ಬೈಂದೂರು:ರಾಷ್ಟ್ರಭಕ್ತರ ಬಳಗದ ವತಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಸುರ್ಕುಂದ ವಾರ್ಡ್ ಬೂತ್ ನಂ.34 ರಲ್ಲಿ ನಿತ್ಯ ಮೊಗವೀರ ಅವರ ಸಾರಥ್ಯದಲ್ಲಿ ವೆಂಕಟೇಶ ಕಲ್ಮಕ್ಕಿ,ಪ್ರಶಾಂತ್ ಮೊಗವೀರ ಹಾಗೂ ಸ್ಥಳೀಯರ ಸಹಕಾರದಲ್ಲಿ ಮಾಜಿ ಮುಖ್ಯ ಮಂತ್ರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಪರವಾಗಿ ಮನೆ ಭೇಟಿ ಮಾಡಿ ಬಿರುಸಿನ ರೀತಿಯಲ್ಲಿ
ಪುತ್ತೂರು: ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನ ಸಂದರ್ಭದಲ್ಲಿ ಪ್ರತೀ ಮತಗಟ್ಟೆಯ ಹೊರಗೆ ರಾಜಕೀಯ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ತಮ್ಮದೇ ಆದ ಬೂತ್ ತೆರೆಯಲು ಅವಕಾಶವಿದ್ದರೂ ಇದಕ್ಕೆ ಕಟ್ಟುನಿಟ್ಟಿನ ನಿಯಮಗಳು ಅನ್ವಯವಾಗುತ್ತವೆ ಎಂದು ಪುತ್ತೂರು ಸಹಾಯಕ ಆಯುಕ್ತರೂ, ಸಹಾಯಕ ಚುನಾವಣಾ ಅಧಿಕಾರಿಗಳೂ ಆಗಿರುವ ಜುಬಿನ್ ಮೊಹಾಪಾತ್ರ ಹೇಳಿದರು. ಈ ಬಗ್ಗೆ ಮಾಹಿತಿ ನೀಡಿದ ಅವರು, ಮತಗಟ್ಟೆಯ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ
ಕಾರ್ಕಳ: ರಾಜ್ಯದಲ್ಲಿ ನಡೆಯಲಿರುವ ಮೊದಲ ಹಂತದ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಸಿದ್ಧತೆಗಳು ಪೂರ್ಣಗೊಂಡಿದೆ. ಕಾರ್ಕಳದಲ್ಲಿ ಒಟ್ಟು 209 ಮತಗಟ್ಟೆಗಳಿದ್ದು, 1000 ಚುನಾವಣಾ ಅಧಿಕಾರಿಗಳು ನಿಯುಕ್ತಿಗೊಂಡಿದ್ದಾರೆ. 587 ಸಹಾಯಕರಿದ್ದು 57 ಬಸ್‌ಗಳು 21 ಸೆಕ್ಟರ್ ಅಧಿಕಾರಿಗಳಿದ್ದು ಕಾರ್ಕಳ ಎಂಪಿಎಂ ಕಾಲೇಜಿನಲ್ಲಿ ಸಿದ್ಧತೆಗಳು ನಡೆದು ಪೂರ್ಣಗೊಂಡಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ತಿಳಿಸಿದರು.
ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಎ.26ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎ.೨೪.ರಂದು ಸಂಜೆ 6ಗಂಟೆಗೆ ಎಲ್ಲಾ ರೀತಿಯ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.ಎ.26ರಂದು ದಕ್ಷಿಣ ಕನ್ನಡ ಜಿಲ್ಲೆಯ 1876ಮತಗಟ್ಟೆಗಳಲ್ಲಿ ಬೆಳಗ್ಗೆ 7ಗಂಟೆಯಿಂದ ಸಂಜೆ 6ಗಂಟೆಯ ವರೆಗೆ ಮತದಾನ ನಡೆಸಲು ಎಲ್ಲಾ ಸಿದ್ದತೆ ಪೂರ್ಣ ಗೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿ ಹಾಗೂ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ
ಮೂಡುಬಿದಿರೆ: 2004 ರ ಲೋಕಸಭಾ ಚುನಾವಣೆಯಲ್ಲಿ ಯಾವ ಫಲಿತಾಂಶ ಕಾಂಗ್ರೆಸ್ ಗೆ ಸಿಕ್ಕಿತ್ತೋ ಅದೇ ರೀತಿಯ ಫಲಿತಾಂಶ ಈಬಾರಿ ಕಾಂಗ್ರೆಸ್ ನೇತೃತ್ವದ ಐ.ಎನ್.ಡಿ.ಐ.ಎ ಗೆ ಸಿಗಲಿದ್ದು ಸ್ಪಷ್ಟ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಅನುಷ್ಠಾನ ಮಾಡಿರುವ ಎಲ್ಲ ಗ್ಯಾರಂಟಿಗಳನ್ನು ದೇಶದಲ್ಲಿ ಅನುಷ್ಠಾನ ಮಾಡಲಾಗುವುದು ಎಂದು ತರಲಾಗುವುದೆಂದು ಕೆಪಿಸಿಸಿ ರಾಜ್ಯ ವಕ್ತಾರ ಪದ್ಮಪ್ರಸಾದ್ ಜೈನ್ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಮಂಗಳವಾರ
