ಕಡಲ ಕೆರೆ ಕೈಗಾರಿಕಾ ಪ್ರದೇಶದಿಂದ ಸಾರ್ವಜನಿಕ ರಸ್ತೆ ಸಾರ್ವಜನಿಕ ಜನ ವಸತಿ ಪ್ರದೇಶಕ್ಕೆ ಕೊಳಚೆ ನೀರು ಬರುತ್ತಿದ್ದು ಸುಮಾರು ಮೂರು ವರ್ಷಗಳಿಂದ ಸತತ ದೂರು ನೀಡಿದ್ದರೂ ಪುರಸಭೆಯು ಕ್ರಮಕೈಗೊಂಡಿಲ್ಲವೆಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ರಾಜೇಶ್ ಕಡಲಕೆರೆ ಅವರು ಪುರಸಭಾ ಕಛೇರಿಯ ಮುಂಭಾಗ ಧರಣಿ ಕುಳಿತು ಪುರಸಭೆಗೆ ಧಿಕ್ಕಾರವನ್ನು ಕೂಗಿದರು. ಕೈಗಾರಿಕಾ
ನಮ್ಮ ತನದಲ್ಲಿ ಜಗತ್ತನ್ನು ನೋಡುವ, ಮತ್ತೊಬ್ಬರ ಕಷ್ಟಗಳನ್ನು ಅರಿಯುವುದರ ಮೂಲಕ ನಾವೆಲ್ಲರೂ ಒ೦ದೇ ಎ೦ಬುದನ್ನು ಧರ್ಮಗಳು ಹೇಳುತ್ತವೆ. ಅ೦ಧಕಾರದಲ್ಲಿರುವವರನ್ನು ಬೆಳಕಿನೆಡೆಗೆ ಕೊ೦ಡೊಯ್ಯುವುದೇ ಧರ್ಮ. ಈ ನಿಟ್ಟಿನಲ್ಲಿ ಎಲ್ಲರನ್ನೂ ಧರ್ಮೀಯರನ್ನಾಗಿ ಮಾಡುವುದು ಧರ್ಮಗಳ ಕರ್ತವ್ಯವಾಗಬೇಕು ಎ೦ದು ಮೂಡುಬಿದಿರೆ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಹೇಳಿದರು. ಅವರು ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆ೦ಟ್ ವಿದ್ಯಾ
ಮೂಡುಬಿದಿರೆ: ಕ್ಷೇತ್ರ ಸಮನ್ವಯ ಸಂಪನ್ಮೂಲ ಕೇಂದ್ರ ಮೂಡುಬಿದಿರೆ ಇಲ್ಲಿ ಮಂಗಳವಾರ ವಲಯದ 15 ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು. ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಸಾಧನ ಸಲಕರಣೆ ವಿತರಿಸಿ ಮಾತನಾಡಿ ಪೋಷಕರು ತಮ್ಮ ಮಕ್ಕಳಿಗೆ ಮತ್ತಷ್ಟು ಉತ್ತೇಜನ ನೀಡಿ ಈ ಮಕ್ಕಳು ಮುಖ್ಯವಾಹಿನಿ ಬರುವಂತೆ ಮಾಡಬೇಕು. ಸರ್ಕಾರದ ವ್ಯವಸ್ಥೆ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಸಹಯೋಗದಿಂದ ಸಲಕರಣೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಮೂಡುಬಿದಿರೆ: ಮಕ್ಕಳಲ್ಲಿ ಸೇವಾ ಮನೋಭಾವ ಬೆಳೆಸಲು ರೋವರ್ಸ್ ಮತ್ತು ರೇಂಜರ್ಸ್ ಸಹಕಾರಿ’ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೂಡುಬಿದಿರೆ ಘಟಕದ ಖಜಾಂಚಿ, ಪ್ರಾಂತ್ಯ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಚಂದ್ರ ಅಂಬೂರಿ ಹೇಳಿದರು.ಅವರು ಆಳ್ವಾಸ್ ಪದವಿಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ೨೦೨೩-೨೪ನೇ ಸಾಲಿನ ಚಟುವಟಿಕೆಗಳನ್ನು ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಮೌಲ್ಯಯುತ ಶಿಕ್ಷಣ
ಮೂಡುಬಿದಿರೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸ್ವರಾಜ್ಯ ಮೈದಾನದಲ್ಲಿ ನಡೆಯಿತು. ಮಾಜಿ ಕ್ರೀಡಾ ಸಚಿವ ಕೆ. ಅಭಯಚಂದ್ರ ಜೈನ್ ಕ್ರೀಡಾಕೂಟವನ್ನು ಉದ್ಘಾಟಿಸಿ, ಮಾತನಾಡಿ, ಕ್ರೀಡಾಪಟುಗಳು ಕ್ರೀಡಾ ಸ್ಪೂರ್ತಿಯಿಂದ ಕ್ರೀಡೆಯಲ್ಲಿ ಭಾಗವಹಿಸಬೇಕು. ಮೂಡುಬಿದಿರೆಯಲ್ಲಿರುವ ಸಿಂಥೆಟಿಕ್ ಟ್ರ್ಯಾಕ್ ನ ಪ್ರಯೋಜನವನ್ನು ಪಡೆದುಕೊಂಡು ರಾಷ್ಟ್ರ- ಅಂತರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸುವಂತಹ ಕ್ರೀಡಾಪಟುಗಳಾಗಬೇಕೆಂದು ಶುಭ ಹಾರೈಸಿದರು. ತಾಲೂಕು ತಹಶೀಲ್ದಾರ್ ಪ್ರದೀಪ್
ಮೂಡುಬಿದಿರೆ : 2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ಮೊದಲ ಬಾರಿ ಆಯ್ಕೆಯಾಗಿದೆ. ತಾಲೂಕಿನ ಎರಡನೇ ಅತೀ ದೊಡ್ಡ ಗ್ರಾಮವಾಗಿರುವ ಪುತ್ತಿಗೆ ಗ್ರಾಮ ಪಂಚಾಯತ್ ಜನರ ಗುಣಮಟ್ಟವನ್ನು ಹೆಚ್ಚಿಸಲು ಕೈಗೊಂಡ ಕಾರ್ಯಕ್ರಮಗಳು, ಹಣಕಾಸಿನ ವಿಷಯದಲ್ಲಿ ಶಿಸ್ತುಬದ್ಧ ಕ್ರಮಗಳು, ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ, ಉತ್ತಮ ಆಡಳಿತ, ಗ್ರಾ.ಪಂಚಾಯತ್ ಸೇವೆಗಳನ್ನು ಕ್ಲಪ್ತ ಸಮಯದಲ್ಲಿ ಗ್ರಾಮದ ನಾಗರಿಕರಿಗೆ
ಮೂಡುಬಿದಿರೆ: ಭೂಮಿ ಹಕ್ಕಿಗೆ ಒತ್ತಾಯಿಸಿ ಭೂಮಿ ಹೋರಾಟ ಸಮಿತಿಯು ಆಡಳಿತ ಸೌಧದ ಮುಂಭಾಗ ಸೋಮವಾರ ಕೈಗೊಂಡಿದ್ದ ಅಹೋರಾತ್ರಿ ಧರಣಿಯು ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಅವರ ಮನವೊಲಿಕೆಯಿಂದಾಗಿ ವಾಪಾಸ್ ಪಡೆದುಕೊಂಡಿದೆ. ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಯಾದವ ಶೆಟ್ಟಿ ಅವರು ಧರಣಿ ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿ, ಮೂಡುಬಿದಿರೆ ತಾಲೂಕು ವ್ಯಾಪ್ತಿಯ ಇರುವೈಲು, ತೋಡಾರು, ಪುತ್ತಿಗೆ, ಬೆಳುವಾಯಿ, ಶಿರ್ತಾಡಿ, ಪಾಲಡ್ಕ ಇನ್ನಿತರ
ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸೇರಿ ಆನಾರೋಗ್ಯ ಪೀಡಿತೆಯೋರ್ವರ ಚಿಕಿತ್ಸೆಗಾಗಿ ಧನ ಸಂಗ್ರಹ ಮಾಡಿ ಹಸ್ತಾಂತರ ಮಾಡಿ ಊರವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಾಲೂಕಿನ ಕಲ್ಲಬೆಟ್ಟು ಗ್ರಾಮದ ನಿವಾಸಿಗಳಾದ ಮಹಾವೀರ ಕಾಲೇಜಿನ ವಿದ್ಯಾರ್ಥಿನಿಯರಾದ ತುಷಾರ, ಅನೂಷಾ, ತುಷಿತಾ ಹಾಗೂ ಪ್ರತಿಕ್ಷಾ ಎಂಬ ವಿದ್ಯಾರ್ಥಿಯರು ಅನಾರೋಗ್ಯ ಪೀಡಿತೆಯ ಚಿಕಿತ್ಸೆಯ ನೆರವಿಗೆ ಸ್ಪಂದಿಸಿದವರು. ಕಲ್ಲಬೆಟ್ಟುವಿನಲ್ಲಿ
ಮೂಡುಬಿದಿರೆ : ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಮೂಡುಬಿದಿರೆಯ ಕಡಲಕೆರೆ ಬಳಿಯಿರುವ ಸೃಷ್ಠಿ ಗಾರ್ಡನ್‍ನಲ್ಲಿ ಕಂಬಳದ ಈ ಋತುವಿನ ಸಮಾಲೋಚನಾ ಸಭೆ ನಡೆಯಿತು. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕೋಣದ ಯಜಮಾನರುಗಳಿಗೆ, ವ್ಯವಸ್ಥಾಪಕರಿಗೆ ಹಾಗೂ ತೀರ್ಪುಗಾರರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ನಂತರ ಮಾತನಾಡಿದ ಡಾ.ದೇವಿಪ್ರಸಾದ್ ಶೆಟ್ಟಿ
ಮೂಡುಬಿದಿರೆ: ಖಾಸಗಿ ಬಸ್‍ನಿಂದ ಮಧ್ಯ ವಯಸ್ಸಿನ ಮಹಿಳೆಯೊಬ್ಬರು ಬಿದ್ದು ತೀವೃ ತರಹದ ಗಾಯದಿಂದಾಗಿ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟ ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರೂರಿನಲ್ಲಿ ನಡೆದಿದೆ. ಮಾರೂರು ಕುಂಟೋಡಿ ನಿವಾಸಿ ನೀಲಮ್ಮ (66ವ ) ದುರ್ಘಟನೆಯಲ್ಲಿ ಸಾವನ್ನಪ್ಪಿದವರು. ನೀಲಮ್ಮ ಅವರು ಬಿಪಿ, ಶುಗರ್ ತಪಾಸಣೆ ಮಾಡಲೆಂದು ತನ್ನ ಮೊಮ್ಮಗನ ಜತೆ ಮೂಡುಬಿದಿರೆ ಆಸ್ಪತ್ರೆಗೆಂದು ಸಾಯಿ ಟ್ರಾವೆಲ್ಸ್ ಎಂಬ ಹೆಸರಿನ ಖಾಸಗಿ ಬಸ್ಸಿಗೆ




























