Home Posts tagged mp brijesh chowta

ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬ ಸಮಸ್ಯೆ: ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ

ಮಂಗಳೂರು: ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಕ್ಯಾ. ಚೌಟ

ದ.ಕ. ಜಿಲ್ಲೆಯನ್ನು ಆಹಾರ ಸಂಸ್ಕರಣಾ ಹಬ್‌ ಮಾಡಿ: ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ಗೆ ಸಂಸದ ಕ್ಯಾ. ಚೌಟ ಮನವಿ

ಮಂಗಳೂರು: ಅಡಿಕೆ, ತೆಂಗು ಸೇರಿ ಹೆಚ್ಚಿನ ತೋಟಗಾರಿಕಾ ಉತ್ಪನ್ನ ಬೆಳೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಾಧುನಿಕ ಆಹಾರ ಸಂಸ್ಕರಣಾ ತಂತ್ರಜ್ಞಾನ ಅಳವಡಿಕೆಗೆ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ನಿರ್ವಹಣೆ(NIFTEM) ಸಂಸ್ಥೆಯ ಕೇಂದ್ರ ಸ್ಥಾಪಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್‌ ಪಾಸ್ವಾನ್‌ ಅವರಲ್ಲಿ ಮನವಿ ಮಾಡಿದ್ದಾರೆ. ಸಚಿವ ಚಿರಾಗ್‌ ಅವರನ್ನು ಇಂದು

ಮಂಗಳೂರು: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

ಮಂಗಳೂರು: ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಆಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ. ಗುರುವಾರ ಮಂಗಳೂರು ಪಾಲಿಕೆಯಲ್ಲಿ ಮೇಯರ್ ಉಪಮೇಯರ್ ಹುದ್ದೆಗೆ ಚುನಾವಣೆ ನಡೆಯಿತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ/ವೈ.ಭರತ್

ವಿದ್ಯಾರ್ಥಿಗಳೊಂದಿಗೆ ಬೆರೆತರೆ ಧನಾತ್ಮಕ ಚಿಂತನೆ; ಸಂಸದ ಬ್ರಿಜೇಶ್ ಚೌಟ

ನಾವು ಮಕ್ಕಳು ಅಥವಾ ವಿದ್ಯಾರ್ಥಿಗಳ ನಡುವೆ ಬೆರೆತರೆ ಯುವಕರಾಗಿ, ಯುವ ಮನಸ್ಸುಗಳಾಗಿ ಚಿಂತನೆ ಮಾಡಲು ಸಾಧ್ಯ ಮತ್ತು ನಮ್ಮಲ್ಲಿ ಧನಾತ್ಮಕ ಚಿಂತನೆ ಹೆಚ್ಚಾಗುತ್ತದೆ. ನವೋದಯ ಅಥವಾ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಕಲಿತ ವಿದ್ಯಾರ್ಥಿಗಳು ಸಹ ಶಿಕ್ಷಣದೊಂದಿಗೆ ಸಹಬಾಳ್ವೆಯ ಮಹತ್ವ ಬಹುಬೇಗನೆ ಅರಿತುಕೊಳ್ಳುತ್ತಾರೆ. ಭಾರತೀಯ ಸೇನೆಗಳಲ್ಲಿ ವಸತಿ ಶಾಲೆಗಳಲ್ಲಿ ಕಲಿತ ಯುವಕರೇ ಹೆಚ್ಚು ಇದ್ದಾರೆ ಎಂದು ಸಂಸದ ಬ್ರಿಜೇಶ್ ಚೌಟ ಅವರು ಹೇಳಿದರು. ಅವರು ಮುಡಿಪುವಿನ ಪಿ.ಎಂ.ಶ್ರೀ

ಪೊಳಲಿ, ಉಳಾಯಿಬೆಟ್ಟು ಸೇತುವೆ ಘನ ವಾಹನ ಸಂಚಾರ ನಿಷೇಧ – ತುರ್ತು ಓಡಾಟ ಅನುಮತಿಗೆ ಶಾಸಕರು ,ಸಂಸದರ ಸಲಹೆ

ಗುರುಪುರ : ಪೊಳಲಿ ಸೇತುವೆ, ಉಳಾಯಿಬೆಟ್ಟು ಸೇತುವೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಆರು ಹಳೆ ಸೇತುವೆಗಳ ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣ ಹಿನ್ನೆಲೆಯಲ್ಲಿ ಪೊಳಲಿ ಮತ್ತು ಉಳಾಯಿಬೆಟ್ಟು ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಗೊಳಿಸಿ ಆದೇಶ ಹೊರಡಿಸಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರೊಂದಿಗೆ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಾ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ಅವರು ಡೀಸಿ ಕಚೇರಿಯಲ್ಲಿ ತುರ್ತು ಸಭೆ ನಡೆಸಿ, ಪರ್ಯಾಯ

ಮಂಗಳೂರು: ತುಳುನಾಡು ವಿಶಿಷ್ಟ ಪರಂಪರೆಗಳ ನಾಡು – ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು: ನಾಗರಾಧನೆ, ದೈವಾರಾಧನೆ, ದೇವತಾರಾಧನೆಯ ಮುಖೇನ ಪ್ರಕೃತಿಯನ್ನು ಆರಾಧಿಸುವ ಪುಣ್ಯ ನೆಲ ತುಳುನಾಡು. ಈ ನೆಲದಲ್ಲಿ 12 ತಿಂಗಳಿಗೂ ಮಹತ್ವವಿದೆ, ವಿಶೇಷ ಆಚರಣೆ ಇದೆ. ಆಟಿ ತಿಂಗಳು ಅದರಲ್ಲೂ ಆಟಿ ಅಮಾವಾಸ್ಯೆಯ ದಿವಸ ಸಮಸ್ತ ತುಳುನಾಡಿನ ಜನರು ಜಾತಿ ಮತ ಭೇದವಿಲ್ಲದೆ, ಈ ಔಷಧೀಯ ಗುಣವುಳ್ಳ ಹಾಳೆ ಮರದ ಕೆತ್ತೆ ಕಷಾಯವನ್ನು ವರ್ಷ ಪೂರ್ತಿ ತನ್ನ ರೋಗ ನಿರೋಧಕ ಶಕ್ತಿಯ ವೃದ್ಧಿಗಾಗಿ ಸೇವಿಸುತ್ತಾರೆ. ಆದ್ದರಿಂದ ತುಳುನಾಡು ವಿಶೇಷ ಪರಂಪರೆಗಳ ನಾಡು ಈ ಹಾಳೆ ಮರದ

ಮಂಗಳೂರು : ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ತೈಲ ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯುತ್ತಿದ್ದು, ಮಂಗಳೂರಿನ ಪಿವಿಎಸ್ ವೃತ್ತದ ಬಳಿ ಬಿಜೆಪಿ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ಲೋಕಸಭೆ ಚುನಾವಣೆಯ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೈಲ ಬೆಲೆ ಏರಿಸಿ ಜನಸಾಮಾನ್ಯರ ಮೇಲೆ ಬರೆ ಎಳೆದಂತಾಗಿದೆ. ಬಡವರ ಜೇಬಿಗೆ ಕತ್ತರಿ ಹಾಕುವಂತಹ ನಿರ್ಣಯ ಸರಿಯಲ್ಲ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಬ್ರಿಜೇಶ್ ಚೌಟ ಭೇಟಿ

ಪುತ್ತೂರು: ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಲಿಸ್ಟ್ ಮಾಡಿ ಯಾವ್ಯಾವ ಹಂತದಲ್ಲಿದೆ, ಕಾನೂನು ತೊಡಕುಗಳು ಎಲ್ಲವನ್ನೂ

ಸುಳ್ಯ : ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆ- ಪರಿಹಾರ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡೆಸಿದ ಸಂಸದರು

ಮಂಗಳೂರು : ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಬಿಎಸ್‌ಎನ್‌ಎಲ್ ನೆಟ್ ವರ್ಕ್ ಸಮಸ್ಯೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಪರಿಹಾರದ ಕುರಿತು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿ ಚರ್ಚಿಸಿದರು. ಸುಳ್ಯ ತಾಲೂಕಿನ ತೊಡಿಕಾನದ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆ ಸೇರಿದಂತೆ ಸುಳ್ಯ ತಾಲೂಕಿನ ವಿವಿಧ ಕಡೆ ನೆಟ್‌ವರ್ಕ್