ಉಳ್ಳಾಲ ಬೀಚ್‌ನಲ್ಲಿ ತಾಲೂಕು ಪಂಚಾಯತ್ ಉಳ್ಳಾಲ ಹಾಗೂ ಉಳ್ಳಾಲ ನಗರ ಸಭೆ, ಕೋಟೆಕಾರ್ ಪಟ್ಟಣ ಪಂಚಾಯತ್, ಸೋಮೆಶ್ವರ ಪುರಸಭೆ ಸಹಭಾಗಿತ್ವದಲ್ಲಿ ಮರಳು ಆಕೃತಿ ಜತೆಗೆ ಮೇಣದ ಬತ್ತಿ ಬೆಳಗುವ ಮೂಲಕ ಮತದಾನ ಜಾಗೃತಿ ಸಭೆ ನಡೆಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಜನಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನಶೆಟ್ಟಿ ಹಾಗೂ ಕೃಷ್ಣಪ್ಪ ಮೂಲ್ಯರು ನೆರೆದಿದ್ದವರಿಂದ ಮತದಾನ ಘೋಷಣೆ ಮೊಳಗಿಸಿದರು. ನಂತರ ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಮಾನ್ಯ ಮುಖ್ಯ
ಮೂಡುಬಿದಿರೆ: ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ, ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಮೂಡುಬಿದಿರೆ ತಾಲೂಕು ಪಂಚಾಯತ್, ತಾಲೂಕು ಕಚೇರಿ, ಮೂಡುಬಿದಿರೆ ಹಾಗೂ ಮೈಟ್ ಇಂಜಿನಿಯರಿಂಗ್ ಕಾಲೇಜು, ಮೂಡುಬಿದಿರೆ ಇದರ ಸಹಯೋಗದಲ್ಲಿ ಕಾಲ್ನಡಿಗೆ ಜಾಥಾವನ್ನು ದಿನಾಂಕ 18/04/2024 ರಂದು ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ಎಸ್. ವೆಂಕಟಾಚಲಪತಿ, ಪೋಲಿಸ್ ನಿರೀಕ್ಷಕರಾದ ನಿತ್ಯಾನಂದ ಪಂಡಿತ್, ಮೈಟ್ ಕಾಲೇಜು
ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಗುರುವಾರ ನಾಮಪತ್ರ ಸಲ್ಲಿಸಿದರು.ಬಳಿಕ ಶಿವಮೊಗ್ಗ ಮುಂತಾದ ಕಡೆಗಳಲ್ಲಿ ಬ್ರಹತ್ ಮೆರವಣಿಗೆ ನಡೆಯಿತು.ನೂರಾರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ,ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡ ಹಾಗೂ ಬಿಜೆಪಿ ಮುಖಂಡರು ಹಾಜರಿದ್ದರು.
ಮೂಡುಬಿದಿರೆ: ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಮತದಾನ ಮಾಡುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭಾರತ್ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲೆ ಸ್ವೀಪ್ ಸಮಿತಿ ಮೂಡುಬಿದಿರೆ ತಾಲೂಕು ಪಂಚಾಯತ್ ಹಾಗೂ ತಾಲೂಕು ಕಛೇರಿ ನೇತೃತ್ವದಲ್ಲಿ ಮೂಡುಬಿದಿರೆ ಪೇಟೆಯಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಸಹಾಯಕ ಚುನಾವಣಾಧಿಕಾರಿ ರಾಜು ಕೆ., ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್. ವೆಂಕಟಾಚಲಪತಿ, ಮೂಡುಬಿದಿರೆ ತಹಶೀಲ್ದಾರ್
2024 ಲೋಕಸಭಾ ಚುನಾವಣೆ ನಿಮ್ಮಿತ್ತ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ ೧೪ರಂದು ಮಂಗಳೂರಿಗೆ ಆಗಮಿಸಲ್ಲಿದ್ದು, ಮಂಗಳೂರು ನಗರವನ್ನು ಸ್ವಚ್ಚ ಹಾಗೂ ಸುಂದರಗೊಳಿಸುವ ಕೆಲಸಗಳು ತರಾತುರಿಯಲ್ಲಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ಏಪ್ರಿಲ್ 14ರಂದು ನಗರಕ್ಕೆ ಆಗಮಿಸಲಿದ್ದು ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ರೋಡ್ ಶೋ