Home Posts tagged #mudabidre

ಮೂಡುಬಿದಿರೆ: ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ ಸಮಾರಂಭವನ್ನು ಕಾಲೇಜಿನ ಆವರಣದಲ್ಲಿ ನಡೆಯಿತು. ಕಾಲೇಜಿನ ಟ್ರಸ್ಟಿ ಮೆಹಬೂಬ್ ಬಾಷಾ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ಪವಿತ್ರ ದಿನವು ನಮ್ಮ ದೇಶದ ಸ್ವಾತಂತ್ರ್ಯ, ಸಂವಿಧಾನ ಮತ್ತು ಏಕತೆಯ ಮಹತ್ವವನ್ನು ನೆನಪಿಸುವುದಾಗಿ ಹೇಳಿದರು. ಈ ವರ್ಷವೂ ಭಾರತವು

ಮೂಡುಬಿದಿರೆಯಲ್ಲಿ ರಾಷ್ಟ್ರೀಯ ಮಟ್ಟದ ಭಾವೈಕ್ಯತಾ ಶಿಬಿರ ಆರಂಭ

ಮೂಡುಬಿದಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರ ಸಂಸ್ಥೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಸ್ಥಳೀಯ ಸಂಸ್ಥೆ ಮೂಡುಬಿದಿರೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಹಭಾಗಿತ್ವದಲ್ಲಿ ಕನ್ನಡ ಭವನದಲ್ಲಿ 5 ದಿನಗಳ ಕಾಲ ನಡೆಯುವ ರಾಷ್ಟ್ರಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಶಿಬಿರವು ಗುರುವಾರ ಆರಂಭಗೊಂಡಿತು. ಮಂಗಳೂರು ಪೊಲೀಸ್ ಉಪ ಆಯುಕ್ತರಾದ ನಜ್ಮಾ ಫರೂಕಿ ಶಿಬಿರವನ್ನು ಉದ್ಘಾಟಿಸಿ ಶುಭ

ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ 2025 ಆಳ್ವಾಸ್ ಪದವಿಪೂರ್ವ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾವೇರಿ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ತಂಡ ಪ್ರಶಸ್ತಿಯನ್ನು ಪಡೆದುಕೊಂಡು ಒಟ್ಟು 09 ಪದಕಗಳೊಂದಿಗೆ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.ಸ್ಪರ್ಧೆಯ ಫಲಿತಾಂಶ :ಆರ್ಟಿಸ್ಟಿಕ್ ಪೇರ್ : ಬಾಲಕರ ವಿಭಾಗದಲ್ಲಿ ಚಂದ್ರಶೇಖರ ಮತ್ತು ಪೃಥ್ವಿಚಾರ್

ಕೊಲೆ : ಆರೋಪಿಗೆ ಜೀವಾವಧಿ ಶಿಕ್ಷೆ

ಮೂಡುಬಿದಿರೆ : ಕಳೆದ ಐದು ವಷ೯ಗಳ ಹಿಂದೆ ಆಳ್ವಾಸ್ ಕ್ಯಾಂಟೀನ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಚೇತನ್ ಎಂಬವನನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆಗೈದ ಆರೋಪಿ ಚಿದಾನಂದ ಪರಶುನಾಯ್ಕಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಆಳ್ವಾಸ್ ಕ್ಯಾಂಟೀನ್ ನಲ್ಲಿ 2020 ರ ಅಕ್ಟೋಬರ್ 30 ರಂದು ಈ ಪ್ರಕರಣ ನಡೆದಿತ್ತು. ಚಿದಾನಂದ ಮತ್ತು ಚೇತನ್ ಎಂಬವರು ಆಳ್ವಾಸ್ ಕ್ಯಾಂಟೀನ್ ನಲ್ಲಿ ಕೆಲಸ ಮಾಡಿಕೊಂಡಿದ್ದರು‌. ಕೆಲಸದ

ಮೂಡುಬಿದಿರೆಗೆ ಆಗಮಿಸಿದ ಶ್ರೀರಾಮ ದಿಗ್ವಿಜಯ ರಥಯಾತ್ರೆ

ಮೂಡುಬಿದಿರೆ :ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ, ಗೋವಾ ಅಧೀನದಲ್ಲಿ ನಡೆಯುತ್ತಿರುವ ಶ್ರೀ ರಾಮ ದಿಗ್ವಿಜಯ ರಥಯಾತ್ರೆಯು ಮಂಗಳೂರಿನ ಮಂಗಲರಾಮ ಜಪಕೇಂದ್ರದಿಂದ ಬುಧವಾರ ಮೂಡುಬಿದಿರೆಗೆ ಆಗಮಿಸಿತು. ಆಗಮಿಸಿದ ರಥವನ್ನು ಭಜಕರು ಹನುಮಂತ ದೇವಳದ ಎದುರು ಪೂರ್ಣಕುಂಭ, ಮಂಗಳವಾದ್ಯ, ಭಜನೆ ಸಂಕೀರ್ತನೆಯೊಂದಿಗೆ ವೆಂಕಟರಮಣ ದೇವಳದ ಎದುರು ಬರಕೊಂಡರು. ಮೂಡುವೇಣುಪುರದ ಶ್ರೀ ವೆಂಕಟರಮಣ ಮತ್ತು ಶ್ರೀ ಹನುಮಂತ ದೇವಸ್ಥಾನದ ವಿದ್ಯಾನಿಧಿ ಜಪ ಕೇಂದ್ರದಲ್ಲಿ ರಥವನ್ನು

