಯೊಂದು ಮನೆಯಂಗಳಕ್ಕೆ ಆಗಮಿಸಿ ನಾಯಿಯೊಂದನ್ನು ಹಿಡಿದುಕೊಂಡು ಹೋದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಪಡುಕೊಣಾಜೆಯ ಸತೀಶ್ ಎಂಬವರ ಮನೆಯ ಬಳಿ ರಾತ್ರಿ ಅಡ್ಡಾಡುತ್ತಿದ್ದ ಚಿರತೆ ಮನೆಯಂಗಳದಲ್ಲಿ ಮಲಗಿದ್ದ ನಾಯಿಯನ್ನು ಎತ್ತಿಕೊಂಡು ಹೋಗಿದೆ. ಸ್ಥಳಕ್ಕೆ ಉಪವಲಯಾರಣ್ಯಾಧಿಕಾರಿ ಮಂಜುನಾಥ ಗಾಣಿಗ ಮತ್ತು ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಶಿರ್ತಾಡಿ ಗ್ರಾ. ಪಂಚಾಯತ್ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಜತೆ ಮಾತುಕತೆ