ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ (ರಿ) ಮಂಗಳೂರು ಸಂಸ್ಥೆಯ ಮುಂದಾಲತ್ವದಲ್ಲಿ ಲೋಕ ಕಲ್ಯಾಣಕ್ಕಾಗಿ ಕಷ್ಟ ಕಾರ್ಪಣ್ಯಗಳ ನಿವಾರಣೆಗೆ ಪರಮ ಪಾದದಿಂದ ಮೂಲ ಪಾಡದೆಡೆಗೆ ಸುಭಿಜ್ಞಾ ಸಮಾಜದ ಗುರಿಯೊಂದಿಗೆ ನಡೆಯುವ 6ನೇ ವರ್ಷದ ಭಕ್ತ ಜನರ ಭಕ್ತಿ ಧರ್ಮದ ನಡೆ ಪಾದಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಚಿತ್ರಾಪುರ ಶ್ರೀ
ಕಿನ್ನಿಗೋಳಿ ಸಮೀಪದ ಎಳತ್ತೂರು ದೇವಸ್ಧಾನದ ದೇವರ ಗುಂಡಿ ಸಂಕದ ಬಳಿ ಚಿರತೆಯೊಂದು ಹುಲ್ಲು ಕತ್ತರಿಸುತ್ತಿದ್ದ ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಕಟೀಲು ಆಸ್ಪತ್ರೆಗೆ ದಾಖಲಾಗಿದ್ದಾರೆ.ಗಾಯಗೊಂಡವರನ್ನು ಸ್ಧಳೀಯ ನಿವಾಸಿ ಲಿಗೋರಿ (58) ಎಂದು ಗುರುತಿಸಲಾಗಿದೆ.ಗಾಯಾಳು ಲಿಗೋರಿ ಹೈನುಗಾರರಾಗಿದ್ದು ದನಗಳಿಗೆ ಮೇವು ತರಲು ಹೋದಾಗ ಈ ಘಟನೆ ನಡೆದಿದ್ದು ಲಿಗೋರಿ ಅವರು ಧೈರ್ಯದಿಂದ ಚಿರತೆಯನ್ನು ಎದುರಿಸಿದ್ದು ಕೂಡಲೇ ಚಿರತೆ ಸ್ಧಳದಿಂದ
ಮೂಲ್ಕಿಯ ಲಯನ್ಸ್ ಸೌಧದಲ್ಲಿ ಕಾರ್ಯಾಚರಿಸುತ್ತಿರುವ ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ ದೀಪಾವಳಿ ಮತ್ತು ಹೊಸ ವರ್ಷದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡುತ್ತಿದ್ದಾರೆ. ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ 2000 ರೂಗಳ ಖರೀದಿಗೆ ಗ್ರಾಹಕರಿಗೆ 100ಗ್ರಾಂ ಬಾದಾಮಿ ಉಚಿತ, ಹಾಗೂ ಮೊದಲ 100 ಗ್ರಾಹಕರಿಗೆ 50ಗ್ರಾಂನ ಡ್ರೈಫ್ರೂಟ್ಸ್ ಮಿಕ್ಸ್ ಹಾಗೂ 100 ಗ್ರಾಂನ ಖರ್ಜೂರ ಉಚಿತವಾಗಿ ಪಡೆಯುವ ಅವಕಾಶ ನೀಡಿದ್ದಾರೆ.ಇದು ಸೀಮಿತ ಅವಧಿಗೆ