ರಾಜ್ಯಮಟ್ಟದ ಮಲ್ಲಕಂಬ ಸ್ಪಧೆ೯ : ಆಳ್ವಾಸ್ ತಂಡಕ್ಕೆ ಪ್ರಶಸ್ತಿ

ಮೂಡುಬಿದಿರೆ: ಗದಗದಲ್ಲಿ ನಡೆದ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಮಲ್ಲಕಂಬ ತಂಡವು 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಚಾಂಪಿಯನ್ ಮತ್ತು 14 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಮತ್ತು 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಮುಂದಿನ ತಿಂಗಳು

ಆಳ್ವಾಸ್ ಸ್ಪೋಟ್ಸ್೯ಕ್ಲಬ್ ನ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ರಾಷ್ಟ್ರೀಯ ತಂಡಕ್ಕೆ ಆಯ್ಕೆ

ಮೂಡುಬಿದಿರೆ: ಆಳ್ವಾಸ್ ಸ್ಪೋಟ್ಸ್೯ ಕ್ಲಬ್‌ನ ಪ್ರತಿಭಾನ್ವಿತ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಭಾರತದ ರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇವರು ನವೆಂಬರ್ 15ರಿಂದ 25 ರವರೆಗೆ ಬಾಂಗ್ಲಾದೇಶದ ಡಾಕಾದಲ್ಲಿ ನಡೆಯಲಿರುವ ಎರಡನೇ ಮಹಿಳಾ ಕಬಡ್ಡಿ ವಲ್ಡ್ಕಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ. ಧನಲಕ್ಷ್ಮೀ ದಕ್ಷಿಣ ಭಾರತದಿಂದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಏಕೈಕ ಆಟಗಾರ್ತಿಯಾಗಿದ್ದಾರೆ. ತನ್ನ ಆಲ್‌ರೌಂಡರ್ ಆಟದಿಂದ ತಂಡದಲ್ಲಿ

ರಾಜ್ಯ ಮಟ್ಟದ ವೇಯ್ಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್: ಆಳ್ವಾಸ್‌ಗೆ ಸಮಗ್ರ ತಂಡ ಪ್ರಶಸ್ತಿ

ಮೂಡುಬಿದಿರೆ: ಕರ್ನಾಟಕ ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್ (ಬಾಲಕ-ಬಾಲಕಿಯರು) ಮತ್ತು ಸೀನಿಯರ್ (ಪುರುಷ ಮತ್ತು ಮಹಿಳೆಯರು) ವೇಯ್ಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆಳ್ವಾಸ್ ಕಾಲೇಜು ಸ್ಪರ್ಧಿಗಳು, ಸ್ಪರ್ಧೆಯಲ್ಲಿನ ಎಲ್ಲ ಆರು ವಿಭಾಗಗಳಾದ ಜೂನಿಯರ್ ಬಾಲಕರು, ಜೂನಿಯರ್ ಬಾಲಕಿಯರು, ಸಬ್ ಜೂನಿಯರ್ ಬಾಲಕರು, ಸಬ್ ಜೂನಿಯರ್ ಬಾಲಕಿಯರು, ಸೀನಿಯರ್

ಮಕ್ಕಳಲ್ಲಿ ಯಕ್ಷಗಾನದ ಒಲವು ತುಂಬಿಸಬೇಕು : ಕರಿಂಜೆ ಶ್ರೀ

ಮೂಡುಬಿದಿರೆ: ಮಕ್ಕಳಲ್ಲಿ ಯಕ್ಷಗಾನದ ಒಲವನ್ನು ತುಂಬಿದಾಗ ತುಳುನಾಡಿನಲ್ಲಿ ಯಕ್ಷಗಾನ ಕಲೆ ಇನ್ನಷ್ಟು ಶ್ರೀಮಂತ ಕಲೆಯಾಗಿ ಬೆಳೆಯಲು ಸಾಧ್ಯ ಎಂದು ಕರಿಂಜೆ ಕ್ಷೇತ್ರದ ಶ್ರೀ ಮುಕ್ತಾನಂದ ಸ್ವಾಮೀಜಿ ಹೇಳಿದರು. ಅವರು ಇಲ್ಲಿನ ಶ್ರೀ ಯಕ್ಷನಿಧಿ ಮೂಡುಬಿದಿರೆ ಇದರ ದಶಮಾನೋತ್ಸವದ ಅಂಗವಾಗಿ ಸಮಾಜ ಮಂದಿರದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಸಭಾ ಕಾಯ೯ಕ್ರಮದಲ್ಲಿ ಆಶೀರ್ವಚನ ನೀಡಿದರು. ಜೈನ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಭಾತ್ ಕುಮಾರ್ ಬಲ್ನಾಡ್ ಮುಖ್ಯ ಅತಿಥಿಯಾಗಿ

ಪಡುಮಾನಾ೯ಡು ಗ್ರಾ. ಪಂ ಸದಸ್ಯ ನೇ*ಣಿಗೆ ಶರಣು

ಮೂಡುಬಿದಿರೆ : ಸಮಾಜ ಸೇವಕ, ಪಡುಮಾರ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ, ಮೂಡುಮಾನಾ೯ಡಿನ ನಿವಾಸಿ ಶ್ರೀನಾಥ್ ಸುವಣ೯ ಅವರ ಮೃತದೇಹವು ಶ್ಮಶಾನಕ್ಕಾಗಿ ಮೀಸಲಿಟ್ಟ ಪಡ್ಡೇಲು ಎಂಬ ಜಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ. ಕಳೆದ ಹಲವು ವಷ೯ಗಳಿಂದ ಬಿಜೆಪಿ ಕಾಯ೯ಕತ೯ರಾಗಿದ್ದ ಶ್ರೀನಾಥ್ ಸುವರ್ಣ ಅವರು ನಂತರ ಪಡುಮಾನಾ೯ಡು ಗ್ರಾ. ಪಂ.ನಲ್ಲಿ ಸ್ಪಧಿ೯ಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇದೀಗ