Home Posts tagged #mudubidre (Page 5)

ಮೂಡುಬಿದಿರೆ: ಕುದಿ ಕಂಬಳಕ್ಕೆ ಚಾಲನೆ

ಮೂಡುಬಿದಿರೆ: 2023-24ನೇ ಸಾಲಿನ ಕಂಬಳ ಸೀಸನ್ ನ ಪೂರ್ವಭಾವಿಯಾಗಿ ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆಯಲ್ಲಿ ಕುದಿ ಕಂಬಳ ಆರಂಭಗೊಂಡಿತು. ಉದ್ಯಮಿ, ಕೋಣಗಳ ಯಜಮಾನ ರಂಜಿತ್ ಪೂಜಾರಿ ಕರೆಯಲ್ಲಿ ದೀಪ ಬೆಳಗಿಸುವ ಮೂಲಕ ಕುದಿ ಕಂಬಳಕ್ಕೆ ಚಾಲನೆಯನ್ನು ನೀಡಿದರು. ಜಿಲ್ಲಾ ಕಂಬಳ ಸಮಿತಿಯ ಕಾರ್ಯದರ್ಶಿ ಸುರೇಶ್ ಕೆ.ಪೂಜಾರಿ ರೆಂಜಾಳ ಕಾರ್ಯ, ಪುರಸಭಾ ನಿರ್ಗಮನ ಸ್ಥಾಯಿ

ಮೂಡುಬಿದಿರೆ: ಕರಿಂಜೆ ಘನತ್ಯಾಜ್ಯ ಘಟಕ ಅಸಮರ್ಪಕ ನಿರ್ವಹಣೆ

ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕರಿಂಜೆ ಮಾರಿಂಜಗುಡ್ಡೆಯಲ್ಲಿರುವ ಘನತ್ಯಾಜ್ಯ ಘಟಕವು ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಸಮರ್ಪಕವಾಗಿ ನಿರ್ವಹಣೆಯಾಗುತ್ತಿದ್ದು ಇದರಿಂದಾಗಿ ಪರಿಸರದ ನಿವಾಸಿಗಳು ತೊಂದರೆಯನ್ನು ಅನುಭವಿಸುತ್ತಿದ್ದಾರೆಂದು ಪುರಸಭೆ ಸದಸ್ಯರು ಮತ್ತು ಸಾರ್ವಜನಿಕರು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ದೂರು ನೀಡಿದ್ದಾರೆ. ತಾಲೂಕು ಆಡಳಿತ ಸೌಧದಲ್ಲಿ ಡಿಸಿಯವರಿಂದ ನಡೆದ ಸಾರ್ವಜನಿಕ ಅಹವಾಲು ಸಭೆಯಲ್ಲಿ ದೂರು ನೀಡಿ ಈ ಬಗ್ಗೆ ಚರ್ಚೆ

ಮಳಲಿ : ಹೋಬಳಿ ಮಟ್ಟದ ಕಬ್ಬಡಿ ಪಂದ್ಯಾಟ – ಎಡಪದವು ಸ್ವಾಮಿ ವಿವೇಕಾನಂದ ಪ್ರೌಢಶಾಲೆಗೆ ಪ್ರಶಸ್ತಿ

ಮಳಲಿ ಪ್ರೌಢಶಾಲೆಯಲ್ಲಿ ಜರುಗಿದ ಗುರುಪುರ ಹೋಬಳಿ ಮಟ್ಟದ ಪ್ರೌಢಶಾಲಾ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸ್ವಾಮಿ ವಿವೇಕಾನಂದ ಪ್ರೌಢಶಾಲೆ, ಎಡಪದವು ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಪ್ರಶಸ್ತಿ ಯನ್ನು ಮುಡಿಗೇರಿಸಿಕೊಂಡಿದ್ದಾರೆ. ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ್ವಾಮಿ ವಿವೇಕಾನಂದ ಪ್ರೌಢಶಾಲೆ, ಎಡಪದವು ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ

ಟಯರ್ಸ್ ಉದ್ಯಮಿ ಪೂವಪ್ಪ ಕುಂದರ್ ನಿಧನ

ಮೂಡುಬಿದಿರೆ : ಕಳೆದ ಹಲವು ವರ್ಷಗಳಿಂದ ಟಯರ್ ಉದ್ಯಮವನ್ನು ನಡೆಸುತ್ತಾ ಬಂದಿರುವ ಹನುಮಾನ್ ಟಯರ‍್ಸ್ ನ ಮಾಲಕ, ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಸಾಮಾಜಿಕ ಕಾರ್ಯಕರ್ತ ಪೂವಪ್ಪ ಕುಂದರ್ ಅವರು ಮಂಗಳವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೂಲತ: ಪರಂಗಿಪೇಟೆಯ ನಿವಾಸಿಯಾಗಿದ್ದ ಪೂವಪ್ಪ ಕುಂದರ್ ಮೂಡುಬಿದಿರೆಗೆ ಉದ್ಯೋಗವನ್ನು ಅರಸಿಕೊಂಡು ಬಂದು ಮೂಡುಬಿದಿರೆಯಲ್ಲಿ ಮಂಜುನಾಥ ಟೈರ್ ರಿಸೋಲಿಂಗ್ ಘಟಕದ ಮೂಲಕ ಅನುಭವ ಗಳಿಸಿ ಬಳಿಕ ಸ್ವರಾಜ್ಯ ಹನುಮಾನ್

ಜಾಗತಿಕ ವಿವಿಗಳ ಕ್ರೀಡಾಕೂಟ – ಆಳ್ವಾಸ್‍ನ ಭವಾನಿ ಯಾದವ್‍ಗೆ ಕಂಚು

ಮೂಡುಬಿದಿರೆ: ಚೀನಾದ ಚೆಂಗ್ಡುವಿನಲ್ಲಿ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದ ಲಾಂಗ್‍ಜಂಪ್‍ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆ ಕ್ರೀಡಾಪಟು ಭವಾನಿ ಯಾದವ್ ಭಗವತಿ ಮೈಲುಗಲ್ಲು ಸಾಧಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ. ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ‘ಭವಾನಿ ಯಾದವ್ ಆಳ್ವಾಸ್

ಮೂಡುಮಾರ್ನಾಡು ಸರಕಾರಿ ಶಾಲೆಯಲ್ಲಿ ಕಂಗೊಳಿಸುತ್ತಿರುವ ಅಡಿಕೆ ತೋಟ

ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದು ಕೇವಲ ಭಾಷಣದಲ್ಲಿ ಬೀಗಿದರೆ ಸಾಲದು ಬದಲಾಗಿ ಸರಕಾರಿ ಶಾಲೆಗಳನ್ನು ಹೇಗೆ ಉಳಿಸಿ ಬೆಳೆಸಬಹುದು ಎಂಬ ಚಿಂತನೆಯೂ ಬೇಕು. ಅಂತಹ ಚಿಂತನೆಯೊಂದನ್ನು ಮಾಡಿ ಶಾಲೆಗಳಾಗಿ ಶಾಶ್ವತ ಯೋಜನೆಯನ್ನು ರೂಪಿಸಿ ಮಕ್ಕಳ ಮತ್ತು ಶಾಲಾಭಿಮಾನಿಗಳ ಮನಗೆದ್ದ ಜನಪ್ರತಿನಿಧಿ ಪಡುಮಾರ್ನಾಡು ಗ್ರಾ.ಪಂ. ಮಾಜಿ ಅಧ್ಯಕ್ಷ ಶ್ರೀನಾಥ್ ಸುವರ್ಣ ಅವರು. ಪಡುಮಾರ್ನಾಡು ಗ್ರಾ.ಪಂ. ವ್ಯಾಪ್ತಿಯ ಜಿ.ಪಂ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

ಮೂಡುಬಿದಿರೆ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವ

ಮೂಡುಬಿದಿರೆ: ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಸಮಾಜ ಮಂದಿರದಲ್ಲಿ ಪೂಜಿಸಲ್ಪಡುವ ಮೂಡುಬಿದಿರೆ ಗಣೇಶೋತ್ಸವವು ಈ ವರ್ಷ ವಜ್ರಮಹೋತ್ಸವವನ್ನು ಆಚರಿಸುತ್ತಿದೆ. ಈ ಹಿನ್ನಲೆಯಲ್ಲಿ ಗಣೇಶೋತ್ಸವ ಸಮಿತಿ, ಪವರ್ ಫ್ರೆಂಡ್ಸ್ ಬೆದ್ರ ಮತ್ತು ಸಮಾಜಮಂದಿರ ಸಭಾ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಮರುಜೋಡಣೆಯ ತಪಾಸಣಾ ಉಚಿತ ಶಿಬಿರ ಹಾಗೂ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ

ಮುಂಡ್ಕೂರು : ಹಡಿಲು ಬಿದ್ದ ಭೂಮಿಯಲ್ಲಿ ಭತ್ತದ ಕೃಷಿ

ಮುಂಡ್ಕೂರು ಸಮೃದ್ಧಿ ಸಂಜೀವಿನಿ ಒಕ್ಕೂಟದ ವತಿಯಿಂದ ಮುಂಡ್ಕೂರು ಜೈನಪೇಟೆಯ ಬಳಿ ಗದ್ದೆಯಲ್ಲಿ ಒಕ್ಕೂಟದ ಮಹಿಳೆಯರು ಗದ್ದೆ ನಾಟಿ ಮಾಡಿದರು. ಸುಮಾರು ಒಂದು ಎಕರೆ ಹಡಿಲು ಭೂಮಿಯನ್ನು ಸಮತಟ್ಟು ಮಾಡಿ ಟ್ಯಾಕ್ಟರ್ ಮೂಲಕ ಉಳುಮೆ ಮಾಡಿ ನಾಟಿ ಮಾಡಿದರು. ಈ ಸಂದರ್ಭದಲ್ಲಿ ಸಮೃದ್ಧಿ ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ ವನಿತಾ ಶೆಟ್ಟಿ ಎಲ್ ಸಿ ಆರ್ ಪಿ ಶಶಿಕಲಾ, ಸುಮನ ಒಕ್ಕೂಟದ ಅಧ್ಯಕ್ಷರಾದ ಹರಿಣಾಕ್ಷಿ ಒಕ್ಕೂಟದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

ಮೂಡುಬಿದರೆ : ಪ್ಲಾಸ್ಟಿಕ್ ಮುಕ್ತ ಪರಿಸರ ರಕ್ಷಣಾ ಅಭಿಯಾನ

ಮೂಡುಬಿದಿರೆ: ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಗೈಡ್ಸ್ ಘಟಕ, ಇಂಟರಾಕ್ಟ್ ಕ್ಲಬ್, ಶಾಲಾ ಸಂಸತ್ತು ಹಾಗೂ ಮೂಡುಬಿದಿರೆ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ ಪ್ಲಾಸ್ಟಿಕ್ ಮುಕ್ತ ಪರಿಸರ ಸಂರಕ್ಷಣಾ ಅಭಿಯಾನ ಮೂಡುಬಿದಿರೆ ಮಾರುಕಟ್ಟೆ ಸಮೀಪ ನಡೆಯಿತು. ಪುರಸಭಾ ಮುಖ್ಯಾಧಿಕಾರಿ ಶಿವ ನಾಯಕ್ ಅಭಿಯಾನಕ್ಕೆ ಚಾಲನೆ ನೀಡಿ ಪ್ಲಾಸ್ಟಿಕ್ ನ ದುಷ್ಪರಿಣಾಮಗಳ ಬಗ್ಗೆ ಮಾತನಾಡಿದರು. ಈ ಜನ ಜಾಗೃತಿ ಕಾರ್ಯಕ್ರಮದಲ್ಲಿ ರೋಟರಿ ಎಜುಕೇಶನ್ ಸೊಸೈಟಿ ಅಧ್ಯಕ್ಷ ನಾರಾಯಣ ಪಿ ಎಂ

ಪಿಂಗಾರ ಕಲಾವಿದೆರ್ ಬೆದ್ರ- ನೂತನ ನಾಟಕದ ಶೀರ್ಷಿಕೆ ಬಿಡುಗಡೆ

ಪಿಂಗಾರ ಕಲಾವಿದೆರ್ ಬೆದ್ರ ತಂಡದ ನೂತನ ನಾಟಕ `ಕದಂಬ’ ಇದರ ಶೀರ್ಷಿಕೆಯನ್ನು ಭಾನುವಾರ ಕೋಟೆ ಬಾಗಿಲು ಮಹಾಮ್ಮಾಯಿ ದೇವಸ್ಥಾನದ ಆವರಣದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ದೇವಳದ ಆಡಳಿತ ಮೋಕ್ತೇಸರ ನಾರಂಪ್ಪಾಡಿಗುತ್ತು ಸೇಸಪ್ಪ ಹೆಗ್ಡೆ ಶೀರ್ಷಿಕೆಯನ್ನು ಬಿಡುಗಡೆಗೊಳಿಸಿದರು.ತಂಡದ ಮುಖ್ಯಸ್ಥ ಮಣಿಕೋಟೆಬಾಗಿಲು ಪ್ರಾಸ್ತಾವಿಕವಾಗಿ ಮಾತನಾಡಿ, ಕದಂಬ ನಾಟಕವು ತುಳು ರಂಗಭೂಮಿಯಲ್ಲಿ ವಿಭಿನ್ನ ಪ್ರಯತ್ನವಾಗಿದ್ದು, ವಿನೂತನ ಶೈಲಿಯ ರಂಗ ವಿನ್ಯಾಸವನ್ನು ಹೊಂದಿದೆ. ಈ