ವಿದ್ಯಾರ್ಥಿಗಳು ಶಾಲೆಯ ಪ್ರಮುಖ ಆಸ್ತಿಯಾಗುತ್ತಾರೆ; ಅವರಿಲ್ಲದೆ, ಶಾಲೆಗಳು ಮತ್ತು ಶಿಕ್ಷಕರು ಏನೂ ಅಲ್ಲ. ಶಿಕ್ಷಕರ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಮಾಡುವಲ್ಲಿ ವಿದ್ಯಾರ್ಥಿಗಳು ದೊಡ್ಡ ಪಾತ್ರವನ್ನು ವಹಿಸುತ್ತಾರೆ. ವಿದ್ಯಾರ್ಥಿಯನ್ನು ಸರಿದಾರಿಗೆ ತರುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಆದಾಗ್ಯೂ, ಸರಿಯಾದ ದಾರಿಯಲ್ಲಿ ಇರಲು ತಮ್ಮ ಶಿಕ್ಷಕರ ಆದೇಶಗಳನ್ನು ಅನುಸರಿಸುವುದು ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ. ಅವರು ಶಾಲೆಯಲ್ಲಿ ಪರಸ್ಪರ ಸಮಾನವಾಗಿ
ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ.) ಮುಲ್ಕಿ ಇದರ ಅರ್ಧ ವಾರ್ಷಿಕ ಪ್ರಾದೇಶಿಕ ಮಹಾಸಭೆಯು ಮೂಡಬಿದ್ರೆ ತಾಲೂಕಿನ ಇರುವೈಲಿನ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಇರುವೈಲು ಸಂಘದ ಅಧ್ಯಕ್ಷರಾದ ಕುಮಾರ್ ಪೂಜಾರಿ,ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶಿತ ಹಿರಿಯ ನ್ಯಾಯಾವಾದಿ ತಾರಾನಾಥ ಪೂಜಾರಿ, ಮಹಾಮಂಡಲದ ಕಾರ್ಯದರ್ಶಿ ಗಂಗಾಧರ ಪೂಜಾರಿ
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಆಚರಿಸಲಿರುವ ದೀಪೋತ್ಸವ, ಕುಣಿತ ಭಜನೆ, ಪ್ರಯುಕ್ತ ಸೋಮವಾರ ಸಂಜೆ ಆರು ಗಂಟೆಗೆ ದೇವರ ಎದುರು ಪ್ರಾರ್ಥಿಸಿ ಶಂಖನಾದದಿಂದ ಆರಂಭವಾಗಲಿದೆ. ಈ ಪ್ರಯುಕ್ತ ಸಾದ್ಯವಾದಷ್ಟು ಮಂದಿ ಶಂಖದೊಂದಿಗೆ ಸಂಜೆ ಆರು ಗಂಟೆಗೆ ಉಪಸ್ಥಿತರಿದ್ದು ತಾವೂ ಶಂಖನಾದ ಸೇವೆ ನಡೆಸಿ ರಾಮನ ಸೇವೆಯನಲ್ಲಿ ಪಾಲ್ಗೊಳ್ಳಬೇಕಾಗಿ ಆಡಳಿಮಂಡಳಿಯವರು ವಿನಂತಿಕೊಂಡಿದ್ದಾರೆ.
ಮುಲ್ಕಿ ನಗರೋತ್ಧಾನ ಯೋಜನೆಯಡಿ ಸುಮಾರು 50 ಲಕ್ಷ ವೆಚ್ಚದ ವಿಶೇಷ ಅನುದಾನದಲ್ಲಿ ಮುಲ್ಕಿ ನಗರ ಪಂಚಾಯತ್ ನೂತನ ಕಛೇರಿ ಕಟ್ಟಡದ ಶಂಕುಸ್ದಾಪನೆ ಕಾರ್ಯಕ್ರಮವನ್ನು ರಾಜ್ಯ ಆರೋಗ್ಯ. ಸಚಿವ ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೆರವೇರಿಸಿದರು. ಈ ಸಂದರ್ಭ ಮಾತನಾಡಿ, ಸರಕಾರವು ರಾಜ್ಯದಲ್ಲಿ ಶಿಸ್ತು ಬದ್ದ ಹಾಗೂ ಪಾರದರ್ಶಕ ಆಡಳಿತದೊಂದಿಗೆ ಅಭಿವೃದ್ಧಿ ಕಾರ್ಯಗಳಿಗೆ ಅನೇಕ ಯೋಜನೆಗಳನ್ನು ತಯಾರಿಸಿದ್ದು ಅಭಿವೃದ್ಧಿ ನಿರಂತರವಾಗಿ ನಡೆಯಲಿದೆ ಎಂದರು. ಈ ಸಂದರ್ಭ
ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ತುಳು ಕನ್ನಡ ಸಾಹಿತಿ ಡಾ ಗಣೇಶ ಅಮೀನ್ ಸಂಕಮಾರ್ ಆಯ್ಕೆಯಾಗಿದ್ದಾರೆ ಎಂದು ದ.ಕ ಜಿಲ್ಲಾ ಕಸಾಪ ಅಧ್ಯಕ್ಷ ಡಾ ಎಂ ಪಿ ಶ್ರೀನಾಥ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಇದೇ ಡಿಸೆಂಬರ್ 27ರಂದು ಮೂಲ್ಕಿ ಕಾರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಡಾ.ಗಣೇಶ ಅಮೀನ್ ಸಂಕಮಾರ್ ಅವರು ತುಳು ಕನ್ನಡ ಜಾನಪದ ವಿದ್ವಾಂಸರಾಗಿ ಪ್ರಸಿದ್ಧರಾಗಿದ್ದಾರೆ. 33 ವರ್ಷಗಳ ಕಾಲ
ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿ ಡಿವೈಡರ್ ಮೇಲೆ ಹತ್ತಿ ಪಾದಚಾರಿ ಮಾರ್ಗದ ಪಕ್ಕದಲ್ಲಿದ್ದ ವಾಹನಗಳಿಗೆ ಡಿಕ್ಕಿಯಾದ ಘಟನೆ ರಾ. ಹೆದ್ದಾರಿ 66 ರ ಮೂಲ್ಕಿ ಜಂಕ್ಷನ್ ಬಳಿ ನಡೆದಿದೆ.ಲಾರಿ ಚಾಲಕನ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಘಟನೆಯ ಪರಿಣಾಮ ಸಂಚಾರ ಪೆÇಲೀಸ್ ಸಿಬ್ಬಂದಿ ಸೇರಿ ಮೂವರು ಗಾಯಗೊಂಡಿದ್ದಾರೆ. ಸ್ಕೂಟರ್ ಸವಾರ, ಬಪ್ಪನಾಡು ಬಳಿಯ ರೆಸಿಡೆನ್ಸಿಯೊಂದರ ವಾಚ್ ಮ್ಯಾನ್, ಉತ್ತರ ಕರ್ನಾಟಕ ಮೂಲದ ಗಂಭೀರ ಗಾಯಗೊಂಡು
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆಧ್ಯಾತ್ಮಿಕ ಶಿಕ್ಷಣವನ್ನು ಪಡೆಯುವುದು ಅತೀ ಅಗತ್ಯ. ಇದರೊಂದಿಗೆ ಸಂಸ್ಕಾರ, ಆಚಾರ-ವಿಚಾರಗಳನ್ನು ದೇವಾಲಯದ ಸಂಬಂಧ ಪಟ್ಟ ವಿಭಾಗವು ನಡೆಸಿದರೆ ವಿದ್ಯಾರ್ಥಿಗಳ ಜೀವನಕ್ಕೆ ಅನುಕೂಲವಾಗುತ್ತದೆ ಇಂತಹ ಕಾರ್ಯಕ್ರಮವನ್ನು ಸಿಎಸ್ಐ ಜಿಲ್ಲಾ ಸಮಿತಿಯು,ಹಳೆಯಂಗಡಿ ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚಿನ ಅತಿಥೇಯದಲ್ಲಿ ನಡೆಸಿರುವುದು ಅಭಿನಂದನೀಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಮಿಥುನ್ ರೈ ಯವರು